ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಬಿರುಗಾಳಿ ಸಹಿತ ಭಾರಿ ಮಳೆ ಆಗುತ್ತಿರುವುದರಿಂದ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಒಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ಧರೆಗೆ ಉರುಳಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರದ ಚಂದ್ರಿಕಾ ಎಸ್ಟೇಟ್ ಬಳಿ ಈ ಒಂದು ಘಟನೆ ಸಂಭವಿಸಿದೆ.
ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಇನಾಮ್ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಸಂಚಾರ ಬಂದ್ ಮಾಡಲಾಗಿದೆ. ರಸ್ತೆಗೆ ಅಡಲಾಗಿ ಬೃಹತ್ ಮರ ಬಿದ್ದು ಪ್ರವಾಸಿಗರು ಮತ್ತು ಸ್ಥಳೀಯರು ಪರದಾಟ ನಡೆಸುತ್ತಿದ್ದಾರೆ.
ಅಲ್ಲದೆ ಚಂದ್ರದ್ರೋಣ ಪರ್ವತಕ್ಕೆ ತೆರಳುವ ಕೈಮರ ಚೆಕ್ ಪೋಸ್ಟ್ ಅನ್ನು ಬಂದ್ ಮಾಡಲಾಗಿದೆ ಹೋಲಿ ಸಿಬ್ಬಂದಿ ಪ್ರವಾಸಿಗರನ್ನು ಅಲ್ಲಿಂದ ವಾಪಸ್ ಕಳಿಸುತ್ತಿದ್ದಾರೆ ಚಿಕ್ಕಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