Author: kannadanewsnow05

ಕಲಬುರ್ಗಿ : ಮದುವೆ ಸಮಾರಂಭ ಒಂದರಲ್ಲಿ ರಾಮ ಮಂದಿರದ ಹಾಡು ಒಂದಕ್ಕೆ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಇಟಗಾ ಗ್ರಾಮದಲ್ಲಿ ನಡೆದಿದೆ. ಹೌದು ಇತ್ತೀಚಿಗೆ ಕೋಲಾರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಪಲ್ಲಕ್ಕಿ ತಡೆದು ಅನ್ಯ ಕೋಮಿನವರು ಗಲಾಟೆ ನಡೆಸಿದ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಕೆಲವು ದಿನಗಳ ಹಿಂದೆ ಮಂಗಳೂರಿನ ಬೋಳಿಯಾರ್ ಎಂಬಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದವರ ಮೇಲೆ ಚೂರಿಯಿಂದ ಇರಿಯಲಾಗಿತ್ತು. ಇದೀಗ ಕಲ್ಬುರ್ಗಿಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ. ಇದೀಗ, ಘಟನೆ ಬಗ್ಗೆ ಭೀಮಾಶಂಕರ್ ತಾಯಿ ಮಾತನಾಡಿದ್ದು, ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘರ್ಷಣೆ ನಡೆದಿದೆ. ಪ್ರಕರಣದ ಕಲಿಸಿಕೊಂಡ ಪೊಲೀಸರು ಈಗ ಘಟನೆ ಕುರಿತಂತೆ ತನಿಖೆಯನ್ನು ಕೈಗೊಂಡಿದ್ದಾರೆ

Read More

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿದೆ. ಅಲ್ಲದೆ ಸಿಎಂ ಪತ್ನಿ ಹೆಸರಿನಲ್ಲೂ ಜಮೀನು ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಬಿಜೆಪಿಯವರ (BJP) ಕಾಲದಲ್ಲಿ ಆಗಿದ್ದು. 1 ಎಕರೆ 15 ಗುಂಟೆ ಜಮೀನು ನನ್ನ ಹೆಂಡತಿ ಹೆಸರಿನಲ್ಲಿದೆ. ಈ ಜಮೀನನ್ನು ಬಾಮೈದ ತೆಗೆದುಕೊಂಡು ಅರಿಶಿನ-ಕುಂಕಮ ರೀತಿಯಲ್ಲಿ ಉಡುಗೊರೆಯಾಗಿ ನನ್ನ ಪತ್ನಿಗೆ ಕೊಟ್ಟಿದ್ದಾನೆ. ನಾನು ಅಧಿಕಾರದಲ್ಲಿದ್ದಾಗ ಜಮೀನು ಖರೀದಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ನಮಗೆ ಸೈಟ್ ಕೊಟ್ಟಿರುವಂತದ್ದು. ನಾವು ಕೇಳಿದೆವು, ಈ ರಿಂಗ್ ರೋಡ್ ಪಕ್ಕ ಕೆಸರೆ ಗ್ರಾಮದಲ್ಲಿ ನನ್ನ ಹೆಂಡತಿ ಜಮೀನು 3 ಎಕರೆ 16 ಗುಂಟೆ ಇದೆ. ಅದನ್ನ ನನ್ನ ಬಾಮೈದ ತೆಗೆದುಕೊಂಡಿದ್ದ ಉಡುಗೆರೆಯಾಗಿ ನನ್ನ ಹೆಂಡತಿಗೆ ಕೊಟ್ಟಿದ್ದ. ನಾನು…

Read More

ಬೆಂಗಳೂರು : ಇದೆ ಜುಲೈ 4 ರಿಂದ್ ಮೂರು ದಿನ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹೇಳಿಕೆ ನೀಡಿದರು.ಈ ಒಂದು ಸಭೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು. ಅಲ್ಲದೆ ಈ ಸಭೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಈ ಒಂದು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನಲ್ಲಿ ಜುಲೈ 4ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಈ ಒಂದು ಕಾರ್ಯಕಾರಿಣಿ ಸಭೆ ನಡೆಯುತ್ತದೆ. ಜುಲೈ 5 ಮತ್ತು 6 ರಂದು ಸೋತ ಎಂಟು ಲೋಕಸಭಾ ಕ್ಷೇತ್ರಗಳ ಅವಲೋಕನ ಸಭೆ ನಡೆಯಲಿದೆ ಸೌತಕ್ಷೇತ್ರಗಳ ಮುಖಂಡರ ಜೊತೆಗೆ ಸಮಲೋಚನೆ ನಡೆಸಲಾಗುತ್ತದೆ ಮಂಡಲದ ಅಧ್ಯಕ್ಷ ಸ್ಥಾನದ ಮೇಲಿನ ಎಲ್ಲಾ ಪದಾಧಿಕಾರಿಗಳು ಬರಲಿದ್ದಾರೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ನಂದೀಶ್ ರೆಡ್ಡಿ ಹೇಳಿಕೆ ನೀಡಿದರು.

