Author: kannadanewsnow05

ಬೆಂಗಳೂರು : ಕೇವಲ ಐವತ್ತು ಸಾವಿರ ಮಾಮೂಲಿ ಹಣಕ್ಕಾಗಿ ಕಿಡಿಗೇಡಿಗಳು ವ್ಯಕ್ತಿ ಒಬ್ಬರನ್ನು ಮಕ್ಕಳ ಎದುರಲ್ಲಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಮೆಕ್ಯಾನಿಕ್ ಆಗಿದ್ದ ರಶೀದ್ ಪಾಷಾ (45) ಕೊಲೆಗೀಡಾದ ವ್ಯಕ್ತಿ. ಮೂವರು ಕಿಡಿಗೇಡಿಗಳಿಂದ ಕೃತ್ಯ ನಡೆದಿದ್ದು, ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಅಂಗಡಿಗೆ ಹೊಸ ಮೋಲ್ಡ್ ಹಾಕಿಸಿದ್ದ ರಶೀದ್ ಬಳಿ ಸ್ಥಳೀಯ ಕೆಲ ಕಿಡಿಗೇಡಿಗಳು ಭಾನುವಾರ ಬೆಳಗ್ಗೆ ಬಂದು ಐವತ್ತು ಸಾವಿರ ರೂಪಾಯಿ ತಮಗೆ ಕೊಡುವಂತೆ ಪೀಡಿಸಿದ್ದರು. ಆದರೆ ಹಣ ನೀಡಲು ರಶೀದ್ ನಿರಾಕರಿಸಿದಾಗ ಮಾತಿನ ಚಕಮಕಿ ನಡೆದಿದೆ. ಅದೇ ಜಿದ್ದಿನಲ್ಲಿ ರಾತ್ರಿ 8.30ರ ಸುಮಾರಿಗೆ ಮತ್ತೆ ಮೂವರು ಆರೋಪಿಗಳ ಗ್ಯಾಂಗ್ ಬಂದಿದೆ. ರಶೀದ್ ಅವರ ಇಬ್ಬರು ಮಕ್ಕಳ ಮುಂದೆಯೇ ಬ್ಯಾಟ್ ಮತ್ತು ಬೊಂಬಿನಿಂದ ಮನಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ. ಹೀಗಾಗಿ ತೀವ್ರವಾಗಿ ಗಾಯಗೊಂಡಿದ್ದ ರಶೀದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.​ ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಎಂ. ಹಕೇ ಅವರು ಭೇಟಿ ನೀಡಿ…

Read More

ಬೆಂಗಳೂರು : ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡವಾಗಿದೆ ಕಂದಾಯ ಇಲಾಖೆ ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳ ತಲೆದಂಡ ಆಗಿದ್ದು ಮೂರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೌದು ಉತ್ತರ ಒದಗಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಇದೀಗ 3 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮೂವರು ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು ಉತ್ತರ ಒದಗಿಸದ ಹಿನ್ನೆಲೆ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಪಿಡಬ್ಲ್ಯೂಡಿ ಇಲಾಖೆ, ಪಶು ಸಂಗೋಪನೆ, ಸಾರಿಗೆ, ಐಟಿಬಿಟಿ ಡಿಪಿಎಆರ್ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೋಟಿಸ್ ನೀಡಲು ಸೂಚನೆ ನೀಡಿದ್ದಾರೆ. ಸರಿಯಾದ ಉತ್ತರ ನೀಡದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಸಿಎಂ ಸೂಚನೆಯ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ಸಿಎಸ್…

