Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿಯ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಸರ್ಕಾರದಲ್ಲಿ 40 ಪರ್ಸೆಂಟ್ ಕಮಿಷನ್ ಅಲ್ಲ 60% ಕಮಿಷನ್ ದಂಧೆ ನಡೆದಿದೆ. ರಾಜೀನಾಮೆ ಕೊಡೋದು ಅಷ್ಟೇ ಅಲ್ಲ ಇವರೆಲ್ಲ ಜೈಲಿಗೆ ಹೋಗುತ್ತಾರೆ ಎಂದು ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು ವಾಲ್ಮೀಕಿ ಹಗರಣದಿಂದಲೇ ಕಾಂಗ್ರೆಸ್ ಸರ್ಕಾರ ಬಿದ್ದರೂ ಅಚ್ಚರಿಪಡಬೇಕಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ರಾಜ್ಯ ಸರ್ಕಾರಕ್ಕೆ ಉರುಳಾಗುತ್ತದೆ.ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಏಕೆಂದರೆ ಮುಖ್ಯಮಂತ್ರಿ ಅವರ ಮೂಗಿನ ನೇರದಲ್ಲಿಯೇ ಈ ಒಂದು ಹಗರಣ ನಡೆದಿದೆ. ಹಣಕಾಸು ಖಾತೆ ಅವರ ಬಳಿಯೇ ಇರುವುದರಿಂದ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿಗಳ ಗಮನಕ್ಕೆ ಇರಲಾರದೆ ಇಷ್ಟೆಲ್ಲ ಹಗರಣ ನಡೆಯುತ್ತಾ? ಈಗಾಗಲೇ ಬಿ ನಾಗೇಂದ್ರ ಅವರನ್ನು…
ಮಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಾಂಗ್ರೆಸ್ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ಕೆಲ ಕಾಂಗ್ರೆಸ್ ನಾಯಕರು ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಸೂಕ್ತ ಎಂದು ಹೇಳುತ್ತಿದ್ದರೆ, ಇನ್ನೊಂದು ಕಡೆ ಮಂಗಳೂರಿನಲ್ಲಿ ಎಂ ಎಲ್ ಸಿ ಐವನ್ ಡಿಸೋಜ ಅವರು ಯಾವುದೇ ಕಾರಣಕ್ಕು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಶೀಘ್ರದಲ್ಲಿ ಗ್ಯಾರಂಟಿ ಆಫೀಸ್ ಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಮಂಗಳೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಹೇಳಿದರು.ಗ್ಯಾರಂಟಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಗ್ಯಾರಂಟಿ ಯೋಜನೆ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ಕೊಟ್ಟಂತಹ ವಾಗ್ದಾನವಾಗಿದೆ ಎಂದರು. ಯಾರಿಗೆ ಸಿಕ್ಕಿಲ್ಲವೋ ಅವರಿಗೆ ಹುಡುಕಿಕೊಡಲು ಗ್ಯಾರಂಟಿ ಸಮಿತಿ ರಚನೆ ಮಾಡಿದೆ. ಮುಂದೆ ಗ್ಯಾರಂಟಿ ಆಫೀ ಸಹ ಓಪನ್ ಆಗುತ್ತದೆ. ಅರ್ಹರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಕಚೇರಿ ಗ್ಯಾರಂಟಿ ಆಫೀಸ್ಗೆ ಬರಬಹುದು ಮನವಿ ಸಲ್ಲಿಸಿದರೆ ತಕ್ಷಣ ಸಮಸ್ಯೆ ಪರಿಹಾರ…