Read More

ಶಿವಮೊಗ್ಗ : ಎದುರಿಗೆ ಬಂದಂತಹ ಬೈಕ್ ಗೆ ಸೈಡ್ ಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು 40 ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಸಮಗೋಡು ಎಂಬಲ್ಲಿ ನಡೆದಿದೆ. ಹೌದು ಬೆಂಗಳೂರಿನಿಂದ ಹೊಸನಗರ ಮಾರ್ಗವಾಗಿ ಭಟ್ಕಳಕ್ಕೆ ಬಸ್ ತೆರಳುತ್ತಿತ್ತು. ಈ ವೇಳೆ ಎದುರಿಗೆ ಬಂದಂತ ಬೈಕ್ ಗೆ ಸೈಡ್ ಕೊಡಲು ಹೋಗಿ 40 ಅಡಿ ಆಳದ ಕಂದಕಕ್ಕೆ ಕೆಎಸ್ಆರ್ಟಿಸಿ ಬಸ್ ಉರುಳಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಬಳಿ ಈ ಒಂದು ದುರಂತ ಸಂಭವಿಸಿದೆ. ಎದುರಿಗೆ ಬಂದ ವಾಹನಕ್ಕೆ ಸೈಡ್ ಕೊಡುವಾಗ ಕಂದಕಕ್ಕೆ ಬಸ್ ಉರುಳಿದೆ. ಸುಮಾರು 40 ಅಡಿ ಆಳದಲ್ಲಿ ಮರಕ್ಕೆ ಸಿಲುಕಿ ತಲೆ ಕೆಳಗಾಗಿ ಬಸ್ ನಿಂತಿದೆ. ಮರ ತಡೆಯದಿದ್ದರೆ ಇನ್ನೂ 100 ಅಡಿ ಆಳದ ಒಳಗೆ ಬೀಳುತ್ತಿತ್ತು ಎನ್ನಲಾಗುತ್ತಿದೆ ಬಸ್ನಲ್ಲಿ ಮಹಿಳೆಯರು ಮಕ್ಕಳು ಸೇರಿ, 60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪ್ರಾಣಾಪಾಯದಿಂದ…

Read More

ಚಿಕ್ಕಮಗಳೂರು : ಲೋಕಸಭೆಯಲ್ಲಿ ಹಿಂದುತ್ವದ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ ವಿಚಾರವಾಗಿ ಚಿಕ್ಕಮಂಗಳೂರಲ್ಲಿ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿಟಿ ರವಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ವಿಪಕ್ಷ ನಾಯಕ ಅನ್ನೋ ಜವಾಬ್ದಾರಿಯನ್ನು ಮರೆತಿದ್ದಾರೆ. ತಮ್ಮ ಅಯೋಗ್ಯತನವನ್ನ ಪ್ರದರ್ಶಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಚಿಕ್ಕಮಗಳೂರಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ವಿಪಕ್ಷ ನಾಯಕ ಅನ್ನೋ ಜವಾಬ್ದಾರಿ ಮರೆತಿದ್ದಾರೆ. ಹಿಂದೂಗಳ ಮನಸ್ಸಿನಲ್ಲಿ ದ್ವೇಷ ಭಾವನೆ ಬಿತ್ತುವವರು ಇವರಾಗಿದ್ದಾರೆ. ಹಿಂದೂ ಧರ್ಮ ಸರ್ವೇ ಜನ ಸುಖಿನೋಭವಂತು ಅನ್ನೋದನ್ನ ಪ್ರತಿಪಾದಿಸಿದೆ. ಹಿಂದೂ ಅನ್ನೋದು ವಿಶ್ವವೇ ಒಂದು ಕುಟುಂಬ ಅಂತ ಭಾವಿಸೋದು ಎಂದಿದ್ದಾರೆ. ಅನ್ನ ಬೆಂದಿದೆಯಾ ಅಂತ ನೋಡೋಕೆ ಎಲ್ಲಾ ಅಕ್ಕಿಯನ್ನ ಮುಟ್ಟಿ ನೋಡಬೇಕಿಲ್ಲ. ರಾಹುಲ್ ಗಾಂಧಿ ತಮ್ಮ ಚೊಚ್ಚಲ ಭಾಷಣದಲ್ಲಿಯೇ ನಾನು ಆ ಸ್ಥಾನಕ್ಕೆ ಯೋಗ್ಯನಲ್ಲ ಎಂಬುದನ್ನು ಪ್ರದರ್ಶನ ಮಾಡಿದ್ದಾರೆ. ನನಗೆ ಭಾರತ, ಭಾರತೀಯತೆ, ಹಿಂದೂ, ಹಿಂದುತ್ವದ ಬಗ್ಗೆ ಏನೂ ಗೊತ್ತಿಲ್ಲ ಎಂದು ಟ್ವೀಟ್ ಮಾಡಿಸಿದ್ದಾರೆ ಎನಿಸುತ್ತದೆ. ಸಂಸತ್ತಿನ ಕಲಾಪದಲ್ಲಿ ಮಾತನಾಡುವ…

