Author: kannadanewsnow05

ಚಿಕ್ಕಮಗಳೂರು : ಚಿಕ್ಕಮಂಗಳೂರು ಹಾಗೂ ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಯವರು ಎರಡುವರೆ ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಹೌದು ಕೋಟ ಶ್ರೀನಿವಾಸ ಪೂಜಾರಿ ಅವರು, 7,27,393 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ ಅವರು 4,70,215 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಕಾರಿ ಅವರು 2,57,178 ಮತಗಳ ಮುನ್ನಡೆ ಸಾಧಿದ್ದಾರೆ. ಈ ಗೆಲುವಿನ ಹಿಂದೆ ಭಾರತೀಯ ಜನತಾ ಪಾರ್ಟಿ ಹಾಗೂ ಜನತಾದಳದ ನೂರಾರು ನಾಯಕರು, ಸಹಸ್ರಾರು ಕಾರ್ಯಕರ್ತರ ಶ್ರಮವಿದೆ. ಒಂದೊಂದು ಮತಕ್ಕೂ ಬೆಲೆ ಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ನನ್ನನ್ನು ಸಂಸತ್ತಿಗೆ ಆರಿಸಿದ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಮಸ್ತ ಮತದಾರರಿಗೆ ವಂದನೆಗಳು…ಎಂದು ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿದ್ದಾರೆ. https://twitter.com/KotasBJP/status/1797890863139602941?t=3mWuIEG425o5FvveFFN4mg&s=19

Read More

ನವದೆಹಲಿ : ಲೋಕಸಭೆಯ ಫಲಿತಾಂಶ ಬಹುತೇಕ ಇದೀಗ ಹೊರಬಿದ್ದಿದ್ದು, ಎನ್ ಡಿ ಎ ಸುಮಾರು 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಅಲ್ಲದೆ ಇಂಡಿಯಾ ಮೈತ್ರಿಕೂಟ ಕೂಡ 230 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಇದೀಗ ಇಂಡಿಯಾ ಹೊಸ ರಣತಂತ್ರ ಒಂದು ಹೆಣೆದಿದ್ದು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರ ಜೊತೆ ಹೇಗೆ ಮಾತುಕತೆ ನಡೆಸಿದ್ದು ಭರ್ಜರಿ ಆಫರ್ ಒಂದನ್ನು ನೀಡಿದೆ ಎಂದು ಹೇಳಲಾಗುತ್ತಿದೆ. ಹೌದು ಕಿಂಗ್ ಮೇಕರ್ ಎಂದೇ ಹೇಳಲಾಗುತ್ತಿರುವ ಚಂದ್ರಬಾಬು ನಾಯ್ಡು ಹಾಗೂ ನೀತಿಶ್ ಕುಮಾರ್ ಅವರಿಗೆ ಇಂಡಿಯಾ ಮೈತ್ರಿಕೂಟ ಭರ್ಜರಿ ಆಫರ್ ನೀಡಿದೆ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟದ ಆಫರ್ ನೀಡಿದ ಇಂಡಿಯಾ ಮೈತ್ರಿಕೂಟ, ಅಲ್ಲದೆ ಆಂಧ್ರಪ್ರದೇಶಕ್ಕೆ ಕೂಡ ವಿಶೇಷ ಸ್ಥಾನಮಾನದ ಆಫರ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ NCP ನಾಯಕ ಶರದ್ ಪವಾರ್ ಅವರು ಮಾತನಾಡಿ, ಇಂಡಿಯಾ ಮೈತ್ರಿಕೂಟ ನಾಯಕರ ಜೊತೆಗೆ ಚರ್ಚಿಸುದ್ದೇನೆ. ಹಿಂದಿ ಪ್ರಾಬಲ್ಯ ರಾಜ್ಯಗಳಲ್ಲಿ…

