ಶಿವಮೊಗ್ಗ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಮಹಿಳೆಯರಿಗೆ 31 ದಿನಗಳ ಅವಧಿಯ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಶಿಬಿರವನ್ನು ಏಪ್ರಿಲ್ ತಿಂಗಳ 17 ನೇ ತಾರೀಖಿನಿಂದ ಪ್ರಾರಂಭಿಸಲಾಗುತ್ತಿದ್ದು, ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : 08/04/2026 ಬುಧವಾರ ಬೆಳಿಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 08/04/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050/ 9591514154/ 9686248369/ 6363139123/ 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಏ.5ರಂದು ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ
Vastu for Wealth: ನಿಮ್ಮ ಸಾಲಬಾಧೆ ಮುಕ್ತಿಗಾಗಿ ‘ವಾಸ್ತು ಟಿಪ್ಸ್’: ಲಕ್ಷ್ಮಿಯ ಕೃಪೆ ಪಡೆಯಲು ಇಲ್ಲಿದೆ ಮಾರ್ಗ!








