Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಮ ಮಂದಿರ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದಿರುವುದಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ ಗಲಾಟೆ ಕೋಲಾಹಲ ಉಂಟಾಯಿತು. ಸದನದಲ್ಲಿ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸದಸ್ಯರು ಕೆಣಕಿದ್ದಾರೆ.ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ ಗಲಾಟೆ ಏರ್ಪಟ್ಟಿತು.ಈ ವೇಳೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಸದಸ್ಯರು ಧಿಕ್ಕಾರ ಕೂಗಿದರು ಶ್ರೀ ರಾಮನ ವಿರೋಧಿಗಳು ಅಂತ ಬಿಜೆಪಿ ಸದಸ್ಯರು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದರು.ಜೈ ಶ್ರೀ ರಾಮ್ ಎಂದು ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಇದೆ ವೇಳೆ ಕರ್ನಾಟಕದಲ್ಲಿ ಉಗ್ರರ ಚಟುವಟಿಕೆ ಸ್ಲೀಪರ್ ಸೇಲ್ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಇದೆ ವೇಳೆ ಪ್ರಸ್ತಾಪ ಮಾಡಿದರು..ಈಗ ಶಂಕಿತರು ಸುಧಾರಿತ ಬಾಂಬ್ ತಯಾರು ಮಾಡುತ್ತಿದ್ದಾರೆ.ಬಳ್ಳಾರಿಯಲಿ ಕಿಂಗ್ ಪಿನ್ ಮೊಹಮ್ಮದ್ ಸುಲೇಮಾನ್ ಇದ್ದಾನೆ. ಮುಗ್ಧ ಯುವಕರನ್ನು ಗುರಿಯಾಗಿಸಿಕೊಂಡು ಕೃತ್ಯಕ್ಕೆ ಕುಮ್ಮಕ್ಕು ನೀಡಲಾಗುತ್ತಿದೆ. ಶಿವಾಜಿನಗರದಲ್ಲೂ ಎನ್ಐಎ ತಂಡ ಒಬ್ಬನನ್ನು ಬಂಧಿಸಿದೆ. ರಾಜ್ಯದಲ್ಲಿ ಇಂತಹವರು ಸ್ಲೀಪರ್ ಸೆಲ್ ಆಗಿ ಕೆಲಸ ಮಾಡುತ್ತಿದ್ದಾರೆ.…
ನವದೆಹಲಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚ ಸಂಘಟನೆ ಸೇರಿದಂತೆ ವಿವಿಧ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ರ್ಯಾಲಿ ನಡೆಸುತ್ತಿವೆ. ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಹಾಗೂ ಸೇನೆ ರೈತರ ಮೇಲೆ ವಿವಿಧ ಪ್ರಯೋಗಗಳನ್ನು ಮಾಡಿದ್ದರಿಂದ ರೈತ ಸಂಘಟನೆಗಳು ಇದೀಗ ಆಕ್ರೋಶ ಹೊರಹಾಕಿವೆ. ದೆಹಲಿಯಲ್ಲಿ ರೈತ ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದ್ದು, ಪೊಲೀಸರನ್ನು ಬಳಸಿಕೊಂಡು ನಮ್ಮ ಹೋರಾಟವನ್ನು ಹತ್ತಿಕ್ಕುತ್ತಿದೆ ಸಮಸ್ಯೆಯನ್ನು ಸೃಷ್ಟಿ. ಮಾಡುವುದು ನಮ್ಮ ಉದ್ದೇಶ ಅಲ್ಲ ವಿರೋಧಿಗಳಂತೆ ನಮ್ಮ ಮೇಲೆ ಅಟ್ಯಾಕ್ ಮಾಡುತ್ತಿದ್ದಾರೆ ನಾವು ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದು ತಿಳಿಸಿದವು. ಮೋದಿ ಸರ್ಕಾರ ಸೇನೆ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಮೋದಿ ಸರ್ಕಾರದ ವಿರುದ್ಧ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ದೆಹಲಿ ಈ ಕುರಿತು ರೈತ ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.ನಮ್ಮ ಈ ಹೋರಾಟ ರಾಜಕೀಯ ಪ್ರೇರಿತ ಅಲ್ಲ ನಮಗೆ ಎಂಪಿಎಸ್ ಬಗ್ಗೆ ಗ್ಯಾರಂಟಿ ನೀಡಿ ಎಂದು ರೈತ ಸಂಘಟನೆಗಳು ಆಗ್ರಹಿಸುತ್ತಿವೆ.…