Read More

ಮಂಗಳೂರು : ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿರುವ ಘಟನೆ ಮಂಗಳೂರು ಜಿಲ್ಲೆಯ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಮಂಗಳೂರು ಕರಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಬಡಿದಾಟ ನಡೆದಿರುವ ಘಟನೆ ನಡೆದಿದೆ. ಘರ್ಷಣೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕಾರಾಗೃಹದ ಎ ಬ್ಯಾರಕ್ನಲ್ಲಿ ನಡೆದ ಘಟನೆಯಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಇದೀಗ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Read More

ಬೆಳಗಾವಿ : ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ಕಾಳಮ್ಮವಾಡಿ ಜಲಾಶಯದಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯುವಕರಿಬ್ಬರು ನೀರು ಪಾಲಾಗಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಿಂದ 13 ಯುವಕರು ಪ್ರವಾಸಕ್ಕೆ ಎಂದು ಮಹಾರಾಷ್ಟಕ್ಕೆ ತೆರಳಿದ್ದರು. ನಿಪ್ಪಾಣಿಯ ಗಣೇಶ ಕದಂ, ಹಾಗೂ ಪ್ರತೀಕ್ ಪಾಟೀಲ್ ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ. ನೀರು ಪಾಲಾದ ಯುವಕರಿಗಾಗಿ ಅಗ್ನಿಶಾಮಕದಳ ಸಿಬ್ಬಂದಿಗಳು ಇದೀಗ ಹುಡುಕಾಟ ನಡೆಸುತ್ತಿದ್ದಾರೆ.

Read More

ಮೈಸೂರು : ಮೈಸೂರಲ್ಲಿ ವೈದ್ಯರ ನಿರ್ಲಕ್ಷಕ್ಕೆ ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯ ಸೇಂಟ್ ಮೇರಿ ಆರೋಗ್ಯ ಕೇಂದ್ರದಲ್ಲಿ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಹೌದು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯ ಸೇಂಟ್ ಮೇರಿ ಆರೋಗ್ಯ ಕೇಂದ್ರದಲ್ಲಿ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಹಾಗಾಗಿ ಸೇಂಟ್ ಮೇರಿಸ್ ಆರೋಗ್ಯ ಕೇಂದ್ರದ ವೈದ್ಯರ ವಿರುದ್ಧ ಇದೀಗ ನಿರ್ಲಕ್ಷ ಆರೋಪ ಕೇಳಿ ಬಂದಿದ್ದು, ಬೆಳಗನಹಳ್ಳಿಯ ಶಿವರಾಜ್ ಎಂಬುವವರ ಪುತ್ರಿ ತನುಷ (6) ಸಾವನ್ನಪ್ಪಿರುವ ಬಾಲಕಿ ಎಂದು ತಿಳಿಬಂದಿದೆ. ನಿನ್ನೆ ಬಾಲಕಿಗೆ ವಾಂತಿ ಹಿನ್ನೆಲೆಯಲ್ಲಿ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.ರಾತ್ರಿ ಪಾಳಿಯ ವೈದ್ಯರು ಬಾಲಕಿ ತನುಷಾಗೆ ಚಿಕಿತ್ಸೆ ನೀಡಿದ್ದರು. ಇಂದು ಬೆಳಿಗ್ಗೆ ಚೆನ್ನಾಗೇ ಇದ್ದ ಬಾಲಕಿ ತನುಷ ದಿಢೀರನೆ ಸಾವನಪ್ಪಿದ್ದಾಳೆ. ತನುಷ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವೆಂದು ಪೋಷಕರು ಇದೀಗ ಆರೋಪಿಸುತ್ತಿದ್ದು, ಆರೋಗ್ಯ ಕೇಂದ್ರಕ್ಕೆ ಟಿ ಎಚ್ ಓ ಡಾ. ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Read More

