ಚಿಕ್ಕಮಗಳೂರು: ಹೊಸ ವರ್ಷದ ಪ್ರಯುಕ್ತ ಕಾಫಿನಾಡು ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ಸೇರಿದಂತೆ 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ.
ಡಿಸೆಂಬರ್.31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೆ ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆಯವರ ಮನವಿ ಮೇರೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೊನ್ನಮ್ಮನಹಳ್ಳ, ಗಾಳಿಕೆರೆ, ಹಿರೇಕೊಳಲೆ ಕೆರೆ, ಡೈಮಂಡ್ ಫಾಲ್ಸ್, ಎತ್ತಿನಭುಜ, ದೇವರಮನೆ, ರಾಣಿಝರಿ, ಬಳ್ಳಾಲರಾಯನ ದುರ್ಗ, ಕೆಮ್ಮಣ್ಣುಗುಂಡಿ, ಕಲ್ಲತ್ತಿಗಿರಿ, ಬಂಡಾಜೆ ಫಾಲ್ಸ್, ಕೂಡಿಗೆ ಫಾಲ್ಸ್, ಕ್ಯಾತನಮಕ್ಕಿ, ರುದ್ರಪಾದ, ತೂಗು ಸೇತುವೆ, ಅಬ್ಬುಗುಡಿಗೆ ಫಾಲ್ಸ್, ಅಯ್ಯನಕೆರೆ, ಮದಗದ ಕೆರೆ ಹಾಗೂ ಹೆಬ್ಬೆ ಫಾಲ್ಸ್ ಗೆ ಪ್ರವಾಸಿಗರಿಗೆ ಡಿಸೆಂಬರ್.31ರ ಸಂಜೆ 6ರಿಂದ ಜನವರಿ.1ರ ಬೆಳಗ್ಗೆ 6ರವರೆಗೆ ನಿಷೇಧ ಹೇರಲಾಗಿದೆ.
BREAKING: ದಾವಣಗೆರೆ ಡ್ರಗ್ಸ್ ಕೇಸ್: ಸಚಿವ ಜಮೀರ್ ಅಹ್ಮದ್ ಪರಮಾಪ್ತ ಅರೆಸ್ಟ್
ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut








