Author: kannadanewsnow05

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆಂಬ ಹೇಳಿಕೆಯನ್ನು ಶಾಸಕ ಎಸ್ ಸಿ ಬಾಲಕೃಷ್ಣ ತಿಳಿಸಿದರು. ಇದೀಗ ಅವರ ಹೇಳಿಕೆಯನ್ನು ಅವರೇ ಸಮರ್ಥಿಸಿಕೊಂಡಿದ್ದು, ನಾವು ಗ್ಯಾರಂಟಿ ಕೊಟ್ಟಿದ್ದು ಚುನಾವಣೆಗಾಗಿಯೇ. ಲೋಕಸಭೆಯಲ್ಲಿ ಜನ ಮತ ಹಾಕಿಲ್ಲ ಎಂದರೆ ಗ್ಯಾರಂಟಿ ಅವಶ್ಯಕತೆ ಇಲ್ಲಾ ಎಂದರ್ಥ ಎಂದು ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪೂರ್ತಿ ಆಗದ ದೇವಸ್ಥಾನವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿದ್ದು ಚುನಾವಣೆಗಾಗಿ. ಅವರು ಮಾಡಿರುವುದು ಚುನಾವಣೆಗಾಗಿ. ನಾವು ಗ್ಯಾರಂಟಿ ಕೊಟ್ಟಿದ್ದು ಚುನಾವಣೆಗಾಗಿಯೇ. ಸಿಎಂ ಡಿಸಿಎಂ ಇಬ್ಬರ ಹತ್ತಿರವೂ ಈ ವಿಚಾರ ಚರ್ಚೆ ಮಾಡಿದ್ದೇನೆ. ಅವರು ಏನೇ ಹೇಳದಿರಬಹುದು. ನನ್ನ ವೈಯುಕ್ತಿಕ ಅಭಿಪ್ರಾಯ ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ಆದರೆ ಜನರಿಗೆ ಗ್ಯಾರಂಟಿ ಬೇಡವಾಗಿದೆ ಎಂದು ತೀರ್ಮಾನ ಮಾಡಬೇಕು ಎಂದರು. ಗ್ಯಾರಂಟಿ ಬದಲು ಅಭಿವೃದ್ಧಿಗೆ ಹಣ ಬಳಸಲಿ ಅನ್ನೋದು ನನ್ನ ವೈಯುಕ್ತಿಕ ಅಭಿಪ್ರಾಯ. ನಾವು ಗ್ಯಾರಂಟಿ ಕೊಟ್ಟಿರೋದೇ ಚುನಾವಣೆ ಗೆಲ್ಲೋಕೆ. ಅವರು ದೇವಸ್ಥಾನ ಉದ್ಘಾಟನೆ ಮಾಡಿದ್ದು,…

Read More

ಬೆಂಗಳೂರು : ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಇನ್ನು ಮುಂದೆ ಅತ್ಯಂತ ಹುಷಾರಾಗಿ ಇರಬೇಕಾಗುತ್ತದೆ. ಏಕೆಂದರೆ ಮೆಟ್ರೋದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಸಹ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತನೆ ತೋರಿದರೆ 10 ಸಾವಿರ ದಂಡ ಬೀಳಲಿದೆ. ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರಿದರೆ ಬೀಳುತ್ತೆ ದಂಡ ಯಾರಾದರೂ ಅನುಚಿತವಾಗಿ ವರ್ತಿಸಿದರೆ 10 ಸಾವಿರ ದಂಡ ಬೀಳುತ್ತದೆ ಎಂದು ಇದರ ಬಗ್ಗೆ ಬಿಎಮ್ಆರ್‌ಸಿಎಲ್ ಇಂದ ಆದೇಶ ಹೊರಬಂದಿದೆ ಎಂದು ತಿಳಿದು ಬಂದಿದೆ. ಮೆಟ್ರೋ ನಿಲ್ದಾಣದಲ್ಲಿ ಆಗಿರಬಹುದು ಅಥವಾ ಮೆಟ್ರೋದಲ್ಲಿ ಸಂಚರಿಸುವಾಗ ಮಹಿಳೆಯರೊಂದಿಗೆ ಅನುಚಿತವಾಗಿ ಹಾಗೂ ಅಸಭ್ಯವಾಗಿ ವರ್ತನೆ ತೋರಿದರೆ 10,000 ದಂಡ ಬೀಳುತ್ತದೆ ಅಲ್ಲದೆ ಹುಚ್ಚಾಟಗಳು, ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ನಿಯಮ ಉಲ್ಲಂಘಿಸಿದರು ಕೂಡ 10,000 ದಂಡ ಬೀಳುತ್ತದೆ. ಆದ್ದರಿಂದ ಇನ್ನು ಮುಂದೆ ಮೆಟ್ರೋಲಿಯಲ್ಲಿ ಪ್ರಯಾಣಿಸುವವರು ಅತ್ಯಂತ ಜಾಗರೂಕರಾಗಿರಬೇಕು.

Read More

ಮಂಗಳೂರು : ಇದೆ 22ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಬೇಕಿತ್ತು ಆದರೆ ಕಾರಣಾಂತರಗಳಿಂದ ದಿನಾಂಕವನ್ನು ಮುಂದೂಡಲಾಗಿದ್ದು ಇದೀಗ ಫೆಬ್ರವರಿ 17ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಜನವರಿ 22ರಂದು ಸಮಾವೇಶ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಮುಂದೆ ಹಾಕಲಾಗಿತ್ತು. ಇದೀಗ 17ಕ್ಕೆ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕಾಯ್ದೆಯ ಸುಗ್ರಿವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ವಿಧಾನಸಭೆ ಅಧಿವೇಶನ ಬರುವ ಮುಂಚೆ ಸುಗ್ರಿವಾಜ್ಞೆ ಮಾಡಿದ್ದೆವು. ಭಾಷೆ, ಸಂಸ್ಕೃತಿ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ನಾಗರಿಕರಿಗೆ, ವ್ಯಾಪಾರಿಗಳಿಗೆ ತೊಂದರೆಯಾಗಬಾರದು. ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಮಾಡಿದ್ದೆವು. ರಾಜ್ಯಪಾಲರು ಯಾಕೆ ವಾಪಸು ಕಳುಹಿಸಿದರು ಎಂಬುದು ಗೊತ್ತಿಲ್ಲ. ಈಗ ಪರಿಶೀಲಿಸುತ್ತೇನೆ ಎಂದರು.

Read More

ಬೆಂಗಳೂರು : ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೇರಿ ಆಸ್ತಿ ಗಳಿಸಿ ಕೆಸ್ ಗೆ ಸಂಬಂಧಿಸಿದಂತೆ ತನಿಕೆಗೆ ಸರ್ಕಾರದ ಸಮ್ಮತಿಯನ್ನು ಹಿಂಪಡೆದ ಕ್ರಮವನ್ನು ಪ್ರಶ್ನಿಸಿ ಸಿ.ಬಿ.ಐ ಅರ್ಜಿ ಸಲ್ಲಿಸಿತ್ತು. ಸಿಬಿಐ ಹಾಗೂ ಯತ್ನಾಳ್ ಸಲ್ಲಿಸುವ ಅರ್ಜಿಯನ್ನು ಇಂದು ಹೈಕೋರ್ಟ್ ವಿಚಾರ ನಡೆಸಿದ್ದು ನ್ಯಾ. ಕೆ ಸೋಮಶೇಖರ್, ನ್ಯಾ.ಉಮೇಶ್ ಹಾಗೂ ನ್ಯಾ.ಎಂ ಅಡಿಗರ ಪೀಠ ವಿಚಾರಣೆ ನಡೆಸಿತ್ತು. ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸ್ ರಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರನ್ನು ಪ್ರತಿ ವಾದಿಯಾಗಿಸಲು ಮನವಿ ಸಲ್ಲಿಸಲಾಗಿದೆ.ಅಲ್ಲದೆ ಯತ್ನಾಳ್ ರಿಟ್ ಅರ್ಜಿಯ ಪ್ರತಿಯನ್ನು ಡಿಕೆ ಶಿವಕೀಲರಿಗೆ ಸಲ್ಲಿಸಲು ಇದೇ ವೇಳೆ ಸೂಚನೆ ನೀಡಲಾಯಿತು.ತನಿಖೆ ಹೊಣೆ ಲೋಕಾಯುಕ್ತ ಪೊಲೀಸ್ ರಿಗೆ ವರ್ಗಾಯಿಸಿದರು ನೋಟಿಸ್ ನೀಡಲಾಗಿದೆ. ಸಿಬಿಐ ನೋಟಿಸ್ ನೀಡುತ್ತಿದೆ ಎಂದು ಡಿಕೆ ಪರ ಅಭಿಷೇಕ್ ಮನು ಸಿಂಗ್ಥ್ವಿ ವಾದಿಸಿದ್ದಾರೆ.ಸಿಬಿಐ ಅರ್ಜಿಗೆ ಅಕ್ಷೇಪಣೆಗಳಿದ್ದರೆ ಸಲ್ಲಿಸಲು ಹೈಕೋರ್ಟ್ ಇದೀಗ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆಯನ್ನು ಫೆಬ್ರುವರಿ 12ಕ್ಕೆ ಹೈಕೋರ್ಟ ವಿಬಾಗಿಯ ಪೀಠ ಮುಂದೂಡಿದೆ.

