Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ಇತ್ತೀಚಿನ ದಿನಮಾನಗಳು ಬಹಳ ಸೂಕ್ಷ್ಮವಾಗಿವೆ ಎಂದರೆ ತಪ್ಪಾಗಲಾರದು. ಏಕೆಂದರೆ ಚಿಕ್ಕ ಚಿಕ್ಕ ವಿಷಯಗಳಿಗೂ ಕೊಲೆ ನಡೆಯುತ್ತಿವೆ. ಅದಕ್ಕೆ ಉದಾಹರಣೆ ಇದೀಗ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಿಸನಾಳದಲ್ಲಿ ತಂದೆಯೇ ಮಗನನ್ನು ಶುಲ್ಲಕ ಕಾರಣಕ್ಕೆ ಕೊಡಲಿಯಿಂದ ಹಲ್ಲೆ ಮಾಡಿ ಕೊಂದಿರುವ ಘಟನೆ ನಡೆದಿದೆ. ಕರಿಯಪ್ಪ ಬೀಳಗಿ (21) ಎಂಬ ಯುವಕ ತನ್ನ ತಂದೆ ಡೊಂಗರೆಪ್ಪ ಬೀಳಗಿ ಎಂಬಾತನಿಂದ ಕೊಲೆಯಾದವ ಎಂದು ಹೇಳಲಾಗುತ್ತಿದೆ. ಹೌದು ಬಾಗಲಕೋಟೆ ಜಿಲ್ಲೆಯ ಬೆಳಗಿ ತಾಲೂಕಿನ ಬಸನಾಳ ಎಂಬ ಗ್ರಾಮದಲ್ಲಿ ಊಟದಲ್ಲಿ ಹಾಲು ಹಾಕಿಕೊಂಡು ತಿನ್ನಬೇಡ ಎಂದು ತಂದೆ ಮಗನಿಗೆ ಹೇಳಿದ್ದಾನೆ. ಇದೇ ವಿಚಾರವಾಗಿ ತಂದೆ ಹಾಗೂ ಮಗನ ಮಧ್ಯೆ ಗಲಾಟೆ ಶುರುವಾಗಿದೆ. ಇದರಿಂದ ಕುಪಿತ ಗೊಂಡ ತಂದೆ ಮಗನಿಗೆ ಬುದ್ಧಿ ಕಲಿಸಲು ಪ್ಲಾನ್ ಮಾಡಿದ್ದಾನೆ. ಮಗನ ಜೊತೆ ಗಲಾಟೆ ಆಗಿದ್ದಕ್ಕೆ ಕೋಪಗೊಂಡಿದ್ದ ಡೊಂಗರೆಪ್ಪ, ರಾತ್ರಿ ಮಗ ಮಲಗಿದ್ದಾಗ ಕಂಠಪೂರ್ತಿ ಕುಡಿದು ಬಂದ ತಂದೆ, ಕೊಡಲಿಯಿಂದ ಮುಖ ಹಾಗೂ ಕತ್ತಿಗೆ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದಾನೆ. ಘಟನೆ…
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಸೇರಿದಂತೆ ಮತ್ತಿತರರ ಹೆಸರು ಕೇಳಿ ಬಂದಿದ್ದು, ಸರಿಯಾದ ತನಿಖೆ ನಡೆದರೆ ಸತ್ಯ ಹೊರಗೆ ಬರುತ್ತದೆ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದರು. ಬೆಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಎ. ಮಂಜು ಅವರಿಗೆ ಪೆನ್‌ಡ್ರೈವ್ ಕೊಟ್ಟಿದ್ದೆ ಎಂದು ಯಾರೋ ಒಬ್ಬರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಎಸ್‌ಐಟಿ ತನಿಖೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬೆನ್ನು ತಟ್ಟಿಕೊಂಡಿದ್ದಾರೆ. ಸರಿಯಾದ ತನಿಖೆ ನಡೆಸುವ ಬಗ್ಗೆ ನಮಗೂ ವಿಶ್ವಾಸವಿದೆ. ನಂತರ ಎಲ್ಲ ತಿಳಿಯಲಿದೆ’ ಎಂದರು. ಅಪಹರಣ ಪ್ರಕರಣದ ಸಂತ್ರಸ್ತೆ ಹುಣಸೂರಿನ ಮನೆಯಲ್ಲೇ ಇದ್ದರು. ಅಲ್ಲಿಂದಲೇ ಪೊಲೀಸರು ಕರೆದುಕೊಂಡು ಹೋದರು ಎಂದು ಅವರ ಮಗಳು-ಅಳಿಯ ಹೇಳಿದ್ದಾರೆ. ಸಂತ್ರಸ್ತೆಯ ಹೇಳಿಕೆಯೂ ಹರಿದಾಡುತ್ತಿದೆ. ಮುಂದೆ ಏನಾಗುತ್ತದೆಯೋ ನೋಡೋಣ’ ಎಂದರು.
