Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಇದೀಗ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇದರ ಬೆನ್ನಲ್ಲೇ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳೊಂದಿಗೆ ಸಭೆ ನಗರದ ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲದೆ, ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಬೆನ್ನಲ್ಲೇ ಇಂದು ವಿಧಾನಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ‘ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದ್ದು, ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ. ಇದರ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು. ಸದಾ ಮಳೆ ಬರುತ್ತಿದ್ದರೆ ಡೆಂಗ್ಯೂ ಹುಳಗಳು ಕಾಣಿಸಿಕೊಳ್ಳುವುದಿಲ್ಲ. ಆದರೆ ಮಳೆ ಬಂದು ನಿಂತ ನೀರಿದ್ದರೆ ಅಲ್ಲಿ ಡೆಂಗ್ಯೂ ಸೊಳ್ಳೆಗಳು ರೋಗವನ್ನು ಹರಡಲು ಆರಂಭಿಸುತ್ತವೆ. ಇಂತಹ ವಾತಾವರಣದಿಂದ ರೋಗ ಹೆಚ್ಚುತ್ತದೆ. ಇನ್ನು ಕೆಪಿಎಂ ಆ್ಯಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯವಾಗಿದೆ.…
ಬಾಗಲಕೋಟೆ : ನೀವು ಯಾರನ್ನಾದ್ರೂ ಸಿಎಂ ಆದರೂ ಮಾಡಿಕೊಳ್ಳಿ ಡಿಸಿಎಂ ಆದರೂ ಮಾಡಿಕೊಳ್ಳಿ ಆದರೆ ನಮ್ಮ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕೊಡಿ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ರಾಜ್ಯದಲ್ಲಿ ಇದೀಗ ಸಿಎಂ ಬದಲಾವಣೆ ಹಾಗೂ ಡಿಸಿಎಂ ಹುದ್ದೆ ಸೃಷ್ಟಿ ವಿಚಾರವಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಈ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಇಳಕಲ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕೊಟ್ಟು ಪುಣ್ಯಕಟ್ಟಿಕೊಳ್ಳಿ ಎಂದರು. ನಾವು ಮೀಸಲಾತಿಗಾಗಿ ಪಾದಯಾತ್ರೆ ಆರಂಭಿಸುವ ಮೊದಲು. ನಮ್ಮವರು ಮಂತ್ರಿ ಆಗಬೇಕು, ಮುಖ್ಯಮಂತ್ರಿ ಅಗಬೇಕು ಅಂತ ಹೇಳಿದ್ದೆವು. ಆದ್ರೆ ಈಗ ನಮಗೆ ಮಂತ್ರಿ, ಮುಖ್ಯಮಂತ್ರಿಗಿಂತ ಮೀಸಲಾತಿ ಮುಖ್ಯವಾಗಿದೆ. ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಿಕೊಡಿ ಅನ್ನೋದೇ ನಮ್ಮ ಒತ್ತಾಯ. ಆದ್ರೆ ಇದುವರೆಗೂ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಯಾರನ್ನಾದ್ರೂ ಸಿಎಂ, ಡಿಸಿಎಂ ಮಾಡಿ ನಮ್ಮ ಸಮುದಾಯಕ್ಕೆ ಮೀಸಲಾತಿ ನೀಡಿದರೆ ಸಾಕು ಎಂದರು. ಧರ್ಮಗುರುಗಳಾದವರು ಸರ್ಕಾರದ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ 2,500 ಕೋಟಿಗೂ ಹೆಚ್ಚು ಭೂಹಗರಣ ನಡೆದಿದೆ. ಈ ಹಗರಣವನ್ನು ಮುಚ್ಚಿಹಾಕಲು ಸಚಿವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ಈ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಮೈಸೂರು ನಗರ ಬಿಜೆಪಿ ಶಾಸಕ ಶ್ರೀವತ್ಸ ಒತ್ತಾಯಿಸಿದ್ದಾರೆ. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಂದರೆ ಮುಡಾದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ನಾನು ಬೆಂಗಳೂರಿನ ನಗರಾಭಿವೃದ್ಧಿ ಕಾರ್ಯದರ್ಶಿ ಅವರಿಗೆ ದೂರು ನೀಡಿದ್ದೆ. ದೂರಿನನ್ವಯ ನಗರಾಭಿವೃದ್ಧಿ ಕಾರ್ಯದರ್ಶಿಗಳು ಮುಡಾಕ್ಕೆ ತನಿಖಾಧಿಕಾರಿಗಳನ್ನ ಕಳುಹಿಸಿ ಪರಿಶೀಲನೆ ನಡೆಸಿ 140ಕ್ಕೂ ಹೆಚ್ಚು ಕಡತಗಳನ್ನು ತೆಗೆದುಕೊಂಡು ಹೋಗಿ ಪರಿಶೀಲನೆ ನಡೆಸಿದ್ದಾರೆ ಎಂದರು. ಮುಡಾದಲ್ಲಿ ಸೈಟ್ ಹಂಚಿಕೆ ಸೇರಿದಂತೆ ಇತರ ಎಲ್ಲಾ ಕಡೆ ಅವ್ಯವಹಾರ ನಡೆದಿದ್ದು, ಕಳೆದ 4 ವರ್ಷಗಳಲ್ಲಿ 50:50 ಸೈಟು ಹಂಚಿಕೆ ಅವ್ಯವಹಾರದಲ್ಲಿ 2,500 ಕೋಟಿಗೂ ಹೆಚ್ಚು ಅವ್ಯವಹಾರ ಆಗಿದೆ. ಇದನ್ನು ಮುಖ್ಯಮಂತ್ರಿಗಳು ಉನ್ನತ ಮಟ್ಟದ ತನಿಖೆಗೆ ನೀಡಬೇಕು. ಮೈಸೂರು ಮುಡಾದಲ್ಲಿ…
ಕೋಲಾರ : ಕಳೆದ ವರ್ಷ ಡಿಸೇಂಬರ್ ಅಲ್ಲಿ ಕಲಬುರ್ಗಿಯಲ್ಲಿ ಹಾಸ್ಟೆಲ್ ಒಂದರಲ್ಲಿ ಅಪ್ರಾಪ್ತ ಬಾಲಕಿ ಒಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣ ನಡೆದಿತ್ತು. ಇದೀಗ ಕೋಲಾರದಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಹೌದು, ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಇದಕ್ಕೆ ಕಾರಣನಾದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಹಾಸ್ಟೆಲ್ ಅಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೇ ಇನ್ನು ಕಳೆದ ವರ್ಷದ ಅಂದರೆ 2023 ಡಿಸೆಂಬರ್ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಹಾಸ್ಟೆಲ್ನಲ್ಲೇ ಮಗುವಿಗೆ ಜನ್ಮ ನೀಡಿರುವ ಪ್ರಕರಣ ಕಲಬುರಗಿಯಲ್ಲಿ ಬೆಳಕಿಗೆ ಬಂದಿತ್ತು. ಬಳಿಕ ನವಜಾತ ಮಗುವಿನೊಂದಿಗೆ ವಿದ್ಯಾರ್ಥಿಯನ್ನು ಕಲಬುರಗಿಯ ಅಮೂಲ್ಯ ಶಿಶು…
ಚಾಮರಾಜನಗರ : ಮನೆ ಮಂದಿಯಲ್ಲ ಮಂತ್ರಾಲಯದ ರಾಯರ ದರ್ಶನಕ್ಕೆ ತೆರಳಿದ್ದರು. ಆದರೆ ರಾಯರ ದರ್ಶನ ಮುಗಿಸಿಕೊಂಡು ವಾಪಸ್ಸು ಬಂದು ನೋಡಿದರೆ, ಕಳ್ಳರು ಮನೆಯ ಬೀಗ ಮುರಿದು ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಚಾಮರಾಜನಗರದ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ. ಹೌದು ರಾಯರ ದರ್ಶನ ಪಡೆದು ಮನೆಗೆ ವಾಪಸ್ಸಾದವರಿಗೆ ಬಿಗ್ ಶಾಕ್ ಎದುರಾಗಿದ್ದು, ಬಡಾವಣೆಯ ರಾಘವೇಂದ್ರ ಎಂಬುವವರ ಮನೆ ಆಗಿದ್ದು, ಎಲ್ಲರೂ ಮಂತ್ರಾಲಯದ ರಾಯರ ದರ್ಶನಕ್ಕೆ ಹೋಗಿದ್ದರು. ಮಂತ್ರಾಲಯದಿಂದ ಬರುವಷ್ಟರಲ್ಲಿ ಮನೆ ಬೀಗ ಒಡೆದು ಕಳ್ಳತನ ಮಾಡಿದ್ದಾರೆ. ಬೀಗ ಒಡೆದು ಕಳ್ಳತನ ಮಾಡಿದ್ದಾರೆ. ಚಿನ್ನದ ಜೊತೆಗೆ 20 ಸಾವಿರ ರೂಪಾಯಿ ನಗದು ದೋಚಿದ್ದಾರೆ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೂ ಸೈಟ್ ಹಂಚಿಕೆ ಮಾಲಾಗಿದ್ದು, ಈ ಕುರಿತು ಬಿಜೆಪಿ ಶಾಸಕ ಸುನೀಲ್ ಕುಮಾರ ಪ್ರತಿಕ್ರಿಯಿಸಿದ್ದು, ನಾಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಒಂದು ವರ್ಷದಲ್ಲೇ ಹಗರಣ ಮೇಲೆ ಹಗರಣ ಬಯಲಿಗೆ ಬರುತ್ತಿದೆ. ವಾಲ್ಮೀಕಿ ನಿಗಮ ಹಗರಣ ಬೆನ್ನಲ್ಲೇ ಮುಡಾದಲ್ಲಿ ಹಗರಣ ಬಯಲಿಗೆ. ಸಿಎಂ ಉಸ್ತುವಾರಿ ಜಿಲ್ಲೆಯಲ್ಲಿ ಹಗರಣ ಆಗಿದ್ರೂ ಸುಮ್ಮನಿದ್ದಾರೆ. ಒಂದು ರೀತಿಯಲ್ಲಿ ಅವರ ಮನೆ ಬಾಗಿಲಲ್ಲೇ ನಡೆದಿರುವ ಹಗರಣ ಎಂದು ತಿಳಿಸಿದರು. ಸಿಎಂ ಕುಟುಂಬ ಸದಸ್ಯರಿಗೆ ಸೈಟ್ ಹಂಚಿಕೆ ಆಗಿದ್ದು ವರದಿಯಲ್ಲಿ ಸ್ಪಷ್ಟವಾಗಿದೆ. ರಾಜ್ಯದಲ್ಲಿರೋದು ಶೂನ್ಯ ಅಭಿವೃದ್ಧಿ ಸರ್ಕಾರ. ಅಧಿವೇಶನದಲ್ಲಿ ಹಗರಣದ ಬಗ್ಗೆ ಪ್ರಸ್ತಾಪಿಸ್ತೇವೆ. ಆರೋಪ ಬಂತಂದ್ರೆ ಕೇವಲ ವರ್ಗಾವಣೆ ಮಾಡೋದು ಅಷ್ಟೇ ಆಗುತ್ತಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ…
