ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೀದರ್ ನಿಲ್ದಾಣಗಳ ನಡುವೆ ಮೂರು ಟ್ರಿಪ್ ವಿಶೇಷ ರೈಲುಗಳನ್ನು ನೈರುತ್ಯ ರೈಲ್ವೆ ಓಡಿಸಲಿದೆ.
ರೈಲು ಸಂಖ್ಯೆ 06589 ಎಸ್ಎಂವಿಟಿ ಬೆಂಗಳೂರು – ಬೀದರ್ ವಿಶೇಷ ಎಕ್ಸ್‌ಪ್ರೆಸ್ ರೈಲು ಮೇ 22, 24 ಮತ್ತು 26, 2025 ರಂದು ರಾತ್ರಿ 09:15ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:15ಕ್ಕೆ ಬೀದರ್ ತಲುಪಲಿದೆ.
ರೈಲು ಸಂಖ್ಯೆ 06590 ಬೀದರ್ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಮೇ 23, 25 ಮತ್ತು 27, 2025 ರಂದು ಮಧ್ಯಾಹ್ನ 12:00 ಗಂಟೆಗೆ ಬೀದರ್‌ನಿಂದ ಹೊರಟು, ಮರುದಿನ ಬೆಳಗಿನ ಜಾವ 03:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿವೆ.
ಈ ವಿಶೇಷ ರೈಲು ಒಟ್ಟು 17 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ 05 ಸಾಮಾನ್ಯ ದ್ವಿತೀಯ ದರ್ಜೆ, 10 ಸ್ಲೀಪರ್ ಕ್ಲಾಸ್ ಮತ್ತು 02 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳು ಇರಲಿವೆ. ಈ ವಿಶೇಷ ರೈಲು ಸೇವೆಯ ಸದುಪಯೋಗವನ್ನು ಪ್ರಯಾಣಿಕರು ಪಡೆದುಕೊಳ್ಳಬೇಕು.
BREAKING: ಪಾಕ್ ಮತ್ತೊಬ್ಬ ರಾಜತಾಂತ್ರಿಕ ಅಧಿಕಾರಿ ದೇಶ ತೊರೆಯಲು 24 ಗಂಟೆಗಳ ಗಡುವು ನೀಡಿದ ಭಾರತ