Author: KNN IT Team

ಬೆಂಗಳೂರು-ಮೈಸೂರು ನಡುವೆ ಎಕ್ಸ್‌ಪ್ರೆಸ್‌ವೇನಲ್ಲಿ ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯ ಪ್ರಾಯೋಗಿಕ ಕಾರ್ಯಾಚರಣೆಗೆ ಸದ್ಯದಲ್ಲೇ ಚಾಲನೆ ದೊರೆಯಲಿದೆ ಎಂದು ತಿಳಿದುಬಂದಿದೆ. ಈ ವ್ಯವಸ್ಥೆ ಸಂಪೂರ್ಣವಾಗಿ ಜಾರಿಗೆ ಬಂದರೆ, ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ವಾಹನ ಸವಾರರು ತಮ್ಮ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್‌ ಅಳವಡಿಸಿಕೊಳ್ಳಬೇಕಾಗುತ್ತದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜಿಪಿಎಸ್‌ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಉಪಗ್ರಹದೊಂದಿಗೆ ಸಂಪರ್ಕ ಹೊಂದಿರುವ ಜಿಪಿಎಸ್ ಸಾಧನದ ಮೂಲಕ ಟೋಲ್‌ ಸಂಗ್ರಹವಾಗಲಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ. ವಾಹನಗಳು ಎಕ್ಸ್‌ಪ್ರೆಸ್‌ವೇ ಪ್ರವೇಶಿಸುವ ಮತ್ತು ನಿರ್ಗಮಿಸುವ ಸ್ಥಳಗಳ ಮಾಹಿತಿ ಜಿಪಿಎಸ್‌ ಸಾಧನದಿಂದ ದಾಖಲಾಗುತ್ತದೆ. ವಾಹನಗಳ ಸಂಚಾರದ ಅಂತರದ ಅನುಗುಣವಾಗಿ ಟೋಲ್‌ ಕಡಿತವಾಗುತ್ತದೆ. ಇದರಿಂದ ಎಕ್ಸ್‌ಪ್ರೆಸ್‌ವೇನಲ್ಲಿ ಕಡಿಮೆ ದೂರ ಕ್ರಮಿಸುವ ವಾಹನಗಳಿಗೆ ಹೆಚ್ಚು ಟೋಲ್ ನೀಡುವುದು ತಪ್ಪುತ್ತದೆ ಎಂದು ಮಾಹಿತಿ ದೊರಕಿದೆ.

Read More

ತನ್ನ ಮಗುವನ್ನೇ ಹತ್ಯೆ ಮಾಡಿ ಸೂಟ್​ಕೇಸ್​​ನಲ್ಲಿ ಸಾಗಿಸಿದ ಆರೋಪದ ಮೇಲೆ ಸ್ಟಾರ್ಟ್​​ ಅಪ್ ಕಂಪನಿಯಾಗಿರುವ ಮೈಂಡ್​ಫುಲ್​ ಎಐ ಲ್ಯಾಪ್​​ ಫೌಂಡರ್​​ ಮತ್ತು ಸಿಇಓ ಸುಚನ ಸೇಠ್​​ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಸುಚನ ಸೇಠ್ ಗೋವಾದ ಹೋಟೆಲ್​ವೊಂದರಲ್ಲಿ ತನ್ನ ನಾಲ್ಕು ವರ್ಷದ ಮಗುವಿನೊಂದಿಗೆ ತಂಗಿದ್ದರು. ಬಳಿಕ ಸೂಟ್​ಕೇಸ್​ ಹಿಡಿದುಕೊಂಡು ಬೆಂಗಳೂರಿಗೆ ಹೊರಟಿದ್ದಾರೆ. ಟ್ಯಾಕ್ಸಿ ಹಿಡಿದು ಬೆಂಗಳೂರಿಗೆ ಹೊರಟ ಸಂದರ್ಭದಲ್ಲಿ ಹೋಟೆಲ್​​ ಸಿಬ್ಬಂದಿ ನಿಮ್ಮ ಜೊತೆಗಿದ್ದ ಮಗು ಎಲ್ಲಿ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸುಚನ ಸೇಠ್, ಸಂಬಂಧಿಕರ ಮನೆಗೆ ಕಳುಹಿಸಿದ್ದೇನೆ ಎಂದು ಸುಳ್ಳು ಹೇಳಿ ಅಲ್ಲಿಂದ ನಿರ್ಗಮಿಸಿದ್ದರು. ಬಳಿಕ ಟ್ಯಾಕ್ಸಿ ಏರಿ ಬೆಂಗಳೂರಿನತ್ತ ಬಂದಿದ್ದಾರೆ. ಹೋಟೆಲ್​ ಸಿಬ್ಬಂದಿಗೆ ಸುಚನ ಸೇಠ್ ಮೇಲೆ ಅನುಮಾನ ಬಂದಿದ್ದು, ಬಳಿಕ ರೂಂ ಸ್ವಚ್ಛಗೊಳಿಸುವ ಸಮಯದಲ್ಲಿ ರಕ್ತದ ಕಲೆಗಳು ಕಾಣಸಿಕ್ಕಿವೆ. ತಕ್ಷಣವೇ ಹೋಟೆಲ್​ನವರು ಗೋವಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗೋವಾ ಪೊಲೀಸರು ಈ ವಿಚಾರ ಗೊತ್ತಾಗುತ್ತಿದ್ದಂತೆ ಕಾರಿನ ಚಾಲಕನನ್ನು ಸಂಪರ್ಕಿಸಿದ್ದಾರೆ.…

