Author: kannadanewsnow05

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಸಾಕಷ್ಟು ಹಗ್ಗ ಜಗ್ಗಾಟ ನಡೆದಿತ್ತು. ಇದೀಗ ಈ ಒಂದು ಎಲ್ಲಾ ಜಟಾಪಟಿ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರನ್ನು ಭೇಟಿ ಮಾಡಿದ್ದಾರೆ. ಹೌದು ಸಾಕಷ್ಟು ಜಟಾಪಟಿ ನಡುವೆ ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರನ್ನು ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಹೀಗಾಗಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಈ ವೇಳೆ ಭೇಟಿ ಮಾಡಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ. ಮುಡಾ ಹಗರಣ ಸೇರಿದಂತೆ ಹಲವು ವಿಚಾರವಾಗಿ ರಾಜ್ಯಪಾಲರು ಹಲವು ಬಾರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ವರದಿ ಕೇಳಿದ್ದರು. ಅಲ್ಲದೆ ಕಾಂಗ್ರೆಸ್ ನಾಯಕರು ಕೂಡ ರಾಜ್ಯಪಾಲರ ಈ ಒಂದು ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು…

Read More

ಬೆಂಗಳೂರು : ರೈತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೇ ಮಹಿಳೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಶಾಸಕ ವಿನಯ್ ಕುಲಕರ್ಣಿ ಅವರು ಸಂತ್ರಸ್ತೇ ಮಹಿಳೆಯ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ. ಹೌದು  ಸಂತ್ರಸ್ತೆ ಮಹಿಳೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ವಿಚಾರವಾಗಿ ಇಂದು ವಿನಯ್ ಕುಲಕರ್ಣಿ ಅವರು, ತನ್ನ ವಿಡಿಯೋ ಹಾಗೂ ಮೊಬೈಲ್ ಸಂಭಾಷಣೆ ಪ್ರಸಾರ ಮಾಡಲು ಷಡ್ಯಂತರ ರೂಪಿಸಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಅವರು ಪ್ರತಿದೂರು ನೀಡಿದ್ದಾರೆ. ದೂರು ಆಧರಿಸಿ ಖಾಸಗಿ ಸುದ್ದಿ ವಾಹಿನಿ ಮತ್ತು ಸಂತ್ರಸ್ತೆ ವಿರುದ್ಧ ಸಂಜಯ ನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಂತ್ರಸ್ತೆ ಅನೇಕ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಿಗೆ ಬ್ಲಾಕ್ ಮೇಲ್​ ಮಾಡಿದ್ದಾಳೆ. ಸಂತ್ರಸ್ತೆ ಮೂಲಕ ನನ್ನ ವಿರುದ್ಧ ಸಂಚು ರೂಪಿಸಿ ಮಾನಹಾನಿ ಮಾಡಲಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ದೂರಿನಲ್ಲಿ…

Read More

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಶಾಸಕ ಮುನಿರತ್ನ ವಿಚಾರವಾಗಿ ನೋಟಿಸ್ ಕೊಟ್ಟಿದ್ದೇವೆ. ಎಫ್ ಎಸ್ ಎಲ್ ವರದಿ ಬಳಿಕ ಶಾಸಕ ಸ್ಥಾನದ ರಾಜೀನಾಮೆ ಪಡೆಯುತ್ತೇವೆ. ಪಕ್ಷದಿಂದಲೂ ಉಚ್ಚಾಟನೆ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಹೇಳಿಕೆ ನೀಡಿದರು. ಜಾತಿಗಣತಿ ಹೇಳಿ ಮಾಡಿಸಿದ್ದಾರೆಂದು ನಿಮ್ಮ ಪಕ್ಷದವರೇ ಹೇಳುತ್ತಿದ್ದಾರೆ. ಡಿಕೆ ಶಿವಕುಮಾರ್, ಕೆ. ಸುಧಾಕರ್, ಶಾಮನೂರು ಶಿವಶಂಕರಪ್ಪ ವಿರೋಧ ಮಾಡುತ್ತಿದ್ದಾರೆ. ಲಿಂಗಾಯತ ಸಮುದಾಯದವರು ಕೂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ನಿಮ್ಮ ಗೊಂದಲಗಳನ್ನು ಬಿಜೆಪಿಯ ಮೇಲೆ ಹಾಕಬೇಡಿ ಎಂದು ವಿಧಾನಸೌಧದಲ್ಲಿ ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಬೆಳಗಾವಿ ಸಚಿವರು ರೋಡ್ ಶೋ ಮಾಡುತ್ತಿದ್ದಾರೆ. ಉದ್ಯಮಿಗಳು ಮಾಡುವ ರೀತಿ ಸಚಿವರು ರೋಡ್ ಶೋ ಮಾಡುತ್ತಿದ್ದಾರೆ.ಕೊಡಗು, ಚಾಮರಾಜನಗರ, ಚಿಕ್ಕಮಂಗಳೂರು ಕಡೆಗೆ ರೋಡ್ ಶೋ ನಡೆಸಿದ್ದಾರೆ. ನಾನೇ ಸಿಎಂ ನಾನೇ ಸಿಎಂ ಅಂತ ಯಾರು ಹೇಳುತ್ತಿದ್ದಾರೆ? ಡಿಕೆ ಹೇಳಿಕೆಗಳಿಗೆ ಕಡಿವಾಣ ಹಾಕ್ತಿನಿ ನೋಟಿಸ್ ಕೊಡುತ್ತೇವೆ ಅಂದ್ರು.ಕಾಂಗ್ರೆಸ್ನವರ…

