Author: kannadanewsnow05

ಬೆಂಗಳೂರು : ಬಮೂಲ್ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಅವರು ಇದೀಗ ಆಯ್ಕೆಯಾಗಿದ್ದಾರೆ. ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್ ಆಯ್ಕೆಯಾಗಿದ್ದಾರೆ ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರಿಂದ ಡಿಕೆ ಸುರೇಶ್ ಆಯ್ಕೆಯಾಗಿದ್ದಾರೆ. ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸುರೇಶ್ ಇಂದು ನಾಮಪತ್ರ ಸಲ್ಲಿಸಲಿದ್ದರು. ಬೆಂಗಳೂರು ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದು, ಒಟ್ಟು 14 ನಿರ್ದೇಶಕರನ್ನು ಬಮೂಲ್ ಒಳಗೊಂಡಿದೆ.ಈ ವೇಳೆ ಬಮೂಲ್ ಕಚೇರಿಯ ಬಳಿ ಸಿಹಿ ಹಂಚಿ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ಡಿಕೆ ಸುರೇಶ್ ಅವರಿಗೆ ಹಾರ ಹಾಕಿ ಅಭಿಮಾನಿಗಳು ಸಂಭ್ರಮಿಸಿದರು.

Read More

ಬೆಂಗಳೂರು : ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಹೃದಯಸ್ಥಂಬನದಿಂದ ಅಕ್ಷಯ್ ಸಾವನಪ್ಪಿದ್ದಾನೆ. ಹೌದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬೈಕ್ ಸವಾರ ಅಕ್ಷಯ್​​ ಸದ್ಯ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಲಾಗಿದ್ದು, ತಲೆಗೆ ಶಸ್ತ್ರ ಸಹ ಮಾಡಲಾಗಿದೆ. ಆದ್ರೆ, ಅಕ್ಷಯ್ ಬ್ರೈನ್ ಡೆಡ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ದೇವರ ಮೇಲೆ ಭಾರ ಹಾಕಿ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ನಿನ್ನೆ ಅಕ್ಷಯ್ ಅವರ ತಾತ ಅಜ್ಜಿ ಮೊಮ್ಮಗ ಉಳಿಯಲಿ, ಆಯಸ್ಸು ಗಟ್ಟಿಯಾಗಲಿ ಕಣ್ಣು ಬಿಟ್ಟು ನಮ್ಮನ್ನ ನೋಡಲಿ ಎಂದು ಸೀತಾ ಸರ್ಕಲ್ ನಲ್ಲಿರೋ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಜಯ ಮೃತ್ಯುಂಜಯ ಹೋಮ ಮಾಡಿಸಿದ್ದರು. ಆದರೆ ಇಂದು ಅಕ್ಷಯ್ ಸಾವನಪ್ಪಿದ್ದಾನೆ. ಹೃದಯ ಸ್ತಂಭನದಿಂದ ಅಪೋಲೋ ಆಸ್ಪತ್ರೆಯಲ್ಲಿ ಅಕ್ಷಯ್ ಸಾವನ್ನಪ್ಪಿದ್ದಾನೆ. ಆಸ್ಪತ್ರೆಗೆ…