ಹುಬ್ಬಳ್ಳಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿಯ ಶಾಸಕ ಮಹೇಶ್ ಟೆಂಗಿನಕಾಯಿ ಅವರು ವಾಲ್ಮೀಕಿ ಹಗರಣದಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಬಿದ್ದರೂ ಅಚ್ಚರಿ ಇಲ್ಲ ಎಂದು ಸ್ಫೋಟಕವಾದಂತ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು ವಾಲ್ಮೀಕಿ ಹಗರಣದಿಂದಲೇ ಕಾಂಗ್ರೆಸ್ ಸರ್ಕಾರ ಬಿದ್ದರೂ ಅಚ್ಚರಿಪಡಬೇಕಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ರಾಜ್ಯ ಸರ್ಕಾರಕ್ಕೆ ಉರುಳಾಗುತ್ತದೆ.ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಏಕೆಂದರೆ ಮುಖ್ಯಮಂತ್ರಿ ಅವರ ಮೂಗಿನ ನೇರದಲ್ಲಿಯೇ ಈ ಒಂದು ಹಗರಣ ನಡೆದಿದೆ. ಹಣಕಾಸು ಖಾತೆ ಅವರ ಬಳಿಯೇ ಇರುವುದರಿಂದ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಈಗಾಗಲೇ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ನೈತಿಕ ಹೊಣೆ ಮತ್ತು ಸೇವಿಸಿದರಾಮಯ್ಯ ಕೂಡ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ರಾಮನಗರ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಅತ್ಯಂತ ಪ್ರಮುಖ ಕ್ಷೇತ್ರವಾಗಿತ್ತು. ಏಕೆಂದರೆ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಡಿಕೆ ಸುರೇಶ್ ಅವರ ವಿರುದ್ಧ ಬಿಜೆಪಿಯ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಬೆಂಬಲಿಸದಿದ್ದರೆ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲಾಗುತ್ತದೆ ಎಂದು ಶಾಸಕ HCಬಾಲಕೃಷ್ಣ ಹೇಳಿಕೆ ನೀಡಿದ್ದರು. ಇದೀಗ ಅಂತಹದ್ದೇ ಶಾಕಿಂಗ್ ಹೇಳಿಕೆಯನ್ನು ಮತ್ತೆ ಪುನರುಚ್ಚಿಸಿದ್ದು, ನಿಮ್ಮ ಗ್ಯಾರಂಟಿಗಳ ಅಗತ್ಯವಿಲ್ಲ ಎಂದು ಜನ ತೀರ್ಮಾನ ಮಾಡಿದ್ದಾರೆ ಎಂದು ಅವರು ಹೇಳಿರುವುದು ಅನುಮಾನ ಸೃಷ್ಟಿಸಿದೆ.ಹೌದು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸದಿದ್ದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಈ ಹಿಂದೆ ಮಾಗಡಿ ಕಾಂಗ್ರೆಸ್ ಶಾಸಕ ಹೆಚ್ಸಿ ಬಾಲಕೃಷ್ಣ ಹೇಳಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬಾಲಕೃಷ್ಣ ಮತ್ತೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನಿಮ್ಮ ಗ್ಯಾರಂಟಿಗಳ ಅಗತ್ಯವಿಲ್ಲ ಎಂದು ಜನ ತೀರ್ಮಾನ ಮಾಡಿದ್ದಾರೆ.ಹೃದಯವಂತ, ಹೊಸ ಮುಖ ಅಂತ ಜನ ಬಿಜೆಪಿಗೆ ಓಟ್ ನೀಡಿದ್ದಾರೆ. ರಾಜಕೀಯದಲ್ಲಿ ಇಂಥ ಸೋಲಿನ ಸಾಕಷ್ಟು…
ತುಮಕೂರು : ಡಿಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಅಂತ ಒಂದು ಅಹಿಂದ ಟೀಮ್ ಯಾವಾಗಲೂ ಸಹ ಕೆಲಸ ಮಾಡುತ್ತದೆ. ಅಹಿಂದ ಟೀಮ್ ಸಿದ್ದರಾಮಯ್ಯ ಸೇರಿ ಡಿ ಕೆ ಸುರೇಶ್ ಸೋಲಿಸಿದ್ದಾರೆ ಎಂದು ತುಮಕೂರಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದರು. ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಅಂತ ಹೇಳಿದ್ದೆ. ಇವರೆಲ್ಲರೂ ಡಿಕೆ ಸುರೇಶರನ್ನು ಸೋಲಿಸುತ್ತಾರೆಂದು ಮೊದಲೇ ಹೇಳಿದ್ದೆ. ಒಂದು ತಿಂಗಳ ಹಿಂದೆ ಹೇಳಿದ್ದೆ. ಈಗ ಅದು ರಿಪೀಟ್ ಆಗಿದೆ 2 ಲಕ್ಷ ಮತಗಳ ಅಂತರದಿಂದ ಸುರೇಶರನ್ನು ಸೋಲಿಸುತ್ತಾರೆಂದು ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಡಿಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ ಇದು ಸಂಚಿನ ಒಂದು ಭಾಗ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಪೋಟಕ ಹೇಳಿಕೆ ನೀಡಿದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಂಚುರೂಪಿಸಿದ್ದಾರೆ.ಡಿಕೆ ಶಿವಕುಮಾರ್ ಅವರ ನೈತಿಕತೆ ಕುಸಿಯಬೇಕು ಅಂತ ಡಿಕೆ ಸುರೇಶ್ ಅವರನ್ನು ಸಂಚುರೂಪಿಸಿ ಸೋಲಿಸಿದ್ದಾರೆ.…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ಲ್ಲ ಅವರು ಸ್ಫೋಟಕ ವಾದಂತಹ ವಿಷಯ ಬಹಿರಂಗಗೊಳಿಸಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಸಾಕ್ಷವನ್ನು ನಾಶಪಡಿಸಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ರಾಜಿನಾಮೆಗೆ ಆಗ್ರಹಿಸುತ್ತಿದ್ದಾರೆ ಅದು ಅವರ ಧರ್ಮ. ಆದರೆ ಪ್ರಕರಣದಲ್ಲಿ ನಾನು ಯಾವುದೇ ರೀತಿಯಾದಂತಹ ಸಾಕ್ಷ ನಾಶಪಡಿಸಿಲ್ಲ.ಇದು ಕಂಪ್ಯೂಟರ್ ಯುಗ, ಎಲ್ಲವೂ ಕೂಡ ಅದರಲ್ಲೇ ಇರುತ್ತದೆ. ಹೀಗಿರುವಾಗ ನಾನು ಹೇಗೆ ಸಾಕ್ಷಿ ನಾಶಪಡಿಸುವುದಕ್ಕೆ ಆಗುತ್ತೆ. ಯಾವುದೇ ತನಿಖೆಗೂ ಕೂಡ ಸಿದ್ದನಿದ್ದೇನೆ ತನಿಖೆಗೆ ಸಹಕಾರ ನೀಡುತ್ತೇನೆ ಎಂದರು. ರಿವ್ಯೂವ್ ಸಭೆ ಮಾಡುವ ಅಧಿಕಾರ ಅಧಿಕಾರಿಗಳಿಗೆ ಇರುತ್ತದೆ. ನೀತಿ ಸಂಹಿತೆ ಇದ್ದಿದ್ದರಿಂದ ನಾನು ಯಾವುದೇ ಸಭೆ ಮಾಡಿಲ್ಲ. ಅಂತಾರಾಜ್ಯಗಳಿಗೆ ಹಣ ವರ್ಗಾವಣೆ ಆಗಿರುವ ಬಗ್ಗೆ ಮಾಹಿತಿ ಇದೆ. ಆ ಹಣವನ್ನು ವಾಪಸ್ ತರುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ.…
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಚಿಟ್ ಫಂಡ್ಸ್ ಹಣದ ವಿಚಾರವಾಗಿ ವ್ಯಕ್ತಿಯೊಬ್ಬನ ಭೀಕರ ಕೊಲೆಯಾಗಿದ್ದು, ಮನೆಯಲ್ಲಿಯೇ ವ್ಯಕ್ತಿಯನ್ನು ಕೊಲೆಗೈದು ದೇಹವನ್ನು ಕತ್ತರಿಸಿ ಮೃತ ದೇಹವನ್ನು ಪೀಸ್ ಪೀಸ್ ಮಾಡಿ ಎರಡು ಚೀಲಗಳಲ್ಲಿ ತುಂಬಿ ಮೋರಿಗೆ ಎಸೆದಿರುವ ಘಟನೆ ಬೆಂಗಳೂರಿನ ಸಂಪಿಗೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ. ಮಾರ್ಗದರ್ಶಿ ಚಿಟ್ ಫಂಡ್ ನಲ್ಲಿ ಮೃತ ಕೆವಿ ಶ್ರೀನಾಥ್(34) ಕೆಲಸ ಮಾಡುತ್ತಿದ್ದರು. ಈ ವೇಳೆ ಹಣದ ಕಂತು ಕಟ್ಟುವ ವಿಚಾರವಾಗಿ ಶ್ರೀನಾಥ್ ಹಾಗೂ ಆರೋಪಿ ಮಾಧವ್ ರಾವ್ ಇಬ್ಬರ ನಡುವೆ ವೈ ಮನಸು ಇರುತ್ತೆ. ಕಳೆದ 28ರಂದು ಮಾಧವ್ ರಾವ್ ಮನೆಗೆ ಶ್ರೀನಾಥ್ ಹೋಗಿರುತ್ತಾರೆ. ಇಬ್ಬರಿಗೂ ಜಗಳವಾಗುತ್ತದೆ. ಇಬ್ಬರ ನಡುವೆ ಜಗಳವಾದ ಅಲ್ಲಿಯೇ ಇದ್ದ ವಸ್ತು ತೆಗೆದುಕೊಂಡು ಶ್ರೀನಾಥ್ ತಲೆಗೆ ಆರೋಪಿ ಮಾಧವ್ ರಾವ್ ಹೊಡೆಯುತ್ತಾನೆ. ನಂತರ ಶ್ರೀನಾಥ್ ಮೃತ ದೇಹವನ್ನು ಮಚ್ಚಿನಿಂದ ತುಂಡು ತುಂಡು ಕತ್ತರಿಸಿ ಮಧ್ಯರಾತ್ರಿ ಶ್ರೀನಾಥ್ ಮೃತದೇಹವನ್ನು…