Read More

ಜಾರ್ಖಂಡ್ :‌ ಜನವರಿ 22ರಂದು ರಾಮಮಂದಿರ ಉದ್ಘಾಟನೆಯೊಂದಿಗೆ ತನ್ನ ಕನಸು ನನಸಾಗುತ್ತಿರುವುದಕ್ಕೆ ಸುದೀರ್ಘ ಮೂರು ದಶಕಗಳ ಕಾಲ ಮೌನ ವೃತದ ಶಪಥ ಕೈಗೊಂಡಿದ್ದ ಜಾರ್ಖಂಡ್‌ ನ 85 ವರ್ಷದ ಮಹಿಳೆಯೊಬ್ಬರು ತನ್ನ ಮೌನ ವೃತ ಮುರಿಯಲು ಸಿದ್ಧರಾಗಿದ್ದಾರೆ ಎಂದು ವರದಿ ತಿಳಿಸಿದೆ. 1992ರಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ದಿನ ಸರಸ್ವತಿ ದೇವಿ ಮೌನ ವೃತದ ಶಪಥ ಕೈಗೊಂಡಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ ನಂತರವೇ ತನ್ನ ಮೌನ ವೃತ ಮುರಿಯುವುದಾಗಿ ಆಕೆ ತಿಳಿಸಿದ್ದರು ಎಂದು ಕುಟುಂಬದ ಮೂಲಗಳು ಹೇಳಿವೆ. ಇದೀಗ ಭವ್ಯ ರಾಮಮಂದಿರ ಉದ್ಘಾಟನೆಯನ್ನು ಕಣ್ತುಂಬಿಕೊಳ್ಳಲು ಧನ್‌ ಬಾದ್‌ ನಿವಾಸಿ ಸರಸ್ವತಿ ದೇವಿ ಅವರು ಸೋಮವಾರ ರಾತ್ರಿ ಉತ್ತರಪ್ರದೇಶಕ್ಕೆ ರೈಲಿನಲ್ಲಿ ತೆರಳಿದ್ದಾರೆ. “ಮೌನಿ ಮಾತಾ” ಎಂದೇ ಜನಪ್ರಿಯರಾಗಿದ್ದ ಈಕೆ ತನ್ನ ಕುಟುಂಬದ ಸದಸ್ಯರೊಂದಿಗೆ ಸಾಂಕೇತಿಕ ಭಾಷೆಯಲ್ಲಿ ಸಂವಹನ ನಡೆಸುತ್ತಿದ್ದರಂತೆ, ಆದರೆ ಕೆಲವೊಂದು ಕ್ಲಿಷ್ಟಕರ ಮಾತನ್ನು ಬರೆದು ತೋರಿಸುತ್ತಿದ್ದರು. ಸರಸ್ವತಿ ದೇವಿ ಅವರು ಸ್ವಲ್ಪ ಸಮಯ ಮೌನ ವೃತವನ್ನು ಮುರಿದು ಒಂದು ಗಂಟೆ ಮಾತ್ರ…