Read More

ಬೆಂಗಳೂರು : ಯುವಕನೊಬ್ಬ  ಇನ್ಸ್ಟಾಗ್ರಾಮ್ ನಲ್ಲಿ ಯುವತಿಯೊಂದಿಗೆ ಸ್ನೇಹ ಬೆಳೆಸಿ, ಬಳಿಕ ಪ್ರೀತಿಗೆ ತಿರುಗಿದ ನಂತರ ಮದುವೆಯಾಗುವುದಾಗಿ ನಂಬಿಸಿ  ಬಲವಂತದಿಂದ ಎರಡು ಬಾರಿ ಅತ್ಯಾಚಾರ ಮಾಡಿದ್ದು ಅಲ್ಲದೆ, ಯುವತಿ ಪ್ರೆಗ್ನೆಂಟ್ ಆದಾಗ ಗರ್ಭಪಾತ ಕೂಡ ಮಾಡಿಸಿದ್ದಾನೆ ಎಂದು ಯುವತಿಯ ದೂರಿನ ಮೇಲೆ ಇದೀಗ ಯುವಕನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಹೌದು ಛತ್ತೀಸ್​ಗಢ ಮೂಲದ ಯುವತಿ ಬೆಂಗಳೂರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. 2021ರಲ್ಲಿ ಇನ್‌ಸ್ಟಾಗ್ರಾಂನಲ್ಲಿ ಕೇರಳ ಮೂಲದ ಬಿಲಾಲ್ ರಫೀಕ್‌ ಎಂಬಾತನ ಪರಿಚಯವಾಗಿತ್ತು. ನಂತರ ಪರಸ್ಪರ ಪ್ರೀತಿಸಲಾರಂಭಿಸಿದ್ದೆವು. ಈ ಸಂದರ್ಭದಲ್ಲಿ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಬಿಲಾಲ್ ರಫೀಕ್ 2 ಬಾರಿ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳಸಿದ್ದ. ಎರಡೂ ಬಾರಿಯೂ ತಾನು ಗರ್ಭಿಣಿಯಾದಾಗ ಆತನೇ ಪುಸಲಾಯಿಸಿ ಗರ್ಭಪಾತ ಮಾಡಿಸಿದ್ದ ಎಂದು ಯುವತಿ ತಿಳಿಸಿದ್ದಾಳೆ. 2024ರಲ್ಲಿ ಆರೋಪಿಯಿಂದ 3ನೇ ಬಾರಿ ಗರ್ಭಿಣಿಯಾದಾಗ ತನ್ನ ಒತ್ತಾಯದ ಕಾರಣಕ್ಕೆ ಆರೋಪಿ ಮದುವೆಗೆ ಸಮ್ಮತಿಸಿದ್ದ. ಎರಡೂ ಕುಟುಂಬಸ್ಥರು ಮದುವೆ ಮಾಡಿಕೊಳ್ಳಲು ಒಪ್ಪಿಗೆ ನೀಡಿದ್ದರು. ಬಳಿಕ ಆರೋಪಿಯ ಪೋಷಕರು…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿ ಆಗಿದ್ದ ಮುಕ್ತಿ ರಂಜನ್ ರಾಯ್ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನ್ನ ಡೆತ್ ನೋಟ್ನಲ್ಲಿ ಮಹಾಲಕ್ಷ್ಮಿ ಕುರಿತ ಹಲವು ವಿಷಯಗಳನ್ನು ಬರೆದಿಟ್ಟು ಸೂಸೈಡ್ ಮಾಡಿಕೊಂಡಿದ್ದಾನೆ. ಹೌದು ಮುಕ್ತಿ ರಂಜನ್ ರಾಯ್ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಮಹಾಲಕ್ಷ್ಮಿ ಕುರಿತಂತೆ ಹಲವು ವಿಷಯಗಳನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೀಗ ಹಲವು ವಿಷಯಗಳು ಪೊಲೀಸರ ತನಿಖೆಯ ವೇಳೆ ಬಹಿರಂಗವಾಗಿವೆ. ಡೆತ್ ನೋಟ್ ನಲ್ಲಿ ನಾನು ಅವಳನ್ನು ಕೊಲ್ಲದಿದ್ದರೆ ನನ್ನನ್ನು ಕೊಲ್ಲುತ್ತಿದ್ದಳು ಅಂತ ಆತ್ಮಹತ್ಯೆ ಮಾಡಿಕೊಂಡ ಹಂತಕ ಮುಕ್ತಿ ರಂಜನ್ ಸಾಯುವ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದ ಮಹಾಲಕ್ಷ್ಮಿ ಕೊಲೆ ರಹಸ್ಯ ಈಗ ಬಯಲಾಗಿದೆ. ಡೆತ್ ನೋಟ್ ನಲ್ಲಿನ ರಹಸ್ಯ ಏನು? ಮಹಾಲಕ್ಷ್ಮಿ ತನ್ನನ್ನು ಕೊಲ್ಲಲು ಮುಂದಾಗಿದ್ದಳು ಮತ್ತು ದೇಹವನ್ನು ಎಸೆಯುವುದಕ್ಕೆ ಕಪ್ಪು ಸೂಟ್‌ಕೇಸ್ ಸಹ ಖರೀದಿಸಿದ್ದಳು ಎಂದು ಬರೆದಿದ್ದಾನೆ.…