Read More

ಬೆಂಗಳೂರು ಮಾರ್ಚ್ 16: ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರ್ಕಾರ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ಔರಾದ್ ಕ್ಷೇತ್ರದ ಶಾಸಕ ಪ್ರಭು ಚೌವ್ಹಾಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಅವರು, “ಕಳೆದ 70 ವರ್ಷಗಳಿಂದ ಎಲ್ಲಾ ಸರ್ಕಾರಗಳೂ ಇರುವ ಭೂಮಿಯನ್ನೆಲ್ಲಾ ರೈತರಿಗೆ ಹಾಗೂ ವಿವಿಧ ಜನಪರ ಯೋಜನೆಗಳಿಗೆ ಮಂಜೂರು ಮಾಡಿದ್ದು, ಪ್ರಸ್ತುತ ಸ್ಮಶಾನಕ್ಕೂ ಭೂಮಿ ಇಲ್ಲದಂತಾಗಿದೆ” ಎಂದು ಬೇಸರ ಹೊರಹಾಕಿದರು. “ಕಳೆದ ಹತ್ತು ವರ್ಷಗಳಿಂದ ಎಲ್ಲಾ ಸರ್ಕಾರಗಳೂ ವಸತಿ ಪ್ರದೇಶಗಳಿಗೆ ಅವಶ್ಯ ಇರುವಷ್ಟು ಸ್ಮಶಾನ ಭೂಮಿ ನೀಡಬೇಕು ಎಂದು ಪ್ರಯತ್ನಿಸಿದೆ. ಈ ವಿಚಾರದಲ್ಲಿ ಹೈಕೋರ್ಟ್ ಸಹ ಸರ್ಕಾರದ ಬೆನ್ನುಹತ್ತಿದೆ. ಸರ್ಕಾರಿ ಜಮೀನು ಇದ್ದಲ್ಲಿ ಆ ಭೂಮಿಯನ್ನೇ ಸ್ಮಶಾನಕ್ಕೆ ಕಾಯ್ದಿರಿಸಲಾಗಿದೆ. ಸರ್ಕಾರಿ ಜಮೀನು ಇಲ್ಲದಿದ್ದ ಭಾಗಗಳಲ್ಲಿ ಸ್ಮಶಾನ ಭೂಮಿ ನೀಡುವ ಸಲುವಾಗಿ ಕಳೆದ…

Read More

ಬೆಂಗಳೂರು: ಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಕೊನೆಗೂ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದೆ. ಇಂದು ನಡೆದ ಮಹತ್ವದ ಸಭೆಯಲ್ಲಿ, ನಿಯಮಾನುಸಾರವಾಗಿ ಪಂದ್ಯಗಳನ್ನು ನಡೆಸಲು ಸರ್ಕಾರ ಅನುಮತಿ ನೀಡಿದ್ದು, ಅಗತ್ಯ ಭದ್ರತೆ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಒಟ್ಟು 7 ಪಂದ್ಯಗಳಿಗೆ ಅವಕಾಶ ಸರ್ಕಾರದ ಈ ನಿರ್ಧಾರದಿಂದಾಗಿ ಬೆಂಗಳೂರಿನಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿವೆ. ಆರ್ ಸಿಬಿ ತಂಡದ ಐದು ಪಂದ್ಯಗಳು, ಒಂದು ಪ್ಲೇ-ಆಫ್ ಹಾಗೂ ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ವೇಳಾಪಟ್ಟಿಗೆ ಅನುಗುಣವಾಗಿ ಮುಂದಿನ ಸಿದ್ಧತೆಗಳನ್ನು ಈಗಿನಿಂದಲೇ ಚುರುಕುಗೊಳಿಸಲಾಗಿದೆ. ತಜ್ಞರ ಸಮಿತಿ ವರದಿ ಆಧಾರಿತ ನಿರ್ಧಾರ ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ವಕ್ತಾರರು, “ಪಂದ್ಯಗಳ ಆಯೋಜನೆ ಕುರಿತು ಪರಿಶೀಲಿಸಲು ಗೃಹ ಸಚಿವರು ತಜ್ಞರ ಸಮಿತಿಯನ್ನು ರಚಿಸಿದ್ದರು. ಕಳೆದ ಶುಕ್ರವಾರ ಮೈದಾನಕ್ಕೆ…

