Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನನ್ನ ಪ್ರಕಾರ ಈ ಬಾರಿ ಕೈ ಮೈತ್ರಿಕೂಟದ ಇಂಡಿಯಾ ಅಧಿಕಾರಕ್ಕೆ ಬರುತ್ತದೆ, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವೇ ಇಲ್ಲ.ಇಂಡಿಯಾ ಮೈತ್ರಿ ಕೂಟ ಭಾರತ ದೇಶವನ್ನು ಆಳುತ್ತದೆ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಪರ್ಮನೆಂಟಾಗಿ ಅವರ ಮೈತ್ರಿ ಇರಲಿ ನಮ್ಮದೇನು ಅಭ್ಯಂತರವಿಲ್ಲ. ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಯಾರ ಫೋಟೋ ಬೇಕಾದರೂ ಹಾಕಿಕೊಂಡು ಚುನಾವಣೆಗೆ ಹೋಗಲಿ ಯಾರ ಬೇಕಾದರೂ ಜೋಡಣೆ ಮಾಡಿಕೊಳ್ಳಲಿ ಯಾವುದಕ್ಕೂ ನಮ್ಮ ಅಭ್ಯಂತರವಿಲ್ಲ. ಇನ್ನು ಪ್ರಜ್ವಲ್ ರೇವಣ್ಣ ಶೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಭಾರತಕ್ಕೆ ಆಗಮಿಸಿದ ಪ್ರಜ್ವಲ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡದೆ ಹಾಗೆ ತೆರಳಿದರು.
ಗದಗ : ಜಿಲ್ಲೆಯ ಲಕ್ಷ್ಮೇಶ್ವರದ ಹಳ್ಳದ ಕೆರೆ ಬಡಾವಣೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆ ಒಂದು ಹೊತ್ತಿ ಉರಿದಿದ್ದು ಮನೆಯಲ್ಲಿದ್ದ ಫ್ಯಾನ್ ಈ ಘಟನೆ ನಡೆದಿದ್ದು,ಕುರ್ಚಿ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಗಿವೆ. ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಮನೆಯೊಂದು ಹೊತ್ತಿ ಉರಿದಿದ್ದು, ದಾನಪ್ಪ ಹುಲಕೋಟಿ ಎಂಬುವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಫ್ಯಾನ್ ಚೇರ್ ಸೇರಿದಂತೆ ಮನೆಯಲ್ಲಿದ್ದ ಎಲ್ಲ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು : ತಂದೆ ಕಾರ್ ವಾಶ್ ಮಾಡುತ್ತಿದ್ದ ವೇಳೆ ಬಾಲಕ ಕಾರಿನ ಎಕ್ಸಲೇಟರ್ ಒತ್ತಿದರಿಂದ ಐದು ವರ್ಷದ ಮಗು ದುರಂತವಾಗಿ ಸಾವನ್ನಪ್ಪಿರುವ ಘಟನೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಬಾಲಕ 15 ವರ್ಷದವನೆಂದು ತಿಳಿದಿದ್ದು ಇದೀಗ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಘಟನೆಯಲ್ಲಿ ಮತ್ತೊಂದು ಮಗುವಿಗೆ ಗಂಭೀರ ಗಾಯ 5 ವರ್ಷದ ಬಾಲಕ ಧನರಾಜ್ ಗೆ ಗಂಭೀರ ಗಾಯವಾಗಿದೆ. ರಾಯಚೂರು ಮೂಲದ ಲೋಕೇಶ್ ಪುತ್ರ ಧನರಾಜ್ ಎನ್ನುವ ಬಾಲಕನಿಗೆ ಗಂಭೀರವಾದ ಗಾಯವಾಗಿದೆ.ಲೋಕೇಶ್ ಬ್ಯಾಂಕ್ ಒಂದರಲ್ಲಿ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಕಾರಿನ ಮೇಲೆ ಪೊಲೀಸ್ ಫಲಕ ಪತ್ತೆಯಾಗಿದ್ದು, ಸದ್ಯ ಕಾರು ಓಡಿಸುತ್ತಿದ್ದ ಬಾಲಕನನ್ನು ಇದೀಗ ಬಂಧಿಸಲಾಗಿದೆ. ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಬಾಲಕನನ್ನು 5 ವರ್ಷದ ಅರವ್ ಎಂದು ಹೇಳಲಾಗುತ್ತಿದೆ. ಇಂದು ಬೆಳಗ್ಗೆ 10.30ರ ಸುಮಾರಿಗೆ ಈ ದುರಂತ ನಡೆದಿದೆ. 