Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಹಾಸನ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ವಿವಾಹವಾಗಲು ಹುಡುಗಿ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕೃಷ್ಣ ಸಮುದ್ರ ಬಳಿ ಒಂದು ಮನಕಲಕುವ ಘಟನೆ ವರದಿಯಾಗಿದೆ. ಕಲ್ಯಾಣಿಗೆ ಜಿಗಿದು ಗುಡ್ದುರು ಗ್ರಾಮದ ವಿನಯ್ (35) ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲೂಕಿನ ಗುಡ್ದುರು ನಿವಾಸಿ ವಿನಯ್ ಹುಡುಗಿ ಸಿಗದಿದ್ದಕ್ಕೆ ಮನನೊಂದು ಕಲ್ಯಾಣಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯ ವಿವರ: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲೂಕಿನ ಗುಡ್ದುರು ನಿವಾಸಿ ವಿನಯ್, ಕಳೆದ ಕೆಲವು ಸಮಯದಿಂದ ಮದುವೆಗಾಗಿ ಹುಡುಗಿ ಹುಡುಕುತ್ತಿದ್ದ ಎನ್ನಲಾಗಿದೆ. ಹಲವಾರು ಕಡೆ ಸಂಬಂಧಗಳನ್ನು ಹುಡುಕಿದರೂ ಯಾವುದೂ ಕೂಡಿಬಂದಿರಲಿಲ್ಲ. ಈ ವಿಚಾರವಾಗಿ ಯುವಕ ತೀವ್ರವಾಗಿ ಮಾನಸಿಕವಾಗಿ ಕುಗ್ಗಿದ್ದನು ಎನ್ನಲಾಗುತ್ತಿದೆ. “ನನ್ನ ವಯಸ್ಸಿನವರಿಗೆಲ್ಲ ಮದುವೆಯಾಗುತ್ತಿದೆ, ನನಗೆ ಮಾತ್ರ ಹುಡುಗಿ ಸಿಗುತ್ತಿಲ್ಲ” ಎಂಬ ಕೀಳರಿಮೆ ಹಾಗೂ ಸಾಂಸಾರಿಕ ಜೀವನದ ಬಗ್ಗೆ ಇದ್ದ ನಿರಾಸಕ್ತಿಯೇ ಈ ಆತ್ಮಹತ್ಯೆಗೆ ಪ್ರೇರಣೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಸ್ಥಳಕ್ಕೆ…

Read More

ನವದೆಹಲಿ : ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ತಂಡದ ಡ್ರೆಸ್ಸಿಂಗ್ ರೂಮ್‌ನಲ್ಲಿ ಪರಾಗ್ ‘ವೇಪಿಂಗ್’ ಸೇದುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಿಯಾನ್ ಪರಾಗ್ 16 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಅವರು ಪೆವಿಲಿಯನ್‌ಗೆ ಮರಳಿದ ನಂತರ, ಎರಡನೇ ಇನಿಂಗ್ಸ್‌ನ 16ನೇ ಓವರ್ ನಡೆಯುತ್ತಿದ್ದಾಗ ಬ್ರಾಡ್‌ಕಾಸ್ಟ್ ಕ್ಯಾಮೆರಾ ಡ್ರೆಸ್ಸಿಂಗ್ ರೂಮ್‌ನತ್ತ ತಿರುಗಿತು. ಈ ವೇಳೆ ಪರಾಗ್ ಎಲೆಕ್ಟ್ರಾನಿಕ್ ಸಿಗರೇಟ್ ಅಥವಾ ವೇಪ್ ಬಳಸುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಈ ದೃಶ್ಯದ ತುಣುಕುಗಳು ಇದೀಗ ವೈರಲ್ ಆಗಿವೆ. 1. ಘಟನೆ ನಡೆದದ್ದು ಯಾವಾಗ? ಏಪ್ರಿಲ್ 28, 2026 ರಂದು ಚಂಡೀಗಢದ ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ ನಡೆಯುತ್ತಿತ್ತು. ರಾಜಸ್ಥಾನ್ ತಂಡವು 223 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುತ್ತಿದ್ದಾಗ, ಅಂದರೆ ಪಂದ್ಯದ ಎರಡನೇ ಇನಿಂಗ್ಸ್‌ನ 16ನೇ…