Read More

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮತ್ತೆ ಭಾರಿ ಪ್ರಮಾಣದಲ್ಲಿ ಚಿನ್ನದ ಬೇಟೆಯಾಡಿದ್ದಾರೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಅಬುಧಾಬಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನ್ನಲ್ಲಿ ಈ ಬೃಹತ್ ಪ್ರಮಾಣದ ಅಕ್ರಮ ಚಿನ್ನ ದೊರೆತಿದೆ. ಅನುಮಾನಾಸ್ಪದ ಚಲನವಲನದ ಆಧಾರದ ಮೇಲೆ ಆತನನ್ನು ವಿಚಾರಣೆ ನಡೆಸಿ ಅವರ ದೇಹವನ್ನು ಪರೀಕ್ಷಿಸುವಾಗ, ಅವರ ಸೊಂಟದ ಪ್ರದೇಶದಲ್ಲಿ ಬೀಪ್ ಶಬ್ದ ಹೊರಹೊಮ್ಮಿದೆ. ಪೇಸ್ಟ್ ರೂಪದಲ್ಲಿ ಚಿನ್ನವನ್ನು ಹೊಂದಿರುವ 5 ಅಂಡಾಕಾರದ ಆಕಾರದ ಕ್ಯಾಪ್ಸೂಲ್ ಗಳನ್ನು ಅವನ ಗುದನಾಳದಲ್ಲಿ ಮರೆಮಾಡಿ ಸಾಗಾಟ ಮಾಡುತ್ತಿರುವುದು ಬಯಲಾಗಿದ್ದು ಆತನಿಂದ ವಶಕ್ಕೆ ಪಡೆಯಲಾಗಿದೆ. ಇದು 24 ಕ್ಯಾರೆಟ್ ಶುದ್ಧತೆಯ ಚಿನ್ನವಾಗಿದ್ದು 1,579.000 ಗ್ರಾಂ ತೂಕ ಹೊಂದಿದೆ. ಇದರ ಮೌಲ್ಯ ಸುಮಾರು ರೂ. 98,68,750 ಆಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆಯಾಗಿದೆ.

Read More

ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿರುವ ಘಟನೆ ಹರಿಯಾಣದ ಸಿರ್ಸಾ ನಗರದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನೀಡುತ್ತಿರುವ ಸಿರ್ಸಾ ನಗರದ ಚೌಧರಿ ದೇವಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ಅಮಾನತುಗೊಳಿಸಬೇಕು ಹಾಗೂ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಬೇಕು ಎಂದು ಪತ್ರದಲ್ಲಿ ವಿದ್ಯಾರ್ಥಿನಿಯರು ಬೇಡಿಕೆಯಿಟ್ಟಿದ್ದಾರೆ. ಚೌಧರಿ ದೇವಿ ವಿವಿಯ ಉಪಕುಲಪತಿ ಡಾ. ಅಜ್ಮಲ್ ಸಿಂಗ್ ಮಲಿಕ್, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ, ಗೃಹ ಸಚಿವ ಅನಿಲ್ ವಿಜ್ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಹಿರಿಯ ರಾಜ್ಯ ಸರ್ಕಾದ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೂ ಪತ್ರವನ್ನು ರವಾನಿಸಿದ್ದಾರೆ. ಆರೋಪಿ ಪ್ರಾಧ್ಯಾಪಕರು ಕೊಳಕು ಹಾಗೂ ಅಶ್ಲೀಲ ಕೃತ್ಯಗಳನ್ನು ವೆಸಗಿದ್ದಾರೆ. ಅಲ್ಲದೆ ಈ ಪ್ರಾಧ್ಯಾಪಕರು ಸ್ನಾನದ ಕೊಠಡಿಗೆ ಕರೆದೋಯ್ದು ತಮ್ಮ ಖಾಸಗಿ ಭಾಗಗಳನ್ನು ಸ್ಪರ್ಶಿಸುವುದಲ್ಲದೆ ನಮ್ಮೊಂದಿಗೆ ಅಶ್ಲೀಲ ಪದ…