ಬೆಂಗಳೂರು : ರಾಹುಲ್ ಗಾಂಧಿ ಸತ್ಯ ದ್ವೇಷ ಹುಟ್ಟಿಸುವ ಮಾತನ್ನು ಹೇಳಿದ್ದಾರೆ. ಹೀಗೆ ಹೇಳುವುದಕ್ಕೆ ಅವರ ಕುಟುಂಬದಲ್ಲಿರುವ ಡಿಎನ್ಎ ಕಾರಣ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೇಶದ ವಿಭಜನೆಗೆ ಸಹಿ ಹಾಕಿದ ಪಾರ್ಟಿ ಯಾವುದು? ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಲು ಯಾರು ಕಾರಣ? ಖಲಿಸ್ಥಾನ ಸಂಘಟನೆಗೆ ಶಕ್ತಿ ನೀಡಿದಂತಹ ವ್ಯಕ್ತಿ ಪಕ್ಷ ಯಾವುದು? ಭಯೋತ್ಪಾದನೆ ಚಟುವಟಿಕೆಗೆ ಶಕ್ತಿ ತುಂಬಿದ ಪಕ್ಷ ಯಾವುದು? ಸರ್ವಾಧಿಕಾರ ಏರಿದ ಪಕ್ಷ ಕಾಂಗ್ರೆಸ್ ಹಾಗೂ ಇಂದಿರಾಗಾಂಧಿ ಸಿಖ್ಖರ ಮೇಲೆ ದಾಳಿ ಮಾಡಿದ್ದು ಆರ್ ಎಸ್ ಎಸ್ ಅಲ್ಲ ಇಂದಿರಾ ಗಾಂಧಿ ಬೆಂಗಳೂರಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ವಾಗ್ದಾಳಿ ನಡೆಸಿದರು. ಮುಡಾ ಹಗರಣದ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಅಗೆದಷ್ಟು, ಬಗೆದಷ್ಟು ಹೊರಗೆ ಬರುತ್ತಿದೆ. ನನ್ನನ್ನೂ ಮಿರಿಸಿದ ಹಗರಣ ಮಾಡುತ್ತಿದ್ದಾರೆ ಎಂದು ಚಾರ್ಲ್ಸ್ ಶೋಭರಾಜ್‌ಗೂ ಅನ್ನಿಸುತ್ತಿದೆಯಂತೆ. ಅಧಿವೇಶನದಲ್ಲಿ…
ರಾಮನಗರ : ಚನ್ನಪಟ್ಟಣದ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಹೇಳಿಕೆ ಒಂದನ್ನು ನೀಡಿದ್ದು, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಯಾರೇ ಅಭ್ಯರ್ಥಿಯಾದರೂ ನನ್ನ ಮುಖ ನೋಡಿ ವೋಟ್ ಹಾಕಿ ಎಂದು ಜನರಲ್ಲಿ ಮನವಿ ಮಾಡಿದರು. ಇಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಯಾರೇ ಅಭ್ಯರ್ಥಿಯಾಗಿರಲಿ ಅವರಿಗೆ ನನ್ನ ಮುಖ ನೋಡಿ ಮತ ಹಾಕಿ. ಕಾಂಗ್ರೆಸ್ ಅಭ್ಯರ್ಥಿ ಯಾರೇ ಇದ್ದರೂ ನನ್ನ ಮುಖ ನೋಡಿ ಮತ ಹಾಕಿ ಎಂದು ಡಿಕೆ ಶಿವಕುಮಾರ್ ಜನರಲ್ಲಿ ಮನವಿ ಮಾಡಿದರು. ಇದೆ ವೇಳೆ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ವಿಷಯವನ್ನು ಪ್ರಸ್ತಾಪಿಸಿ ನೀವು ಉಚಿತವಾಗಿ ಬಸ್ ಕೊಟ್ಟಿದ್ದರಿಂದ ನಮ್ಮ ಮೆಟ್ರೋಗೆ ಜನಾನೇ ಬರುತ್ತಿಲ್ಲ ಎಂದು ಮೋದಿ ಹೇಳಿದ್ದಾರೆ ಎಂದು ತಿಳಿಸಿದರು. ರಾಮನಗರದಲ್ಲಿ ಉಚಿತವಾಗಿ ವಿದ್ಯುತ್ ಎರಡು ಸಾವಿರ ರೂಪಾಯಿ ಮನೆಯೊಡತಿಗೆ ತಲುಪುತ್ತವೆ ಎಂದು ತಿಳಿಸಿದರು.