Read More

ಬೀದರ್ : ತಂದೆಯ ಗರಡಿಯಲ್ಲಿಯೇ ಬೆಳೆದು ಇದೀಗ ಕೇವಲ 26 ನೇ ವಯಸ್ಸಿಗೆ ಸಂಸತ್ತು ಪ್ರವೇಶಿಸಿರುವ ಬೀದರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಾಗೂ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಕಂಡ್ರೆ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಹೌದು ಸಚಿವ ಈಶ್ವರ್​ ಖಂಡ್ರೆ ಪುತ್ರ, ಸಾಗರ ಖಂಡ್ರೆ ಬೀದರ್​ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಿದ್ದಾರೆ. ಕ್ಷೇತ್ರವನ್ನು ಮರಳಿ “ಕೈ” ವಶವಾಗಿದೆ. ಸಾಗರ ಖಂಡ್ರೆ ಗೆಲವು ಸುಲಭವಾದದ್ದು ಅಲ್ಲ. ಸಾಗರ ಖಂಡ್ರೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಯ ಘಟಾನುಘಟಿ ನಾಯಕ ಕೇಂದ್ರ ಸಚಿವ ಭಗವಂತ ಖೂಬಾ ಸೋಲುಂಡಿದ್ದಾರೆ. ಲೋಕಸಭೆ ಚುನಾವಣೆ ಪ್ರಚಾರದ ವೇಳೆ ವಿಪಕ್ಷ ನಾಯಕ ಆರ್​. ಅಶೋಕ್​ ಸಾಗರ್ ಖಂಡ್ರೆ ವಿರುದ್ಧ ಸಾಗರ ಖಂಡ್ರೆ ಒಬ್ಬ ಅನುಭವ ಇಲ್ಲದ ಹುಡುಗ, ಆತ ಗೆದ್ದರೆ ಸಂಸತ್‌ಗೆ ಸ್ಕೂಲ್ ಬ್ಯಾಗ್, ಬುಕ್ ಹಿಡಿದು ಕರೆದುಕೊಂಡು ಹೋಗಲು ಒಬ್ಬರು ಬೇಕು ಎಂದು ವ್ಯಂಗ್ಯ ವಾಡಿದ್ದರು.…

Read More

ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಬಂಧನದಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿರುದ್ಧ ಹೀನಾಯವಾಗಿ ಸೋತಿದ್ದಾರೆ. ಇದೀಗ ಅವರ ವಿರುದ್ಧ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ನನ್ನು ಕಾಂಗ್ರೆಸ್ ಕಾರ್ಯಕರ್ತರು ಹೊತ್ತು ಸಂಭ್ರಮಾಚರಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಗೂ ಎನ್.ಡಿ.ಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಇದೀಗ ಫಲಿತಾಂಶ ಹೊರ ಬಿದ್ದಿದ್ದು ಶ್ರೇಯಸ್ ಪಟೇಲ್ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಮಾಜಿ ಕಾರ್ ಚಾಲಕ ಕಾರ್ತಿಕ್ ಹಾಗೂ ಪುಟ್ಟರಾಜು ಅವರೊಂದಿಗೆ ಸಂಭ್ರಮಾಚಾರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಅತ್ಯಂತ ಜಿದ್ದಾಜಿದ್ದಿನ ಕ್ಷೇತ್ರ ಎಂದರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾಗಿತ್ತು.ಇದೀಗ ಈ ಒಂದು ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು, ವೈದ್ಯರಾಗಿರುವ ಡಾ. ಸಿಎನ್ ಮಂಜುನಾಥ್ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿಕೆ ಸುರೇಶ್ ಅವರು ಹ್ಯಾಟ್ರಿಕ್ ಗೆಲುವಿನ ಬಳಿಕ ಇದೀಗ 4ನೇ ಬಾರಿ ಸೋತಿದ್ದಾರೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮಾದ್ಯಮದ ಮುಖಾಂತರ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿದರು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ಗೆಲುವು ಖಚಿತವಾಗುತ್ತಿದ್ದಂತೆಯೇ ಸುರೇಶ್ ಪ್ರತಿಕ್ರಿಯೆ ನೀಡಿ, ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರ ಜೊತೆ ನಾನು ಜೊತೆಯಾಗಿರುತ್ತೇನೆ.ಸೋಲು ಗೆಲುವನ್ನು ಸಮಾನವಾಗಿ…

Read More

ನವದೆಹಲಿ : ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಬಾರಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದರು. ಆದರೆ ನಿರೀಕ್ಷಿತ ಮಟ್ಟದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯದೇ ಇದೀಗ ನಿರಾಸೆ ಅನುಭವಿಸಿದೆ. ಈ ಒಂದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಮ್ಯಾಜಿಕ್‌ ನಂಬರ್ ರೀಚ್‌ ಆಗದ ಹಿನ್ನಲೆಯಲ್ಲಿ ಮುಂದಿನ ಸರ್ಕಾರದ ಬಗ್ಗೆ ತೀವ್ರ ಕುತೂಹಲ ಉಂಟಾಗಿದೆ. ಹೌದು ಇದರ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಟಿಡಿಪಿ ನಾಯಕ ಹಾಗೂ ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಚಂದ್ರಬಾಬು ನಾಯ್ದು ತಾವು ಎನ್‌ಡಿಎ ಭಾಗವಾಗಿಯೇ ಇರುವುದಾಗಿ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ವರದಿ ಮಾಡಿದೆ.