Read More

ಜನವರಿ 10ರ ವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ ಆರಂಭದಲ್ಲಿಯೇ ಮಳೆ ಆರಂಭವಾಗಿ ಶುಭ ಸೂಚನೆ ನೀಡಿತ್ತು. ಆದರೆ, ಬೆಳೆ ಕಟಾವಿಗೆ ಬಂದಾಗ ಸುರಿದ ಅಕಾಲಿಕ ಮಳೆಯಿಂದ ಕೆಲವೆಡೆ ಸಮಸ್ಯೆಯೂ ಉಂಟಾಗಿತ್ತು. ಇನ್ನು ಕಳೆದ ವಾರದಿಂದ ರಾಜ್ಯದ ಕರಾವಳಿ, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿ ಹಲವೆಡೆಗಳಲ್ಲಿ ಮಳೆ ಸುರಿಯುತ್ತಿದೆ. ಇನ್ನು ಎರಡು ದಿನ ಅಂದರೆ ಜನವರಿ 10ವರೆಗೂ ಈ ಮಳೆ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಬದಲಾವಣೆಗಳು ಕರ್ನಾಟಕದಲ್ಲಿ ಅಕಾಲಿಕ ಮಳೆ ಸುರಿಯುವಿಕೆಗೆ ಕಾರಣವಾಗಿದೆ. ಚಳಿಯ ಜೊತೆ ಮಳೆಯು ಸೇರಿ ವಾತಾವರಣವು ಭಿನ್ನವಾಗಿದ್ದು, ಇದು ಆರೋಗ್ಯದ ಮೇಲೆ ಒಂದಿಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ. ರಾಜ್ಯದ 30 ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಪ್ರಮುಖವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು, ಉತ್ತರ…

Read More

ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ ಎಂಬುದು ಜಗತ್ತಿನ ಕಟುಸತ್ಯ. ಅಧಿಸಾಮಾನ್ಯವಾದಿಗಳು ಸಾವಿನ ಕುರಿತು ದೀರ್ಘಕಾಲ ತನಿಖೆ ಮಾಡಿದ್ದು, ಇದರ ಪ್ರಕಾರ ಸಾವನ್ನು ಮುನ್ಸೂಚಿಸಬಲ್ಲ ಅನೇಕ ಪ್ರಾಣಿಗಳಿವೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವು ಪ್ರಾಣಿಗಳು ಮನುಷ್ಯನ ಸಾವಿನ ಸುದ್ದಿಯನ್ನು ಮೊದಲೇ ತಿಳಿಸುತ್ತವೆಯಾಗಿದೆ. ನಾಯಿಗಳು ಸಾವನ್ನು ಮೊದಲೇ ಗ್ರಹಿಸಬಲ್ಲವು ಎನ್ನಲಾಗಿದೆ. ಯಾರದ್ದಾದರು ಸಾವು ಹತ್ತಿರವಾಗಿದೆ ಎಂದು ತಿಳಿದಾಗ ನಾಯಿಗಳು ಅಳುವ ರೀತಿಯಲ್ಲಿ ಕೂಗಲು ಆರಂಭ ಮಾಡುತ್ತವೆ. ಹಾಗಾಗಿ ಮನೆಯಲ್ಲಿನ ಹಿರಿಯರು ನಾಯಿ ಅಳುವ ರೀತಿಯಲ್ಲಿ ಕೂಗಿದರೆ ಒಳ್ಳೆಯದಲ್ಲ ಎನ್ನುತ್ತಾರೆ. ಬಾವಲಿಗಳು ಸಾವಿನ ಸುದ್ದಿಯನ್ನು ತರುತ್ತವೆ ಎಂದು ಹಲವರು ಬಲವಾಗಿ ನಂಬುತ್ತಾರೆ. ಕಾಗೆ ಹಾರುವಾಗ ತಲೆಗೆ ತಾಗಿದರೆ ಮಾತ್ರ ಅದನ್ನು ಅಪಶಕುನ ಎನ್ನಲಾಗುತ್ತದೆ.ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ತಾಪತ್ರಯಗಳು ಹೆಚ್ಚಾಗುತ್ತವೆ. ಅದೇ ರೀತಿ, ಕನಸಿನಲ್ಲಿ ಕಾಗೆ ಕಾಣಿಸಿಕೊಂಡರೆ ಇದು ಒಂದು ಕೆಟ್ಟ ಘಟನೆ ನಡೆಯುವ ಮುನ್ಸೂಚನೆ ಎನ್ನಲಾಗುತ್ತದೆ. ಹಗಲಿನಲ್ಲಿ ನರಿ ಮನೆಗೆ ಬಂದರೆ ಆ ಮನೆಯಲ್ಲಿ ಯಾರಾದರೂ ಸಾಯುತ್ತಾರೆ ಎನ್ನಲಾಗುತ್ತದೆ. ನರಿಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಂಡುಬರುವುದಿಲ್ಲ.…