ಮೈಸೂರು : ರಾಜ್ಯದಲ್ಲಿ ಮತ್ತೊಂದು ಅನಿಲ ಸೋರಿಕೆ ದುರಂತ ಸಂಭವಿಸಿದ್ದು, ಮೈಸೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಯಲ್ಲಿ 50ಕ್ಕೂ ಜನರು ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಹಳೆ ಕೆಸರೆಯ ಗುಜರಿ ಗೋದಾಮಿನಲ್ಲಿ ಈ ಘಟನೆ ಸಂಭವಿಸಿದೆ. ಗುಜರಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಸ್ವಸ್ಥಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಾಟ ವಾದ ದಿನದಂದೇ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಎಂದು ಹೇಳಲಾಗುತ್ತಿದ್ದು, ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಈ ನಾಲ್ವರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಮನೆ ಮೇಲೆ ಕಲ್ಲು ಹೊಡೆದಿದ್ದಾಗಿ ತಿಳಿದುಬಂದಿದೆ. ಜೂನ್ 04ರ ರಾತ್ರಿ 10 ಗಂಟೆ 30 ನಿಮಿಷದ ಸುಮಾರಿಗೆ ಕಲ್ಲು ಎಸೆಯಲಾಗಿತ್ತು. ಘಟನೆಯಲ್ಲಿ ಮನೆಯ ಹಿಂಭಾಗದಲ್ಲಿರುವ ಬೃಹತ್ ಗಾತ್ರದ ಕಿಟಕಿಯ ಗಾಜು ಪುಡಿ ಪುಡಿಯಾಗಿತ್ತು. ಕಳೆದ ಜೂನ್ 4 ರಂದು ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್ ನಿವಾಸಕ್ಕೆ ರಾತ್ರಿ ಕಲ್ಲು ಹೊಡೆದಿದ್ದರು. ಇದರಿಂದ ಮನೆ ಕಿಟಕಿ ಗಾಜು ಪುಡಿಪುಡಿಯಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ…
ಚಿಕ್ಕಬಳ್ಳಾಪುರ : ವಿದ್ಯುತ್ ರಿಪೇರಿ ಎಂದು ಒಂದು ಊರಿನಿಂದ ಇನ್ನೊಂದು ಉರಿಗೆ ಹೋಗಿ ವಾಪಸ್ ಕಚೇರಿಗೆ ಆಗಮಿಸುವಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ. ಅದರ ರಭಸಕ್ಕೆ ಕಾರಿನಲ್ಲಿಯೇ ಮೂವರು ಮೃತಪಟ್ಟು ಇನ್ನೊಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭವಿಸಿದೆ. ಮೃತ ಸಿಬ್ಬಂದಿಗಳನ್ನು ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಎಂದು ಹೇಳಲಾಗುತ್ತಿದೆ. ಮೃತರು ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ಬೆಸ್ಕಾಂ ಕಚೇರಿಯಲ್ಲಿ ಲೈನ್ ಮ್ಯಾನ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ನಿನ್ನೆ ಮಧ್ಯರಾತ್ರಿ ವಿದ್ಯುತ್ ರಿಪೇರಿ ಎಂದು ನಗರಗೇರೆಯಿಂದ ವಾಟದಹೊಸಹಳ್ಳಿ ಗ್ರಾಮಕ್ಕೆ ಹೋಗಿ ವಾಪಸ್ ನಗರಗೇರೆಗೆ ವೇಣುಗೋಪಾಲ್ ಕಾರಿನಲ್ಲಿ ಬರುತ್ತಿದ್ದಾಗ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ, ನಾಲ್ಕು ಜನರಲ್ಲಿ ಶ್ರೀಧರ್, ವೇಣುಗೋಪಾಲ್, ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಶಿವಕುಮಾರ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮರದಲ್ಲಿ ನೇತಾಡಿ ಪ್ರಾಣ ಬಿಟ್ಟ! ಕಾರು…













