ಬೆಂಗಳೂರು: ಜಾಹೀರಾತು ಸಂ.1/2020 ದಿನಾಂಕ:14-02-2020 ಚಾಲಕ-ಕಂ-ನಿರ್ವಾಹಕ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಉಲ್ಲೇಖದನ್ವಯ ಪ್ರಕಟಿಸಲಾದ ಹೆಚ್ಚುವರಿ ಆಯ್ಕ್ಕೆಪಟ್ಟಿಯಲ್ಲಿ ಸ್ಥಾನ ಪಡೆದು ಕೌನ್ಸಿಲಿಂಗ್ ಮೂಲಕ ವಿಭಾಗಗಳಿಗೆ ನಿಯೋಜಿತರಾಗಿದ್ದ ಅಭ್ಯರ್ಥಿಗಳಲ್ಲಿ ವರದಿ ಮಾಡಿಕೊಳ್ಳದ 22 ಅಭ್ಯರ್ಥಿಗಳ ಸ್ಥಾನದಲ್ಲಿ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸಿದ್ದಪಡಿಸಿ ನಿಗಮದ ಕೇಂದ್ರ ಕಛೇರಿ, ಶಾಂತಿ ನಗರ, ಬೆಂಗಳೂರು-27 ಸೂಚನಾ ಫಲಕದಲ್ಲಿ ಮತ್ತು ನಿಗಮದ ವೆಬ್-ಸೈಟ್ ಆದ ksrtcjobs.karnataka.gov.in ನಲ್ಲಿ ಪ್ರಕಟಿಸಲಾಗಿದೆ.
2ನೇ ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ವಿಭಾಗ /ಘಟಕಗಳಿಗೆ ಹಂಚಿಕೆ ಮಾಡುವ ಕುರಿತು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಹೇಳಿದೆ.
BREAKING: ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲಮುರದ ತಿಮ್ಮಕ್ಕ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ಸರ್ಕಾರ ಆದೇಶ
ALERT : `ಮಧುಮೇಹ’ದಿಂದ ಹೃದಯಾಘಾತ, ಪಾರ್ಶ್ವವಾಯು ಸೇರಿ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!