Read More

ಶಾಲಾ ಮಕ್ಕಳ ಶಾಲಾ ಬ್ಯಾಗ್ ಹೊರೆ ಇಳಿಸಲು ‘ಶಿಕ್ಷಣ ಇಲಾಖೆ’ ಮಹತ್ವದ ತೀರ್ಮಾನ ಕೈಗೊಂಡಿದೆ. ಶಾಲಾ ಮಕ್ಕಳ ಶಾಲಾ ಬ್ಯಾಗ್ ಹೊರೆ ಇಳಿಸಲು ‘ಶಿಕ್ಷಣ ಇಲಾಖೆ’ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪಠ್ಯ ಪುಸ್ತಕವನ್ನು ಭಾಗ-1, ಭಾಗ-2 ವಿಭಾಗಗಳಾಗಿ ವಿಂಗಡಿಸಲು ಚಿಂತನೆ ನಡೆಸಿದೆ. ಹೀಗಾಗಿ, ಎಸ್ಎ-1 ಹಾಗೂ ಎಸ್‌ಎ-2ಗಳಾಗಿ ವಿಂಗಡಿಸಿ ಪಠ್ಯಪುಸ್ತಕಗಳನ್ನು ಮುದ್ರಿಸಿ ಸರಬರಾಜು ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಕೈಗೊಂಡಿದೆ. ಸರ್ಕಾರ ಅರ್ಧವಾರ್ಷಿಕ ಪರೀಕ್ಷೆ ವರೆಗೆ ಭಾಗ-1 ಮತ್ತು ದಸರಾ ರಜೆ ಮುಗಿದ ನಂತರ ಭಾಗ-2 ಪಠ್ಯಪುಸ್ತಕಗಳನ್ನು ಶಾಲೆಗೆ ತರಿಸುವ ಯೋಜನೆ ಹಾಕಿಕೊಂಡಿದೆ. ಇದರ ಜೊತೆಗೆ ಹೆಚ್ಚುವರಿ ಮಕ್ಕಳ ನೋಟ್ ಪುಸ್ತಕಗಳು ಶಾಲೆಯಲ್ಲೇ ಇರಿಸಲು ಕೂಡ ವ್ಯವಸ್ಥೆ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆಯಾಗಿದೆ.

Read More

ಈಗಿನ ದಿನಗಳಲ್ಲಿ ಹೃದಯಾಘಾತ ಮತ್ತು ಹೃದಯ ಸ್ತಂಭನ ಕಾಯಿಲೆ ಜನರನ್ನು ಹೆಚ್ಚು ಕಾಡುತ್ತಿದೆ. ವಯಸ್ಕರಲ್ಲಿ ಮಾತ್ರ ಹೃದಯ ಸ್ತಂಭನ ಸಂಭವಿಸುತ್ತಿಲ್ಲ ಬದಲಾಗಿ ಚಿಕ್ಕ ಚಿಕ್ಕ ಮಕ್ಕಳು ಹೃದಯ ಸ್ತಂಭನದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೃದಯಾಘಾತಕ್ಕೆ ಜೀವನಶೈಲಿ ಮುಖ್ಯ ಕಾರಣ ಎಂದು ಹೇಳಲಾಗುತ್ತದೆ. ಅನಾರೋಗ್ಯಕರ ಆಹಾರ ಕ್ರಮ, ಕೆಲಸದ ಒತ್ತಡದಿಂದ ಕೆಲವರು ಧೂಮಪಾನ ಅಥವಾ ಮದ್ಯಪಾನ ಮಾಡುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಇದು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೃದಯಾಘಾತದ ಎಚ್ಚರಿಕೆಯ ಸಂಕೇತಗಳೆಂದರೆ, – ಆಹಾರ ಸೇವಿಸಿದ ನಂತರ ಹೊಟ್ಟೆಯಲ್ಲಿ ಅಸಿಡಿಟಿ ಕಾಣಿಸಿಕೊಳ್ಳುವುದು. – ಹೆಚ್ಚು ನಡೆಯುವಾಗ ಅಥವಾ ಮೆಟ್ಟಿಲುಗಳನ್ನು ಹತ್ತುವಾಗ ಉಸಿರಾಟದ ತೊಂದರೆ ಕಾಣಿಸಿಕೊಳ್ಳಬಹುದು. – ಸುಲಭದ ಕೆಲಸಗಳನ್ನೂ ಮಾಡಲು ತೊಂದರೆ ಉಂಟಾಗುವುದು. – ದವಡೆಯಿಂದ ಸೊಂಟದವರೆಗೆ ಭಾರವಾದ ಭಾವನೆ ಉಂಟಾಗಬಹುದು. – ಹಠಾತ್ ಹೆದರಿಕೆಯ ಭಾವನೆ ಉಂಟಾಗಬಹುದು. ಆಹಾರದಲ್ಲಿ ಪ್ರೋಟೀನ್ ಅನ್ನು ಹೆಚ್ಚಿಸಿಕೊಂಡು ಕಾರ್ಬೋಹೈಡೇಟ್ಗಳನ್ನು ಕಡಿಮೆ ಮಾಡಿಕೊಳ್ಳಿ. ಹಣ್ಣುಗಳನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಉಪ್ಪು, ಸಕ್ಕರೆ, ಅಕ್ಕಿ ಮತ್ತು ಮೈದಾವನ್ನು…

