ಬೆಂಗಳೂರು: ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ಕ್ಕೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಬಾನು ಮುಷ್ತಕ್ ಹೇಳಿದ್ದೇನು ಅಂತ ಮುಂದೆ ಓದಿ.
ಲಂಡನ್ ನಿಂದಲೇ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮ ನಾಡಹಬ್ಬ ಆಚರಣೆ ನಮಗೂ ಖುಷಿ ತರುವ ವಿಚಾರವಾಗಿದೆ. ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರೋದಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ನನ್ನ ಜೊತೆ ಮಾತನಾಡಿದ್ದಾರೆ ಎಂದರು.
ದಸರಾ ಸಂದರ್ಭದಲ್ಲಿ ಸಮಯ ಕಾಯ್ದಿರಿಸಿಕೊಳ್ಳಿ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ದಸರಾ ಉದ್ಘಾಟನೆಗೆ ಒಪ್ಪಿಗೆ ನೀಡಿರುವ ಬಗ್ಗೆ ಖುಷಿಯನ್ನು ಬಾನು ಮುಷ್ತಕ್ ಹಂಚಿಕೊಂಡಿದ್ದಾರೆ.
ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : ಬ್ಯಾಂಕಿಂಗ್, ಹಣಕಾಸು ಕ್ಷೇತ್ರದಲ್ಲಿ 2.5 ಲಕ್ಷ ಹೊಸ ಉದ್ಯೋಗಗಳು ಲಭ್ಯ