ಕಲಬುರ್ಗಿ : ಇತ್ತೀಚಿಗೆ ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಉಪಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಇದರ ಬೆನ್ನಲ್ಲೇ ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಹೌದು ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿರುವ ಮಕ್ಕಳನ್ನು ಕೊಲ್ಲೂರಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಅಸ್ವಸ್ಥಗೊಂಡ ಕೆಲವು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವಾಡಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.ಮಧ್ಯಾಹ್ನ ಊಟದ ಬಳಿಕ ಮಕ್ಕಳಲ್ಲಿ ವಾಂತಿ ಮತ್ತು ತಲೆ ಸುತ್ತುವಿಕೆ ಕಂಡುಬಂದಿದೆ ಎನ್ನಲಾಗಿದ್ದು, ಶಾಲಾ ಆಡಳಿತದ ವಿರುದ್ಧ ಪೊಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಸತಿ ನೀಲಯದಲ್ಲೂ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು. ಇದೀಗ ಕಲ್ಬುರ್ಗಿ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ನಡೆದಿದೆ.…

Read More

ಬೆಂಗಳೂರು : ರಾಜರ ಕಾಲದಲ್ಲೂ ನಾಣ್ಯ ಮತ್ತು ತೆರಿಗೆ ವಸೂಲಿ ಮಾಡ್ತಿದ್ರು. ರಾಜ್ಯ ನಡೆಸಲು ತೆರಿಗೆ ಬೇಕೇ ಬೇಕು. ರಾಜರು ಆಗಲಿ, ರಾಜ್ಯ ಮತ್ತು ಕೇಂದ್ರ ಆಗಲಿ ತೆರಿಗೆ ವಸೂಲಿ ಮಾಡಿಯೇ ಆಡಳಿತ ನಡೆಸುವುದು.ಇಂದಿಗೆ GST ಜಾರಿಗೆ ಬಂದು 7 ವರ್ಷ ಆಗಿದೆ. ತೆರಿಗೆ ಹೆಚ್ಚು ಶೇಖರಣೆ ಮಾಡಿದವರಿಗೆ ಪ್ರಶಸ್ತಿ ಕೊಟ್ಟಿದ್ದೇವೆ‌‌. ಅವರೆಲ್ಲರಿಗೂ ಸರ್ಕಾರದಿಂದ ಅಭಿನಂದನೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಎಸ್‌ಟಿ ದಿನಾಚರಣೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಂವಿಧಾನದ ಮೂಲಕ ರಾಜ್ಯ ಮತ್ತು ಕೇಂದ್ರ ತೆರಿಗೆ ಅಧಿಕಾರ ವಿಧಿಸುವ ಅಧಿಕಾರ ಪಡೆಯಿತು‌. ಈ ಸಂವಿಧಾನದಲ್ಲಿ ವಿವರವಾಗಿದೆ ರಾಜ್ಯ ಮತ್ತು ಕೇಂದ್ರ ಯಾವ ಯಾವುದರ ಮೇಲೆ ತೆರಿಗೆ ವಿಧಿಸಬೇಕು ಅಂತ ಇದೆ. ಕರ್ನಾಟಕ ಸರ್ಕಾರ GST‌ ಬರುವುದಕ್ಕಿಂತ ಮುಂಚೆಯೂ ತೆರಿಗೆ ವಸೂಲಿ ಮಾಡ್ತಿದ್ರು. ಎರಡು ವಿಧ ಇದೆ.. ತೆರಿಗೆ ವಸೂಲಿಯಲ್ಲಿ ಪರೋಕ್ಷ ಮತ್ತು ನೇರ ಅಂತ ಇದೆ ಎಂದು ತಿಳಿಸಿದರು. ನಾವು…

Read More