Read More

ಲಕ್ಷದ್ವೀಪಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಿ ಬಂದಾಗಿನಿಂದ ಮಾಲ್ಡೀವ್ಸ್​ನ ರಾಜಕೀಯ ನಾಯಕರ ಹೊಟ್ಟೆಗೆ ಹುಳ ಬಿಟ್ಟಂತಾಗಿದೆ. ಲಕ್ಷದ್ವೀಪದ ಸೌಂದರ್ಯವನ್ನು ಸವಿದು ಅಲ್ಲಿನ ಪ್ರವಾಸೋದ್ಯಮ ಬಗ್ಗೆ ಮೋದಿ ಪ್ರಚಾರ ಮಾಡಿದ್ದೇ ತಡ ಮಾಲ್ಡೀವ್ಸ್​ನಲ್ಲಿ ಬೆಂಕಿ ಹೊತ್ತಿಕೊಂಡಿತು. ಏಕೆಂದರೆ, ಮಾಲ್ಡೀವ್ಸ್​ನ ಇಡೀ ಆದಾಯ ನಿಂತಿರುವುದೇ ಪ್ರವಾಸೋದ್ಯಮದ ಮೇಲೆ. ಅದರಲ್ಲೂ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳುತ್ತಾರೆ. ಯಾವಾಗ ಮೋದಿ ಲಕ್ಷದ್ವೀಪಕ್ಕೆ ಹೊಗಿ ಬಂದರೋ ಇದನ್ನು ಅರಗಿಸಿಕೊಳ್ಳಲಾಗದೇ ಭಾರತ ಮತ್ತು ಮೋದಿ ಬಗ್ಗೆ ಮಾಲ್ಡೀವ್ಸ್ ರಾಜಕೀಯ ನಾಯಕರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದರು. ಇದೀಗ ಈ ಬೆಳವಣಿಗೆ ವಿವಾದದ ಸ್ವರೂಪ ಪಡೆದುಕೊಂಡಿದ್ದು, ಇರಲಾರದೆ ಇರುವೆ ಬಿಟ್ಟುಕೊಂಡರು ಎಂಬತಾಗಿದೆ ಮಾಲ್ಡೀವ್ಸ್​ ಪರಿಸ್ಥಿತಿ. ಬಾಯ್ಕಾಟ್​ ಮಾಲ್ಡೀವ್ಸ್​ ಅಭಿಯಾನ ಒಂದೆಡೆಯಾದರೆ, ಸೆಲೆಬ್ರಿಟಿಗಳು ಕೂಡ ಮಾಲ್ಡೀವ್ಸ್​ ವಿರುದ್ಧ ತಿರುಗಿಬಿದ್ದಿದ್ದಾರೆ. ನಾಲಿಗೆ ಹರಿಬಿಟ್ಟ ರಾಜಕೀಯ ನಾಯಕರ ವಿರುದ್ಧ ಅಲ್ಲಿನ ಸರ್ಕಾರ ಕ್ರಮ ಕೈಗೊಂಡರು ಭಾರತೀಯರು ಮಾತ್ರ ಮಾಲ್ಡೀವ್ಸ್ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಇನ್ನು ಸದಾ ತಮ್ಮ ವಿಭಿನ್ನ ಟ್ವೀಟ್​ಗಳ ಮೂಲಕ…

Read More