Author: Kannada News

ಶಿವಮೊಗ್ಗ  ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2021 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2021 ರ ಜನವರಿ 1 ರಿಂದ 2021 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಯಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2021 ಎಂದು ಮುದ್ರಿತವಾಗಿರಬೇಕು. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಕಾವ್ಯ, ನವಕವಿಗಳ ಪ್ರಥಮ ಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣ ಬರಹ, ಅನುವಾದ-1, ಅನುವಾದ-2, ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲಿಷಿಗೆ ಅನುವಾದ, ದಾಸ ಸಾಹಿತ್ಯ ಮತ್ತು ಸಂಕೀರ್ಣ ಈ ಪ್ರಕಾರಗಳ ಪುಸ್ತಕಗಳ ತಲಾ 04 ಪ್ರತಿಗಳನ್ನು ಸಲ್ಲಿಸಬೇಕು. ಮರುಮುದ್ರಣವಾದ, ಪಿಹೆಚ್‍ಡಿ…

Read More

ಶಿವಮೊಗ್ಗ : ಮೇ 23 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್‍ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆವಿ ಯು.ಜಿ. ಕೇಬಲ್ ಚಾರ್ಜಿಂಗ್ ಕಾಮಗಾರಿ ಇರುವುದರಿಂದ ನಗರದ ಬಾಲರಾಜ್ ಅರಸ್ ರಸ್ತೆ, ಬಾಪೂಜಿನಗರ, ಟ್ಯಾಂಕ್ ಮೊಹಲ್ಲಾ, ಬಸವನಗುಡಿ, ಮಂದಾರ ಶಾಲೆ ರಸ್ತೆ, ಹೊಯ್ಸಳ ಕಾಲೇಜ್ ರಸ್ತೆ, ಕೋರ್ಟ್, ಡಿ.ಸಿ.ಸಿ ಬ್ಯಾಂಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಜರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದೇ ವೇಳೆ ಮೇ 24 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4ಫೀಡರ್‍ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆವಿ ಯು.ಜಿ. ಕೇಬಲ್ ಚಾರ್ಜಿಂಗ್ ಕಾಮಗಾರಿ ಇರುವುದರಿಂದ ನಗರ ವ್ಯಾಪ್ತಿಯ ಬ್ಲಡ್ ಬ್ಯಾಂಕ್ ರಸ್ತೆ, ರೈಲ್ವೆ ಸ್ಟೇಷನ್, ಬಸವನಗುಡಿ, ವಿನಾಯಕನಗರ, ಹನುಮಂತನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್…

Read More

ಬೆಳಗಾವಿ: ಎಲ್ಲೆಡೆ ಮಳೆಯಾಗುತ್ತಿರುವುದರಿಂದ ನೆರೆಯ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಸಾಧ್ಯತೆ ಇರುತ್ತದೆ. ಆದ್ದರಿಂದ ಆ ರಾಜ್ಯದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜತೆ ನಿರಂತರ ಸಂಪರ್ಕ ಇಟ್ಟುಕೊಳ್ಳಬೇಕು. ಅಲ್ಲಿನ ಮಳೆಯ ಪ್ರಮಾಣ, ಜಲಾಶಯಗಳ ಸಂಗ್ರಹ ಮತ್ತಿತರ ವಿಷಯಗಳ ಕುರಿತು ನಿರಂತರವಾಗಿ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಸಂಭವನೀಯ ಪ್ರವಾಹ ನಿರ್ವಹಣೆಯ ಸಿದ್ಧತೆಗೆ ಸಂಬಂಧಿಸಿದಂತೆ ಶನಿವಾರ(ಮೇ 21) ಮುಖ್ಯಮಂತ್ರಿಗಳು ನಡೆಸಿದ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಬಾರಿ ಒಂದು ವಾರ ಮುಂಚೆಯೇ ಮಳೆಯಾಗುತ್ತಿರುವುದರಿಂದ ನೆರೆಯ ರಾಜ್ಯದ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರತಿದಿನ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ, ಜಲಾಶಯಮಟ್ಟ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಬೆಳಗಾವಿ ಜಿಲ್ಲಾಡಳಿತಕ್ಜೆ ಮುಂಚಿತವಾಗಿ ಮಾಹಿತಿಯನ್ನು ನೀಡದೇ ನೀರು ಬಿಡುಗಡೆ ಮಾಡದಂತೆ ನೆರೆಯ ರಾಜ್ಯದ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು. ನೆರೆಯ ಮಹಾರಾಷ್ಟ್ರದ ನೀರಾವರಿ ಇಲಾಖೆಯ ಜತೆ ಸಮನ್ವಯ…

Read More

ಬಾಗಲಕೋಟೆ: ಸರ್ಕಾರಿ ಪಾಲಿಟೆಕ್ನಿಕ್ ಮುಧೋಳ ಸಂಸ್ಥೆಯಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 11 ಕೊನೆಯ ದಿನವಾಗಿದ್ದು, ಸಿವಿಲ್,ಕಂಪ್ಯೂಟರ್ ಸೈನ್ಸ, ಇಲೆಕ್ಟ್ರಾನಿಕ್ಸ, ಮತ್ತು ಕಮ್ಯುನಿಕೇಶನ, ಮೆಕ್ಯಾನಿಕಲ್ ಇಂಜನಯರಿಂಗ್ ಹೀಗೆ 4 ವಿಭಾಗಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ 35% ಅಂಕಗಳನ್ನು ಪಡೆದು ಉತ್ತೀರ್ಣರಾದವರಿಗೆ ಮತ್ತು ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶವನ್ನು ನೇರವಾಗಿ ನೀಡಲಾಗುವುದು. ಡಿಪ್ಲೋಮಾ ಪರೀಕ್ಷೆಯನ್ನು ಕನ್ನಡ ಮಾದ್ಯಮದಲ್ಲಿಯೂ ಕೂಡಾ ಬರೆಯಲು ಅವಕಾಶವಿರುತ್ತದೆ. ಪ್ರವೇಶ ಪಡೆಯಲು ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕ ಪಟ್ಟಿ, ವರ್ಗಾವಣೆ ಪತ್ರ ಅಥವಾ ಎನ್‍ಓಸಿ, ಜಾತಿ ಪ್ರಮಾಣ ಪತ್ರ, ಮತ್ತು ಕನಿಷ್ಠ 5 ವರ್ಷಗಳ ವ್ಯಾಸಂಗ ಪ್ರಮಾಣ ಪತ್ರಗಳನ್ನು ಭರ್ತಿ ಮಾಡಿದ ಅರ್ಜಿಯೊಂದಿಗೆ ಸಲ್ಲಿಸಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊ 9448038834, 9513263865 ಗೆ ಸಂಪರ್ಕಿಸಬಹುದಾಗಿದೆ ಎಂದು ಮುಧೋಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸಂಜೀವ ಕುಮಾರ ಚವ್ಹಾಣ ರವರು…

Read More

ಜಿಲ್ಲೆಯ ಶಿಗ್ಗಾಂವ ತಾಲೂಕಿನ ಯತ್ತಿನಹಳ್ಳಿ, ಸವಣೂರ, ಬ್ಯಾಡಗಿ, ಹಾನಗಲ್, ಹಾವೇರಿ ತಾಲೂಕಿನ ಕರ್ಜಗಿ, ಚೌಡಯ್ಯದಾನಪುರ, ರಟ್ಟಿಹಳ್ಳಿ ತೋಟಗಾರಿಕೆ ಕ್ಷೇತ್ರಗಳಲ್ಲಿ ಹಾಗೂ ಹಾವೇರಿ ಕಚೇರಿ ನರ್ಸರಿಯಲ್ಲಿ ಮಾವು, ತೆಂಗು, ಅಡಿಕೆ ಸೇರಿದಂತೆ ವಿವಿಧ ಸಸಿಗಳು ಮಾರಾಟಕ್ಕೆ ಲಭ್ಯವಿದೆ ಎಂದು ತೋಟಗಾರಿಕೆ ಇಲಾಖೆ(ರಾ.ವ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಮಾವು (ಆಪೂರ) ಸಸಿಗೆ ರೂ.36, ತೆಂಗು(ಅರಸಿಕೇರೆ ಟಾಲ್) ರೂ.75 ಹಾಗೂ TxD Hybrid ರೂ.170, ನಿಂಬೆ (ಸ್ಥಳೀಯ)ರೂ.11, ಕರಿಬೇವು (ಸ್ಥಳೀಯ) ರೂ.12, ಗೋಡಂಬಿ (ವಿ-4 & ವಿ-7) ರೂ.32, ನುಗ್ಗೆ (ಭಾಗ್ಯ) ಸಸಿಗೆ ರೂ.10 ದರ ನಿಗಧಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ

Read More

ಹಾವೇರಿ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 23ರವರೆಗೆ ಅವಧಿ ವಿಸ್ತರಿಸಲಾಗಿದೆ. ಪ್ರಸಕ್ತ 2022-23ನೇ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ(ಪಿಸಿಎಂಬಿ ಮತ್ತು ಪಿಸಿಎಂಸಿ) ಪ್ರವೇಶಕ್ಕೆ ಆಸಕ್ತ ಪ್ರತಿಭಾವಂತ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ ವಸತಿ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ವಸತಿ ಶಾಲಾ-ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ದಾವಣಗೆರೆ: 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವು ಮೇ.19 ರಂದು ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳು ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಗೊಂಡಿರುತ್ತದೆ. ಈ ಮಕ್ಕಳಿಗೆ ಅಗತ್ಯ ಪ್ರೋತ್ಸಾಹ ನೀಡಲು ಅನುಕೂಲವಾಗುವಂತೆ ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಅಂಕಗಳಿಗಿಂತ ಹೆಚ್ಚು ಅಂಕ ಪಡೆದಿರುವ ನೋಂದಾಯಿತ ಕಾರ್ಮಿಕ ಮಕ್ಕಳ ಹೆಸರು, ಫಲಾನುಭವಿಗಳ ಹೆಸರು, ನೋಂದಾಣಿ ಸಂಖ್ಯೆ, ದೂರವಾಣಿ ಸಂಖ್ಯೆ ಪಡೆದ ಅಂಕಗಳು, ವ್ಯಾಸಂಗ ಮಾಡಿದ ಶಾಲೆಯ ಹೆಸರು ಮತ್ತು ವಿಳಾಸ, ವಾಸವಿರುವ ಜಿಲ್ಲೆಯ ಹೆಸರುಗಳುಳ್ಳ ಮಾಹಿತಿಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ನೀಡಬೇಕಾಗಿರುವ ಹಿನ್ನಲೆಯಲ್ಲಿ ಮೇ.26 ರೊಳಗಾಗಿ ಹತ್ತಿರದ ಕಾರ್ಮಿಕ ನಿರೀಕ್ಷಕರ ಕಚೇರಿ/ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಮಾಹಿತಿ ನೀಡಬೇಕೆಂದು ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ವರ್ಷ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನೀಡುವುದಾಗಿ ಶನಿವಾರ ಘೋಷಿಸಿದ್ದಾರೆ. ಈ ಕ್ರಮವು ವರ್ಷಕ್ಕೆ ಸುಮಾರು 6100 ಕೋಟಿ ರೂ.ಗಳು ಆದಾಯದ ಪರಿಣಾಮವನ್ನು ಬೀರುತ್ತದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ. . “ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಣದಲ್ಲಿಡಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಹೇಳಿದರು. ಇದಲ್ಲದೆ, ಸವಾಲಿನ ಅಂತರರಾಷ್ಟ್ರೀಯ ಪರಿಸ್ಥಿತಿಯ ಹೊರತಾಗಿಯೂ, ಅಗತ್ಯ ವಸ್ತುಗಳ ಕೊರತೆ / ಕೊರತೆ ಇಲ್ಲ ಎಂದು ನಾವು ಖಚಿತಪಡಿಸಿದ್ದೇವೆ ಎಂದು ಸಚಿವರು ಹೇಳಿದರು. ಈ ವಾರದ ಆರಂಭದಲ್ಲಿ, ಅಡುಗೆ ಅನಿಲ ಎಲ್ಪಿಜಿ ಬೆಲೆಗಳು ಒಂದು ತಿಂಗಳಲ್ಲಿ ಎರಡನೇ ಬಾರಿಗೆ 3.50 ರೂ.ಗಳ ಏರಿಕೆಗೆ ಸಾಕ್ಷಿಯಾಗಿವೆ. ಈ ಹೆಚ್ಚಳವು ದೇಶಾದ್ಯಂತ ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು 1,000 ರೂ.ಗಿಂತ ಹೆಚ್ಚಾಗಿದೆ. ಕೆಲವು ಅಭಿವೃದ್ಧಿ ಹೊಂದಿದ ದೇಶಗಳು ಸಹ ಕೆಲವು ಕೊರತೆಗಳು…