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ HD ರೇವಣ್ಣಗೆ ಇಂದು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಪ್ರಕರಣವನ್ನು ರಣದೀಪ ಸಿಂಗ್ ಸುರ್ಜೆವಾಲ ಸಿಎಂ ಸಿದ್ದರಾಮಯ್ಯ ಹಾಗೂ ಡಿಸೆಂಬ ಡಿಕೆ ಶಿವಕುಮಾರ್ ಮಾನಿಟರ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬೆಂಗಳೂರಿನಲ್ಲಿ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಆಗಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸಿಗರು ನಿತ್ಯ ಪ್ರಕರಣವನ್ನು ಮಾನಿಟರ್ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಾನಿಟರ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ರೇವಣ್ಣಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಪ್ರಕರಣದಲ್ಲಿ ಸರ್ಕಾರ ಆತುರ ತೋರಿದೆ ಎಂದು ಅನಿಸುತ್ತಿದೆ. ಎಫ್ಐಆರ್ ನಲ್ಲಿ ತಪ್ಪು ಮಾಹಿತಿ ನೀಡಿದ್ದು ಸ್ಪಷ್ಟವಾಗಿ ಕಾಣಿಸುತ್ತಿದೆ. ರೇವಣ್ಣರನ್ನು ಜೈಲಿಗೆ ಕಳುಹಿಸಬೇಕೆಂದು ಕುತಂತ್ರ ಮಾಡಿದ್ದರು. ಕಾಂಗ್ರೆಸ್…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಎಚ್ಡಿ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಜಾಮೀನು ವಿಷಯ ತಿಳಿದು ಶಾಸಕ ಎಚ್ ಡಿ ರೇವಣ್ಣ ಸಂತಸ ವ್ಯಕ್ತಪಡಿಸಿದ್ದಾರೆ. ಜಾಮೀನು ಮಂಜೂರು ಬಗ್ಗೆ ಜೈಲು ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಅಲ್ಲಿಂದಲೇ ದೇವರಿಗೆ ಧನ್ಯವಾದ ತಿಳಿಸಿದ್ದಾರೆ. ಸದ್ಯ HD ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಲ್ಲಿ ಕ್ವಾರಂಟೈನ್ ಸೆಲ್ ನಲ್ಲಿ ಇದ್ದಾರೆ. ಸಂಭ್ರಮಾಚರಣೆಗೆ ತಡೆದ ಪೊಲೀಸರು ಇತ್ತ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನಲ್ಲಿ ಎಚ್ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಆದ ವಿಷಯ ತಿಳಿಯುತ್ತಿದ್ದಂತೆ ಅವರ ಬೆಂಬಲಿಗರು ಸಂಭ್ರಮ ಆಚರಣೆ ನಡೆಸಲು ಮುಂದಾಗಿದ್ದಾರೆ. ಹೊಳೆನರಸೀಪುರ ತಾಲೂಕಿನ ಗಾಂಧೀ ಸರ್ಕಲ್ ಬಳಿ ಅವರ ಬೆಂಬಲಿಗರು ಸಂಭ್ರಮಾಚರಣೆಗೆ ಮುಂದಾಗಿದ್ದಾರೆ. ಈ ವೇಳೆ ಎಚ್ ಡಿ ರೇವಣ್ಣಗೆ ಜಾಮೀನು ಹಿನ್ನೆಲೆ ಸಂಭ್ರಮಾಚರಣೆಗೆ ಯತ್ನಿಸಿದಾಗ ತಡೆಯಲು ಮುಂದಾದ ಪೊಲೀಸರ ಜೊತೆಗೆ ಕಾರ್ಯಕರ್ತರು…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಶರತ್ತು ಬದ್ಧ ಜಾಮೀನು ನೀಡಿದೆ. ಜಾಮೀನು ನೀಡಿದ ವಿಷಯದ ಕುರಿತಾಗಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು ರೇವಣ್ಣ ಅವರು ಯಾವುದೇ ತಪ್ಪು ಮಾಡಿಲ್ಲ ಆದರೂ ಅವರನ್ನು ಶ್ರದ್ದಾಂತರ ಮಾಡಿ ಜೈಲಿಗೆ ಹಾಕಿದ್ದರು ಎಂದು ಕಿಡಿಕಾರಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇವಣ್ಣ ತಪ್ಪು ಮಾಡದಿದ್ದರೂ ಷಡ್ಯಂತ್ರ ಮಾಡಿ ಜೈಲಿಗೆ ಹಾಕಿದ್ದರು. ಇದೇ ವಿಚಾರಣೆದು ಜೈಲಿನಲ್ಲಿ ರೇವಣ್ಣ ಕಣ್ಣೀರು ಹಾಕಿದ್ದರು. ಪ್ರಜ್ವಲ್ ತಪ್ಪು ಮಾಡಿದರೆ ಶಿಕ್ಷೆ ಆಗಲೇಬೇಕು. ಏನೂ ತಪ್ಪು ಮಾಡಿದ ಹೆಚ್ ಡಿ ರೇವಣ್ಣರನ್ನು ಜೈಲಿಗೆ ಕಳುಹಿಸಿದರು ಎಂದರು. ಪ್ರಕರಣದಲ್ಲಿ HD ರೇವಣ್ಣರಿಗೆ ಜಾಮೀನು ಸಿಕ್ಕಿದ್ದಕ್ಕೆ ನ್ಯಾಯಾಧೀಶರಿಗೆ ಧನ್ಯವಾದ ತಿಳಿಸುತ್ತೇನೆ. ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮುಂದುವರೆಯುತ್ತದೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಹೇಳಿಕೆ ನೀಡಿದರು. ಜಿಟಿಡಿ ಭೇಟಿ ವೇಳೆ ಕಣ್ಣೀರಿಟ್ಟ…
ಶಿವಮೊಗ್ಗ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಕುಡಗೋಲಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹೊರವಲಯದ ದುಮ್ಮಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಅದೇ ಗ್ರಾಮದ ಸತೀಶ್ ನಾಯ್ಕ (28) ಎಂದು ಹೇಳಲಾಗುತ್ತಿದೆ. ಕೊಲೆಯಾದ ಸತೀಶ್ ನಾಯಕ್ ಅವರ ತಂದೆಗೆ ಸೇರಿದ ಮೂರುವರೆ ಎಕರೆ ಭೂಮಿ ಇತ್ತು. ಈ ಒಂದು ಜಮೀನಿಗೆ ಸಂಬಂಧಿಸಿದಂತೆ ಮಂಜ ನಾಯಕ್ ಹಾಗೂ ಸತೀಶ್ ಕುಟುಂಬಗಳ ನಡುವೆ ಕೋರ್ಟ್ ನಲ್ಲಿ ವಿವಾದ ನಡೆಯುತ್ತಿತ್ತು. ಕೋರ್ಟ್ ವಿವಾದ ಬಗೆಹರಿಯುವ ತನಕ ಎರಡು ಕಡೆಯವರು ಸಹ ಜಮೀನಿಗೆ ಹೋಗಬಾರದು ಎಂದು ನ್ಯಾಯಾಲಯ ತಿಳಿಸಿತ್ತು. ಅಕಸ್ಮಾತ್ ಎರಡು ಕುಟುಂಬದವರ ಪೈಕಿ ಯಾರಾದರೂ ಜಮೀನಿಗೆ ಹೋದರೆ ಜಮೀನಿಗೆ ಹೋದ ಫೋಟೋ ಹಾಗೂ ವಿಡಿಯೋವನ್ನು ಸಾಕ್ಷಿ ಸಮೇತ ನೀಡಬೇಕು ಎಂದು ನ್ಯಾಯಾಲಯ ತಿಳಿಸಿತ್ತು. ಅದರಂತೆ ಇಂದು ಮಂಜ ನಾಯಕನ ಮಕ್ಕಳು ಜಮೀನಿಗೆ ತಿಳಿದಿದ್ದಾರೆ ಇದನ್ನು ಪ್ರಶ್ನಿಸಿದ ಸತೀಶ್ ನಾಯಕರ ಮೇಲೆ ಮಂಜನಾಯಕ್ ಮಗ ಅಖಿಲೇಶ್ ಕೊಡಗೋಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹಳೆ ನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ. ಮಹಿಳೆ ಅಭರಣ ಪ್ರಕರಣದಲ್ಲಿ ಕಳೆದ ಐದು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇದ್ದರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಡ್ಜ್ ಸಂತೋಷ ಗಜಾನನ ಭಟ್ ಅವರು ಜಾಮೀನು ನೀಡಿ ಆದೇಶ ಹೊರಡಿಸಿದೆ. ಹಾಗಾಗಿ ನಾಳೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಬಿಡುಗಡೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೆಲವು ಕಾನೂನು ಪ್ರಕ್ರಿಯೆಗಳು ಇರಲಿದ್ದು, ಹಾಗಾಗಿ ನಾಳೆ ಎಚ್ ಡಿ…
ಹಾಸನ : ಮಹಿಳೆಯ ಮೇಲೆ ಅತ್ಯಾಚಾರ ಎಸೆಗೆ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜಿಲ್ಲೆಯ ಹೊಳೆ ಅರಸೀಪುರ ತಾಲೂಕಿನಲ್ಲಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಪರಿಶೀಲನೆ ಅಂತ್ಯಗೊಳಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ದೂರನ್ನು ಆಧರಿಸಿ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಎಚ್ ಡಿ ರೇವಣ್ಣ ನಿವಾಸಕ್ಕೆ ತಂಡ ಭೇಟಿ ನೀಡಿತ್ತು. ಸತತ ಎರಡೂವರೆ ಗಂಟೆಗೂ ಹೆಚ್ಚು ಕಾಲ ಎಫ್ಎಸ್ಎಲ್ ತಂಡ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ. ಹೊಳೆನರಸೀಪುರದ ಹೆಚ್ ಡಿ ರೇವಣ್ಣ ನಿವಾಸದಲ್ಲಿ ಪರಿಶೀಲನೆ ಹೊಳೆನರಸೀಪುರದ ನಿವಾಸದಲ್ಲೂ ರೇವಣ್ಣ ತಮ್ಮ ಮೇಲೆ ಅತ್ಯಾಚಾರ ಕಿದ್ದಾರೆಂದು ಸಂತ್ರಸ್ತೆ ದೂರು ಸಲ್ಲಿಸಿದರು. ಮಹಿಳೆಯ ದೂರು ಸಂಬಂಧ ಇದೀಗ ಎಫ್ ಎಸ್ ಎಲ್ ತಂಡದ ಅಧಿಕಾರಿಗಳು ಸಾಕ್ಷ್ಯ ಸಂಗ್ರಹಿಸಿ ಅಧಿಕಾರಿಗಳು ಇದೀಗ ಬೆಂಗಳೂರಿನತ್ತ ತೆರಳಿದ್ದಾರೆ.