Read More

ಮಂಡ್ಯ : ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಆ ಗ್ರಾಮದಲ್ಲಿ ಹಲವಾರು ಬೆಳವಣಿಗೆ ನಡೆದಿದ್ದು ಕಂಡು ಬಂದಿದೆ ಈ ಹಿನ್ನೆಲೆಯಲ್ಲಿ ಫೆಬ್ರವರಿ 7ರಂದು ಮಂಡ್ಯ ಜಿಲ್ಲೆ ಬಂದ್ಗೆ ಸಮಾನಮನಸ್ಕಾರ ವೇದಿಕೆ ಕರೆಕೊಟ್ಟಿದೆ ಎಂದು ತಿಳಿದು ಬಂದಿದೆ. ರಸ್ತೆಗಳಲ್ಲಿ ಪುಂಡಾಟಿಕೆ ಮಾಡಿ ಕಲ್ಲುತೂರಾಟ ಮಾಡಿದ್ದಾರೆ.ಶಾಂತಿ ಸೌಹಾರ್ದತೆ ಕದಡುತ್ತಿರುವುದನ್ನು ಖಂಡಿಸುತ್ತೇವೆ.ಅನುಮತಿ ಪಡೆಯದೆ ಹನುಮಧ್ವಜ ಹಾಕಿರುವುದು ತಪ್ಪು. ಶಾಂತಿ ಕದಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಇದೇ ತಿಂಗಳು 22ರಂದು ಕೆರಗೋಡು ಗ್ರಾಮದಲ್ಲಿ 108 ಅಡಿ ಹನುಮಂತ್ ಧ್ವಜವನ್ನು ತರು ಗೊಳಿಸಿದ್ದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ಹಾಗೂ ಬಿಜೆಪಿಯ ನಾಯಕರು ಇತ್ತೀಚಿಗೆ ಪ್ರತಿಭಟನೆ ಹಾಗೂ ಪಾದಯಾತ್ರೆ ಕೈಗೊಂಡು ವಿರೋಧಿಸಿದ್ದರು. ಅಲ್ಲದೆ ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಕೂಡ ಲಾಟಿಚಾರ್ ಕೂಡ ನಡೆಸಿದ್ದರು.

