Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರಗಿ : ಕಲಬುರ್ಗಿಯಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಲಾರಿಯೊಂದು ಬಾಲಕ ಮೇಲೆ ಹರಿದು ಸ್ಥಳದಲ್ಲೇ 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಲಬುರ್ಗಿಯ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಅಲೂರ(ಬಿ) ಗ್ರಾಮದ ಕೂಲಿ ಕಾರ್ಮಿಕನ ಮಗು ಅಯ್ಯಪ್ಪ ಬಸವರಾಜ (5) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಕೆಂಪು ಮಣ್ಣು ತುಂಬಿಕೊಂಡು ರಾಜಶ್ರೀ ಸಿಮೆಂಟ್ ಕಾರ್ಖಾನೆ ಒಳಗಡೆ ತೆರಳುತ್ತಿದ್ದ ಖಾಸಗಿ ಲಾರಿಯೊಂದು ಬಾಲಕನ ಮೇಲೆ ಹರಿದು ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಚಿತ್ತಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಆಡುಗೋಡಿ ಪೊಲೀಸ್ ಕ್ವಾಟ್ರಸ್ ನಲ್ಲಿ ನೀಡೋ ಬಿಗಿದ ಸ್ಥಿತಿಯಲ್ಲಿ ಮುಬಾರಕ್ ಮುಜಾವರ್ ಎನ್ನುವವರ ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಾನ್ಸ್ಟೇಬಲ್ ಮುಬಾರಕ್ ಮುಜಾವರ್ ಶವ ಪತ್ತೆಯಾಗಿದೆ. ಮೃತ ಮುಬಾರಕ್ CAR ದಕ್ಷಿಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 15 ದಿನಗಳ ಹಿಂದೆ ಕಾನ್ಸ್ಟೇಬಲ್ ಮುಬಾರಕ್ ನೇಣು ಬಿಗಿದುಕೊಂಡಿದ್ದಾರೆ. ವಾಸನೆ ಬರುತ್ತಿದ್ದಕ್ಕೆ ಮನೆಯಲ್ಲಿ ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಕಳೆದ ಕೆಲವು ದಿನಗಳ ಹಿಂದೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕಿರುಕುಳ ನೀಡುವುದನ್ನು ತಪ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆಯ (ಮೈಕ್ರೋ ಫೈನಾನ್ಸ್) ಸಾಂವಿಧಾನಿಕ ಸಿಂಧುತ್ವವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹೌದು ರಾಜ್ಯ ಸರ್ಕಾರ ಜಾರಿ ಮಾಡಿದ ಸುಗ್ರೀವಾಜ್ಞೆಯ ಸಿಂಧುತ್ವ ಮತ್ತು ಮೋಟಾರು ವಾಹನ/ಆಸ್ತಿ ಹಣಕಾಸು ಉದ್ಯಮವು ಸುಗ್ರೀವಾಜ್ಞೆಯಿಂದ ಹೊರಗಿವೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲು ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಕರ್ನಾಟಕ ಹೈರ್ ಪರ್ಚೇಸ್ ಅಸೋಶಿಯೇಶನ್ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿ, ಸುಗ್ರೀವಾಜ್ಞೆಯನ್ನು ಎತ್ತಿಹಿಡಿದು ಆದೇಶಿಸಿದೆ.