ಉಡುಪಿ: ಪದವೀಧರ ಶಿಕ್ಷಕರ ಚುನಾವಣೆಗೆ ಈಗಾಗಲೇ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಆದರೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಹೌದು ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ನಿರಾಕರಿಸಿತ್ತು. ಆ ಸಂದರ್ಭದಲ್ಲಿಯೂ ಭಟ್ ಅವರು ಬೇಸರಗೊಂಡಿದ್ದರು. ಬಳಿಕ ಪಕ್ಷದ ವರಿಷ್ಠರು ವಿಧಾನ ಪರಿಷತ್ ನಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು. ಆ ಬಳಿಕ ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿ, ಅಭ್ಯರ್ಥಿಯ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ, ಲೋಕಸಭೆ ಚುನಾವಣೆಯಲ್ಲೂ ಶಿವಮೊಗ್ಗ ಕ್ಷೇತ್ರದ ಉಸ್ತುವಾರಿಯನ್ನು ವಹಿಸಿಕೊಂಡು ಅಭ್ಯರ್ಥಿಯ ಪರವಾಗಿ ಉತ್ತಮವಾಗಿ ಕೆಲಸ…
ಧಾರವಾಡ : ಬೆಂಕಿಯನ್ನು ದೇವರು ಅಂತಿರಲ್ಲ? ದೇವರು ಎಂದು ಅದರ ಜೊತೆ ಸ್ವಲ್ಪ ಹೊತ್ತು ಮಲಗುತ್ತೀರಾ? ಎಂದು ಸನಾತನ ಸಂಸ್ಕೃತಿ, ನಂಬಿಕೆ ಬಗ್ಗೆ ತೋಂಟದ ಶ್ರೀ ನಿಜಗುಣಾನಂದ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ ‘ಬಸವಣ್ಣ-ಸಾಂಸ್ಕೃತಿಕ ನಾಯಕ’ ಕುರಿತಾದ ವಿಚಾರ ಸಂಕಿರಣದಲ್ಲಿ ಮಾತನಾಡಿರುವ ಶ್ರೀ ನಿಜಗುಣಾನಂದ ಸ್ವಾಮೀಜಿ, ಬಸವಣ್ಣನವರಿಗೆ ಎಲ್ಲಿಯೂ ಕೆಟ್ಟವರು ಕಾಣಲಿಲ್ಲ. ಆತನ ಸಂಸ್ಕೃತಿ, ಸಂಸ್ಕಾರ ಯಾರಿಗೂ ಕೊಡಲು ಆಗುವುದಿಲ್ಲ. ಕಾಣುವ ಮನುಷ್ಯರನ್ನು ಪ್ರೀತಿ ಮಾಡಲಾರದವರು. ಕಾಣದೇ ಇರೋ ದೇವರನ್ನು ಪ್ರೀತಿ ಮಾಡಲು ಸಾಧ್ಯವೇ? ಎಂದು ಬಸವೇಶ್ವರರ ವಿಚಾರ ಹೇಳುತ್ತ ದೇವರ ಬಗ್ಗೆ ಪ್ರಶ್ನಿಸಿದ್ದಾರೆ. ಪ್ರಾಣಿದಯವಾದ ಸಂಸ್ಕೃತಿ ಬಸವಣ್ಣನವರದ್ದು. ಹಬ್ಬ-ಹರಿದಿನಗಳಲ್ಲಿ ಕುರಿ, ಕೋಣ ತಂದಿಟ್ಟು ಕಡಿಯುತ್ತಿದ್ದರು. ಆಗ ಬಸವಣ್ಣ ಯಾವ ಸಂಸ್ಕೃತಿ ನಿಮ್ಮದು? ಎಂದು ಕೇಳಿದ್ದರು ದೇವರ ಹೆಸರಿನಲ್ಲಿ ಪ್ರಾಣಿ ವಧೆ ಮಾಡುವುದು ನಿಮ್ಮ ಸಂಸ್ಕೃತಿಯೇ? ದೇವರ ಹೆಸರಲ್ಲಿ ಹೋಮ ಮಾಡಿ ತಿನ್ನುವ ಪದಾರ್ಥ ಹಾಕುತ್ತಿರಲ್ಲ? ಏನಿದು ನಿಮ್ಮ ಸಂಸ್ಕೃತಿನಾ? ಎಂದು ಪ್ರಶ್ನಿಸಿದ್ದಾರೆ. ಬೆಂಕಿಯನ್ನು ದೇವರು ಅಂತಿರಲ್ಲ.…









