Subscribe to Updates
Get the latest creative news from FooBar about art, design and business.
Author: kannadanewsnow05
ರಾಯಚೂರು : ಮಂಗನ ಬಾವು ಕಾಯಿಲೆ ಕೇವಲ ಉತ್ತರ ಕನ್ನಡ ದಕ್ಷಿಣ ಭಾಗದ ಹಲವು ಜಿಲ್ಲೆಗಳಲ್ಲಿ ಮಾತ್ರ ಪ್ರಕರಣಗಳು ಇವೆ ಎಂದು ಹೇಳಲಾಗಿತ್ತು, ಆದರೆ ಇದೀಗ ಈ ಒಂದು ಮಂಗನ ಬಾವು ಕಾಯಿಲೆ ರಾಯಚೂರಿಗೂ ಕಾಲಿಟ್ಟಿದ್ದು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನೀರಲಕೇರಿ ಗ್ರಾಮದ ಸರ್ಕಾರಿ ಶಾಲೆಯ ಸುಮಾರು 150ಕ್ಕೂ ಹೆಚ್ಚು ಮಕ್ಕಳಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದೆ. ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡಿ, ಇಡೀ ಶಾಲೆಯನ್ನು ಆವರಿಸಿದೆ. ಗಂಟಲು ಭಾಗದಲ್ಲಿ ಬಾವು, ತಲೆನೋವು, ಸ್ನಾಯು ಸೆಳೆತದಿಂದ ಮಕ್ಕಳು ಬಳಲುತ್ತಿದ್ದಾರೆ. ಬಾವು ಇರುವ ಕಡೆ ಅರಿಶಿಣ ಮತ್ತು ಪಟ್ಟಿ ಹಾಕಿ ಪೋಷಕರು ಮನೆ ಮದ್ದು ನೀಡುತ್ತಿದ್ದಾರೆ. ಮಂಗನ ಬಾವು ಕಾಯಿಲೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಗೈರಾಗುತ್ತಿದ್ದಾರೆ. ಸದ್ಯ ಭಾದಿತರಿಗೆ ಆನೆಹೊಸರು, ಲಿಂಗಸಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಚಾರ ತಿಳಿದು ಗ್ರಾಮದಲ್ಲಿ ಮುಕ್ಕಾಂ ಹೂಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮತ್ತು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.…
ತುಮಕೂರು : ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಎಲ್ಲಾ ಪಕ್ಷಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲುವು ಖಚಿತ ಎಂಬುವುದು ಲೆಕ್ಕಾಚಾರ ಹಾಕಿ ಆಯಾ ಕ್ಷೇತ್ರಕ್ಕೆ ಅಭ್ಯರ್ಥಿಗಳಿಗೆ ಮಾಡುತ್ತವೆ. ಹೈಕಮಾಂಡ್ ಭೇಟಿ ಬಳಿಕ ತುಮಕೂರು ಕ್ಷೇತ್ರದಲ್ಲಿ ವಿ ಸೋಮಣ್ಣ ಮತ್ತೆ ಆಕ್ಟಿವ್ ಆಗಿದ್ದು ಮದುವೆ ಕಾರ್ಯಕ್ರಮದಲ್ಲಿ ವಿ. ಸೋಮಣ್ಣ ಭಾಗಿಯಾಗಿದ್ದಾರೆ. ಈ ವೇಳೆ ಒಕ್ಕಲಿಗ ನಾಯಕರನ್ನು ಭೇಟಿಯಾಗಿ ಸೋಮಣ್ಣ ಮಾತುಕತೆ ನಡೆಸಿದ್ದಾರೆ. ಲಿಂಗಾಯತ ಸಮುದಾಯದ ಮುಖಂಡರ ಮನೆಗೂ ಭೇಟಿ ನೀಡಿ ಚರ್ಚಿಸಿದ್ದಾರೆ. ವಿ ಸೋಮಣ್ಣಗೆ ಶಾಸಕರಾದ ಜ್ಯೋತಿ ಗಣೇಶ ಸುರೇಶ್ ಗೌಡ ಕೂಡ ಸಾತ್ ನೀಡಿದ್ದಾರೆ. ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಎಂದು ಈಗಾಗಲೇ ಜೆಸಿ ಮಧು ಸ್ವಾಮಿ ತಿಳಿಸಿದ್ದಾರೆ.ಜೆಸಿ ಮಾಧುಸ್ವಾಮಿ ಹೇಳಿಕೆ ಬೆನ್ನಲ್ಲೇ ವಿಶ್ವಮಣ್ಣ ಇದೀಗ ತುಮಕೂರು ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗಿ ಓಡಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೆ ರಾಜ್ಯದಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಷಾ ಭೇಟಿ ನೀಡಿದ್ದು…
ತುಮಕೂರು : ಮಗಳ ಹಾಗೂ ಅಳಿಯನ ನಡುವೆ ಜಗಳ ನಡೆಯುತ್ತಿದ್ದ ಸಂದರ್ಭದಲ್ಲಿ ಈ ವೇಳೆ ಜಗಳ ಬಿಡಿಸಲು ಮಧ್ಯ ಪ್ರವೇಶಿಸಿದ ಅತ್ತೆಗೆ ಅಳಿಯ ದೊಣ್ಣೆಯಿಂದ ಬಲವಾಗಿ ತಲೆಗೆ ಹೊಡೆದ ಪರಿಣಾಮವಾಗಿ ಅತ್ತೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ (58) ಕೊಲೆಯಾದ ಮಹಿಳೆಯಾಗಿದ್ದು, ಸೈಯದ್ ಸುಹೇಲ್ ಕೊಲೆಗೈದ ಆರೋಪಿಯಾಗಿದ್ದಾನೆ.ಸೈಯದ್ ಸುಹೇಲ್ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪತಿ ಗಲಾಟೆ ಮಾಡುತ್ತಿದ್ದಾನೆ ಎಂದು ತುಮಕೂರು ತಾಲೂಕಿನ ಬೆಳಗುಂಬದಲ್ಲಿರುವ ತನ್ನ ತಾಯಿ ಅಶ್ವಿತ್ ಉನ್ನಿಸಾಗೆ ಮಗಳು ಫೋನ್ ಮಾಡಿದ್ದಳು. ಹೀಗಾಗಿ ಕಲಹ ನಿವಾರಿಸಲು ಅಳಿಯನ ಮನೆಗೆ ಬಂದಿದ್ದ ಅಶ್ವಿತ್ ಉನ್ನಿಸಾ ಹೋಗಿದ್ದಾರೆ. ಈ ವೇಳೆ ಅಳಿಯ ಸೈಯದ್ ಸುಹೇಲ್ ಅತ್ತೆ ಮೇಲೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಕೂಡಲೇ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಉನ್ನಿಸಾ ಮೃತಪಟ್ಟಿದ್ದಾರೆ. ಘಟನೆ…
ಮೈಸೂರು : ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸೋತಿರುವ ಹಿನ್ನೆಲೆಯಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳನ್ನು ಗೆಲುವ ಗುರಿ ಹೊಂದಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಷಾ ಭೇಟಿ ನೀಡಿದ್ದಾರೆ. ಅಮಿತ್ ಶಾ ಅವರು ಇಂದು ಮೈಸೂರು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಮೈಸೂರು ಕಾಂಗ್ರೆಸ್ ಘಟಕದಿಂದ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ ಮೈಸೂರು ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೇತೃತ್ವದಲ್ಲಿ “ನನ್ನ ತೆರಿಗೆ ನನ್ನ ಹಕ್ಕು” ಘೋಷಣೆಯೊಂದಿಗೆ “ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?” ಎಂಬ ಪ್ರಶ್ನೆಯೊಂದಿಗೆ ಪೋಸ್ಟರ್ ಅಭಿಯಾನ ನಡೆಸಲು ಕಾರ್ಯಕರ್ತರು ಸಜ್ಜಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಅಮಿತ್ ಶಾ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಲು ಜಿಲ್ಲಾ ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಇಷ್ಟೆಲ್ಲಾ ಆದರೂ ಅಮಿತ್ ಶಾ ಅವರನ್ನು ಕೈ ಪಡೆ ಸ್ವಾಗತ ಕೋರಿದ್ದು, ಕನ್ನಡ ನಾಡಲ್ಲಿ ಅತಿಥ್ಯಕ್ಕೆ ಬರವಿಲ್ಲ. ದ್ರೋಹಿಗಳನ್ನು ಕ್ಷಮಿಸು ಮರೆವಿಲ್ಲ ಅಂತಾ…
ಉಡುಪಿ : ಕಳೆದ ವರ್ಷ ಉಡುಪಿಯ ನೇಜಾರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಗೈದಿದ್ದ ಆರೋಪಿ ಪ್ರವೀಣ್ ಚೌಗಲೇ ಸಲ್ಲಿಸಿದ್ದ ಪೇರೋಲ್ ಅರ್ಜಿಯನ್ನ ಇದೀಗ ಉಡುಪಿಯ ಜೆಎಂಎಫ್ಸಿ ನ್ಯಾಯಾಲಯ ವಜಾಗೊಳಿಸಿದೆ. ಫೆಬ್ರವರಿ 1 ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಿಧನರಾದ ತಮ್ಮ ಮೃತ ಸಹೋದರ ನಿತಿನ್ ಅವರ ಅಂತ್ಯಕ್ರಿಯೆಯ ವಿಧಿಗಳಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಬಿಡುಗಡೆಗಾಗಿ ಫೆಬ್ರವರಿ 8 ರಂದು ಮೂರು ಗಂಟೆಗಳ ಅವಧಿಗೆ ಚೌಗುಲೆ ಪೆರೋಲ್ ಅರ್ಜಿ ಸಲ್ಲಿಸಿದ್ದನು.ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಾಗ, ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಎಚ್ಎಂ ನದಾಫ್ ಅವರು ಪೆರೋಲ್ ನೀಡುವ ಮನವಿಗೆ ಆಕ್ಷೇಪನೆ ವ್ಯಕ್ತಪಡಿಸಿದರು. ವಾದಗಳನ್ನು ಕೂಲಂಕುಷವಾಗಿ ಪರಿಗಣಿಸಿದ ನ್ಯಾಯಾಧೀಶೆ ದೀಪಾ ಅವರು ಆರೋಪಿಗೆ ಪೆರೋಲ್ ನೀಡದೆ ಅರ್ಜಿಯನ್ನು ತಿರಸ್ಕರಿಸಿದರು. ವಾದ ಮಂಡನೆ ವೇಳೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಇದ್ದರು. ತನಿಖಾ ತಂಡವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ಅನ್ನು ಫೆಬ್ರವರಿ 12 ರಂದು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲು ನಿರ್ಧರಿಸಿದೆ ಎಂದು…