ದಾವಣಗೆರೆ : ದಾವಣಗೆರೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಬಟ್ಟೆ ತೊಳೆಯಲು ಹೋದಾಗ, ಕಾಲು ಜಾರಿ ಕೆರೆಗೆ ಬಿದ್ದು ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಕೆಯ ಚೆನ್ನಗಿರಿ ತಾಲೂಕಿನ ಲಕ್ಷ್ಮಿಸಾಗರ ಹಾಗೂ ದಿಗ್ಗೇನಹಳ್ಳಿ ಗ್ರಾಮಗಳ ಬಳಿ ಈ ಒಂದು ಘಟನೆ ನಡೆದಿದೆ. ಬಟ್ಟೆ ತೊಳೆಯಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ದೀಪಾ (28) ದಿವ್ಯ (26) ಹಾಗೂ ಚಂದನಾ (19) ಮೃತ ಮಹಿಳೆಯರು ಎಂದು ತಿಳಿದುಬಂದಿದೆ. ಶವಗಳನ್ನು ಅಗ್ನಿಶಾಮಕದಳ ಸಿಬ್ಬಂದಿಗಳು ಕೆರೆಯಿಂದ ಮೇಲೆತ್ತಿದ್ದಾರೆ. ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕನ್ನಡಿಗರೇತರನ್ನು ನೇಮಿಸಿಕೊಂಡ ವಿಚಾರಕ್ಕೆ ಸಂಬಂಧಪಟ್ಟಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಬಿಎಂಆರ್ಸಿಎಲ್ ಗೆ ಪತ್ರ ಬರೆದು ಕನ್ನಡ ಕಲಿಯದ ಕನ್ನಡಿಗರೇತರರನ್ನು ಕೈ ಬಿಟ್ಟು ತಾಂತ್ರಿಕ ಮತ್ತು ತಾಂತ್ರಿಕ ತರ ಹುದ್ದೆಗಳಿಗೆ ಕನ್ನಡಿಗರನ್ನು ನೇಮಕ ಮಾಡಿಕೊಳ್ಳಿ ಎಂದು ಪತ್ರ ಬರೆದಿದ್ದಾರೆ. ನಮ್ಮ ಮೆಟ್ರೋದಲ್ಲಿ ಕನ್ನಡಿಗರೇತರರಿಗೆ ನೇಮಕಾತಿ ಅಧಿಸೂಚನೆ ಹಿನ್ನೆಲೆಯಲ್ಲಿ ಕನ್ನಡಿಗರೇತರರಿಗೆ ನೇಮಕಾತಿ ಕಲ್ಪಿಸುವ ಪ್ರಕ್ರಿಯೆಯನ್ನು ಕೈಬಿಡಬೇಕು. ಕನ್ನಡ ಕಲಿಯದ ಕನ್ನಡಿಗರನ್ನು ಹುದ್ದೆಯಿಂದ ಕೈಬಿಡಬೇಕು. ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಿ. BMRCL ಎಂ.ಡಿ ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರ ಬರೆದಿದ್ದಾರೆ. ಕನ್ನಡಿಗರೇತರನ್ನು ಕೈಬಿಟ್ಟು. ಕನ್ನಡಿಗರಿಗೆ ಅವಕಾಶ ಕಲ್ಪಿಸಿ ಎಂದು BMRCL ಎಂ.ಡಿ ಗೆ ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ.
ಬೆಂಗಳೂರು : ದೇಶದಲ್ಲಿ ಮೊದಲ ಸೈಬರ್ ಕ್ರೈಂ ಪೊಲೀಸ್ ಠಾಣೆ ಸ್ಥಾಪಿಸಿದ್ದು ನಾವೇ. ಡ್ರಗ್ಸ್ ಬಳಕೆ ಡ್ರಗ್ಸ್ ಮಾರಾಟ ಅಷ್ಟೇ ಸಂಖ್ಯೆಯಲ್ಲಿ ಹೆಚ್ಚುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯ ವರದಕ್ಷಿಣೆ ಕಿರುಕುಳ ಹೆಚ್ಚಾಗಿದೆ. ಕಡಿಮೆಯಾಗಿದ್ದ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ತಿಳಿಸಿದರು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವ ವಿಚಾರವಾಗಿ 1999 ರಿಂದ ಇವರಿಗೂ 12 ಜನ ಗೃಹ ಸಚಿವರಾಗಿ ಕೆಲಸ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ಕೆಜೆ ಜಾರ್ಜ್, ಆರ್ ಅಶೋಕ, ರಾಮಲಿಂಗ ರೆಡ್ಡಿ, ಬಸವರಾಜ ಬೊಮ್ಮಾಯಿ ಅರಗ ಜ್ಞಾನೇಂದ್ರ ಇವರ ಅವಧಿಯಲ್ಲಿ ಕರ್ನಾಟಕ ಕೊಲೆ ಮುಕ್ತ, ಡ್ರಗ್ಸ್ ಮುಕ್ತ ಅತ್ಯಾಚಾರ ಮುಕ್ತ ರಾಜ್ಯವಾಗಿರಲಿಲ್ಲ. ಇವರೆಲ್ಲರ ಕಾಲದಲ್ಲೂ ರಾಜ್ಯದಲ್ಲಿ ಅಪರಾಧ ಕೃತ್ಯಗಳು ನಡೆದಿವೆ. ಹಾಗಂತ ಇದನ್ನು ನಾನು ಸಮರ್ಥನೆ ಮಾಡಿಕೊಳ್ಳುವುದಿಲ್ಲ. 2020 ರಿಂದ 25ರ ಜನವರಿವರೆಗೆ ರಾಜ್ಯದಲ್ಲಿ ಸಾಕಷ್ಟು ಹತ್ಯೆಗಳಾಗಿವೆ. 