Read More

ಬೆಂಗಳೂರು : ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಸೇವಿಸಿ ಹತ್ತು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಬಿ ಸಿ ಎಂ ಹಾಸ್ಟೆಲ್ ನ ವಿದ್ಯಾರ್ಥಿಗಳು ಇದೀಗ ಆಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಇಂದು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಹಾಸ್ಟೆಲ್ ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಈ ಒಂದು ಹಾಸ್ಟೆಲ್ ಒಳಪಡುತ್ತದೆ. ಇವಳೇ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಊಟ ಸರಿ ಇಲ್ಲವೆಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಜ್ಞಾನಭಾರತಿ ಆವರಣದ ಮುಖ್ಯರಸ್ತೆ ತಡೆದು ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳ ಮನವೊಲಿಕೆಗೆ ಮುಂದಾಗಿದ್ದಾರೆ.ಜ್ಞಾನಭಾರತಿ ಠಾಣೆ ಪೋಲಿಸರು ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಪೊಲೀಸರ ಮನವೊಲಿಕೆಯ ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದ ನಂತರ ಸಂಚಾರ ಸಹ ಸ್ಥಿತಿಗೆ ಮರಳಿತು.

Read More

ಬೆಂಗಳೂರು : ಕೆಐಡಿಬಿಯ 360 ಎಕರೆಯ ಡಿನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರಿನ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕರಣದಿಂದ ಬಿಡುಗಡೆಗೊಳಿಸಿ ಬಿಗ್ ರಿಲೀಫ್ ನೀಡಿದೆ. ಹೌದು 2014ರ ಮಾರ್ಚ್‍ನಲ್ಲಿ, 24 ಜನರ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಐಡಿಬಿಯ 360 ಎಕರೆಯ ಡಿನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಇ.ಡಿ ಪ್ರಕರಣ ದಾಖಲಿಸಿತ್ತು. ಖಾಸಗಿ ಕಂಪೆನಿ ಮುಖಾಂತರ ಶೋಭಾ ಕರಂದ್ಲಾಜೆ ಅವರ ಖಾತೆಗೆ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಈ ಒಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 24ನೇ ಆರೋಪಿಯಾಗಿದ್ದ ಅವರು, ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಪ್ರಕರಣದಿಂದ ಬಿಡುಗಡೆಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಹ ಸೇರಿದ್ದಾರೆ. ಶೋಭಾ ಕರಂದ್ಲಾಜೆಯವರ ವಿರುದ್ಧ 44 ಕೋಟಿ ರೂ.ಗಳ ಹಗರಣದ…

Read More

ಮೈಸೂರು : ತನ್ನದಲ್ಲದ ತಪ್ಪಿಗೆ ಮನನೊಂದು ಕಳ್ಳತನ ಆರೋಪ ಹೊರೆಸಿದ್ದಾರೆಂದು  ಸೆಲ್ಫಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಹೌದು ಮೈಸೂರು ಜಿಲ್ಲೆಯ ನಂಜನಗೂಡು ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಕಲ್ಮಲಿ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡಾಗಿ ಕಾರ್ಯನಿರ್ವಹಿಸುತ್ತಿದ್ದ ನಂಜೇಶ್ ಎಂಬಾತ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾಗಿದ್ದಾನೆ. ನಂಜೇಶ್ ನಂಜನಗೂಡಿನ ಮಹದೇವ ನಗರದ ನಿವಾಸಿ ಎಂದು ಹೇಳಲಾಗುತ್ತಿದೆ. ನಂಜೇಶ್ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಕಲ್ಮಲ್ಲಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಂಜೇಶ್ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ಮಾಡುತ್ತಿದ್ದ ಫ್ಯಾಕ್ಟರಿ ಆವರಣದಲ್ಲಿ ಇದೀಗ ನೇಣಿಗೆ ಶರಣಾಗಿದ್ದಾನೆ. ಘಟನೆ ಕುರಿತಂತೆ ನಂಜನಗೂಡಿನ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೂ ಪೊಲೀಸರು ತನಿಖೆ ನಡೆಸಿದ್ದಾರೆ.

Read More

ಬೆಂಗಳೂರು : ರಾಜ್ಯಕ್ಕೆ ನೈರುತ್ಯ ಮಾನ್ಸೂನ್ ಪ್ರವೇಶಿಸಿದ್ದು, ಮುಂಗಾರು ಮಾರುತಗಳು ರಾಜ್ಯದ ಬಹುತೇಕ ಜಿಲ್ಲೆಗಳನ್ನು ಆವರಿಸಿದ್ದು ಇದೀಗ ನಿರಂತರ ಗುಡುಗು ಸಹಿತ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.ಅಲ್ಲದೆ 133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 24 ಗಂಟೆಗಳ ಕಾಲ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದೆ. ಬಹುತೇಕ ಕಡೆ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ…

Read More