Read More

ಬೀದರ್ : ಪೋಷಕರ ಜೊತೆ ಜಮೀನಿಗೆ ತೆರಳಿದ್ದಾಗ ಸಿಡಿಲು ಬಡಿದು ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮೆಹಕರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುಕೇಶ್ ಭೀಮಣ್ಣ ಮೊಳಕೆರ (16) ಎಂಬ ಬಾಲಕ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ್ದಾನೆ. ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ಮೇಹಕರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಬಾಲಕ ಮುಕೇಶ್ ಸೋಯಾಬೀನ್ ಕಟಾವಿಗೆ ತೆರಳಿದ್ದ. ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಯೊಂದನ್ನು ರಾಜ್ಯ ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. ಮಹಿಳಾ ಅಧಿಕಾರಿ, ಶಿಕ್ಷಕಿಯರು ಹಾಗೂ ಸಿಬ್ಬಂದಿಗೆ ಕಿರುಕುಳ, ಮಾನಸಿಕ ಹಿಂಸೆ, ದುರುದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಲೈಂಗಿಕ ದೌರ್ಜನ್ಯ ಮುಂತಾದ ಘಟನೆಗಳ ಪರಿಹಾರಕ್ಕೆ 9 ಮಹಿಳಾ ಅಧಿಕಾರಿಗಳ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ.ಈ ಸಮಿತಿಯು ಕಾಲಕಾಲಕ್ಕೆ ಶಿಕ್ಷಣ ಇಲಾಖೆ ಅಧೀನದ ಮಹಿಳಾ ಅಧಿಕಾರಿ, ಸಿಬ್ಬಂದಿ ಹಾಗೂ ಶಿಕ್ಷಕಿಯರ ದೂರು ಪರಿಶೀಲನೆ ನಡೆಸುತ್ತದೆ. ಅಲ್ಲದೆ ಇತ್ತೀಚಿಗೆ ಕನ್ನಡ ಚಿತ್ರರಂಗದಲ್ಲಿಯೂ ಕೂಡ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಟ ಚೇತನ ಅಹಿಂಸಾ ಸೇರಿದಂತೆ ಹಲವು ಹಿರಿಯ ನಟ ನಟಿಯರು ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇರಳ ಮಾದರಿಯಲ್ಲಿ ಹೇಮಾ ಸಮಿತಿ ರಚನೆ ಮಾಡಿ ಎಂದು…

