Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿತು. ಅವಳಿ ನಗರದ 17 ಸರಕಾರಿ ಹಾಸ್ಟೆಲ್ ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯ ಹಾಗೂ ಆಹಾರದ ಗುಣಮಟ್ಟದ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆಯ ಹಿನ್ನೆಲೆ ದೀರ್ಘಕಾಲದಿಂದ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಸೌಲಭ್ಯ ಸಿಗುತ್ತಿಲ್ಲ, ಗುಣಮಟ್ಟವಿಲ್ಲದ ಆಹಾರ ನೀಡಲಾಗುತ್ತಿದೆ ಮತ್ತು ಅನುದಾನ ದುರುಪಯೋಗವಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಪ್ಪಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್‌ಗಳನ್ನೊಳಗೊಂಡ ಐದಾರು ತಂಡಗಳು ಇಂದು ಬೆಳ್ಳಂಬೆಳಗ್ಗೆ ಅನಿರೀಕ್ಷಿತ ದಾಳಿ ನಡೆಸಿವೆ. ದಾಳಿ ನಡೆದ ಪ್ರಮುಖ ಪ್ರದೇಶಗಳು ಹುಬ್ಬಳ್ಳಿ ಮತ್ತು ಧಾರವಾಡದ ವಿವಿಧ ಭಾಗಗಳಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಹಾಸ್ಟೆಲ್‌ಗಳನ್ನು ಗುರಿಯಾಗಿಸಿ…
ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದರು. ಘಟನೆಯ ಹಿನ್ನೆಲೆ: ಬೀರೂರು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯ ಪತ್ನಿ ಪದ್ಮ (34) ಮಂಗಳವಾರ ತಮ್ಮ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದ ಸದಸ್ಯರ ನಡುವೆ ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಮನಸ್ತಾಪಗಳು ನಡೆಯುತ್ತಿದ್ದವು ಎನ್ನಲಾಗಿದ್ದು, ಇದೇ ಕಾರಣಕ್ಕೆ ಮನನೊಂದು ಅವರು ಈ ವಿಪರೀತ ಹೆಜ್ಜೆ ಇಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ…
ರಾಯಚೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಬಿಸಿಲಿನ ಝಳಕ್ಕೆ ಅಮಾಯಕ ಜೀವಗಳು ಬಲಿಯಾಗುತ್ತಿವೆ. ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ತಾಪ ತಾಳಲಾರದೆ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಘಟನೆಯ ವಿವರ: ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದನಿವಾಸಿಯಾದ ಹುಸೇನಪ್ಪ (45) ಮೃತಪಟ್ಟ ದುರ್ದೈವಿ. ಇವರು ಎಂದಿನಂತೆ ಅತೀ ಹೆಚ್ಚಿನ ತಾಪಮಾನದ ನಡುವೆಯೇ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಅಡಿಯಲ್ಲಿ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ತೀವ್ರವಾದ ಬಿಸಿಲಿನಿಂದಾಗಿ ಅವರು ದಿಢೀರ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚುತ್ತಿರುವ ಆತಂಕ: ಕಳೆದ ಕೆಲವು ದಿನಗಳಿಂದ ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನವು ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಜನಸಾಮಾನ್ಯರು ಮನೆಯಿಂದ ಹೊರಬರಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕೆಲಸ ಅರಸಿ…
ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ, ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಸ್ಪೀಕರ್ಗೆ ಪತ್ರ ಬರೆಯಲಾಗಿದೆ. ಸಾಮಾಜಿಕ ಹೋರಾಟಗಾರ ಬಸವರಾಜ್ ಕೊರವರ್ ಅವರು ಪತ್ರ ಬರೆದಿದ್ದಾರೆ. ಕಳೆದ ಏಪ್ರಿಲ್ 17ರಂದು ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಈ ಒಂದು ಆದೇಶ ಬಂದು 10 ದಿನಗಳಾದರೂ ಕೂಡ ವಿನಯ್ ಕುಲಕರ್ಣಿ ಅವರನ್ನ ಶಾಸಕ ಸ್ಥಾನ ಅನರ್ಹಗೊಳಿಸಿಲ್ಲ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ್ ಅವರು ಪತ್ರ ಬರೆದಿದ್ದಾರೆ.