Read More

ಮಂಡ್ಯ : ಕಳೆದ ವರ್ಷ ಮಂಡ್ಯ ಮೈಸೂರು ಭಾಗದಲ್ಲಿ ಭ್ರೂಣಲಿಂಗ ಪತ್ತೆ & ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಸದ್ದು ಮಾಡಿತ್ತು. ಇದೀಗ ಮಂಡ್ಯದಲ್ಲಿ ಮತ್ತೆ ಭ್ರೂಣಲಿಂಗ ಪತ್ತೆಗಾಗಿ ಬಾಲ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪೊಲೀಸರು ಮೂವರು ವೈದ್ಯರನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಹೌದು ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡಿದ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಕೆ ಆರ್ ಪೇಟಿಯ ಚೇತನ ಮೆಟರ್ನಿಟಿ ಸೆಂಟರ್ ನ ದಿವ್ಯ ಚೇತನ್, ಕೆಆರ್ ಪೇಟೆ ನಾವಿ ಡಯಾಗ್ನೋಸ್ಟಿಕ್ ಸೆಂಟರ್ ನ ಹರ್ಷಿತ್, ಹಾಗೂ ಕುಶಲ್ ಡಯಾಗ್ನೋಸ್ಟಿಕ್ ಸೆಂಟರ್ ಹರೀಶ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಇನ್ನು ತಲೆಮರಿಸಿಕೊಂಡ ಸ್ತ್ರೀರೋಗ ತಜ್ಞೆ ಪ್ರಿಯಾಂಕಾಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಕೆ.ಆರ್ ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಠಾಣೆಯಲ್ಲಿ 12 ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಸರ್ಕಾರಿ ವೈದ್ಯ ಮೂವರು ಖಾಸಗಿ ವೈದ್ಯರು ಆಶಾ ಕಾರ್ಯಕರ್ತೆ ಕಿರಿಯ ಆರೋಗ್ಯ ಸಹಾಯಕಿ ಸೇರಿದಂತೆ ಖಾಸಗಿ ವ್ಯಕ್ತಿಗಳ…

Read More

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿತು. ಅವಳಿ ನಗರದ 17 ಸರಕಾರಿ ಹಾಸ್ಟೆಲ್ ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯ ಹಾಗೂ ಆಹಾರದ ಗುಣಮಟ್ಟದ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆಯ ಹಿನ್ನೆಲೆ ದೀರ್ಘಕಾಲದಿಂದ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಸೌಲಭ್ಯ ಸಿಗುತ್ತಿಲ್ಲ, ಗುಣಮಟ್ಟವಿಲ್ಲದ ಆಹಾರ ನೀಡಲಾಗುತ್ತಿದೆ ಮತ್ತು ಅನುದಾನ ದುರುಪಯೋಗವಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಪ್ಪಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್‌ಗಳನ್ನೊಳಗೊಂಡ ಐದಾರು ತಂಡಗಳು ಇಂದು ಬೆಳ್ಳಂಬೆಳಗ್ಗೆ ಅನಿರೀಕ್ಷಿತ ದಾಳಿ ನಡೆಸಿವೆ. ದಾಳಿ ನಡೆದ ಪ್ರಮುಖ ಪ್ರದೇಶಗಳು ಹುಬ್ಬಳ್ಳಿ ಮತ್ತು ಧಾರವಾಡದ ವಿವಿಧ ಭಾಗಗಳಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಹಾಸ್ಟೆಲ್‌ಗಳನ್ನು ಗುರಿಯಾಗಿಸಿ…

Read More

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದರು. ಘಟನೆಯ ಹಿನ್ನೆಲೆ: ಬೀರೂರು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯ ಪತ್ನಿ ಪದ್ಮ (34) ಮಂಗಳವಾರ ತಮ್ಮ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದ ಸದಸ್ಯರ ನಡುವೆ ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಮನಸ್ತಾಪಗಳು ನಡೆಯುತ್ತಿದ್ದವು ಎನ್ನಲಾಗಿದ್ದು, ಇದೇ ಕಾರಣಕ್ಕೆ ಮನನೊಂದು ಅವರು ಈ ವಿಪರೀತ ಹೆಜ್ಜೆ ಇಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ…

