Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಕಳೆದ ಜೂ.8 ರಂದು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಕುಟುಂಬ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರನ ದರ್ಶನ ಪಡೆದ ಬಳಿಕ ತಾಳಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ದೂರು ನೀಡಿದರೂ ಎಫ್ಐಆರ್ ದಾಖಲಿಸದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವ್ಯಕ್ತಿಯೊಬ್ಬನಿಂದ ಈ ಕುಟುಂಬದ ಅಪ್ರಾಪ್ತೆಯೊಬ್ಬಳು ಲೈಂಗಿಕ ಕಿರುಕುಳ ಹಾಗೂ ಬ್ಲ್ಯಾಕ್ ಮೇಲ್ ಗೆ ಒಳಗಾಗಿದ್ದಳು. ಆದರೆ, ಆ ಕುಟುಂಬ ಪೊಲೀಸರಿಗೆ ದೂರು ನೀಡಲು ಮುಂದಾದಾಗ ಅದನ್ನು ನಿರ್ಲಕ್ಷಿಸಿದ ಪೊಲೀಸರು ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಿರಲಿಲ್ಲ. ಅದೇ ಕಾರಣಕ್ಕೆ ಕುಟುಂಬ ಸದಸ್ಯರು ಆತ್ಮಹತ್ಯೆಗೆ ಮುಂದಾಗಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕರ್ತವ್ಯ ಲೋಪ ವಹಿಸಿದ ಆರೋಪ ಮೇರೆಗೆ ಕೆಆರ್ ನಗರ ಠಾಣೆಯ ಇನ್‌ಸ್ಪೆಕ್ಟರ್ ಪಿ ಪಿ ಸಂತೋಷ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗಿರೀಶ್ ಹಾಗೂ ಮುಖ್ಯಪೇದೆ ರಾಘವೇಂದ್ರ ಅಮಾನತು ಶಿಕ್ಷೆ ವಿಧಿಸಿದೆ. ಜಿಲ್ಲಾ ಹೆಚ್ಚುವರಿ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ A1, ಬಿ.ನಾಗೇಂದ್ರ A2, ನಿಗಮದ ಅಧ್ಯಕ್ಷ A3 ಆರೋಪಿಗಳಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರವಾದ ಆರೋಪ ಮಾಡಿದರು. ಇಂದು ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಬಿ.ನಾಗೇಂದ್ರ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರಿಗೆ ಆರ್ಥಿಕತೆಯ ಬಗ್ಗೆ ಗೊತ್ತಿದೆಯೇ? ಇಲಾಖೆಯ ಮೇಲೆ ಇವರಿಗೆ ಹಿಡಿತವಿಲ್ಲವೇ? ಈ ಹಣ ಹೈದರಾಬಾದ್‌ಗೆ ಹೋಗಿದ್ದು ತಿಳಿದರೂ ಬೇರೆಯವರ ವಿರುದ್ಧ ಕಠಿಣ ಕ್ರಮ ವಹಿಸಿಲ್ಲ. ದಲಿತರ ಹಣವನ್ನು ವಾಪಸ್ ಮಾಡದಿದ್ದರೆ ಜನರ ಶಾಪ ತಟ್ಟಲಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು. ಕಸದ…
ದಕ್ಷಿಣಕನ್ನಡ : 3ನೇ ಬಾರಿ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪದಗ್ರಹಣ ಸ್ವೀಕಾರದ ನಂತರ ಮಂಗಳೂರಿನ ಬೋಳಿಯಾರುನಲ್ಲಿ ವಿಜಯೋತ್ಸವದ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದ ಐವರು ಮುಸ್ಲಿಂ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಹೌದು ನಿನ್ನೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸಿದರು. ಈ ಒಂದು ಸಂತೋಷದ ಘಳಿಗೆಯಲ್ಲಿ ಮಂಗಳೂರಿನ ಬೋಳಿಯಾರುನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದರು ಈ ವೇಳೆ ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಚಾಕು ಇರಿದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಸ್ಲಿಂನ ಐವರನ್ನು ಬಂಧಿಸಲಾಗಿದೆ. ಬಂಧಿತರನ್ನು ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್ (35), ಸವಾದ್(18) ಹಾಗೂ ಹಫೀಝ್ (24) ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಹಲ್ಲೆಗೆ ಒಳಗಾದವರನ್ನು ಹರೀಶ್ (41) ಹಾಗೂ ನಂದಕುಮಾರ್ (24)ಎಂದು ಗುರುತಿಸಲಾಗಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ಬಾರ್‌ನ ಮುಂಭಾಗದಲ್ಲಿ ಅಳವಡಿಕೆ ಮಾಡಿದ್ದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಈ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು…