ಬೆಂಗಳೂರು : ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ವಿಧಾನಪರಿಷತ್ ಉಪಚುನಾವಣೆ ಹಿನ್ನೆಲೆ ವ್ಯಾಲೆಂಟೈನ್ಸ್ ಡೇ ಅಂದ್ರೆ ಫೆಬ್ರವರಿ 14ರ ಸಂಜೆ 5 ಗಂಟೆಯಿಂದ ಫೆಬ್ರವರಿ 17ರ ಬೆಳಗ್ಗೆ 6 ಗಂಟೆವರೆಗೆ ನಗರದ ಕೆಲವು ಭಾಗಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ನೆಲೆಯಲ್ಲಿ ವ್ಯಾಲೆಂಟೈನ್ಸ್ ಡೇ ಆಚರಿಸಲು ಅತ್ಯಂತ ಸಂಭ್ರಮದಲ್ಲಿದ್ದ ಪ್ರೇಮಿಗಳಿಗೆ ಇದೀಗ ನಿರಾಸೆ ಮೂಡಿದೆ. ಫೆಬ್ರವರಿ 14 ವ್ಯಾಲೆಂಟೈನ್ಸ್ ಡೇ ಈ ದಿನದಂದು ಪ್ರೇಮಿಗಳ ಪಾರ್ಟಿ, ಸೆಲೆಬ್ರೇಷನ್ ಜೋರಾಗಿರುತ್ತದೆ. ಆದರೆ ಸೆಲೆಬ್ರೇಷನ್ ಮೂಡ್ ನಲ್ಲಿದ್ದ ಪ್ರೇಮಿಗಳಿಗೆ ಈ ಬಾರಿ ನಿರಾಶೆ ಕಾದಿದ್ದು, ಮದ್ಯ ಸಿಗ್ತಿಲ್ಲ. ಜೊತೆಗೆ ಮದ್ಯ ಮಾರಾಟ ನಿಷೇಧಕ್ಕೆ ಹೋಟೆಲ್ ಅಸೋಸಿಯೇಷನ್ ನಿಂದ ವಿರೋಧ ವ್ಯಕ್ತವಾಗಿದೆ. 14, 15, 16 ಹಾಗೂ 20ನ್ನು ಡ್ರೈ ಡೇ ಅಂತ ಘೋಷಣೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಫೆಬ್ರವರಿ 14ನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧರಾಗಿದ್ದ ಯುವಜನತೆಗೆ ನಿರಾಸೆಯಾಗಿದೆ. ಪ್ರೇಮಿಗಳ ದಿನಕ್ಕಾಗಿ ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿದ್ದ ರೆಸ್ಟೋರೆಂಟ್, ಪಬ್, ಬಾರ್ಗಳಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಿದೆ. ಇದಕ್ಕೆ ಹೋಟೆಲ್…
ಬೆಂಗಳೂರು : ಮನೆ ಕಳ್ಳತನ ಪ್ರಕರಣ ಸಂಬಂಧ ಹೊರ ರಾಜ್ಯದ ವ್ಯಕ್ತಿಯನ್ನು 9 ದಿನಗಳ ಕಾಲ ಅಕ್ರಮವಾಗಿ ಬಂಧನದಲ್ಲಿ- ಇಟ್ಟಿದ್ದ ಆರೋಪದ ಮೇಲೆ ಅಮೃತಹಳ್ಳಿ ಠಾಣೆ ಮೇಲೆ ರಾಜ್ಯ ಮಾನವ ಹಕ್ಕುಗಳ ಆಯೋಗದ (ಎಸ್ಎಚ್ಆರ್ಸಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಬೈ ಮೂಲದ ಯಾಸಿನ್ ಮುಕ್ಸುಲ್ ಖಾನ್ ಅಲಿಯಾಸ್ ಅಸ್ಲಾಂ ಪಾಂಡೆ (47) ಅಕ್ರಮವಾಗಿ ಪೊಲೀಸ್ ಠಾಣೆಯಲ್ಲಿ ಬಂಧನಕ್ಕೆ ಒಳಗಾಗಿದ್ದವ. ಶುಕ್ರವಾರ ಸಂಜೆ ಎಸ್ಎಚ್ಆರ್ಸಿ ಪೊಲೀಸ್ ವಿಭಾಗದ ಡಿವೈಎಸ್ಪಿ ಸುಧೀರ್ ಹೆಗಡೆ ನೇತೃತ್ವದ ತಂಡ ದಾಳಿ ನಡೆಸಿತು. ಪೊಲೀಸ್ ಠಾಣೆಯ ಸಿಸಿ ದೃಶ್ಯಾವಳಿ ಮತ್ತು ಕೆಲ ದಾಖಲೆಗಳನ್ನು ಎಸ್ಎಚ್ಆರ್ಸಿ ಜಪ್ತಿ ಮಾಡಿದೆ. ಠಾಣೆಯಲ್ಲಿ ಯಾಸಿನ್ನನ್ನು ಅಕ್ರಮ ಬಂಧನದಲ್ಲಿ ಇರಿಸಿರುವುದು ಗೊತ್ತಾಗಿದ್ದು, ಇನ್ಸ್ಪೆಕ್ಟರ್ ಅಂಬರೀಷ್ ಸೇರಿ ಇತರರ ವಿರುದ್ಧ ಎಸ್ಎಚ್ಆರ್ಸಿ ಪ್ರಕರಣ ದಾಖಲಿಸಿದೆ. 