Read More

ದಾವಣಗೆರೆ: ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದಿಂದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್‍ಗಳನ್ನು ಸೇವಾಸಿಂಧು ಯೋಜನೆಯಡಿ ಸೇವಾಸಿಂಧು ಪೋರ್ಟ್‍ಲ್ (ಆನ್‍ಲೈನ್)ನಲ್ಲಿ ಮೇ.23 ರಿಂದ ವಿತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮುಖಾಂತರ ಬಸ್‍ಪಾಸ್‍ಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಸಂಬಂಧಪಟ್ಟ ದಾಖಲೆಗಳನ್ನು ಅಪ್‍ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ. ಫಲಾನುಭವಿಗಳು ಆನ್‍ಲೈನ್ ಮುಖಾಂತರ ದಾಖಲಾತಿಗಳನ್ನು ಅಪ್‍ಲೋಡ್ ಮಾಡಿದಾಗ್ಯೂ, ಭೌತಿಕವಾಗಿ ಬಸ್‍ಪಾಸ್‍ಗಳನ್ನು ಪಡೆಯಲು ಬಂದಾಗ ಮೂಲ ದಾಖಲೆಗಳು ಹಾಗೂ ಜೆರಾಕ್ಸ್ ಪ್ರತಿಯನ್ನು ಹಾಜರುಪಡಿಸಿ ಪಾಸ್‍ಗಳನ್ನು ಪಡೆಯುವುದು ಹಾಗೂ ಸೇವಾಸಿಂಧು ಅರ್ಜಿ, ಖಾಯಂ ವಿಳಾಸ ದಾಖಲಾತಿ (ಆಧಾರ್), ಪ್ರವೇಶ ರಸೀದಿ, ಓoಟಿ SಂಖಿS ವಿದ್ಯಾರ್ಥಿಗಳು ಕಡ್ಡಾಯವಾಗಿ ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರ ಅಪ್‍ಲೋಡ್ ಮಾಡುವುದು, ವಿಳಾಸ ಬದಲಾವಣೆ ಇದ್ದಲ್ಲಿ ವಿದ್ಯಾರ್ಥಿಗಳ ಸ್ವಯಂ ದೃಢೀಕರಣ ಪತ್ರ ಅಪ್‍ಲೋಡ್ ಮಾಡುವುದು, ಪ.ಜಾ/ಪ.ಪಂ ವಿದ್ಯಾರ್ಥಿಗಳು ಜಾತಿ ಪ್ರಮಾಣಪತ್ರ ಅಪ್‍ಲೋಡ್ ಮಾಡುವುದು ಕಡ್ಡಾಯವಾಗಿದೆ ಎಂದು ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಚಿಕ್ಕಬಳ್ಳಾಪುರ‌ :”ಸ್ಪೂರ್ತಿಯ ನಡೆ” ಎಂಬ ಯೋಜನೆಯಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ ಮತ್ತು ವ್ಯಕ್ತಿತ್ವ ವಿಕಸನ ತರಬೇತಿಯನ್ನು ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ”ಸ್ಪೂರ್ತಿಯ ನಡೆ” ಹೊಸ ಯೋಜನೆಯ ಅನುಷ್ಠಾನ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಾ, 2022-23 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸ್ಪೂರ್ತಿಯ ನಡೆ ಎಂಬ ಯೋಜನೆಯ ಕುರಿತು ಮಾನ್ಯ ಮುಖ್ಯಮಂತ್ರಿಗಳು ಉಲ್ಲೇಖಿಸಿರುತ್ತಾರೆ. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿನ್ವಯ ಸ್ಪೋಕನ್ ಇಂಗ್ಲೀಷ್ ಮತ್ತು ವ್ಯಕ್ತಿತ್ವ ವಿಕಸನದ ತರಬೇತಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತಂದು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಶೋಕ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ…

Read More


best web service company