Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು ಇದರ ಮಧ್ಯ ಕೊರೋನಾ ಆರ್ಭಟವು ಜೋರಾಗಿದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮತ್ತೆ 72 ಹೊಸ ಕರೋನಾ ಪ್ರಕರಣಗಳು ಪತಿಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕುರಿತು ಮಾಹಿತಿ ನೀಡಿದೆ. ಹೌದು ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 72 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 287 ಕ್ಕೆ ಏರಿಕೆಯಾಗಿದ್ದು, ಇದುವರೆಗೂ ರಾಜ್ಯದಲ್ಲಿ ಕೊರೊನ ಆಕ್ಟಿವ್ ಪ್ರಕರಣಗಳ ಸಂಖ್ಯೆ 27 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Read More

ಯಾದಗಿರಿ : ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಬಲವಂತವಾಗಿ ತಡೆದು ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ರಸ್ತೆಯಲ್ಲಿ ತೆರಳುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಸವರ್ಣೀಯರು ಅಡ್ಡಗಟ್ಟಿ ಜಾತಿನಿಂದನೆ ಮಾಡಿದ್ದು ಅಲ್ಲದೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು, ರಸ್ತೆಯಲ್ಲಿ ಹೋಗುವಾಗ ಕಾನೂನು ವಿದ್ಯಾರ್ಥಿಯಾದ ದುರ್ಗಪ್ಪನನ್ನು ತಡೆದು ಜಾತಿನಿಂದನೆ ಮಾಡಿದ್ದಾರೆ. ಯಾವುದೇ ಕಾರಣವಿಲ್ಲದೆ ದಾರಿಯಲ್ಲಿ ತಡೆದು ಸವರ್ಣೀಯರು ಜಾತಿ ನಿಂದನೆ ಮಾಡಿದ್ದಾರೆ. ಮಲ್ಲಯ್ಯ ಹುಲಕಲ್ ಮತ್ತು ಅರ್ಜುನಪ್ಪ ದೇವಡಿಯಿಂದ ಈ ಒಂದು ಕೃತ್ಯ ನಡೆದಿದೆ. ಜಾತಿ ನಿಂದನೆ ಮಾಡಿದ್ದು ಅಲ್ಲದೆ ದುರ್ಗಪ್ಪನ ಮೇಲೆ ಹಲ್ಲೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿರುವ ವಿಡಿಯೋ ವೈರಲ್ ಆಗಿದೆ ಈ ಕುರಿತಂತೆ, SC, ST…

Read More

ಬೆಂಗಳೂರು : ಚಿತ್ರದ ಪ್ರಚಾರಕ್ಕೆ ರಚಿತಾ ರಾಮ್ ಬರುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ. ನಿರ್ಮಾಪಕ ನಿರ್ದೇಶಕ ಮತ್ತು ನಟರ ಹೇಳಿಕೆಯಿಂದ ಬೇಜಾರಾಗಿದೆ. ಅವರು ನನ್ನ ಬಗ್ಗೆ ಹೇಳಿದ ಮಾತುಗಳಿಂದ ನನಗೆ ಬಹಳ ಬೇಜಾರಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ರಚಿತಾ ರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ. ಸಂಜು ವೆಡ್ಸ್ ಗೀತಾ-2 ಪ್ರಚಾರಕ್ಕೆ ನಟಿ ರಚಿತಾ ರಾಮ್ ಪ್ರಚಾರಕ್ಕೆ ಬರುತ್ತಿಲ್ಲ ಎಂದು ಇತ್ತೀಚಿಗೆ ಆರೋಪಿಸಲಾಗಿತು. ನಟಿ ರಚಿತ ವಿರುದ್ಧ ನಟ ಶ್ರೀನಗರ ಕಿಟ್ಟಿ ನಿರ್ದೇಶಕ ನಾಗಶೇಖರ್ ಆರೋಪಿಸಿದ್ದರು. ಅಲ್ಲದೆ ರಚಿತರಾಮ್ ವಿರುದ್ಧ ಫಿಲಂ ಚೇಂಬರ್ಗು, ದೂರು ನೀಡಲಾಗಿತ್ತು. ಇದೀಗ ಈ ವಿಚಾರವಾಗಿ ನಟಿ ರಚಿತಾ ರಾಮ್ ಅವರು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸುಧೀರ್ಘವಾಗಿ ಮಾತನಾಡಿದ್ದು, ನಟ ಶ್ರೀನಗರ ಕಿಟ್ಟಿ ನಿರ್ದೇಶಕ ನಾಗಶೇಖರ್ ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಚಿತಾ ರಾಮ್ ಹೇಳಿದ್ದೇನು? ಈ ಒಂದು ಚಿತ್ರದ ತಂಡದ ಜೊತೆ ಒಂದು ಮುಕ್ಕಾಲು ವರ್ಷಗಳ ಕಾಲ…

Read More

ಬೆಂಗಳೂರು : ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ ಹಲವಾರು ಜನರಿಗೆ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ್ದಾರೆ ಎನ್ನುವ ಗಂಭೀರವಾದ ಆರೋಪ ಕೇಳಿಬಂದಿದೆ. ಹೌದು ಸರ್ಕಾರಿ ಕೆಲಸ ಕೊಡಿಸುವುದಾಗಿ ಸಾಕಷ್ಟು ಜನರಿಗೆ ವಂಚನೆ ಎಸಗಿದ್ದು, ವಸಂತ ಮುರಳಿ ಅವರಿಂದ ಇದೀಗ ಸಾಕಷ್ಟು ಜನರು ಮೋಸ ಹೋಗಿದ್ದಾರೆ. ನನಗೆ ಮುಖ್ಯಮಂತ್ರಿ ಗೊತ್ತು, ಮಿನಿಸ್ಟರ್ ಗೊತ್ತು ಎಂದು ವಸಂತ ಮುರುಳಿ ಅನೇಕರಿಗೆ ವಂಚನೆ ಎಸಗಿದ್ದಾರೆ. ಈ ಕುರಿತು ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ ಇಂದು ವಸಂತ ಮುರುಳಿ ಅವರ ಕಾರ್ಯಕ್ರಮಕ್ಕೆ ಮೋಸ ಹೋದವರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಪರಸ್ಪರ ಗುಂಪುಗಳು ಕೈ ಕೈ ಮಿಲಾಯಿಸಿಸಿಕೊಂಡು ಗಲಾಟೆ ನಡೆಸಿವೆ. ವಿಶ್ವಕರ್ಮ ಸಮಾಜದ ಕಾರ್ಯಕ್ರಮದ ವೇಳೆ ಭಾರೀ ಗಲಾಟೆ ನಡೆದಿದೆ. ವಿಶ್ವಕರ್ಮ…

Read More

ಹಾವೇರಿ : ಹಾವೇರಿಯಲ್ಲಿ ಎಂದು ಘೋರ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿರುವ ವರದಾ ನದಿಯಲ್ಲಿ ಕಾಲು ಜಾರಿ ಬಿದ್ದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಕಾಲು ಜಾರಿ ನದಿಗೆ ಬಿದ್ದು ಕಲ್ಲಪ್ಪ ಹುರಳಿಕುಪ್ಪಿ (80) ಎನ್ನುವವರು ಸಾವನಪ್ಪಿದ್ದಾರೆ. ಮೃತರು ಹಾನಗಲ್ ತಾಲೂಕಿನ ಜಾಕ್ಕನಾಯಕನ ಕೊಪ್ಪ ನಿವಾಸಿ ಆಗಿದ್ದು, ಇಂದ್ ನದಿಯಲ್ಲಿ ಕಾಲು ತೊಳೆಯಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿ ಬಂದು ಮೃತ ದೇಹಕ್ಕಾಗಿ ಶೋಧಕ ಕಾರ್ಯ ಮುಂದುವರಿಸಿದ್ದಾರೆ ಘಟನೆ ಕುರಿತಂತೆ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಾವಣಗೆರೆ : ನಿವೇಶನದ ಹಕ್ಕು ಪತ್ರ ನೀಡಲು ಐದು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು ಆ ಲಂಚದ ಹಣ ಪಡೆಯುವ ವೇಳೆ ಗ್ರಾ.ಪಂ ಬಿಲ್ ಕಲೆಕ್ಟರ್ ಹಾಗೂ ನೀರುಗಂಟಿ ಇಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ದೇವರಹಳ್ಳಿಯಲ್ಲಿ ನಡೆದಿದೆ. ದೇವರಹಳ್ಳಿ ಗ್ರಾ.ಪಂ ಹಂಗಾಮಿ ಬಿಲ್ ಕರೆಕ್ಟರ್ ಲೋಕೇಶ ಹಾಗೂ ನೀರುಗಂಟಿ ಶೇಖರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಇಂದಿರಾ ಗ್ರಾಮೀಣ ವಸತಿ ನಿವೇಶನದಡಿ 2016ನೇ ಸಾಲಿನಲ್ಲಿ ಮಂಜೂರಾಗಿದ್ದ ವಸತಿ ಯೋಜನೆಯ ನಿವೇಶನದ ಹಕ್ಕುಪತ್ರ ನೀಡಲು 5 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಈ ಘಟನೆ ನಡೆದಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವರಹಳ್ಳಿ ಗ್ರಾಮದ ಆರ್.ಲಕ್ಷ್ಮಿದೇವಿ ಲಕ್ಷ್ಮೀಪತಿ ಎಂಬುವದು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇಂದಿರಾ ಗ್ರಾಮೀಣ ವಸತಿ ನಿವೇಶನ ಯೋಜನೆಯಡಿ 2016ನೇ ಸಾಲಿನಲ್ಲಿ ವಸತಿ ನಿವೇಶನ ಮಂಜೂರಾಗಿತ್ತು.ಬಿಲ್ ಕಲೆಕ್ಟರ್ ಲೋಕೇಶ ಹಕ್ಕುಪತ್ರ ನೀಡಲು 5 ಸಾವಿರ ರೂ. ಲಂಚದ ಬೇಡಿಕ…

Read More

ಬೆಂಗಳೂರು : ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 15ರಷ್ಟು ಮೀಸಲಾತಿ ಹೆಚ್ಚಳ ಮಾಡಿದ ವಿಚಾರವಾಗಿ, ಗ್ರಾಮೀಣ ಭಾಗದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಕಡಿಮೆ ಇರುವ ಕಾರಣಕ್ಕೆ ವಸತಿ ಸಚಿವರು ಮನೆ ಹಂಚಿಕೆ ಮೀಸಲಾತಿಯನ್ನು ನಗರ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದಾರೆ. ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ ಎಂದು ಡಿಸಿಎಂ ಸ್ಪಷ್ಟನೆ ನೀಡಿದರು. ಸಾಚಾರ್ ವರದಿಗೆ ಅನುಗುಣವಾಗಿ ಗ್ರಾಮೀಣ ಪ್ರದೇಶಕ್ಕೂ ಶೇ.10 ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ ಗ್ರಾಮೀಣ ಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಇರುವ ಕಾರಣಕ್ಕೆ ಸೌಲಭ್ಯ ರದ್ದಾಗುತ್ತಿತ್ತು. ನಾವೇನೂ ಹೊಸದಾಗಿ ಮೀಸಲಾತಿ ಸೃಷ್ಟಿ ಮಾಡಿ ನೀಡುತ್ತಿಲ್ಲ. ಪರಿಶಿಷ್ಟ ವರ್ಗ ಮತ್ತು ಜಾತಿಗಳಲ್ಲಿ ಶೇ.90 ರಷ್ಟು ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ಹೊಸದಾಗಿ ಮನೆ ಬೇಕಾಗಿರುವವರು ಅಡಿಪಾಯ ಹಾಕಿದರೆ ಮಾತ್ರ ಅವರಿಗೆ ಅನುಕೂಲ ಮಾಡಲು ಸಾಧ್ಯ. ಅಡಿಪಾಯ ಹಾಕದೇ ಹಣ ನೀಡಲು ಸಾಧ್ಯವಿಲ್ಲ ಎಂದರು. ವಿಪಕ್ಷಗಳು ರಾಜಕೀಯ ಮಾಡುತ್ತವೆ, ಮಾಡಲಿ. ಸರ್ಕಾರ ಮನೆಗಳನ್ನು ಕಟ್ಟಿ ನಷ್ಟ ಮಾಡಿಕೊಳ್ಳಬೇಕೆ? ಪರಿಶಿಷ್ಟರಿಗೆ ಅವಕಾಶ ಮಾಡಿಕೊಡಲಾಗಿತ್ತು, ಆದರೆ,…

Read More

ಬೆಂಗಳೂರು : ಡಿ.ಕೆ.ಶಿವಕುಮಾರ್ ಬಳಿ ಬಟ್ಟೆ ಹೊಲಿಸಿಕೊಳ್ಳುವಷ್ಟು ದರಿದ್ರ ನನಗಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಏನು ಹೇಳಿದ್ದರು?. ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರುತ್ತದೆ, ಎಲ್ಲ ತಯಾರಾಗಿ ಎಂದು ಹೇಳಿದ್ದರು. ಆಗ ಅದಕ್ಕೆ ನಾನು ಉಡುಗೊರೆ ನೀಡುತ್ತೇನೆ ಎಂದು ಹೇಳಿದ್ದೆ. ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ ಎಂದು ವ್ಯಂಗ್ಯವಾಡಿದರು.

Read More

ಬೆಂಗಳೂರು : ಸಾಲ ಮರು ಪಾವತಿ ತಡವಾಗಿದ್ದಕ್ಕೆ ಮನೆಯಲ್ಲಿದ್ದ ಮಗುವನ್ನು ಮೈಕ್ರೋಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದ ಪ್ರಕರಣ ಇದೀಗ ಸಾಕಷ್ಟು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಲು ಈಗಾಗಲೇ ಕಠಿಣ ಕಾನೂನು ತಂದಿದ್ದೇವೆ. ಆದರೂ ಕೆಲವೆಡೆ ಇಂತಹ ದುರ್ವರ್ತನೆ ನಡೆಯುತ್ತಿದೆ. ಇದು ಸರಿಯಲ್ಲ. ಮಗುವನ್ನು ಕರೆದೊಯ್ದವರು ಕಠಿಣ ಹೃದಯಿಗಳು. ಮಾನವೀಯತೆ ಇಲ್ಲದವರು ಮಗುವನ್ನು ಅಪಹರಣ ಮಾಡಿದ್ದಾರೆ. ಈ ಬಗ್ಗೆ ಇಂದು ಮೈಸೂರು ಪೊಲೀಸ್‌ ಕಮಿಷನರ್‌ ಅಥವಾ ಐಜಿ ಬಳಿ ಮಾತನಾಡುತ್ತೇನೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸರಿಗೆ ಸೂಚನೆ ನೀಡುತ್ತೇನೆ ಎಂದರು. ಘಟನೆ ಹಿನ್ನೆಲೆ? ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಮಗುವನ್ನು ಕರೆದೊಯ್ದಿದ್ದರು. ಈ…

Read More

ನವದೆಹಲಿ : ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಆಡಿಯೋ ವಿಚಾರವಾಗಿ, ಕಾಂಗ್ರೆಸ್, ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಕೆಟ್ಟದಾಗಿ ಮಾಡುತ್ತಿದೆ. ಬಿಜೆಪಿ ಮುಸ್ಲಿಂ ಧರ್ಮಕ್ಕೆ ವಿರೋಧವಿಲ್ಲ ಧರ್ಮ ಬಿಡಿ ಅಂತ ಹೇಳಿಲ್ಲ ಎಂದು ನವದೆಹಲಿಯಲ್ಲಿ ಬಿಜೆಪಿಯ ಸಂಸದ ರಮೇಶ್ ಜಿಗಜಣಗಿ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಮುಸ್ಲಿಂ ಧರ್ಮಕ್ಕೆ ವಿರೋಧವಿಲ್ಲ ಧರ್ಮ ಬಿಡಿ ಅಂತಾನು ಹೇಳಿಲ್ಲ. ಕಾಂಗ್ರೆಸ್ ನಾಯಕರು ಮುಸ್ಲಿಮರ ತಲೆ ಕೆಡಿಸುತ್ತಿದ್ದಾರೆ ದಲಿತರ ತಲೆಕೆಡಿಸುವ ರೀತಿ ಅಲ್ಪಸಂಖ್ಯಾತರಿಗೂ ತಲೆ ಕೆಡಿಸುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ನೂರಕ್ಕೆ ನೂರರಷ್ಟು ನಡೆಯುತ್ತಿರುವುದು ಸತ್ಯ. ರಾಮಕೃಷ್ಣ ಹೆಗಡೆ, ಬಸವರಾಜ ಬೊಮ್ಮಾಯಿ, ಎಚ್ಡಿ ದೇವೇಗೌಡರ ಜೊತೆ ಕೆಲಸ ಮಾಡಿದ್ದೇನೆ ಆದ್ರೆ ಇಷ್ಟು ಗಲೀಜು ಸರ್ಕಾರ ಎಂದು ನೋಡಿರಲಿಲ್ಲ. ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಸಂಸದ ರಮೇಶ್ ಜಿಗಿಜಣಗಿ ವಾಗ್ದಾಳಿ ನಡೆಸಿದರು. ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ವಿಜಯಪುರಕ್ಕೆ ಬಂದು ನೋಡಿ ಪ್ರಧಾನಿ ಮೋದಿಯವರು ಎಂತಹ ಕೆಲಸ ಮಾಡಿದ್ದಾರೆ…

Read More