ಬೆಳಗಾವಿ : ಉಚ್ಚಗಾವಿಯಲ್ಲಿ ನಡೆದ ಹಿಂದೂ ಸ್ನೇಹ ಸಮ್ಮೇಳನದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಕರ್ನಾಟಕದಲ್ಲಿ ಈಗ ಔರಂಗಜೇಬನ ಮಾದರಿ ಆಡಳಿತ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬೆಳಗಾವಿ ತಾಲೂಕಿನಲ್ಲಿ ಏನೆಲ್ಲಾ ಘಟನೆಗಳು ನಡೆದಿವೆ. ಮಣಿಪುರದಲ್ಲೂ ಆಗದಿರುವ ಅಂತಹ ರೀತಿ ಘಟನೆ ಬೆಳಗಾವಿ ತಾಲೂಕಿನಲ್ಲಿ ನಡೆದಿವೆ. ಮಹಿಳೆಯ ಮೇಲೆ ದೌರ್ಜನ್ಯ ನಡೆಸಲಾಗಿದೆ. ಎಂಥಾ ಸರ್ಕಾರ ಆಯ್ಕೆ ಮಾಡಿದ್ದೇವೆ ಎಂದು ಯೋಚನೆ ಮಾಡುವಂತಾಗಿದೆ ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿದೆ. ಯುವಕನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕೆಎಸ್ ದಾಖಲಾಗಿಲ್ಲ ಏಕೆಂದರೆ ಹಲ್ಲೆ ಮಾಡಿದವರು ಆಫ್ಜಲ್ ಗುರು ಹಾಗೂ ದಾವೂದ್ ಸಂಬಂಧಿಗಳಾಗಿದ್ದಾರೆ.ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು.