Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯನಗರ : ರಾಜ್ಯದಲ್ಲಿ ಇಂದು ಮತ್ತೊಂದು ಘೋರ ದುರಂತ ನಡೆದಿದ್ದು, ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ನೀರು ಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಬಳಿ ಒಂದು ದುರಂತ ನಡೆದಿದೆ. ಹೌದು ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದ ಮೂವರು ಮಕ್ಕಳು ಕೆರೆಯಲ್ಲಿ ಈಜಲು ತೆರಳಿದ್ದಾಗ ಈ ಒಂದು ಘೋರ ದುರಂತ ಸಂಭವಿಸಿದೆ. ಗ್ರಾಮದ ಸಾಗರ್ (14) ಗುರು (14) ಹಾಗೂ ವಿನಯ್ (11) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ದಸರಾ ರಜೆ ಹಿನ್ನೆಲೆಯಲ್ಲಿ ಮಕ್ಕಳು ಕೆರೆಯಲ್ಲಿ ಈಜಲು ಹೋಗಿದ್ದರು ಖಾನಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನವದೆಹಲಿ : ತುಮಕೂರಿನ ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ತುಮಕೂರು ರೈಲು ನಿಲ್ದಾಣಕ್ಕೆ ಇಡಬೇಕು ಎಂದು ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸೋಮಣ್ಣ, 30 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿಯ ಕುರಿತಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಧಾನಿಗೆ ವಿವರಿಸಿದ್ದಾರೆ. ತುಮಕೂರು ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಕೆಲವು ವಿಶೇಷ ಪ್ರಸ್ತಾವನೆಗಳನ್ನು ಪ್ರಧಾನಮಂತ್ರಿಗಳಿಗೆ ಮಂಡಿಸಿದ್ದು, ತಮ್ಮ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ತುಮಕೂರು– ರಾಯದುರ್ಗ ಮತ್ತು ತುಮಕೂರು- ಚಿತ್ರದುರ್ಗ- ದಾವಣಗೆರೆ ರೈಲ್ವೆ ಮಾರ್ಗವನ್ನು ಜೂನ್ 2027ರಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆಯೂ ಮೋದಿ ಅವರಿಗೆ ಸೋಮಣ್ಣ ಮನವಿ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ತಮ್ಮನಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಕೊಲೆ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದರು. ಇದಕ್ಕೂ ಮುನ್ನ ಕಳೆದ ವಿಚಾರಣೆಯ ವೇಳೆ ಪೊಲೀಸರ ಹಲವು ಲೋಪಗಳನ್ನು ಎತ್ತಿ ಹಿಡಿದು ದರ್ಶನ್ ಪರ ವಕೀಲರಾದಂತಹ ಸಿವಿ ನಾಗೇಶ್ ವಾದ ಮಂಡಿಸಿದ್ದರು. ಇದಕ್ಕೆ ಪ್ರಸನ್ನ ಕುಮಾರ್ ಅವರು ಎಲ್ಲ ಪ್ರಶ್ನೆಗಳಿಗು ನಮ್ಮಲ್ಲಿ ಉತ್ತರವಿದೆ ಎಂದು ಕೊನೆಯಲ್ಲಿ ತಿಳಿಸಿದ್ದರು. ಇಂದು ಅದಕ್ಕೆ ಪ್ರತಿಯಾಗಿ ಪೊಲೀಸ್ ಪರ ವಕೀಲ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಮಾಧ್ಯಮಗಳಿಗೆ ಪೊಲೀಸರಿಂದ ಮಾಹಿತಿ ಸೋರಿಕೆಯಾಗಿಲ್ಲ. ಪ್ರತಿ ಬಾರಿ ಆರೋಪಿಗಳ ಪರ ವಕೀಲರು ಸಂದರ್ಶನ ಕೊಡುತ್ತಿದ್ದಾರೆ. ಸುದ್ದಿ ಬರಬಾರದೆನ್ನುವರು ಸಂದರ್ಶನ ಯಾಕೆ ಕೊಟ್ಟಿದ್ದು? ಮಾಧ್ಯಮಗಳ ವರದಿಯಿಂದ ಕೇಸ್ ಪೂರ್ವಾಗ್ರಹಕ್ಕೆ ಒಳಗಾಗುವುದು ಎಂಬುವುದು ಸರಿಯಲ್ಲ. ಮಾಧ್ಯಮಗಳಿಗೆ ಪೊಲೀಸರಿಂದ ಮಾಹಿತಿ ಸೋರಿಕೆಯಾಗಿಲ್ಲ ಎಂದು ವಾದಿಸಿದರು.…
ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ತೀವ್ರ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಒಂದು ಕಡೆ ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿದ್ದರೆ. ಇನ್ನೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ ಎಂದು ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ನಾವೆಲ್ಲ ಅವರ ಕೈ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಸದ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದರು. ಇನ್ನು ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ಭೇಟಿ ನೀಡಿದ ವಿಚಾರವಾಗಿ ನೀವು ಅವರನ್ನೇ ಕೇಳಿ ಎಂದು ತಿಳಿಸಿದರು.
ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಆರು ಮಂದಿಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎ ಒನ್ ಆರೋಪಿ ಆಗಿರುವ ರೆಹಮದ್ ಅಲಿಯಾಸ್ ಆಯೇಷ, ಆಕೆಯ ಪತಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ನಾಪತ್ತೆಯಾದ ಮುಮ್ತಾಜ್ ಆಲಿ ಸಹೋದರ ಹೈದರ್ ದೂರು ಆಧರಿಸಿ ನಿನ್ನೆ ಕಾವೂರು ಪೊಲೀಸ್ ಠಾಣೆಯಲ್ಲಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್ ಹಾಗೂ ಸಿರಾಜ್ ವಿರುದ್ದ ಎಫ್ಐಆರ್ ದಾಖಲಾಗಿತ್ತು. ಘಟನೆ ಬಳಿಕ ಎ ಒನ್ ಆರೋಪಿಯಾಗಿರುವ ಆಯೇಷಾ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಕೇರಳಕ್ಕೆ ಪರಾರಿಯಾಗಿದ್ದಳು. ಇದೀಗ ಕಲ್ಲಡ್ಕ ಬಳಿ ಆಯಿಷಾ, ಪತಿ ಶೋಯೆಬ್ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಮುಮ್ತಾಜ್ ಸಾವಿಗೆ ಆರು ಮಂದಿಯ ತಂಡ ನಡೆಸಿದ ಬ್ಲಾಕ್ಮೇಲ್ ಕಾರಣ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ತಮ್ಮನಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಕೊಲೆ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಪೊಲೀಸರ ಪರ ಎಸ್ಪಿಪಿ ಪ್ರಸನ್ನ ಕುಮಾರ್ ರೇಣುಕಾಸ್ವಾಮಿ ಪವಿತ್ರಗೌಡ ಮೆಸೇಜ್ ಮಾಡುತ್ತಿದ್ದಾಳೆ ಎಂದು A3 ಆರೋಪಿ ಪವನ್ ಮೆಸೇಜ್ ಗೆ ಪ್ರತ್ಯುತ್ತರ ನೀಡುತ್ತಿದ್ದ.ಪವಿತ್ರ ಗೌಡಗೆ ತನ್ನ ಮರ್ಮಾಂಗದ ಫೋಟೋ ಕಳುಹಿಸಿದಾಗ ಪವಿತ್ರಗೌಡ ಸೂಪರ್ ಎಂದಿದ್ದಾರೆ. ಆಗ ಕೊಲೆ ಮಾಡುವ ಹಂತಕ್ಕೆ ಹೋಗದೆ ಬ್ಲಾಕ್ ಮಾಡಿ ರಿಪೋರ್ಟ್ ಮಾಡಿದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದರು ಎಂದು ವಾದಿಸಿದರು. ಇದಕ್ಕೂ ಮುನ್ನ ಕಳೆದ ವಿಚಾರಣೆಯ ವೇಳೆ ಪೊಲೀಸರ ಹಲವು ಲೋಪಗಳನ್ನು ಎತ್ತಿ ಹಿಡಿದು ದರ್ಶನ್ ಪರ ವಕೀಲರಾದಂತಹ ಸಿವಿ ನಾಗೇಶ್ ವಾದ ಮಂಡಿಸಿದ್ದರು. ಇದಕ್ಕೆ ಪ್ರಸನ್ನ ಕುಮಾರ್ ಅವರು ಎಲ್ಲ ಪ್ರಶ್ನೆಗಳಲು ನಮ್ಮಲ್ಲಿ ಉತ್ತರವಿದೆ ಎಂದು ಕೊನೆಯಲ್ಲಿ ತಿಳಿಸಿದ್ದರು. ಇಂದು ಅದಕ್ಕೆ ಪ್ರತಿಯಾಗಿ ಪೊಲೀಸ್ ಪರ ವಕೀಲ ಎಸ್ಪಿಪಿ ಪ್ರಸನ್ನ…
ಗದಗ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ವಾಗ್ದಾಳಿ ಮುಂದುವರೆಸಿದ್ದು, ಬಿವೈ ವಿಜಯೇಂದ್ರ, ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡು 10 ಸಾವಿರ ಮತಗಳಿಂದ ಗೆದ್ದಿದ್ದಾನೆ ಎಂದು ಗಂಭೀರವಾದ ಆರೋಪ ಮಾಡಿದರು. ಗದಗನಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಹಿಂದುತ್ವದ ತತ್ವ ಸಿದ್ದಾಂತಗಳು ಈಗ ಇಲ್ಲ. ಈವಾಗ ಹಿಂದುತ್ವ ಬಿಟ್ಟ ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ ನಡೆಯುತ್ತಿದೆ. ಇದಕ್ಕೆ ಸರಿಯಾಗಿ ಬ್ರೇಕ್ ಹಾಕಬೇಕು, ಹಿಂದುತ್ವಕ್ಕೆ ಸರಿಯಾದ ಬೆಲೆ ಸಿಗಬೇಕು. ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗಬೇಕು ಎಂದು ಅವರು ತಿಳಿಸಿದರು. ಬಿವೈ ವಿಜಯೇಂದ್ರ ಕಾಂಗ್ರೆಸ್ ಪಕ್ಷದ ಭಿಕ್ಷೆಯಿಂದ ಶಾಸಕರಾಗಿದ್ದಿರಿ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಅದಕ್ಕೆ ಈವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಉತ್ತರ ನೀಡಿಲ್ಲ. ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು 10 ಸಾವಿರ ವೋಟ್ನಿಂದ ಗೆದ್ದರು. ಏನು ಹೊಂದಾಣಿಕೆಯಾಗಿತ್ತು ಎನ್ನುವುದನ್ನು ಡಿಕೆ ಶಿವಕುಮಾರ್ ಬಹಿರಂಗ ಮಾಡಲಿ. ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬರ್ತಾಯಿದ್ದಾರೆ. ಈ ಹೊಂದಾಣಿಕೆ ರಾಜಕಾರಣ…
ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ನಮ್ಮ ಸರಕಾರವು ಇರುತ್ತೆ ಸಿಎಂ ಆಗಿ ಸಿದ್ದರಾಮಯ್ಯ ಅವರು ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಇಂದು ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಯಾವ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರವು ಇರುತ್ತೆ. ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಹಾಗಾಗಿ ರಾಜ್ಯದಲ್ಲಿ ಯಾವ ಬದಲಾವಣೆ ಆಗುವುದಿಲ್ಲ ನಮ್ಮ ಸರ್ಕಾರ ಹಾಗೆ ಇರುತ್ತದೆ ಎಂದು ಸ್ಪಷ್ಟಪಡಿಸಿದರು. ಅದೇ ರೀತಿಯಾಗಿ ಹರಿಯಾಣದಲ್ಲಿ ಕಾಂಗ್ರೆಸ್ಸಿಗೆ ಹೀನಾಯ ಸೋಲು ಆಗಿರುವ ವಿಚಾರವಾಗಿ ಮಾತನಾಡಿದ ಅವರು, ಹರಿಯಾಣದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿರುವ ಕುರಿತು ಪರಿಶೀಲನೆ ಮಾಡುತ್ತೇವೆ. ನಾವು ಎಲ್ಲಿ ಎಡವಿದ್ದೇವೆ ಅಂತ ಪರಿಶೀಲಿಸುತ್ತೇವೆ. ಜನರು ಕೊಟ್ಟಿರುವ ತೀರ್ಪಿನ ಬಗ್ಗೆ ನಾವೆಲ್ಲರೂ ಗೌರವ ಕೊಡಲೇಬೇಕು ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಮುಡಾ ಪ್ರಕರಣ ಪ್ರಸ್ತಾಪಿಸಿದ್ದಕ್ಕೆ ಕಾಂಗ್ರೆಸ್ಗೆ ಹಿನ್ನಡೆ…
ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಬಸ್ಗೆ ಸ್ಕೂಟಿ ಒಂದು ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆಯ ಮೇಲೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದಂತಹ ಕಾರು ಮಹಿಳೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಹೌದು ಬೆಂಗಳೂರಿನ ಕೆಂಗೇರಿಯ ಉಲ್ಲಾಳ ಸಮೀಪ ಸ್ಕೂಟರ್‌ಗೆ ಬಿಎಂಟಿಸಿ ಬಸ್ ಗುದ್ದಿ ಮಹಿಳೆ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಕೆಂಗೇರಿಯ ಉಲ್ಲಾಳ ಸಮೀಪದ 100 ಅಡಿ ರಸ್ತೆಯಲ್ಲಿ ನಡೆದಿದೆ. ಸೊನ್ನೇನಹಳ್ಳಿಯ ಮಾರುತಿ ನಗರದ ನಿವಾಸಿ ಮೋನಿಕಾ (25) ಮೃತ ಮಹಿಳೆ ಎಂದು ಹೇಳಕಾಗುತ್ತಿದೆ. ಶೋರೂಂ ಒಂದರಲ್ಲಿ HR ಆಗಿ ಕೆಲಸ ಮಾಡುತ್ತಿದ್ದ ಮೋನಿಕಾ, ಇಂದು ಬೆಳಿಗ್ಗೆ ತಮ್ಮ ಸ್ಕೂಟರ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸ್ಕೂಟರ್‌ಗೆ ಮುಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ರಸ್ತೆಗೆ ಬಿದ್ದ ಮೋನಿಕಾ ಮೈಮೇಲೆ ಹಿಂಬದಿಯಿಂದ ಬರುತ್ತಿದ್ದ ಕಾರು ಹರಿದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು : ಜಾತಿ ನಿಂದನೆ ಆರೋಪ ಸಂಬಂಧ ಹಾಸ್ಯನಟ ಹುಲಿ ಕಾರ್ತಿಕ್ ವಿರುದ್ಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೆ ಹುಲಿ ಕಾರ್ತಿಕ್ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮೇಲೆ ಎಫ್ ಐ ಆರ್ ದಾಖಲಾಗಿರುವ ವಿಷಯ ತಿಳಿದು ಹುಲಿ ಕಾರ್ತಿಕ್ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು, ಯಾವುದೇ ಸಮುದಾಯವನ್ನು ಹಾಸ್ಯ ಮಾಡುವ ಉದ್ದೇಶ ಇಲ್ಲ. ಮನರಂಜನೆ ನೀಡುವ ಉದ್ದೇಶದಿಂದ ನಟನೆ ಮಾಡುತ್ತಿದ್ದೇವೆ. ಒಂದು ವೇಳೆ ಆ ರೀತಿ ನಿಮಗೆ ಕೇಳಿಸಿದ್ದಲ್ಲಿ ದಯವಿಟ್ಟು ಕ್ಷಮಿಸಿ. ಯಾರಿಗೂ ನೋವುಂಟು ಮಾಡುವ ಉದ್ದೇಶ ನಮ್ಮದಲ್ಲ ಎಂದು ಹಾಸ್ಯನಟ ಹುಲಿ ಕಾರ್ತೀಕ್ ಸ್ಪಷ್ಟನೆಯನ್ನು ನೀಡಿದ್ದಾರೆ. ನಾವು ಎಲ್ಲ ಸಮುದಾಯವನ್ನು ನಗಿಸುವ ಕೆಲಸ ಮಾಡುತ್ತೇವೆ. ಯಾವುದೇ ಸಮುದಾಯವನ್ನು ನೋವಾಗುವ ರೀತಿಯಲ್ಲಿ ಮಾತನಾಡಿಲ್ಲ. ಯಾವುದೇ ಜಾತಿ, ಧರ್ಮದ ಬಗ್ಗೆ ಹಾಸ್ಯ ಮಾಡುವುದಕ್ಕೆ ಖಾಸಗಿ ವಾಹಿನಿಯಲ್ಲಿ ಅವಕಾಶ ಇರುವುದಿಲ್ಲ. ಸೂಕ್ತವಾಗಿ ವ್ಯವಸ್ಥೆ ಇದ್ದು ಅದರಂತೆ ಸ್ಕ್ರಿಪ್ಟ್ ತಯಾರಾಗುತ್ತದೆ. ಇನ್ನು ಕಾಮಿಡಿ ಸ್ಕಿಟ್‌ನಲ್ಲಿ ನಾನು…