ಮೈಸೂರು : ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಮಗನ ಭೇಟಿಗಾಗಿ ನಾನು ಜೈಲಿಗೆ ಹೋಗುವುದಿಲ್ಲ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಾನಿ ರೇವಣ್ಣ ಮಗನನ್ನು ನೋಡಲು ಹೋಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಾಯಿಯಾಗಿ ಮಗನನ್ನು ನೋಡಲು ಹೋಗಿರುತ್ತಾರೆ. ಅವರು ಏನೇನು ಮಾತನಾಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಹಾಗೆಂದು ನಾನೀಗ ಪ್ರಜ್ವಲ್ ಭೇಟಿಯಾಗಲು ಹೋಗುವುದಿಲ್ಲ. ಒಂದು ವೇಳೆ ಹೋದರೆ, ‘ಅವನು ಏನೋ ಹೇಳಿಕೊಡಲು ಹೋಗಿದ್ದಾನೆ ಎನ್ನುತ್ತಾರೆ ಎಂದರು. ನಮ್ಮ ಕುಟುಂಬದ ಮೇಲೆ ಹಾಕಿರುವ ಕೇಸ್ಗಳು ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಪ್ರಕರಣಗಳು ಕೋರ್ಟ್ನಲ್ಲಿ ಇರುವುದರಿಂದ ನಾನು ಮಾತಾಡಲ್ಲ. ನನಗೆ ದೇವರು, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ.ನಮಗೆ ಸದ್ಯದ ಮಟ್ಟಿಗೆ ದೇವರೇ ಗತಿ. ಬಿಟ್ಟರೆ ನ್ಯಾಯಾಂಗವೇ ಕಾಪಾಡಬೇಕು. ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುವೆ…
ರಾಮನಗರ : ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ವಿದ್ಯುತ್ 93 ಪರ್ಸೆಂಟ್ ಪೂರೈಕೆ ಆಗುತ್ತಿದೆ. ಸ್ತ್ರೀಯರಿಗೆ ಬಸ್ ವ್ಯವಸ್ಥೆ ಅನುಕೂಲವಾಗಿದೆ ಎಂದು ತಿಳಿಸಿದರು. ಮೊನ್ನೆ ಪ್ರಧಾನಿ ಮೋದಿ ಭೇಟಿ ವೇಳೆ ಮೆಟ್ರೋ ಬಗ್ಗೆ ಮಾತನಾಡಿದ್ದೇನೆ. ಬಸ್ ಫ್ರೀ ಮಾಡಿದ್ದೀರಿ ನಮ್ಮ ಮೆಟ್ರೋಗೆ ಜನಾನೇ ಬರ್ತಿಲ್ಲ ಅಂದರು.ಬೆಂಗಳೂರಿನಲ್ಲಿ ಮೆಟ್ರೋಲ್ಗೆ ಜನ ಬರ್ತಿಲ್ಲ ಅಂತ ಮೋದಿ ಹೇಳಿದರು ಗ್ರಾಮಂತರ ಪ್ರದೇಶದಲ್ಲಿ ಮೆಟ್ರೋ ರೈಲು ಇಲ್ಲ ಎಂದು ಮೋದಿ ಬೇಟಿ ಬಗ್ಗೆ ಭಾಷಣದಲ್ಲಿ ಡಿಕೆ ಶಿವಕುಮಾರ್ ಪ್ರಸ್ತಾಪಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಜನರಿಗೆ ನನ್ನ ಮನೆ ಬಾಗಿಲು ತೆರೆದೆ ಇರುತ್ತದೆ. ಯಾವಾಗ ಬೇಕಾದರೂ ನೀವು ನನ್ನ ಭೇಟಿಯಾಗಬಹುದು.ಆದರೂ ತಲೆ ಕೆಡಿಸಬೇಡಿ ಚಿಂತೆ ಇಲ್ಲ.ನಾವೇನ್ ಮಾತು ಕೊಟ್ಟಿದ್ದೀವಿ ಅದನ್ನು ನಾವು ಉಳಿಸಿಕೊಂಡಿದ್ದೀವಿ. ಎಲೆಕ್ಷನ್ ಟೈಮಲ್ಲಿ ನಾವು ಮಾತು ಕೊಟ್ಟಿದ್ದೇವೆ ಐದು ಗ್ಯಾರಂಟಿಗಳ ಮಾತು ಕೊಟ್ಟಿದ್ದೇವೆ. ಐದು ಗ್ಯಾರಂಟಿಗಳು ನಿಮಗೆ ತಲುಪುತ್ತೇವೆ ತಾನೆ ಫ್ರೀ ಆಗಿ ಕರೆಂಟ್ ಬರುತ್ತಿದೆ ತಾನೇ?…