ಯಾದಗಿರಿ : ರಾಜ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ.ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದ ಈ ಘಟನೆ ನಿಜಕ್ಕೂ ಅತ್ಯಂತ ದುರದೃಷ್ಟಕರ ಮತ್ತು ಮನಕಲಕುವಂತದ್ದು. ಹವಾಮಾನ ವೈಪರೀತ್ಯ ಹಾಗೂ ಸಿಡಿಲಿನ ಹೊಡೆತಕ್ಕೆ ಸಿಲುಕಿ 60 ಕುರಿಗಳು ಏಕಾಏಕಿ ಸಾವನ್ನಪ್ಪಿರುವುದು ಆ ಕುರಿಗಾಹಿ ಕುಟುಂಬಗಳಿಗೆ ತುಂಬಲಾರದ ಆರ್ಥಿಕ ನಷ್ಟವನ್ನುಂಟು ಮಾಡಿದೆ. ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೆ, ರಾಜ್ಯ ಕಾಂಗ್ರೆಸ್ ಶಾಸಕರು, ಸಚಿವರು ಸಚಿವ ಸಂಪುಟ ಪುನಾರಚನೆ ಹಾಗು ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಇದರ ಮಧ್ಯ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್ ಸಿಡಿಸಿದ್ದು, 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಕುರ್ಚಿಗಾಗಿ ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಮೇ 4 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತದೆ. ಸಿದ್ದರಾಮಯ್ಯರ ಕುರ್ಚಿ ಫಲಿತಾಂಶವು ಪ್ರಕಟವಾಗಲಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರೆದಲ್ಲಿ ಘೋರ ಘಟನೆ ಒಂದು ನಡೆದಿದ್ದು, ನವವಿವಾಹಿತೆ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆಯಾಗಿದೆ. ಮೃತಳನ್ನು ರೂಪ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜೊತೆ ಮದುವೆಯಾಗಿದ್ದ ರೂಪ, ಪತಿಯ ಅನುಮಾನದ ಭೂತಕ್ಕೆ ರೂಪ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರೂಪ ಮೃತದೇಹ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮೃತ ರೂಪ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿಯಾಗಿದ್ದು, ರೂಪ ಪೋಷಕರಿಂದ ಗಂಡ ಮುನಿರಾಜು ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಹಾವೇರಿ : ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯರು ಮಹಾ ಎಡವಟ್ಟು ಮಾಡಿದ್ದು, ಹರ್ನಿಯ ಆಪರೇಷನ್ ವೇಳೆ ಬಾಲಕನೊಬ್ಬ ಕೋಮಾಗೆ ಹೋಗಿದ್ದಾನೆ. ಹಾಗಾಗಿ ಇದೀಗ ಬಾಲಕನ ಪೋಷಕರು ಆಸ್ಪತ್ರೆ ಹಾಗು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆ ಮಾಡುತ್ತಿದ್ದಾರೆ. ಹರ್ನಿಯ ಆಪರೇಷನ್ ಮಾಡಿದ ವೇಳೆ 7 ವರ್ಷದ ಚಾಂದ್ ಪೀರ್ ಸಾಬ್ ದೊಡಮನಿ ಎಂದು ತಿಳಿದುಬಂದಿದೆ. ವೈದ್ಯರು, ಸಿಬ್ಬಂದಿ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೋಮಾಗೆ ಹೋದ ಬಾಲಕನನ್ನ ಖಾಸಗಿ ಆಸ್ಪತ್ರೆಗೆ ರೆಫರ್ ಮಾಡಿದ್ದಾರೆ. ಬಾಲಕನ ಚಿಕಿತ್ಸೆಗೆ ಲಕ್ಷಾಂತರ ರೂ.