15 ವರ್ಷದ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಕರಣವನ್ನು ಸಿವಿಐಗೆ ಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ಕೊಡಿ ಎನ್ನುವ ಬಿಜೆಪಿಯವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿ ಎಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಿ ಎನ್ನುವ ಬಿಜೆಪಿಯವರಿಗೆ ಯಾವ ನೈತಿಕತೆ ಇದೆ? ಸಿಬಿಐ ಮೇಲೆ ನನಗೆ ನಂಬಿಕೆ ಇಲ್ಲ ಅಂತಲ್ಲ. ಬಿಜೆಪಿಯವರಿಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇಲ್ವಾ? ಬಿಜೆಪಿಯವರಿಗೆ ಸುಳ್ಳು ಆರೋಪ ಮಾಡುವುದೇ ಕಸುಬಾಗಿದೆ. ಸಂತ್ರಸ್ತೆ ದೂರಿನ ಮೇಲೆ ದೇವರಾಜ ಗೌಡನನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ನಾವು ಪೊಲೀಸ್ ತನಿಖೆಯಲ್ಲಿ ಮಧ್ಯ ಪ್ರವೇಶ ಮಾಡುತ್ತಿಲ್ಲ.ತನಿಖೆ ಮಾಡಲು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜವಾಬ್ದಾರಿಯಿಂದ ಮಾತನಾಡಲಿ. ಪರೇಶ್ ಮೇಸ್ತ ಕೇಜ್ ಸಿಬಿಐಗೆ ಕೊಟ್ಟಿದ್ದೆವು ಆದರೆ ಆ ಕೇಸ್ ಏನಾಯಿತು? ಸುಳ್ಳು ಹೇಳುವುದರಲ್ಲಿ…
ಬೆಂಗಳೂರು : ತಂದೆಯ ಜೊತೆ ಕಾರ್ ವಾಶ್ ಮಾಡುತಿದ್ದ ಬಾಲಕ ಕಾರಿನಲ್ಲಿ ಕುಳಿತು ಜೋರಾಗಿ ಎಕ್ಸಲೇಟರ್ ತುಳಿದಿದ್ದಾನೆ.ಈ ವೇಳೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹರಿದು ಸಾವನ್ನಪ್ಪಿರುವ ಘೋರ ಘಟನೆ ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯ ರಸ್ತೆಯಲ್ಲಿ ನಡೆದಿದೆ. ಹೌದು ಮೃತ ಬಾಲಕನನ್ನು 5 ವರ್ಷದ ಅರವ್ ಎಂದು ಹೇಳಲಾಗುತ್ತಿದ್ದು, ಇಂದು ಬೆಳಗ್ಗೆ 10.30ರ ಸುಮಾರಿಗೆ ಈ ದುರಂತ ನಡೆದಿದೆ. 15 ವರ್ಷದ ಬಾಲಕನೊರ್ವ ತಂದೆಯ ಜತೆ ಕಾರ್ ವಾಶ್ ಮಾಡುತ್ತಿದ್ದ. ಇದೇ ವೇಳೆ ಕಾರಿನ ಡ್ರೈವಿಂಗ್ ಸೀಟ್‌ನಲ್ಲಿ ಕುಳಿತ ಬಾಲಕ ಏಕಾಏಕಿ ಎಕ್ಸಿಲೇಟರ್ ತುಳಿದಿದ್ದಾನೆ. ಪರಿಣಾಮ ಕಾರು ರಭಸವಾಗಿ ಚಲಿಸಿದೆ. ಅಲ್ಲೇ ಕಾರ್ ಬಳಿ ಆಟವಾಡುತ್ತಿದ್ದ 5 ವರ್ಷದ ಆರವ್ ಮೇಲೆ ಹರಿದಿದೆ. ಕಾರು ಗುದ್ದಿದ ರಭಸಕ್ಕೆ ಆರವ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಂತರದ ತಕ್ಷಣ ಮಗುವಿನ ಮೃತ ದೇಹವನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ ಈ ಒಂದು…
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಮೂರು ಪದವೀಧರರ ಕ್ಷೇತ್ರ ಹಾಗೂ ಎರಡು ಶಿಕ್ಷಕರ ಕ್ಷೇತ್ರಕ್ಕೆ ನಿನ್ನೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೂ, ಇದೀಗ ಕಾಂಗ್ರೆಸ್ ಕೂಡ ಆರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಕಾಂಗ್ರೆಸ್ ಈ ಹಿಂದೆ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿ, ಒಂದು ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿತ್ತು. ಇದೀಗ ಬಾಕಿ ಉಳಿದಿದ್ದ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರನ್ನು ಆಯ್ಕೆ ಮಾಡುವ ಮೂಲಕ, ವಿಧಾನ ಪರಿಷತ್ನ ಆರೂ ಸ್ಥಾನಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನೈಋತ್ಯ ಶಿಕ್ಷಕರ ಕ್ಷೇತ್ರ ಕೆ.