ಬೆಂಗಳೂರು : ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಈ ಹಿಂದೆ ಹೇಳಲಾಗಿತ್ತು ಆದರೆ ಇದೀಗ 3 ತಿಂಗಳ ಅವಧಿ ವಿಸ್ತರಣೆ ಮಾಡ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು. ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಈವರೆಗೆ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು…
ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ವನ್ಯಜೀವಿ-ಮಾನವ ಸಂಘರ್ಷದಿಂದ 55 ಜನ ಸಾವಿಗೀಡಾಗಿದ್ದು, ಆನೆ ದಾಳಿಗೆ ಅತಿ ಹೆಚ್ಚು 39 ಜನ ಬಲಿಯಾಗಿದ್ದಾರೆ. ಆನೆ ದಾಳಿ ನಿಯಂತ್ರಿಸಲು 186 ಕಿ. ಮೀ ಉದ್ದದಷ್ಟು ರೈಲ್ವೆ ಬ್ಯಾರಿ ಕೇಡ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು,ರೈಲ್ವೆ ಬ್ಯಾರಿಕೇಡ್ ಕಾಮಗಾರಿಗೆ 500 ಕೋಟಿ ರೂ.ಯನ್ನು ಬಜೆಟ್‌ನಲ್ಲಿ ಮೀಸಲಿಡುವಂತೆ ಮುಖ್ಯಮಂತ್ರಿ ಯವರಲ್ಲಿ ಮನವಿ ಮಾಡಲಾಗಿದೆ. ಆನೆಗಳು ನಾಡಿಗೆ ಬರುವುದನ್ನು ತಪ್ಪಿಸಲು ಆನೆ ಕ್ಯಾಂಪ್ ನಿರ್ಮಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಾಡಿನಲ್ಲಿ ಸಮರ್ಪಕ ಆಹಾರ ಮತ್ತು ನೀರಿನ ಲಭ್ಯತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಆನೆಗಳು ಕಾಡಿನಿಂದ ಹೊರ ಬರುವುದನ್ನು ತಡೆಯಲು 640 ಕಿ.ಮೀ ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಪ್ರಸ್ತಾವನೆ ಇತ್ತು. ಪರಿಷ್ಕರಣೆಗೊಂಡು 730 ಕಿ.ಮೀಗೆ ಏರಿದೆ. ಅದರಲ್ಲಿ 311 ಕಿ.ಮೀ ಬ್ಯಾರಿಕೇಡ್ ಹಾಕಲಾಗಿದೆ. ಉಳಿದ ಕಾಮಗಾರಿಗೆ ಅಯವ್ಯಯದಲ್ಲಿ…
ಮೈಸೂರು : ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೋಮವಾರ ಬೆಳಗ್ಗೆ ನಂಜನಗೂಡು ವ್ಯಾಪ್ತಿಯ ಚಿಕ್ಕಯ್ಯನಛತ್ರ ಹೋಬಳಿಯ ಹತ್ಯಾಳು ಗ್ರಾಮದಲ್ಲಿ ಇಡಲಾಗಿದ್ದ ಬೋನಿಗೆ ಬಿದ್ದಿದೆ. ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಚಿರತೆಗಳ ಕಾಟ ಹೆಚ್ಚಾಗುತ್ತಿದ್ದು ಮೈಸೂರು ಜಿಲ್ಲೆಯ ಎರಡು ಗ್ರಾಮಗಳಲ್ಲಿ 2 ಚಿರತೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದು ರಕ್ಷಿಸಿದೆ. ಚಿರತೆ ಕಾಟದ ಬಗ್ಗೆ ಹೆಚ್ಚು ದೂರುಗಳು ಹೇಳಿ ಬಂದ ಹಿನ್ನೆಲೆ ಅರಣ್ಯ ಇಲಾಖೆ ಬೋನು ಇರಿಸಿತ್ತು. ಸದ್ಯ ಈಗ 2 ಚಿರತೆಗಳು ಬೋನಿಗೆ ಬಿದ್ದಿವೆ. ನಂಜನಗೂಡು ತಾಲೂಕಿನ ರಾಂಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ 2 ಚಿರತೆಗಳು ಬೋನಿಗೆ ಬಿದ್ದಿವೆ.ಬಲೆಗೆ ಬಿದ್ದ ಗಂಡು ಚಿರತೆಗೆ ಸುಮಾರು ಐದು ವರ್ಷ ವಯಸ್ಸಾಗಿರಬಹುದು ಎಂದು ಹೇಳಲಾಗುತ್ತಿದೆ. ಈ ಪ್ರದೇಶದಲ್ಲಿ ಚಿರತೆಗಳು ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದರಿಂದ ರೈತರು ಜಾನುವಾರುಗಳನ್ನು ಮೇಯಿಸಲು ಭಯಪಡುತ್ತಿದ್ದರು. ಈ ಭಾಗದಲ್ಲಿ ಬೀಡುಬಿಟ್ಟಿರುವ ಇತರ ಚಿರತೆಗಳನ್ನು ಸೆರೆ ಹಿಡಿಯುವಂತೆ ಇಲ್ಲಿನ ನಿವಾಸಿಗಳು…