Read More

ಬೆಂಗಳೂರು : ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗುವುದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಪಕ್ಷ ವಿಲಿನಕ್ಕೆ ಜನಾರ್ಧನ ರೆಡ್ಡಿ ಆಸಕ್ತಿ ತೋರಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.ಈಗಾಗಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದು ಇದರ ಬೆನ್ನಲ್ಲೇ ಜನಾರ್ಧನ್ ರೆಡ್ಡಿ ಅವರು ಕೂಡ ತಮ್ಮ ಕರ್ನಾಟಕ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸಲು ಆಸಕ್ತಿ ತೋರಿದ್ದಾರೆಂದು ಬಲ್ಲಮೂಲಗಳಿಂದ ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಕೈಕೊಟ್ಟು ಈಗಾಗಲೇ  ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾಗಿರುವ ಬೆನ್ನಲ್ಲೇ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ರಣತಂತ್ರ ಬಿಜೆಪಿ ಹೆಣದಿದ್ದು ಇದೀಗ  ಕೆ ಆರ್ ಪಿ ಪಿ ಪಕ್ಷದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ್ ರೆಡ್ಡಿ ಕೂಡ ಇದ್ದಾರೆ. ಇದೇ ವಿಷಯವಾಗಿ ಇಂದು ಅವರು,ಬೆಳಗ್ಗೆ 11 ಗಂಟೆಗೆ ಶಾಸಕ ಜನಾರ್ಧನ ರೆಡ್ಡಿ ಸಭೆ ನಡೆಸಲಿದ್ದು, ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಜನಾರ್ಧನ ರೆಡ್ಡಿ ಸಭೆ ನಡೆಸಲಿದ್ದಾರೆ.ಪಕ್ಷದ ಪದಾಧಿಕಾರಿಗಳೊಂದಿಗೆ…

Read More

ಬೆಂಗಳೂರು : ಕಾಂಗ್ರೆಸ್ಸಿಗೆ ಮತ ಹಾಕಿದರೆ ಐದು ಗ್ಯಾರಂಟಿ ಇರುತ್ತೆ ಎಂಬ ಶಾಸಕ HC ಬಾಲಕೃಷ್ಣ ಹೇಳಿಕೆಯ ಕುರಿತಾಗಿ ಬೆಂಗಳೂರಿನ ವಿಧಾನ ಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಹೇಳಿಕೆ ನೀಡಿದ್ದು, ನಮ್ಮ ಗ್ಯಾರಂಟಿಗಳು 5 ವರ್ಷ ಮುಂದುವರಿಯಲಿವೆ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಮಾಗಡಿ ಶಾಸಕ ಬಾಲಕೃಷ್ಣ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರಿ ಎಂದಿದ್ದಾರೆ.ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ಆದರೆ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರಿಯುತ್ತವೆ ಎಂದು ಅವರು ತಿಳಿಸಿದರು. ಶಾಸಕ ಬಾಲಕೃಷ್ಣ ಹೇಳಿದ್ದೇನು? ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಅಧಿಕಾರಕ್ಕೆ ಬಂದು ಆಡಳಿತ ನಡೆಸುತ್ತಿದೆ. ಆದರೆ ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಹೇಳಿಕೆಯು ಇದೀಗ ಸಂಚಲನ ಮೂಡಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ…

Read More

ಬೆಂಗಳೂರು : ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿರುವ ಬಡವರ ಪಾಲಿನ ಆಶಾಕಿರಣವಾಗಿರುವಂತಹ ಡಾಕ್ಟರ್ ಸಿಎನ್ ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡ ಅವರು, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುತ್ತಿರುವ ನಾಡಿನ ಪ್ರಖ್ಯಾತ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮನಸಾರೆ ಶುಭ ಹಾರೈಸುತ್ತೇನೆ. ಬಡರೋಗಿಗಳ ಪಾಲಿನ ಆಶಾಕಿರಣವಾಗಿ “ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್” ಎಂಬ ಪರಿಕಲ್ಪನೆಯನ್ನಿಟ್ಟುಕೊಂಡು ಸಾವಿರಾರು ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟ ಡಾ.ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಅಂದರೆ ಅತಿಶಯೋಕ್ತಿಯಲ್ಲ. ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲದಲ್ಲಿ ಯಾವುದೇ ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಬಡವರಿಗೆ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಆರೋಗ್ಯ ಸೇವೆ ನೀಡುವ…