ಕೆ ಮಂಜುನಾಥ್ ಕಣಕ್ಕೆ ಇಳಿಯಲಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರ ಮರತಿಬ್ಬೇಗೌಡ ಅವರು ಸ್ಪರ್ಧೆಸಲಿದ್ದಾರೆ. ಅದೇ ರೀತಿಯಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ.ಶ್ರೀನಿವಾಸ್ ಕಣಕ್ಕೆ ಇಳಿಯಲಿದ್ದಾರೆ.ಇನ್ನು ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ ಪಾಟೀಲ, ಅಲ್ಲದೆ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ ಅವರು ಸ್ಪರ್ಧಿಸಲಿದ್ದಾರೆ. ಇನ್ನು ಪದವೀಧರ…
ಹಾಸನ : ಪ್ರಜ್ವಲ್ ರೇವಣ ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ SIT ಅಧಿಕಾರಿಗಳು ಪ್ರೀತಮ್ ಗೌಡ ಕಚೇರಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ. ಹೌದು ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಮಾಜಿ ಶಾಸಕ ಪ್ರೀತಂ ಗೌಡ ಕಛೇರಿ ಸಿಬ್ಬಂದಿಗಳಾದ ಚೇತನ್ ಹಾಗೂ ಲಿಖಿತ್ ಗೌಡ ಎನ್ನುವ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದೀಗ ಚೇತನ್ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದು ಹಾಸನ ತಾಲೂಕಿನ ಯಲಗುಂದ ಗ್ರಾಮದಲ್ಲಿರುವ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಸಹಜರು ನಡೆಸುತ್ತಿದ್ದಾರೆ. ಅದಲ್ಲದೆ ಶ್ರವಣಬೆಳಗೊಳದಲ್ಲಿರುವ ಚೇತನ್ ಮನೆಯಲ್ಲಿ ಕೂಡ ಎಸ್ಐಟಿ ಅಧಿಕಾರಿಗಳು ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರೀತಮ್ ಗೌಡ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಬೆಳಗಾವಿ : ಕಳೆದ ಒಂದು ವರ್ಷದಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ರಾಜ್ಯದ ಜನರಿಗೆ ಇದೀಗ ಮಳೆರಾಯ ಕೃಪೆ ತೋರಿದ್ದಾನೆ. ಇತ್ತೀಚಿಗೆ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಇದೀಗ ಬೆಳಗಾವಿಯಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಎರಡು ಕಾರು ಹಾಗೂ ಒಂದು ಪಿಕಪ್ ವಾಹನ ಹಳ್ಳದಲ್ಲಿ ಕೊಚ್ಚಿ ಹೋಗಿವೆ. ಧಾರಾಕಾರ ಮಳೆಯಿಂದ ಏಕಾಏಕಿ ಲಕ್ಷ್ಮಿ ಹಳ್ಳ ತುಂಬಿ ಹರಿದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿರುವ ಲಕ್ಷ್ಮಿ ಹಳ್ಳ ತುಂಬಿ ಹರಿಯುತ್ತಿದೆ. ಹಳ್ಳದ ನೀರಿನಲ್ಲಿ ಇದೀಗ ಎರಡು ಕಾರು ಹಾಗೂ ಒಂದು ಪಿಕಪ್ ವಾಹನ ಕೊಚ್ಚಿ ಹೋಗಿವೆ. ಅಲ್ಲದೆ ಸಂಕೇಶ್ವರದ ಲಕ್ಷ್ಮಿ ದೇವಸ್ಥಾನದ ಆವರಣಕ್ಕೂ ನೀರು ನುಗ್ಗಿವೆ.ಲಕ್ಷ್ಮಿ ಹಳ್ಳದ ನೀರು ರಸ್ತೆಗೆ ನುಗಿದ್ದರಿಂದ ವಾಹನ ಸವಾರರು ಪರದಾಟ ನಡೆಸಿದರು. ಅಲ್ಲದೆ ಸ್ಥಳೀಯರು ಹಳ್ಳದ ನೀರು ಮನೆಗಳಿಗೆ ನುಗ್ಗುವ ಆತಂಕದಲ್ಲಿದ್ದಾರೆ.