2023ರಲ್ಲಿ ಮನೆಗಳ್ಳತನ ಪ್ರಕರಣದಲ್ಲಿ ಯಾಸಿನ್ನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದರು. ಜಾಮೀನು ಪಡೆದು ಹೊರಬಂದ ಆರೋಪಿ ನಗರವನ್ನು ತೊರೆದು ಮುಂಬೈಗೆ ಮರಳಿದ್ದ. ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ವಾರಂಟ್ ಜಾರಿಗೊಳಿಸಲಾಗಿತ್ತು. ಮುಂಬೈಗೆ…
ಬೆಂಗಳೂರು : ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ವಿಳಂಬ ಆಗಿರುವುದಕ್ಕೆ ಗುತ್ತಿಗೆದಾರರು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಹೈಕೋರ್ಟ್ ತನಿಖೆಯ ವಿಳಂಬಕ್ಕೆ ರಾಜ್ಯ ಸರ್ಕಾರಕ್ಕೆ ಕಾರಣ ಕೇಳಿದ್ದು ಪ್ರತಿಕ್ರಿಯೆ ನೀಡದೆ ಹೋದಲ್ಲಿ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಹೈಕೋರ್ಟ್ ನಲ್ಲಿ ನಿಕ್ಷೇಪ ಇನ್ ಪ್ರಾಜೆಕ್ಟ್ ಅರ್ಜಿ ವಿಚಾರಣೆ ನಡೆಯಿತು.ನ್ಯಾ.ನಾಗಮೋಹನದಾಸ ಆಯೋಗದಲ್ಲಿ ಈವರೆಗೆ ವಿಚಾರಣಾ ಪ್ರಕ್ರಿಯೆ ನಡೆದಿಲ್ಲ ವಿಚಾರಣೆ ನೆಪವೊಡ್ಡಿ ಸರ್ಕಾರ ಗುತ್ತಿಗೆದಾರರ ಬಿಲ್ ಪಾವತಿಸುತ್ತಿಲ್ಲ ಎಂದು ಹೈಕೋರ್ಟಿಗೆ ಅರ್ಜಿದಾರರ ಪರ ವಕೀಲರಿಂದ ಈ ಕುರಿತಂತೆ ಮಾಹಿತಿ ಒದಗಿಸಲಾಯಿತು. ಈವರೆಗೂ ವಿಚಾರಣೆ ನಡೆಯದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ಹೊರಹಾಕಿತು. ಹೈ ಕೋರ್ಟ್ ಆದೇಶವಿದ್ದರೂ ವಿಚಾರಣೆ ವಿಳಂಬಕ್ಕೆ ಕಾರಣವೇನು ಸರ್ಕಾರದ ಪ್ರತಿಕ್ರಿಯೆ ಬಾರದಿದ್ದರೆ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ಎಚ್ಚರಿಕೆ ನೀಡಿದೆ. ಕಳೆದ ಬಿಜೆಪಿ ಅಧಿಕಾರ ಅವಧಿಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ವಿರುದ್ಧ…
