Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಮನೆಯ ಕಸವನ್ನು ರಸ್ತೆಗೆ ತಂದು ಸುರಿಯುತ್ತಿದ್ದವರ ಮನೆ ಬಾಗಿಲಿಗೆ ಹೋಗಿ ಕಸವನ್ನು ಸುರಿದು ದಂಡ ಹಾಕುತ್ತಿದ್ದ ಅಧಿಕಾರಿಗಳು, ಇದೀಗ ಎಲ್ಲೆಂದರಲ್ಲಿ ಕಸ ಸುಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಹೌದು ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುರಿದು ಬೆಂಕಿ ಹಾಕಲಾಗುತ್ತಿದೆ. ಇದರಿಂದ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಈಗಾಗಲೇ ಕಸ ವಿಂಗಡಿಸಿ ಕೊಡಬೇಕು ಎಂಬ ನಿಯಮ ಜಾರಿಯಲ್ಲಿದೆ. ಆದರೂ ಕೂಡ ಜನ ಕಸ ಸುರಿದು ಬೆಂಕಿ ಇಡುತ್ತಿದ್ದಾರೆ. ಇದನ್ನು ತಡೆಗಟ್ಟಲು BSWML ಕಠಿಣ ಕ್ರಮಕ್ಕೆ ಮುಂದಾಗಿದ್ದು, ಒಂದು ವೇಳೆ ಕಸ ಸುರಿದು ಬೆಂಕಿ ಹಾಕಿದರೆ ಮೊದಲು ದಂಡ ಪ್ರಯೋಗ ಮಾಡಲಿದೆ. ನಂತರ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗಟ್ಟಲಿದೆ. ದಂಡ ಎಷ್ಟು? ಮೊದಲ ಬಾರಿ ಕಸಕ್ಕೆ ಬೆಂಕಿಯಿಟ್ಟರೆ 10 ಸಾವಿರ ರೂ. ದಂಡ. ಎರಡನೇ ಬಾರಿ 20 ಸಾವಿರ ರೂಪಾಯಿ ದಂಡ. ನಂತರ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಇದಕ್ಕೂ ಕ್ಯಾರೇ ಎನ್ನದಿದ್ದರೆ ಎಫ್ಐಆರ್…
ದಾವಣಗೆರೆ : ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಬಾಲಕನೊರ್ವ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಪಿಎಂಸಿ ಸಮೀಪದ ರೈಲ್ವೆ ಅಂಡರ್ ಪಾಸ್ ಬಳಿ ನಡೆದಿದೆ. ಮೃತ ಬಾಲಕನನ್ನು ನಗರದ ಸಮೀಪದ ಹಳೇ ಚಿಕ್ಕನಹಳ್ಳಿಯ ತರುಣ್ (16) ಎಂದು ಗುರುತಿಸಲಾಗಿದೆ. ಏನೂ ಕೆಲಸವನ್ನೂ ಮಾಡದೇ ಮನೆಯಲ್ಲೇ ಇರುತ್ತಿದ್ದ ಬಾಲಕನಿಗೆ ಕೆಲಸಕ್ಕೆ ಹೋಗುವಂತೆ ಪೋಷಕರು ಗದರಿದ್ದರು. ಸುಮ್ಮನೆ ಹುಡುಗರ ಜೊತೆ ಸೇರಿ ಕೆಟ್ಟ ದಾರಿ ಹಿಡಿಯುವ ಬದಲು ಕೆಲಸಕ್ಕೆ ಹೋಗು ಎಂದು ತಿಳುವಳಿಕೆ ಹೇಳಿದ್ದರು. ಇದರಿಂದ ಮನನೊಂದು ತರುಣ್ ಮನೆ ಬಿಟ್ಟು ಹೋಗಿದ್ದ. ಆತನಿಗಾಗಿ ಕುಟುಂಬಸ್ಥರು ರಾತ್ರಿ ಹುಡುಕಾಟ ನಡೆಸಿದ್ದರು. ಬೆಳಗ್ಗೆ ರೈಲುಹಳಿ ಮೇಲೆ ರುಂಡ ಮುಂಡ ಬೇರೆಯಾಗಿ ತರುಣ್ ಮೃತದೇಹ ಪತ್ತೆಯಾಗಿತ್ತು. ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಗದಗ : ಗದಗ ನಗರದ ಮುಳಗುಂದ ನಾಕಾ ಬಳಿ ದುರ್ಗಾ ಬಾರ್ ಸಮೀಪ ಸಿನಿಮೀಯ ರೀತಿಯಲ್ಲಿ ಮಾರಣಾಂತಿಕ ಹಲ್ಲೆ ನಡೆದಿದೆ. ಹಳೆ ದ್ವೇಷದಿಂದಾಗಿ ಅಭಿಷೇಕ್ ಹರ್ಲಾಪುರ, ಸಾಯಿಲ್ ಹಾಗೂ ಮುಷ್ತಾಕ್ ಮೂಲಿಮನಿ ಎಂಬುವರು ಅರುಣಕುಮಾರ ಕೋಟೆಗಲ್ ಮೇಲೆ ತಲ್ವಾರ್, ಚಾಕು ಹಾಗೂ ಬೀಯರ್ ಬಾಟಲ್ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಯುವಕ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೌದು ತಡರಾತ್ರಿ ಈ ಒಂದು ಘಟನೆ ನಡೆದಿದ್ದು, ಇಲ್ಲಿನ ಮುಳಗುಂದ ನಾಕಾ ಬಳಿಯ ದುರ್ಗಾ ಬಾರ್ ಸಮೀಪ ಈ ಘಟನೆ ನಡೆದಿದ್ದು, ಅರುಣಕುಮಾರ ಕೋಟೆಗಲ್ ಎನ್ನುವ ಯುವಕ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಲ್ಲಾ ಓಣಿ ಮತ್ತು ಒಕ್ಕಲಿಗರ ಓಣಿಯ ಯುವಕರ ನಡುವೆ ಹಳೆಯ ದ್ವೇಷದಿಂದ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರುಣಕುಮಾರ್ ಅವರು ಹೋಟೆಲ್ ಒಂದರಲ್ಲಿ ಊಟಕ್ಕೆ ಕುಳಿತಿದ್ದಾಗ, ಏಕಾಏಕಿ ಹೋಟೆಲ್ಗೆ ನುಗ್ಗಿದ ಅಭಿಷೇಕ್ ಹರ್ಲಾಪುರ, ಸಾಯಿಲ್ ಹಾಗೂ ಮುಷ್ತಾಕ್ ಮೂಲಿಮನಿ, ಅರುಣಕುಮಾರ್ ಮೇಲೆ…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಪುನರುಚ್ಚಿಸಿದರು. ಹಾವೇರಿಯಲ್ಲಿ ಮಾತನಾಡಿದ ಅವರು, 2028ರ ಚುನಾವಣೆಯ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಆಗಿದೆ. ಸ್ವಾಮೀಜಿಗಳು ಅವರ ಸಮುದಾಯದ ಪರವಾಗಿ ಮಾತಾಡ್ತಾರೆ. ಅವರ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಚಳಿಗಾಲದ ಅಧಿವೇಶನದಲ್ಲಿ ಆವಿಶ್ವಾಸ ನಿರ್ಣಯ ಮಂಡನೆ ವಿಚಾರವಾಗಿ, ಆವಿಶ್ವಾಸ ನಿರ್ಣಯ ಮಂಡಿಸಬಹುದು ಅದ್ರಲ್ಲಿ ಏನಿದೆ ಅದರಿಂದ ಯಾವುದೇ ಪ್ರಯೋಜನ ಇಲ್ಲ. ನಮಗೆ ಮೆಜರಿಟಿ ಇದೆ ಎಂದರು.