ತುಮಕೂರು : ರಾಜ್ಯ ಬಿಜೆಪಿ ಸ್ಥಿತಿ ಕಂಡು ಮತ್ತೆ ಬೇಸರ ವ್ಯಕ್ತಪಡಿಸಿದ ಜೆಸಿ ಮಾಧುಸ್ವಾಮಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಜೆ ಸಿ ಮಧು ಸ್ವಾಮಿ ರಾಜಕ್ಕೆ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದು ಅವರು ಹೇಳಿಕೆಗೆ ಬಿಜೆಪಿ ತಿರುಗೇಟು ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ರಾಜ್ಯಕ್ಕೆ ಅನ್ಯಾಯವಾಗಿದೆ ಅಂತ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿಯಿಂದ ತಿರುಗೇಟು ನೀಡುತ್ತಿಲ್ಲ ಮಾತು ಎತ್ತಿದರೆ ಸಾಕು ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸುತ್ತಾರೆ ರಾಜ್ಯ ಬಿಜೆಪಿ ನಾಯಕರು ಸರಿಯಾಗಿ ತಿರುಗೇಟು ನೀಡುತ್ತಿಲ್ಲ ಈ ಪರಿಸ್ಥಿತಿ ನೋಡಿ ನನಗೆ ತುಂಬಾ ನೋವಾಗುತ್ತಿದೆ. 40% ಕಮಿಷನ್ ಎಂದು ಸುಳ್ಳು ಹೇಳಿ ಅದನ್ನೇ ಸತ್ಯ ಎಂದು ಬಿಂಬಿಸಿದರು.ಈ ಹಿಂದೆ ಬೊಮ್ಮಾಯಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡಿತ್ತು.ಈ ಬಾರಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಜೆ…
ಬೆಂಗಳೂರು : ಬಿಜೆಪಿಯ ಶಾಸಕ ಕೆ ಗೋಪಾಲಯ್ಯ ಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜನನ್ನು ಇದೀಗ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸ್ ಸರು ಇದೀಗ ಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಕಾರ್ಪೊರೇಟರ್ ಪದ್ಮರಾಜ್ ನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಪದ್ಮರಾಜ್ ವಿಚಾರಣೆ ನಡೆಯುತ್ತಿದೆ ಪದ್ಮರಾಜ್ ಬಳಿ ಇದ್ದ ಮೊಬೈಲನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕ ಕೆ ಗೋಪಾಲಯ ಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಕೆ ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಕೊಲೆ ನಿಂದನೆ ಹಾಗೂ ಅವಾಚ್ಯ ಶಬ್ದಗಳಿಂದ ಬೈದಿದ್ದರೂ ಇದರಿಂದ ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದರು ಇದೀಗ ಪದ್ಮರಾಜನನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/update-bjp-mla-gopalaiah-receives-death-threat-complaint-lodged-with-speaker-khader/
ಬೆಂಗಳೂರೂ : ಬಿಜೆಪಿಯ ಶಾಸಕ ಗೋಪಾಲಯಗೆ ಕೊಲೆ ಬೆದರಿಕೆ ಒಡ್ಡಿದ್ದು ಕೊಲೆ ಬೆದರಿಕೆಗೆ ಸಂಬಂಧಸಿದಂತೆ ಇದೀಗ ಮಾಜಿ ಕಾರ್ಪೊರೇಟರ್ ಪದ್ಮನಾಭ ವಿರುದ್ಧ ಎಫ್ಐಆರ್ ದಾಖಲಾಗಿದೆ ಅಲ್ಲದೆ ಗೋಪಾಲಯ್ಯ ಕೂಡ ಸ್ಪೀಕರ್ ಯುಟಿ ಖಾದರ್ ಗೆ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅವನಿ ಹೀಗೆ ಏನೆಲ್ಲ ಕೆಲಸ ಮಾಡಿ ಕೊಟ್ಟಿದ್ದೇನೆ. ಅವರ ಮಕ್ಕಳಿಗೆ ಕೆಲಸ ಕೊಡಿಸುವುದಾಗಿರಬಹುದು ಅಥವಾ ಮೆಡಿಕಲ್ ಸೀಟ್ ಕೊಡಿಸುವುದಾಗಿರಬಹುದು ಅಲ್ಲದೆ ಹಲವಾರು ಕೆಲಸ ಮಾಡಿದ್ದೇನೆ. ಆದರೂ ನನಗೆ ಕೊಲೆ ಬೆದರಿಕೆ ಹಾಕಿದ್ದಾನೆ. ನನಗೆ ಅಷ್ಟೇ ಅಲ್ಲದೆ ಹಲವು ಶಾಸಕರಿಗೂ ಕೂಡ ಆತ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದರು. ವಿಷಯ ತಿಳಿದು ಪದ್ಮರಾಜು ಮನೆಯವರು ಕರೆ ಮಾಡಿ ಕುಡಿದ ಅಮಲಿನಲ್ಲಿ ಏನೋ ಹೇಳಿದ್ದಾರೆ ದಯವಿಟ್ಟು ಕ್ಷಮಿಸಿ ಬಿಡಿ ಎಂದು ನನ್ನನ್ನು ಕೇಳಿಕೊಂಡರು. ಅಲ್ಲದೆ ಅವರ ಮಗಳು ಕೂಡ ಬಂದು ಕೇಳಿಕೊಂಡಾಗ ನಾನು ಅವರಿಗೆ ಹೇಳಿದೆ ಈಗಾಗಲೇ FIR ದಾಖಲಾಗಿದೆ ಅದನ್ನು ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲ.…
ಬೆಂಗಳೂರೂ : ಬಿಜೆಪಿಯ ಶಾಸಕ ಕೆ.ಗೋಪಾಲಯಗೆ ಕೊಲೆ ಬೆದರಿಕೆ ಒಡ್ಡಿದ್ದು ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಇದೀಗ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಶಾಸಕ ಕೆ ಗೋಪಾಲಯ್ಗೆ ಜೀವ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಎಫ್ FIR ದಾಖಲಾಗಿದೆ. ರಾತ್ರಿ 11:00 ಕರೆ ಮಾಡಿ ಅವಾಚ್ಯವಾಗಿ ನಿಂದನೆ ಮಾಡಿದ್ದು, ಅಲ್ಲದೆ ನಿಂದನೆ, ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ FIR ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಗೋಪಾಲಯ್ಯ, ರಾತ್ರಿ 11:00ಗೆ ಕರೆ ಮಾಡಿ ನನಗೆ ಅವಾಚಕ ಶಬ್ದಗಳಿಂದ ಬೈದಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ್ದಾನೆ ನನಗೂ ನನ್ನ ಕುಟುಂಬದವರಿಗೂ ಅವಾಚ್ಯವಾಗಿನಿಂದನೆ ಮಾಡಿದ್ದಾನೆ. ಆದ್ದರಿಂದ ಕೂಡಲೇ ಪದ್ಮರಾಜುನನ್ನು ಗಡಿ ಪಾರು ಮಾಡಬೇಕು ಎಂದು ಇದೇ ವೇಳೆ ಅವರು ಆಗ್ರಹಿಸಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆಯನ್ನು ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಸುಮಾರು 11.15 ಕೋಟಿ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಟಿ ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್ ಲೈನ್ ಮಾಲ್ಗೆ ಇದೀಗ ಬಿಬಿಎಂಪಿ ಅಧಿಕಾರಿಗಳು ಬೀಗ ಜಡದಿದ್ದಾರೆ ಎಂದು ತಿಳಿದುಬಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಇದೀಗ ರಾಕ್ಲೈನ್ ಮಾಲ್ಗೆ BBMP ಅಧಿಕಾರಿಗಳು ಶಾಕ್ ನೀಡಿದ್ದಾರೆ. ಆಸ್ತಿಕರಿಗೆ ಬಾಕಿ ಉಳಿಸಿಕೊಂಡ ಹನಿಯಲ್ಲಿ ಇದೀಗ ರಾಕ್ಲೈನ್ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ. ಬೆಂಗಳೂರಿನ ಟಿ ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್ ಲೈನ್ ಮಾಲ್ ಗೆ ಇದೀಗ ಬಿಬಿಎಂಪಿ ಬೀಗ ಹಾಕಿದೆ.ಸುಮಾರು 11.15ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮಾಲ್ ಗೆ ನೋಟಿಸ್ ನೀಡಿತ್ತು. ಇದೀಗ ಬಾಕಿ ಪಾವತಿಸಿದ ಹಿನ್ನೆಲೆಯಲ್ಲಿ ಮಾಲ್ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ರಾಕ್ ಲೈನ್ ಮಾಲ್ ನಟ ಹಾಗೂ ನಿರ್ಮಾಪಕ ನಿರ್ದೇಶಕ ರಾಕ್ಲೈನ್ ವೆಂಕಟೇಶ್ ಒಡೆತನದು ಎಂದು ಹೇಳಲಾಗುತ್ತಿದ್ದು ಇತ್ತೀಚಿಗೆ ಕಾಟೇರ ಚಲನಚಿತ್ರ ಯಶಸ್ವಿ ಆಗಿರುವ ಹಿನ್ನೆಲೆಯಲ್ಲಿ ಪಬ್ನಲ್ಲಿ…