ಮೈಸೂರು : ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹಾಗೂ ಚಾಣಕ್ಯ ಎಂದೆ ಹೆಸರುವಾಸಿಯಾಗಿರುವ ಅಮಿತ್ ಶಾ ರಜಕ್ಕೆ ಆಗಮಿಸಿದ್ದು ಇಂದು ಮೈಸೂರಿನಲ್ಲಿ ಬಿಜೆಪಿ ನಾಯಕರೊಂದಿಗೆ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಅಮಿತ್ ಶಾ ಆಗಮನಕ್ಕೂ ಮುನ್ನ ಅವರು ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಮೈಸೂರು-ನಂಜನಗೂಡು ರಸ್ತೆ ಮಧ್ಯೆ ಹಾಕಲಾಗಿದ್ದ ಬ್ಯಾರಿಕೇಡ್ಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿಯಾಗಿದೆ. ತಕ್ಷಣ ಪೊಲೀಸರು ಆ್ಯಂಬುಲೆನ್ಸ್ ಕರೆಸಿ ಗಾಯಾಳವನ್ನು ಆಸ್ಪತ್ರೆಗೆ ರವಾನಿಸಿದ್ದು, ಅಪಘಾತಕ್ಕೀಡಾಗಿದ್ದ ಕಾರನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ರ್ಯಾಡಿಸನ್ ಬ್ಲೂ ಹೋಟೆಲ್ನಿಂದ ಅಮಿತ್ ಶಾ ಅವರು ಬೆಳಗ್ಗೆ 11ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಿರುವ ಅಮಿತ್ ಶಾ, ಬಳಿಕ ಮಂಡಕಹಳ್ಳಿ ಏರ್ಪೋರ್ಟ್ಗೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮಕ್ಕೆ ತೆರಳಲಿದ್ದಾರೆ. ಅಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ…
ಬೆಂಗಳೂರು : ಶ್ರೀ ರಾಮಚಂದ್ರ ತನ್ನ ಆಡಳಿತದ ಅವಧಿಯಲ್ಲಿ ಸ್ತ್ರೀಯರನ್ನು ಅಗೌರವದಿಂದ ನಡೆಸಿಕೊಂಡಿದ್ದ. ಹೀಗಾಗಿ ನಮಗೆ ರಾಮರಾಜ್ಯಕ್ಕಿಂತ ಡಾ. ಬಿ.ಆರ್. ಅಂಬೇಡ್ಕರ್ ಅವರ ಭೀಮರಾಜ್ಯ ಸ್ಥಾಪನೆಯ ಅಗತ್ಯವಿದೆ. ನಾವೆಲ್ಲ ರಾಮ ಆಗುವುದಕ್ಕಿಂತ ಭೀಮನಾಗಬೇಕು ಎಂದು ಚಿತ್ರದುರ್ಗದ ಹರಳಯ್ಯ ಗುರುಪೀಠದ ಶ್ರೀ ಬಸವಹರಳಯ್ಯ ಕರೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ಕಾಯಕ ಶರಣರ ಜಯಂತಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾವೆಲ್ಲ ಈಗ ರಾಮನ ಹಿಂದೆ ಹೋಗುತ್ತಿದ್ದೇವೆ. ಆದರೆ, ರಾಮ ಸ್ತ್ರೀಯರನ್ನು ಅಗೌರವವಾಗಿ ನಡೆಸಿಕೊಂಡಿದ್ದ. ತಮ್ಮ ಪತ್ನಿ ಸೀತೆಯನ್ನು ಅಗ್ನಿ ಪರೀಕ್ಷೆ ನಡೆಸಿದ್ದ. ಅಷ್ಟೇ ಅಲ್ಲ. ಅನಂತರ ಕಾಡಿಗೂ ಕಳುಹಿಸಿದ್ದ. ಶೂರ್ಪನಖಿಯ ಮೂಗು ಕುಯ್ದಿದ್ದ. ಹೀಗಾಗಿ ನಮಗೆ ರಾಮ ರಾಜ್ಯಕ್ಕಿಂತ, ಡಾ. ಬಿ.ಆರ್. ಅಂಬೇಡ್ಕರ್ ಅವರ ಭೀಮ ರಾಜ್ಯ ಸ್ಥಾಪನೆಯ ಅಗತ್ಯವಿದೆ ಎಂದರು. ಇತ್ತೀಚೆಗಷ್ಟೇ ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಿದರು. ಕಲ್ಲಿಗೆ ಜೀವ ಕೊಟ್ಟು ಬದುಕಿಸಿದ್ದೇವೆ ಎಂದು ಹೇಳಿ ಜನರನ್ನು…