ಉಡುಪಿ : ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಆಡಳಿತ ನಡೆಯುತ್ತಿಲ್ಲ ಶೇಕಡ 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸೀಮಿತ ಆಗಿದ್ದಾರೆ. ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುತ್ತೇವೆ. ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಆಗಲ್ಲ ಎಂದು ಉಡುಪಿಯಲ್ಲಿ ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿದೆ. ಸಿಎಂ ಡಿಸಿಎಂ ಮತ್ತು ಮಂತ್ರಿಗಳು ಶಾಸಕರ ನಡುವೆ ವಿಶ್ವಾಸವಿಲ್ಲ. ಸದನದಲ್ಲಿ ವಿಶ್ವಾಸ ಮತ ಯಾಚಿಸುತ್ತೇವೆ. NDA ಒಕ್ಕೂಟದಲ್ಲೂ ಈ ಬಗ್ಗೆ ಮಾತುಕತೆ ಮಾಡುತ್ತೇವೆ ರಾಜ್ಯದ ಹಿತ ಮರೆತಿರುವ ಸರ್ಕಾರವನ್ನು ಬಯಲಿಗೆ ಎಳೆಯುತ್ತೇವೆ. ಕುರ್ಚಿ ಉಳಿಸಿಕೊಳ್ಳಲು ಸ್ವಾಮೀಜಿಗಳಿಂದ ಹೇಳಿಕೆ ಕೊಡಿಸುತ್ತಿದ್ದಾರೆ. ಗೊಂದಲದ ವಾತಾವರಣವನ್ನು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೃಷ್ಟಿ ಮಾಡಿದ್ದಾರೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಲಾಗಿದೆ ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚಿಸಲು ಮುಂದಾಗಲ್ಲ ಕಾಂಗ್ರೆಸ್ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು…
ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಅವರು ಹೇಳಿದ್ದನ್ನ ನಾನು ಗಮನಿಸಿದ್ದೇನೆ ಅವರು ಕರೆದು ಮಾತನಾಡುತ್ತೇನೆ ಅಂತ ಹೇಳಿದ್ದಾರೆ ಹಾಗಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಕರೆದು ಮಾತನಾಡುತ್ತಾರೆ. ಹೈಕಮಾಂಡ್ ಏನೆ ತೀರ್ಮಾನ ಮಾಡಿದರು ಅದಕ್ಕೆ ನಾವೆಲ್ಲ ಬದಲಾಗಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಅಲ್ಲದೆ ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾಟ್ ಬೀಸಿದರು. ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ 2028 ರ ವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್…
ಬೆಳಗಾವಿ : ಸಿಎಂ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದು ಇದರ ಮಧ್ಯ ಸಿದ್ದರಾಮಯ್ಯ ಹಠ ಬಿಟ್ಟು ಡಿಕೆ ಶಿವಕುಮಾರ್ ಗೆ ಕುರ್ಚಿ ಬಿಟ್ಟು ಕೊಡಲಿ. ಒಂದು ವೇಳೆ ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಬಿಟ್ಟು ಕೊಡದಿದ್ದರೆ ಸರ್ಕಾರ ಪತನವಾಗಲಿದೆ ಎಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಹೇಳಿಕೆ ನೀಡಿದರು.. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇಗುಲ ಹಳ್ಳಿಯಲ್ಲಿರುವ ಮಡಿವಾಳೇಶ್ವರ ಮಠದಲ್ಲಿ ಮಾತನಾಡಿದ ಅವರು, ಎರಡೂವರೆ ವರ್ಷ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ಸಹಕರಿಸಿದ್ದಾರೆ ವಚನ ಭ್ರಷ್ಟರಾಗದೆ ಡಿಕೆ ಶಿವಕುಮಾರ್ ಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡಬೇಕು ಇಲ್ಲದಿದ್ದರೆ ಸರ್ಕಾರವೇ ಪತನವಾಗಲಿದೆ ನಾನು ಯಾರ ಪರವಾಗಿಯೂ ಇಲ್ಲ ಯಾರ ವಿರುದ್ಧವೂ ಇಲ್ಲ ಮಾನವೀಯತೆ ದೃಷ್ಟಿಯಿಂದ ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತಿದ್ದೇನೆ
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಮಠದ ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿರುವ ವಿಚಾರವಾಗಿ ಸ್ವಾಮೀಜಿಗಳ ಮಧ್ಯಪ್ರವೇಶ ಸೂಕ್ತ ಅಲ್ಲ. ಸ್ವಾಮೀಜಿಗಳು ಧರ್ಮ ಸುಧಾರಣೆ ಕೆಲಸದಲ್ಲಿ ಇರಬೇಕು ರಾಜಕೀಯದಲ್ಲಿ ಮಧ್ಯಪ್ರವೇಶ ಮಾಡುವುದು ಸೂಕ್ತವಲ್ಲ ಅಂದು ಶಾಸಕ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು. ಹೈಕಮಾಂಡ್ ಕರೆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗುತ್ತಾರೆ. ಯಾವ ಉದ್ದೇಶದಿಂದ ಕರೆದಿದ್ದಾರೆ ಅನ್ನೋದು ಗೊತ್ತಾಗಬೇಕು. ಯಾರ್ಯಾರು ಮಾತು ಕೊಟ್ಟಿದಾರೆ ಅನ್ನೋದು ಗೊತ್ತಿಲ್ಲ. ನಮ್ಮ ತೀರ್ಮಾನ ಅಲ್ಲ ಹೈಕಮಾಂಡ್ ತೀರ್ಮಾನ ಅಂತಿಮ ಅಲ್ವಾ? ಪಕ್ಷದಲ್ಲಿ ನೋಟಿಸ್ ಕೊಡುವುದು ಉತ್ತರ ಕೊಡುವುದು ನಿರಂತರ ಪ್ರಕ್ರಿಯೆ. ಯಾವ್ಯಾವ ಸಂದರ್ಭದಲ್ಲಿ ಏನು ನಡೆಯಬೇಕು ಅದು ನಡೆದೇ ನಡೆಯುತ್ತದೆ. ಕಾಂಗ್ರೆಸ್ ನಲ್ಲಿ ಮಾತ್ರ ಅಲ್ಲ ಎಲ್ಲಾ ಪಕ್ಷಗಳಲ್ಲೂ ಅಹಿಂದ ಇದೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು.