ಖರ್ಚು ಮಾಡಿರುವ ಕುಟುಂಬ ಸದಸ್ಯರು ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಚಾಂದ್ ಪೀರ್ ಹರ್ನಿಯ ಆಪರೇಷನ್ ಮಾಡಿದ ವೈದ್ಯರ ವಿರುದ್ಧ ದೂರು ದಾಖಲಾಗಬೇಕು ತನಿಖೆ ನಡೆಸಿ ಬಾಲಕನ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸೋದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೆ, ಶಾಸಕ ನಾರಾಯಣಸ್ವಾಮಿ ಸ್ಪೋಟಕ ಸುಳಿವು ನೀಡಿದ್ದು, ಮೇ 15ರ ಒಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ ಅಂತ ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೇ ಎರಡನೇ ವಾರದಲ್ಲಿ ಪುನರ್ ರಚನೆ ಆಗೋ ವಿಶ್ವಾಸ ಇದೆ. ಸರ್ಕಾರಕ್ಕೆ ಮೂರು ವರ್ಷ ಆಗಿದೆ. ಈಗಲೇ ಪುನರ್ ರಚನೆ ಆಗಬೇಕು. ಈಗ ಮಂತ್ರಿ ಮಾಡಿದ್ರೆ ಇನ್ನೊಂದು ವರ್ಷ ಕೆಲಸ ಮಾಡೋಕೆ ಸಮಯ ಸಿಗಲಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ವಿಶೇಷ ಮುತುವರ್ಜಿ ವಹಿಸಬೇಕು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ ಅಗಲೇಬೇಕು ಅಂತ ತಿಳಿಸಿದ್ದಾರೆ. ಸಂಪುಟ ಪುನರ್ ರಚನೆ ಆಗಲೇಬೇಕು. ದೆಹಲಿಗೆ ಹೋಗಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ವಿ. ಅವರು ನಮಗೆ ಭರವಸೆ ನೀಡಿದ್ದಾರೆ. ಕೆಲಸ ಮಾಡದ ಮಂತ್ರಿಗಳನ್ನು ಕೈ ಬಿಟ್ಟು ಹೊಸಬರನ್ನು ಸೇರಿಸಬೇಕು. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ…
ಮುಂಬೈ : ಸಾಮಾನ್ಯವಾಗಿ ಊಟ ಆದ್ಮೇಲೆ ಜೀರ್ಣ ಕ್ರೀಯೇ ಅಗಲಿ ಎಂದು ಬಾಳೆ ಹಣ್ಣು ಸೇವಿಸುತ್ತಾರೆ. ಆದರೆ ಊಟ ಆದ್ಮೇಲೆ ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮುಂಬೈಯಲ್ಲಿ ಬಿರಿಯಾನಿ ಸೇವಿಸಿದ ಬಳಿಕ ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೆ ನಿಖರ ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಲು ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ. ಈ ಪ್ರಕರಣದ ಬೆನ್ನಲ್ಲೇ ಆರೋಗ್ಯ ತಜ್ಞರು ಊಟ ಮಾಡಿದ ನಂತರ ಕಲ್ಲಂಗಡಿ ಸೇವಿಸಬಾರದು ಎಂದು ಸಲಹೆ ನೀಡುತ್ತಿದ್ದಾರೆ. ಊಟ ಮಾಡಿದ ತಕ್ಷಣ ಕಲ್ಲಂಗಡಿ ಹಣ್ಣನ್ನು ತಿನ್ನುವುದು ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಉಂಟುಮಾಡಬಹುದು. ಆಯುರ್ವೇದದ ಪ್ರಕಾರ, ಕೆಲವು ಆಹಾರಗಳನ್ನು ಕಲ್ಲಂಗಡಿಯೊಂದಿಗೆ ಸೇರಿಸುವುದು ದೇಹದಲ್ಲಿ ವಿಷಕಾರಿ ಅಂಶಗಳನ್ನು ಉತ್ಪತ್ತಿ ಮಾಡುವ ಸಾಧ್ಯತೆ ಇರುತ್ತದೆ. ಕಲ್ಲಂಗಡಿ ಹಣ್ಣು ಹೊಟ್ಟೆಯಲ್ಲಿ ತುಂಬಾ ಬೇಗ (ಸುಮಾರು 20-30 ನಿಮಿಷದಲ್ಲಿ) ಜೀರ್ಣವಾಗುತ್ತದೆ. ಆದರೆ ನಾವು ತಿಂದ ಊಟ…