Read More

ಬೆಂಗಳೂರು : ರಾಜ್ಯದ ಹಲವಡೆ ಗ್ಯಾಸ್ ಸಿಲಿಂಡರ್ ಗಳ ಅಭಾವ ವಿಚಾರವಾಗಿ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಏರ್ಲೈನ್ಸ್ ಹಾಗೂ ರೈಲ್ವೆ ಕ್ಯಾಂಟೀನ್ ಗೆ 100% ಕಮರ್ಷಿಯಲ್ ಗ್ಯಾಸ್ ಪೂರೈಸುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ರಾಜ್ಯದಲ್ಲಿ ನಿತ್ಯ 44,000 ವಾಣಿಜ್ಯ ಸಿಲಿಂಡರ್ ಬೇಕು. ಶೇಕಡ 20 ನಮಗೆ 9 ಸಾವಿರ ಕಮರ್ಷಿಯಲ್ ಸಿಲಿಂಡರ್ ಸಿಗುತ್ತವೆ. 9 ಸಾವಿರ ಸಿಲಿಂಡರ್ಗಳ ಪೈಕಿ 4,000 ಸಿಲಿಂಡರ್ ಆಸ್ಪತ್ರೆಗಳಿಗೆ ಹೋಗುತ್ತವೆ. ಆಟೋಗಳಿಗೆ 2500 ಸಿಲಿಂಡರ್ ಪೂರೈಕೆ ಮಾಡಲು ನಿರ್ಧರಿಸಲಾಗಿದ್ದು, ಇನ್ನು ಬೆಂಗಳೂರಿನಲ್ಲಿ ಹೋಟೆಲ್ ಗಳಿಗೆ ಪ್ರತಿನಿತ್ಯ 1000 ಸಿಲಿಂಡರ್ ಕೊಡಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ 40,000ಕ್ಕೂ ಹೆಚ್ಚು ಹೋಟೆಲಿಗಳಿವೆ. 4,500 ಹೋಟೆಲ್ ಗಳು ನೊಂದಣಿ ಯಾಗಿದ್ದು, ಒಂದು ಹೋಟೆಲ್ಗೆ ಕನಿಷ್ಠ 2ರಿಂದ 3 ಸಿಲಿಂಡರ್ ಗಳು ಬೇಕಾಗುತ್ತವೆ. ರೆಸ್ಟೋರೆಂಟ್ ನಾನ್ ವೆಜ್ ಹೋಟೆಲ್ ಗಳಿಗೆ 5 ರಿಂದ 6 ಸಿಲಿಂಡರ್ ಗಳು ಬೇಕು ಹೀಗಿರುವಾಗ ಸಾವಿರ ಸಿಲಿಂಡರ್ ಗಳು ಸಾಕಾಗುತ್ತಾ ಎನ್ನುವ ಪ್ರಶ್ನೆ…

Read More

ಬೆಂಗಳೂರು : ಬೆಂಗಳೂರು ಹೊಸೂರು ರಸ್ತೆಯಲ್ಲಿ ಡೆಡ್ಲಿ ರೋಡ್ ರೇಜ್ ಪ್ರಕರಣ ನಡೆದಿದ್ದು, ಪೊಲೀಸರ ಮೇಲೆಯೇ ಕಾರು ಚಾಲಕನ ಅಟ್ಟಹಾಸ ಮೆರೆದಿದ್ದಾನೆ. ಯಾರಬ್ ಪಾಷಾ ಎಂಬಾತನಿಂದ ಈ ಒಂದು ಘಟನೆ ನಡೆದಿದೆ. ಬಾನೆಟ್ ಮೇಲೆ ಪೊಲಿಸ್ ನೇತಾಡುತ್ತಿದ್ದರು, ಕಾರು ನಿಲ್ಲಿಸಿದೆ ಅಟ್ಟಹಾಸ ಮೇರಿದಿದ್ದಾನೆ. ಈ ದೃಶ್ಯ ಕಾರಿನ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಕ್ರಮವಾಗಿ ಕರ್ನಾಟಕದಿಂದ ತಮಿಳುನಾಡಿಗೆ ಗುಟ್ಕಾ ಸಾಗಿಸುತ್ತಿದ್ದ. ಈ ವೇಳೆ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಅಡ್ಡ ಬಂದು ನಿಲ್ಲಿಸು ಎಂದಾಗ ಪೊಲೀಸರ ಮೇಲೆ ಯಾರಬ್ ಕಾರು ಹತ್ತಿಸಿದ್ದಾನೆ.

Read More

ಬೆಂಗಳೂರು : ರಾಜ್ಯದ ಹಲವಡೆ ಗ್ಯಾಸ್ ಸಿಲಿಂಡರ್ ಗಳ ಅಭಾವ ವಿಚಾರವಾಗಿ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಏರ್ಲೈನ್ಸ್ ಹಾಗೂ ರೈಲ್ವೆ ಕ್ಯಾಂಟೀನ್ ಗೆ 100% ಕಮರ್ಷಿಯಲ್ ಗ್ಯಾಸ್ ಪೂರೈಸುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ರಾಜ್ಯದಲ್ಲಿ ನಿತ್ಯ 44,000 ವಾಣಿಜ್ಯ ಸಿಲಿಂಡರ್ ಬೇಕು. ಶೇಕಡ 20 ನಮಗೆ 9 ಸಾವಿರ ಕಮರ್ಷಿಯಲ್ ಸಿಲಿಂಡರ್ ಸಿಗುತ್ತವೆ. 9 ಸಾವಿರ ಸಿಲಿಂಡರ್ಗಳ ಪೈಕಿ 4,000 ಸಿಲಿಂಡರ್ ಆಸ್ಪತ್ರೆಗಳಿಗೆ ಹೋಗುತ್ತವೆ. ಗ್ರಾಹಕರು ಹೆಚ್ಚಾಗಿ ಸಿಲಿಂಡರ್ ಗಳನ್ನು ಬುಕ್ ಮಾಡಬಾರದು. ಗ್ಯಾಸ್ ಅಭಾವದ ಬಗ್ಗೆ ಕೇಂದ್ರಕ್ಕೆ ಸಿಎಂ ಎರಡನೇ ಪತ್ರ ಬರೆಯುತ್ತಾರೆ. ಪರಿಸ್ಥಿತಿ ಗಂಭೀರವಾಗಿದೆ. ರಾಜ್ಯದ ಜನರಿಗೆ ತೊಂದರೆಯಾಗಿದೆ. ಕೇಂದ್ರ ಈ ಬಗ್ಗೆ ಗಮನ ಹರಿಸಬೇಕು ಎಂದು ಪತ್ರ ಬರೆಯುತ್ತಾರೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು.