ಬೆಂಗಳೂರು : ರಾಜ್ಯದಲ್ಲಿ ಸಿಎಂ ಕಿತ್ತಾಟದ ಮಧ್ಯ ಮಾಜಿ ಸಂಸದೆ ನಟಿ ರಮ್ಯಾ, ಯಾರನ್ನು ಸಿಎಂ ಮಾಡಿದರು ಓಕೆ ಎಲ್ಲಾ ನಾಯಕರಿಗೂ ಅರ್ಹತೆ ಇದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಇದ್ದಾರೆ ಪಕ್ಷದ ಹಿರಿಯ ನಾಯಕರು ಒಂದು ನಿರ್ಧಾರಕ್ಕೆ ಬರುತ್ತಾರೆ ಎಂದು ಮಾಜಿ ಸಂಸದೆ ಹಾಗೂ ನಟಿ ರಮ್ಯ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಇದು ನಾನು ಹೇಳುವಂಥದ್ದಲ್ಲ ಕಾಂಗ್ರೆಸ್ ಹಿರಿಯ ನಾಯಕರು ಕುರಿತು ಚರ್ಚೆ ಮಾಡುವಂತದ್ದು, ಇದರಲ್ಲಿ ನನ್ನ ಹೇಳಿಕೆ ಏನಿಲ್ಲ ಅವರು ಯಾರನ್ನು ಮಾಡುತ್ತಾರೋ ಅವರು ಸಿಎಂ ಆಗಲಿ, ರಾಜ್ಯದಲ್ಲಿ ಸಿಎಂ ಆಗುವ ಅರ್ಹತೆ ಯಾರಿಗೆ ಇದೆ ಅವರನ್ನು ಮಾಡಲಿ. ಪ್ರತಿಯೊಬ್ಬ ನಾಯಕರಿಗೂ ಸಿ ಆಗುವ ಅರ್ಹತೆ ಇದೆ ಯಾರೇ ಸಿಎಂ ಆದರು ಕೂಡ ಒಳ್ಳೆಯದೇ ಎಂದರು.
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಏನು ನಿಲುವು ತೆಗೆದುಕೊಳ್ಳುತ್ತೆ ಎನ್ನುವುದು ಇದೀಗ ಸದ್ಯಕ್ಕೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಟ್ವೀಟ್ ಖಾತೆಯ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಪೋಸ್ಟ್ ಮಾಡಿದ್ದರು. ಆದರೆ ಈ ಒಂದು ವಿಚಾರವಾಗಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಇಲ್ಲಾ ನಾನು ಕೊಟ್ಟ ಮಾತು ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ ನಾನು ಯಾವುದೇ ಹಂಚಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಇಲ್ಲ ನಾನು ಟ್ವೀಟ್ ನಲ್ಲಿ ಕೊಟ್ಟ ಮಾತು ವಿಚಾರವಾಗಿ ಯಾವುದೇ ಪೋಸ್ಟ್ ಹಂಚಿಕೊಂಡಿಲ್ಲ ಅದು ಒಂದು ಫೇಕ್ ಪೋಸ್ಟ್ ಎಂದು ಸ್ಪಷ್ಟಪಡಿಸಿದರು. ಟ್ವೀಟ್ ನಲ್ಲೇನಿದೆ? ಕುರ್ಚಿ ಕಿತ್ತಾಟದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಟ್ವೀಟ್ ಮಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿ ದೊಡ್ಡ ಶಕ್ತಿ. ಯಾರೇ ಆಗಲಿ ಕೊಟ್ಟ ಮಾತನ್ನು…