Read More

ಶಿವಮೊಗ್ಗ : 2024ರ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಬಿಜೆಪಿ ಗೆಲ್ಲಲಿದೆ ಎಂದು ಸಂಸದಬಿ.ವೈ.ರಾಘವೇಂದ್ರ ಭವಿಷ್ಯ ನುಡಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 2024ರ ಲೋಕಸಭಾ ಚುನಾವಣೆ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದರು. ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ನಾವು ಈ ಬಾರಿ ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿಯೂ ಕೂಡ ಒಳ್ಳೆಯ ವಾತಾವರಣವಿದೆ. ಅಭಿವೃದ್ಧಿಯ ಹಿನ್ನಲೆಯಿದೆ. ನಾವು ಮಾಡಿದ ಅಭಿವೃದ್ಧಿ ಕೆಲಸಗಳೇ ನಮ್ಮನ್ನು ಬಾರಿ ಅತ್ಯಧಿಕ ದಾಖಲೆ ರೀತಿಯ ಗೆಲ್ಲಿಸುತ್ತದೆ. ಬಿಜೆಪಿ ಸೀಟುಗಳನ್ನು ಪಡೆದು ಕೇಂದ್ರದಲ್ಲಿ ಕಾರ್ಯಕರ್ತರನ್ನು ಒಳಗೊಂಡತೆ ನಾಯಕರುಗಳೆಲ್ಲ ಸೇರಿಕೊಂಡು ಈ ಬಿಜೆಪಿ ಸರ್ಕಾರ ರಚನೆಯಾಗುತ್ತದೆ ಎಂದರು. ಲೋಕಸಭಾ ಕ್ಷೇತ್ರದ ಸಂಚಾಲಕ ಹಾಗೂ ಮಾಜಿ ಶಾಸಕ ರಘುಪತಿ ಮಾತನಾಡಿ, ಶ್ರೀರಾಮಮಂದಿರ ಪ್ರತಿಷ್ಠಾಪನೆ ಆದ ಮೇಲೆ ಜನರು ಚುನಾವಣೆಗಾಗಿಯೇ ಕಾಯುತ್ತಿದ್ದಾರೆ. ಬಿಜೆಪಿಯನ್ನು ಯಾವಾಗ ಗೆಲ್ಲಿಸುತ್ತೇವೆ ಎಂಬ ಉತ್ಸಾಹದಲ್ಲಿ ಇದ್ದಾರೆ. ಬಿಜೆಪಿ ಗೆಲ್ಲುವಿಗೆ ಸಂಕಲ್ಪ ತೊಟ್ಟಿದ್ದಾರೆ. ಇಡೀ ಜಿಲ್ಲೆಯಲ್ಲೂ ಕೂಡ ಅಭಿವೃದ್ಧಿ ಕೆಲಸ ಆಗಿದೆ ಎಂದು…

Read More

ಬೆಂಗಳೂರು : ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಬದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ಪೊಲೀಸರು ತೆರವುಗೊಳಿಸಿದ್ದರು. ಇದಕ್ಕೆ ಗ್ರಾಮಸ್ಥರು ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಈ ಬೆನ್ನಲ್ಲೆ ಧಾರ್ಮಿಕ ಧ್ವಜ ಹಾರಾಟ ವಿಚಾರ ಬೆಂಗಳೂರಿಗು ಹಬ್ಬಿದೆ. ಹೌದು ಇದೀಗ ಬೆಂಗಳೂರಿನ ಚಾವರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಜೆ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಸಿರು ಮತ್ತು ಹಳದಿ‌ ಬಣ್ಣದ ಧ್ವಜ ಹಾರಿಸಿರುವ ವಿಚಾರವಾಗಿ ಆಕ್ಷೇಪ ವ್ಯಕ್ತವಾಗಿದೆ.ಈ ಬಗ್ಗೆ ಶಶಾಂಕ್​ ಜೆಎಸ್​ ಎಂಬುವರು ಟ್ವೀಟ್ ಮಾಡಿ ಚಾವರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಜೆ ನಗರ ಪೊಲೀಸ್​ ಠಾಣೆ ಎದುರಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಹಸಿರು ಧ್ವಜ ಹಾರಿಸಲಾಗಿದೆ. ಇದಕ್ಕೆ ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಗೆ ಪ್ರಶ್ನಿಸಿದ್ದಾರೆ. ಹಾಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರಿಗೆ ಟ್ಯಾಗ್​ ಮಾಡಿದ್ದಾರೆ.…

Read More