Read More

ಬೆಂಗಳೂರು : ಏಪ್ರಿಲ್ 9ರಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ, ಇದೀಗ ಬಾಗಲಕೋಟೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರೋಧಿ ಅಲೆ ಈ ಸಲ ನಮಗೆ ಅನುಕೂಲವಾಗುತ್ತದೆ. ಪ್ರಧಾನಿ ಮೋದಿ ಜನಪ್ರಿಯತೆ ಕಡಿಮೆ ಆಗಿದೆ ಹಾಗಾಗಿ ಈ ಬಾರಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Read More

ನವದೆಹಲಿ : ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಇದೀಗ ದುಬೈ ಏರ್ಪೋರ್ಟ್ ನಲ್ಲಿ ವಿಮಾನಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ದುಬೈಗೆ ಇಂದು ಏರ್ ಇಂಡಿಯಾ ವಿಮಾನಗಳನ್ನು ರದ್ದುಗೊಳಿಸಿದೆ. ದುಬೈಗೆ ತೆರಳುವ ಮತ್ತು ದುಬೈನಿಂದ ಆಗಮಿಸುವ ಎಲ್ಲಾ ಇಂಡಿಯಾ ಅಭಿಮಾನಿಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ರದ್ದುಗೊಳಿಸಲಾಗಿದೆ. ಡ್ರೋನ್ ದಾಳಿಯಿಂದಾಗಿ ಇಂಧನ ಟ್ಯಾಂಕಿಗೆ ಬೆಂಕಿ ಹೊತ್ತಿಕೊಂಡಿತ್ತು. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಇಂಧನ ಟ್ಯಾಂಕಿಗೆ ಬೆಂಕಿ ಹತ್ತಿಕೊಂಡಿತ್ತು. ಹೀಗಾಗಿ ಎಲ್ಲಾ ವಿಮಾನಗಳನ್ನು ಇದೀಗ ರದ್ದುಗೊಳಿಸಲಾಗಿದೆ.

Read More

ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ರ ಸಾಲಿನ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜ್ಯ ಚುನಾವಣೆ ನಡೆದ ಸಂಧರ್ಭದಲ್ಲಿ ರಾಜ್ಯಕಾರ್ಯಕಾರಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಒಂದು ಹುದ್ದೆ ಅವಿರೋಧವಾಗಿ ಆಯ್ಕೆಯಾಗಿತ್ತು. ಉಳಿದ ಪದಾಧಿಕಾರಿಗಳ ಹುದ್ದೆಗೆ ಕೆಲ ನಾಮಪತ್ರ ತಿರಸ್ಕೃತವಾಗಿದ್ದರೆ, ಹಲವು ಹುದ್ದೆಗಳಿಗೆ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪತ್ರಕರ್ತರ ಸಭೆ ನಡೆಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಜವಬ್ದಾರಿಯನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ, ಕೆಯುಡಬ್ಲ್ಯೂಜೆ ರಾಜ್ಯ ಉಪಾಧ್ಯಕ್ಷರಾದ ಎಚ್.ಬಿ.ಮದನಗೌಡ ಅವರಿಗೆ ನೀಡಿ, ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿತ್ತು. ಮುಖ್ಯಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್ ಅವರ ಸಲಹೆಯನ್ನು ಪಡೆದುಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿ ಸದಸ್ಯರ ಸಹಮತದ ಮೇರೆಗೆ ಅನಿಲ್ ಎಚ್.ಎ. ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ KUWJ ಘಟಕದ ನೂತನ ಪದಾಧಿಕಾರಿಗಳು ವಿವರ: ಅಧ್ಯಕ್ಷರು : ಅನಿಲ್ ಹೆಚ್.…

Read More