Read More

ರಾಯಚೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಬಿಸಿಲಿನ ಝಳಕ್ಕೆ ಅಮಾಯಕ ಜೀವಗಳು ಬಲಿಯಾಗುತ್ತಿವೆ. ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ತಾಪ ತಾಳಲಾರದೆ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಘಟನೆಯ ವಿವರ: ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದನಿವಾಸಿಯಾದ ಹುಸೇನಪ್ಪ (45) ಮೃತಪಟ್ಟ ದುರ್ದೈವಿ. ಇವರು ಎಂದಿನಂತೆ ಅತೀ ಹೆಚ್ಚಿನ ತಾಪಮಾನದ ನಡುವೆಯೇ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಅಡಿಯಲ್ಲಿ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ತೀವ್ರವಾದ ಬಿಸಿಲಿನಿಂದಾಗಿ ಅವರು ದಿಢೀರ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚುತ್ತಿರುವ ಆತಂಕ: ಕಳೆದ ಕೆಲವು ದಿನಗಳಿಂದ ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನವು ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಜನಸಾಮಾನ್ಯರು ಮನೆಯಿಂದ ಹೊರಬರಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕೆಲಸ ಅರಸಿ…

Read More

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಸ್ಪೀಕರ್ಗೆ ಪತ್ರ ಬರೆಯಲಾಗಿದೆ. ಸಾಮಾಜಿಕ ಹೋರಾಟಗಾರ ಬಸವರಾಜ್ ಕೊರವರ್ ಅವರು ಪತ್ರ ಬರೆದಿದ್ದಾರೆ. ಕಳೆದ ಏಪ್ರಿಲ್ 17ರಂದು ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಈ ಒಂದು ಆದೇಶ ಬಂದು 10 ದಿನಗಳಾದರೂ ಕೂಡ ವಿನಯ್ ಕುಲಕರ್ಣಿ ಅವರನ್ನ ಶಾಸಕ ಸ್ಥಾನ ಅನರ್ಹಗೊಳಿಸಿಲ್ಲ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ್ ಅವರು ಪತ್ರ ಬರೆದಿದ್ದಾರೆ.

Read More

ಯಾದಗಿರಿ : ರಾಜ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ.ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದ ಈ ಘಟನೆ ನಿಜಕ್ಕೂ ಅತ್ಯಂತ ದುರದೃಷ್ಟಕರ ಮತ್ತು ಮನಕಲಕುವಂತದ್ದು. ಹವಾಮಾನ ವೈಪರೀತ್ಯ ಹಾಗೂ ಸಿಡಿಲಿನ ಹೊಡೆತಕ್ಕೆ ಸಿಲುಕಿ 60 ಕುರಿಗಳು ಏಕಾಏಕಿ ಸಾವನ್ನಪ್ಪಿರುವುದು ಆ ಕುರಿಗಾಹಿ ಕುಟುಂಬಗಳಿಗೆ ತುಂಬಲಾರದ ಆರ್ಥಿಕ ನಷ್ಟವನ್ನುಂಟು ಮಾಡಿದೆ. ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೆ, ರಾಜ್ಯ ಕಾಂಗ್ರೆಸ್ ಶಾಸಕರು, ಸಚಿವರು ಸಚಿವ ಸಂಪುಟ ಪುನಾರಚನೆ ಹಾಗು ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಇದರ ಮಧ್ಯ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್ ಸಿಡಿಸಿದ್ದು, 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಕುರ್ಚಿಗಾಗಿ ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಮೇ 4 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತದೆ. ಸಿದ್ದರಾಮಯ್ಯರ ಕುರ್ಚಿ ಫಲಿತಾಂಶವು ಪ್ರಕಟವಾಗಲಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರೆದಲ್ಲಿ ಘೋರ ಘಟನೆ ಒಂದು ನಡೆದಿದ್ದು, ನವವಿವಾಹಿತೆ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆಯಾಗಿದೆ. ಮೃತಳನ್ನು ರೂಪ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜೊತೆ ಮದುವೆಯಾಗಿದ್ದ ರೂಪ, ಪತಿಯ ಅನುಮಾನದ ಭೂತಕ್ಕೆ ರೂಪ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರೂಪ ಮೃತದೇಹ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮೃತ ರೂಪ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿಯಾಗಿದ್ದು, ರೂಪ ಪೋಷಕರಿಂದ ಗಂಡ ಮುನಿರಾಜು ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

Read More