ಉಡುಪಿ : ಹೃದಯಾಘಾತದಿಂದ ವಿಚಾರಣಾಧೀನ ಕೈದಿಯೊಬ್ಬ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕ ಸಬ್ ಜೈಲಿನಲ್ಲಿ ನಡೆದಿದೆ. ಮೃತ ಕೈದಿಯನ್ನು ಅನುಪ ಶೆಟ್ಟಿ (38) ಎಂದು ಹೇಳಲಾಗುತ್ತಿದೆ. ಫೈನಾನ್ಸಿಯರ್ ಅಜೇಂದ್ರ ಶೆಟ್ಟಿ ಕೊಲೆ ಕೇಸಿನಲ್ಲಿ ಕಳೆದ ಎರಡು ವರ್ಷಗಳಿಂದ ಅನೂಪ್ ಜೈಲಿನಲ್ಲಿದ್ದ. ಸಂಜೆ ವೇಳೆಗೆ ಕೈದಿ ಅನುಪ ಶೆಟ್ಟಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಅನುಪಶೆಟ್ಟಿ ಸಾವನ್ನಪ್ಪಿದ್ದಾನೆ. ಮೊಸಳೆಗೆ ವೃದ್ಧ ಬಲಿ ದೂದಗಂಗಾ ನದಿಯಲ್ಲಿ ಈಜಲು ತೆರಳಿದ್ದ ವೃದ್ಧರೊಬ್ಬರು ಮೊಸಳೆಗೆ ಬಲಿಯಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗ ಬಳಿ ಈ ಘಟನೆ ನಡೆದಿದೆ. ನಿನ್ನೆ ನದಿಗೆ ಈಜಲು ಇಳಿದಿದ್ದ ಮಹಾದೇವ ಕುರೆ (72) ಮೃತ ವೃದ್ಧರು ಎಂದು ತಿಳಿದುಬಂದಿದೆ. ಸಿಡಿಲಿಗೆ ರೈತ ಬಲಿ ಹಿರೇಮುಕರ್ತಿನನಾಳ ಗ್ರಾಮದಲ್ಲಿ ರೈತನ್ನೊಬ್ಬ ಸಿಡಿಲಿಗೆ ಸಾವನ್ನಪ್ಪಿದ್ದಾನೆ. ಸಿಡಿಲು ಬಡಿದು ರೈತ ಕನಕಪ್ಪ ಕಾಟಾಪುರ (22) ಸಾವನ್ನಪ್ಪಿದ್ದಾನೆ. ಹೊಲದಲ್ಲಿ ಕೆಲಸ ಮಾಡುವಾಗ ಕನಕಪ್ಪನಿಗೆ ಸಿಡಿಲು ಬಡಿದಿದೆ. ಘಟನೆ ಕುರಿತಂತೆ ತಾವರಗೇರಾ…
ಹಾಸನ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೊಳೆನರಸೀಪುರ ಪೊಲೀಸರು ದೇವರಾಜೇಗೌಡನನ್ನು ಜಡ್ಜ್ ಮನೆಯಲ್ಲಿ ಹಾಜರುಪಡಿಸಿದ್ದು, ಇದೀಗ ಪ್ರಿನ್ಸಿಪಲ್ ಸಿಜೆ,ಜೆ ಎಂ ಎಫ್ ಸಿ ಜಡ್ಜ್ ಸಿದ್ದರಾಮ ಎಸ್ ಅವರು ದೇವರಾಜೆಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರದ ನ್ಯಾಯಾಧೀಶರ ಮನೆಯಲ್ಲಿ ಇದೀಗ ಪೊಲೀಸರು ದೇವರಾಜೇಗೌಡನನ್ನು ಹಾಜರುಪಡಿಸಿದ್ದು, ಪ್ರಿನ್ಸಿಪಲ್ ಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶ ಸಿದ್ಧರಾಮ ಎಸ್ ಅವರ ಮನೆಯಲ್ಲಿ ಬಂಧಿತ ದೇವರಾಜ ಗೌಡನನ್ನ ಹಾಜರುಪಡಿಸಿದ್ದರು ವಿಚಾರ ನಡೆಸಿದ ಸಿದ್ದರಾಮ ಎಸ್ ಅವರು ದೇವರಾಜೇಗೌಡನನ್ನು ಹದಿನಾಲ್ಕು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ಏಪ್ರಿಲ್.1ರಂದು ವಕೀಲ ದೇವರಾಜೇಗೌಡ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದಾಗಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ವಕೀಲ ದೇವರಾಜೇಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು.ನಿನ್ನೆ ಈ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆಯ…