2020 ರಲ್ಲಿ 1315, 2021 ರಲ್ಲಿ 2019, 2022…
ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೈಕ್ಸ್ ಬ್ಯಾನರ್ ಅಳವಡಿಕೆ ಮಾಡಿದರೆ ಕ್ರಮ ಕೈಗೊಳ್ಳುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದರು ಡಿಕೆ ಶಿವಕುಮಾರ್ ಸೂಚನೆಯ ಮೇರೆಗೆ ಇದೀಗ ಬಿಬಿಎಂಪಿ ಒಟ್ಟು 12 ದಾಖಲಿಸಿದ್ದು 12 ಲಕ್ಷ ದಂಡ ವಸೂಲಿ ಮಾಡಿದೆ. ಅನಧಿಕೃತವಾಗಿ ಬ್ಯಾನರ್ ಅಳವಡಿಸಿದ್ದವರ ವಿರುದ್ಧ 12 fir ದಾಖಲಾಗಿದ್ದು, 12 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ ಬಿಬಿಎಂಪಿ. ಪೂರ್ವ, ಪಶ್ಚಿಮ ಹಾಗು ಯಲಹಂಕ ವಲಯದಲ್ಲಿ ಬಿಬಿಎಂಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಸೂಚನೆ ಬೆನ್ನಲ್ಲೇ ಬಿಬಿಎಂಪಿ ಕಾರ್ಯಾಚರಣೆ ನಡೆಸಿದ್ದಾರೆ. ಅನಧಿಕೃತ ಬ್ಯಾನರ್ ಹಾಕಿದ್ದವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಬರೋಬ್ಬರಿ 1,350 ಫ್ಲೆಕ್ಸ್ ಬ್ಯಾನರ್ ತೆರವುಗೊಳಿಸಿದ್ದಾರೆ. ಪಾಲಿಕೆ ನಿನ್ನೆಯಿಂದ ಹಲವಡೆ ಕಾರ್ಯಾಚರಣೆ ನಡೆಸಿದೆ. ಯೂಥ್ ಕಾಂಗ್ರೆಸ್ ಸಮಾರಂಭ ಹಿನ್ನೆಲೆಯಲ್ಲಿ ಫ್ಲೇಕ್ಸ್ ಗಳನ್ನು ಹಾಕಲಾಗಿತ್ತು. ಬ್ಯಾನರ್ ಅಳವಡಿಸಿದ್ದವರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕ್ರಮಕ್ಕೆ ಸೂಚನೆ ನೀಡಿದ್ದರು.
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಆರ್ಎಸ್ಎಸ್ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಜಟಾಪಟಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀವು ಯಾರು RSS ನವರಲ್ಲ ನಿಮ್ಮನ್ನು ಎತ್ತಿ ಕಟ್ಟಿದ್ದಾರೆ. ನಿಮಗೂ ಆರ್ ಎಸ್ ಎಸ್ ನವರಿಗೆ ನಾನು ಹೆದರಲ್ಲ ಅಂದಾಗ ಬಿಜೆಪಿ ನಾಯಕರು ನಾವು ಆರ್ ಎಸ್ ಎಸ್ ನವರೇ ಎಂದು ಕಿಡಿ ಕಾರಿದರು. ಕಲಾಪ ಆರಂಭವಾದ ವೇಳೆ ಈ ಒಂದು ಜಟಾಪಟಿ ನಡೆಯಿತು.ನಿಮಗೂ ಆರ್ಎಸ್ಎಸ್ ನವರಿಗೂ ನಾನು ಹೆದರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದಾಗ, ನೀವು ನಾಲಾಯಕಗಳು, ಯೋಗ್ಯತೆ ಇಲ್ಲ ಎಂದು ಆರ್ ಅಶೋಕ್ ಕಿಡಿ ಕಾರಿದ್ದಾರೆ. ನಿಮ್ಮೆಲ್ಲರನ್ನು ಎತ್ತಿ ಕಟ್ಟಿದ್ದಾರೆ, ನಿಂತುಕೊಳ್ಳಿ, ನೀವು ಆರ್ ಎಸ್ ಎಸ್ ನವರು ಅಲ್ಲವೇ ಅಲ್ಲ ಎಂದು ಹೇಳಿದಾಗ ನಾವು ಆರ್ ಎಸ್ ಎಸ್ ನವರೇ ಎಂದು ಬಿಜೆಪಿ ಶಾಸಕರು ವಾದ ಮಾಡಿದರು. ಕಾಂಗ್ರೆಸ್ನವರು ಪಿಎಫ್ಐ ಏಜೆಂಟರು. ಪಾಕಿಸ್ತಾನ ಪಿಎಫ್ಐ ಹೇಳಿದಂಗೆ ಮಾಡೋರು ನೀವು ಎಂದು ಬಿಜೆಪಿ ಕಿಡಿಕಾರಿತು. ಈ…
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಮೂರು ಬೀದಿ ನಾಯಿಗಳಿಂದ ಐದು ವರ್ಷದ ಬಾಲಕಿಯ ಮೇಲೆ ಡೆಡ್ಲಿ ಅಟ್ಯಾಕ್ ಆಗಿದ್ದು, ಈ ಒಂದು ಘಟನೆಯಲ್ಲಿ ಬಾಲಕಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಬಾಲಕಿಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೌದು ಬೆಳಗಾವಿಯ ಗಣೇಶಪುರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಮೂರು ಬೀದಿನಾಯಿಗಳು ಭೀಕರವಾಗಿ ದಾಳಿ ನಡೆಸಿವೆ. ಬಾಲಕಿಯ ಹೊಟ್ಟೆ, ಬೆನ್ನು ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಪ್ರಾವೀಣ್ಯಾ ಬೋಯರ್ ನಾಯಿ ದಾಳಿಗೊಳಗಾದ ಬಾಲಕಿ ಎಂದು ತಿಳಿದುಬಂದಿದೆ. ಹೊಟ್ಟೆ, ಬೆನ್ನು, ಕಾಲಿಗೆ ಬೀದಿ ನಾಯಿಗಳು ಕಚ್ಚಿದ್ದು, ಗಂಭೀರ ಗಾಯಗೊಂಡಿರುವ ಬಾಲಕಿಗೆ ಬಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ನಿನ್ನೆ ಸಹ ಇದೇ ಏರಿಯಾದಲ್ಲಿ ಓರ್ವ ಬಾಲಕನಿಗೆ ಬೀದಿನಾಯಿಗಳು ಕಚ್ಚಿ ಗಾಯಗೊಳಿಸಿವೆ. ಸದ್ಯ ನಾಯಿಗಳ ಕಾಟ ತಪ್ಪಿಸದ ಪಾಲಿಕೆ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಮಾತನಾಡಿದರು. ಈ ವೇಳೆ ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಪ್ರತಿಕ್ರಿಯಿಸಿದ ಅವರು, ನಾವು ಅಧಿಕಾರಕ್ಕೆ ಬಂದ ಮೇಲೆ ಅಪರಾಧಗಳನ್ನು ಕಡಿಮೆ ಮಾಡಿದ್ದೇವೆ. ನೀವು ಮತ್ತು ಆರ್ ಎಸ್ ಎಸ್ ನವರು ಅಪರಾಧಗಳನ್ನು ಮಾಡುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಾವು ಅಧಿಕಾರಕ್ಕೆ ಬಂದ ಮೇಲೆ ಅಪರಾಧಗಳನ್ನು ಕಡಿಮೆ ಮಾಡಿದ್ದೇವೆ. ಅಪರಾಧಗಳನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡಿದ್ದೇವೆ. ನಾವು ಇನ್ನೂ ಅಪರಾಧಗಳನ್ನು ಕಡಿಮೆ ಮಾಡಲು ನೋಡುತ್ತಿದ್ದೇವೆ. ಆದರೆ ಅಪರಾಧಗಳನ್ನು ಮಾಡುವುದೇ ನೀವು. ನೀವು, ಮತ್ತೆ RSS ನವರು ಅಪರಾಧಗಳನ್ನು ಮಾಡುತ್ತೀರಿ. ಆರ್ ಎಸ್ ಎಸ್ ಹೆಸರು ಹೇಳಿದ್ದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಸದನದಲ್ಲಿ ಗದ್ದಲ ಕೋಲಾಹಲ ಉಂಟಾಯಿತು. ದೇಶದ್ರೋಹಿಗಳ ಮೇಲಿನ ಕೇಸ್ ವಿಥ್ ಡ್ರಾ ಮಾಡಿದ್ದೆ ನೀವು ಎಂದು ಬಿಜೆಪಿ ಸದಸ್ಯರು ಕಿಡಿಕಾರಿದರು.ಸಮುದಾಯಗಳ ನಡುವೆ ದ್ವೇಷ ತಂದವರು ನೀವು. ವಿಷಬೀಜ ಬಿತ್ತುವವರು ನೀವು. ಎಲ್ಲದಕ್ಕೂ…