ಬೆಂಗಳೂರು :ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 40-41 ಲಕ್ಷ ರೈತರಿಗೆ ಪರಿಹಾರ ಪಾವತಿ ವಿತರಣೆ ಮಾಡಿದಂತಾಗುತ್ತೆ. 17 ಲಕ್ಷದ 9 ಸಾವಿರ ರೈತ ಕುಟುಂಬಕ್ಕೆ ಜೀವನೋಪಾಯ ಪರಿಹಾರ ನೀಡಲಿದ್ದೇವೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯ ಮದವರೊಂದಿಗೆ ಮಾತನಾಡಿದ ಅವರು, ಈ ವರ್ಷದ ಮುಂಗಾರು ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಹೀಗಾಗಿ ಮುಂದಿನ 15 ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ. ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 2800 ರೂ. ಅಥವಾ 3000 ರೂ. ಬರಬಹುದು. ಇದು ಜೀವನೋಪಾಯ ನಷ್ಟದ ಪರಿಹಾರ. ಇದು ಸಣ್ಣ, ಅತಿ ಸಣ್ಣ ರೈತರಿಗೆ ನೀಡುವ ಪರಿಹಾರವಾಗಿದೆ. 40-41 ಲಕ್ಷ ರೈತರಿಗೆ ಪರಿಹಾರ ಪಾವತಿ ವಿತರಣೆ ಮಾಡಿದಂತಾಗುತ್ತೆ. 17 ಲಕ್ಷದ 9 ಸಾವಿರ ರೈತ ಕುಟುಂಬಕ್ಕೆ ಜೀವನೋಪಾಯ ಪರಿಹಾರ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.…
ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಡಾ.ಕೆ ಸುಧಾಕರ ಗೆದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಯ ವಿಚಾರವಾಗಿ ಇದೀಗ ಏಕೆ ಪ್ರದೀಪ ಈಶ್ವರ ರಾಜೀನಾಮೆ ಕೊಡಿಸಿಲ್ಲ ಎಂದು ವ್ಯಕ್ತಿಯ ಮೇಲೆ ಡಾ.ಸುಧಾಕರ್ ಬೆಂಬಲಿಗರಿಬ್ಬರೂ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಹೌದು ನೂತನ ಸಂಸದ ಡಾ. ಸುಧಾಕರ್ ಬೆಂಬಲಿಗರ ವಿರುದ್ಧ ಇದೀಗ ಹಲ್ಲೆ ಆರೋಪ ಕೇಳಿ ಬಂದಿದ್ದು, ಬಿಯರ್ ಬಾಟಲ್ ನಿಂದ ತಿವಿದು ಕೊಲೆಗೆ ಯತ್ನಿಸಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ಘಟನೆಯು ಚಿಕ್ಕಬಳ್ಳಾಪುರ ತಾಲೂಕಿನ ಕಣಜೇನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಗೋಪಾಲ ಎಂಬುವರ ಮೇಲೆ ಚಂದ್ರಪ್ಪ ಮತ್ತು ಅರ್ಜುನ್ ಹಲ್ಲೆ ನಡೆಸಿದ್ದಾರೆ. ಪ್ರದೀಪ್ ಈಶ್ವರ್ ಕರೆಸುವಂತೆ ದಮ್ಕಿ ಹಾಕಿದ ಆರೋಪ ಕೂಡ ಕೇಳಿ ಬಂದಿದೆ. ಸಂಸದ ಡಾ. ಸುಧಾಕರ್ ಬೆಂಬಲಿಗರ ವಿರುದ್ಧ ಇದೀಗ ಹಲ್ಲೆ ಆರೋಪ ಕೇಳಿ ಬಂದಿದ್ದು, ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸೆಕ್ಷನ್ 324, 504, 506…
ಬೆಂಗಳೂರು : ಎಸ್ ಎಸ್ ಎಲ್ ಸಿ 2 ಬರೆಯುವ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಒಂದು ಇದ್ದು, ಪರೀಕ್ಷೆ 2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ಒದಗಿಸಲು ಇದೀಗ ಬಿಎಂಟಿಸಿ ಮುಂದಾಗಿದೆ. ವಿದ್ಯಾರ್ಥಿಗಳು ಬಿಎಂಟಿಸಿ ಬಸ್ ಹೌದು ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಜೂನ್ 16 ರಿಂದ 22 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗು ಉಚಿತ ಪ್ರಯಾಣ ಇರಲಿದೆ ಹಾಲ್ ಟಿಕೆಟ್ ತೋರಿಸಿ ವಿದ್ಯಾರ್ಥಿಗಳು ಉಚಿತ ಪ್ರಯಾಣ ಮಾಡಬಹುದಾಗಿದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು : ಹಾಸ್ಟೆಲ್ ರೂಮ್ನಲ್ಲಿ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಈ ದುರಂತ ನಡೆದಿದೆ. ಹೌದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯನ್ನು ಎಂಬಿಬಿಎಸ್ ವಿದ್ಯಾರ್ಥಿ ಲೋಕೇಂದ್ರನಾಥ ಕುಮಾರ್ ಸಿಂಗ್ ಎಂದು ತಿಳಿದುಬಂದಿದೆ. ಈತ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು ಹೇಳಲಾಗುತ್ತಿದ್ದು, ಮೆಡಿಕಲ್ ಕಾಲೇಜು ಹಾಸ್ಟೆಲ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಲೋಕೇಂದ್ರನಾಥ್ ಮೊದಲ ವರ್ಷದ ಎಂಬಿಬಿಎಸ್ ಓದುತ್ತಿದ್ದ. ಬೆಳಗ್ಗೆ ಪ್ರಯೋಗಾತ್ಮಕ ಪರೀಕ್ಷೆಗೆ ಲೋಕೇಂದ್ರನಾಥ ಹಾಜರಾಗಿದ್ದ ಎನ್ನಲಾಗಿದೆ. ಆದರೆ ಮಧ್ಯಾಹ್ನ ಹಾಸ್ಟೆಲ್ ರೂಮಿಗೆ ಬಂದು ಡೋರ್ ಲಾಕ್ ಮಾಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲೋಕೇಂದ್ರನಾಥ್ ಮೂಲತಃ ರಾಜಸ್ಥಾನದವನೆಂದು ಹೇಳಲಾಗುತ್ತಿದ್ದು, ಇದೀಗ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ಪೊಲೀಸ್ ಇಲಾಖೆ ನೋಡಿಯು ನೋಡದಂತೆ ಕಣ್ಣು ಮುಚ್ಚಿ ಕುಳಿತಿದೆ. ಇದೀಗ ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದು, ಮಾರಾಕಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಗೈಯಲಾಗಿದೆ. ಹೌದು ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳಿಂದ ರಾಜೇಶ್ ಎನ್ನುವ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಹನುಮಂತನಗರದ ಕಗ್ಗೀಸ ಬೇಕರಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು : ಈಗಾಗಲೇ ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು ಎಲ್ಲೆಡೆ ಮಳೆ ಆರಂಭವಾಗಿದೆ. ಈ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಚಿಕ್ಕಮಂಗಳೂರು ಮಡಿಕೇರಿ ಕೊಡಗು ಎಂದು ಆಗಮಿಸುತ್ತಾರೆ. ಅಲ್ಲದೆ ಕೆಲವರಿಗೆ ಸೆಲ್ಫಿ ಹುಚ್ಚು ಅತಿಯಾಗಿರುತ್ತದೆ. ಆದರೆ ಈ ವೇಳೆ ಅವರು ನಿರ್ಲಕ್ಷ ವಹಿಸಿ ತಮ್ಮ ಜೀವಕ್ಕೆ ತಾವೇ ಕುತ್ತು ತಂದುಕೊಳ್ಳುತ್ತಾರೆ. ಅಂತದ್ದೇ ಘಟನೆ ಇದೀಗ ಚಿಕ್ಕಮಗಳೂರಿನಲ್ಲಿ ನಡೆದಿದೆ. ಹೌದು ಇದೀಗ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ತೆಗೆದುಕೊಳ್ಳಲು ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಬ್ಬೆ ಫಾಲ್ಸ್ ನಲ್ಲಿ ಈ ದುರಂತ ಸಂಭವಿಸಿದೆ. ಹೈದರಾಬಾದ್ ಮೂಲದ ಪ್ರವಾಸಿಗ ಶ್ರವಣ್ (25) ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿ ಹಬ್ಬೆ ಫಾಲ್ಸ್ ಗೆ ಹೈದರಾಬಾದ್ನ ಇಬ್ಬರು ಯುವಕರು ಬಂದಿದ್ದರು.ಫಾಲ್ಸ್ ನಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಕಡಿಮೆ ಪ್ರಮಾಣದ ನೀರಿದ್ದ…
ರಾಯಚೂರು : ಕೂಲಿ ಕೆಲಸ ಮಾಡಿಕೊಂಡಿದ್ದ ತಾಯಿಗೆ ಅನಾರೋಗ್ಯ ಕಾಡುತ್ತಿತ್ತು. ಇದರಿಂದ ಮನನೊಂದ ತಾಯಿ ಮಗಳ ಜೊತೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಾಳಮ್ಮ (45) ಹಾಗೂ ಮಗಳು ಅಮೃತ (12) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು ಎಂದು ತಿಳಿದು ಬಂದಿದೆ.ತಾಯಿ ಮಾಳಮ್ಮ ಕೂಲಿ ಕೆಲಸ ಮಾಡಿಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಮನನೊಂದು ತನ್ನ ಜೊತೆ ಮಗಳ ಸಮೇತ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಲಿಂಗಸುಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.