Read More

ಬೆಂಗಳೂರು : ವಕ್ಫ್ ಯತ್ನಾಳ್ ಅಪ್ಪನ ಆಸ್ತಿ ಅಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಟ್ವೀಟರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ನಲ್ಲಿ ಜಮೀರ್ ಅಹ್ಮಡ್ ವಿರುದ್ಧ ಕಿಡಿ ಕಾರಿರುವ ಅವರು, ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ/ಕಾನೂನು ಅಸಂವಿಧಾನಿಕ ಹಾಗೂ ಕಾನೂನು ಬಾಹಿರ. ಜಮೀರ್ ಅವರೇ, ದೇಣಿಗೆ ಪಡೆದು ಇಂದು ವಕ್ಫ್ ಭಾರತದ ಮೂರನೇ ಅತಿದೊಡ್ಡ ಭೂಒಡೆಯ ಆಗಿದೆಯಾ ? ಇದನ್ನು ನಂಬುವುದಕ್ಕೆ ಸಾಧ್ಯವಿದೆಯೇ ? ವಕ್ಫ್ ನಿಂದ ಆರ್ಥಿಕ ಸಮಾನತೆ ಸಾಧ್ಯವಿದೆಯೇ ? ಅಸಲೀಗೆ, ವಕ್ಫ್ ನಂತ ಕಾಯ್ದೆ ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ಇಲ್ಲ, ಇನ್ನು ಜಾತ್ಯತೀತ ದೇಶವಾದ ಭಾರತದಲ್ಲಿ ಏಕೆ ಬೇಕು ? ರೋಷಾವೇಶದಿಂದ ಟೀಕೆ ಮಾಡುವ ಮುನ್ನ ಸತ್ಯಾಸತ್ಯತೆಯನ್ನು ಪರಾಮರ್ಶಿಸಿ. ಜಾತ್ಯತೀತ ರಾಷ್ಟ್ರದಲ್ಲಿ ವಕ್ಫ್…

Read More

ಬೆಳಗಾವಿ : ಅಕಸ್ಮಾತ್ ಈಗ ಏನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ, ಬಿಜೆಪಿ ಅನಾಯಾಸವಾಗಿ ಗೆಲ್ಲುತ್ತದೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ, ಈ ಸರ್ಕಾರದಲ್ಲಿ ನಡೆದಷ್ಟು ದೊಡ್ಟ ಹಗರಣಗಳು ಬೇರೆ ಯಾವುದೇ ಸರ್ಕಾರದಲ್ಲಿ ನಡೆದಿಲ್ಲ, ಒಂದು ವೇಳೆ ಈಗೇನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ ಬಿಜೆಪಿ ಅನಾಯಾಸವಾಗಿ ಗೆಲ್ಲಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕ ಗೆಲುವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೇಲೆ ಜನ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸದ ಪ್ರತೀಕವಾಗಿದೆ, ಮುಂಬರಲಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲೂ ಮೋದಿಯವರ ಮ್ಯಾಜಿಕ್ ನಡೆಯಲಿದ್ದು ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದರು.

Read More

ಬೆಂಗಳೂರು : ಇಂದು ರಾಜ್ಯದ ಹೆದ್ದಾರಿಗಳಲ್ಲಿನ ಚೆಕ್‍ ಪೋಸ್ಟ್‌ಗಳಲ್ಲಿ ವಾಹನಗಳ ಸವಾರರಿಂದ ಹಣ ವಸೂಲಿ ಆರೋಪದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಬೀದರ್, ಕೋಲಾರ, ಬಳ್ಳಾರಿ, ಚಿಕ್ಕೋಡಿ ಹಾಗೂ ವಿಜಯಪುರ, ಬೆಳಗಾವಿ ಆರ್‌ಟಿಓ ಚೆಕ್‍ ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದು, ಹಲವೆಡೆ ನಗದು ವಶಪಡಿಸಿಕೊಂಡಿವುದಾಗಿ ವರದಿಯಾಗಿದೆ. ಹೌದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ವೇಳೆ, ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಝಳಕಿ ಬಳಿ ಇರುವ ಆರ್‌ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 2 ಲಕ್ಷ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನು ಇನ್ನು ಬಳ್ಳಾರಿ ತಾಲೂಕಿನ ಪಿ.ಡಿ.ಹಳ್ಳಿ ಆರ್‌ಟಿಓ ಚೆಕ್‍ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಿ, ಜಿಲ್ಲೆಯ ಹಗರಿ ಚೆಕ್ ಪೋಸ್ಟ್ ನಲ್ಲಿ 45,000 ನಗದು ಪತ್ತೆ ಹಚ್ಚಿ, ನಗದು ಹಣ ಸೇರಿದಂತೆ ಹಲವು ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ.ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

Read More