Read More

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಇತ್ತೀಚಿಗೆ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮತ್ತು ರಹಿಮಾನ್ ಅನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ಮಧ್ಯಪ್ರವೇಶಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ತನಿಖೆ ಆರಂಭಿಸಿದೆ. ಈ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರತಿಕ್ರಿಯಿಸಿದ್ದು, ಪೊಲೀಸರು ಕೆಲವು ಕ್ರಮ ಕೈಗೊಂಡಿದ್ದಾರೆ? ಸಣ್ಣಪುಟ್ಟ ಲೋಪ ಆಗಿರಬಹುದು. ಪೊಲೀಸರಿಗೆ ಕೆಲಸ ಮಾಡಲು ಬಿಡಬೇಕು ಅವರಿಗೆ ಯಾವುದೇ ದುರುದ್ದೇಶ ಇಲ್ಲ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರು ಯಾರನ್ನು ಸಹ ಟಾರ್ಗೆಟ್ ಮಾಡಿಲ್ಲ. ಎಲ್ಲಾದರೂ ಲೋಪಗಳು ಆಗಿದ್ದರೆ ಸರಿಪಡಿಸಿಕೊಳ್ಳುವಂತೆ ಅವರಿಗೆ ತಿಳಿಸಿದ್ದೇನೆ. ಯಾವುದೇ ಕ್ರಮ ಕಾನೂನಿನ ಪ್ರಕಾರ ಆಗಬೇಕೆ ಹೊರತು ಕಾನೂನಿನ ವಿರುದ್ಧವಾಗಿ ಆಗಬಾರದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗುಟ್ಟಹಳ್ಳಿ ಗೆಟ್ ಬಳಿ ನಡೆದಿದೆ. ಲಾರಿ ಹರಿದು ಅನಿತಾ (28) ಎನ್ನುವ ಮಹಿಳೆ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗುಟ್ಟಹಳ್ಳಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮೃತ ಅನಿತಾ ಪೂಜೆನ ಅಗ್ರಹಾರದ ನಿವಾಸಿ ಎಂದು ತಿಳಿದುಬಂದಿದೆ. ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ತಿರುಮಲಶೆಟ್ಟಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಸರಣಿ ಅಪಘಾತದಲ್ಲಿ 9 ಕಾರುಗಳು ಜಖಂ! ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರ ವಲಯದ ಚಿಕ್ಕಸಣ್ಣ ಗೇಟ್ ಬಳಿ ಸರಣಿ ಅಪಘಾತದಿಂದ 9 ಕಾರುಗಳು ಜಖಂಗೊಂಡಿವೆ. ಸಿಗ್ನಲ್ ನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ 9 ಕಾರುಗಳು ಜಖಂ ಗೊಂಡಿವೆ. ಅದೃಷ್ಟವಶಾತ್ 9…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಈ ಹಿಂದೆ ಆಪರೇಷನ್ ಕಮಲ, ಆಪರೇಷನ್ ಹಸ್ತದಂತಹ ಅನೇಕ ಘಟನೆಗಳು ನಡೆದಿವೆ. ಅಲ್ಲದೆ ಇತ್ತೀಚಿಗೆ ಕೆಲವು ರಾಜಕೀಯ ನಾಯಕರು, ಮುಖಂಡರುಗಳು ಬಿಜೆಪಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಎಲ್ಲದಕ್ಕೂ ಪ್ರಮುಖ ಕಾರಣ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪರೇಷನ್ ಹಸ್ತ ಅಂತ ರಾಜ್ಯದ ಜನತೆ ಮಾತನಾಡಿಕೊಳ್ಳುತ್ತಾರೆ. ಇದೀಗ ಎಂಎಲ್ಸಿ ಟಿ.ಎ ಶರವಣ ಅವರಿಗೂ ಡಿಕೆ ಶಿವಕುಮಾರ್ ಗಾಳ ಹಾಕಿದ್ರಾ? ಎನ್ನುವ ಪ್ರಶ್ನೆ ಉದ್ಭವಿಸಿದೆ. ಹೌದು ಜೆಡಿಎಸ್ ಎಂಎಲ್ಸಿ ಟಿ.ಎ ಶರವಣಗೆ ಡಿಸಿಎಂ ಡಿಕೆ ಗಾಳ ಹಾಕಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ. ಟಿ.ಎ ಶರವಣ ರಾಜೀನಾಮೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಮಾತನಾಡಿದ್ದು, ನೀನ್ ಯಾವಾಗಪ್ಪ ರಾಜಿನಾಮೆ ಕೊಡೋದು? ಎಂದು ಪ್ರಶ್ನಿಸಿದ್ದಾರೆ. ಕೆಡಿಪಿ ಸಭೆಗೊ ಮುನ್ನ ಶರವಣ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನೆಗೆ ಮರು ಮಾತನಾಡದೆ ಶರವಣ ಅವರು ನಕ್ಕು ಸುಮ್ಮನಾಗಿದ್ದಾರೆ ಎಂದು ಬಲ್ಲ…

Read More

ಬೆಂಗಳೂರು : ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ತೆರೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂಬ ವಿಚಾರವಾಗಿ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಎರಡು ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಅಮುಲ್ ಗೆ ಅವಕಾಶ ನೀಡಲಾಗಿದೆ. 8 ಮೆಟ್ರೋ ನಿಲ್ದಾಣಗಳಲ್ಲಿ ನಮ್ಮ ರಾಜ್ಯದ್ದೇ ಆಗಿರುವ ಕೆ.ಎಂ .ಎಫ್ ಗೆ ಟೆಂಡರ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟೆಂಡರ್ ಪ್ರಕ್ರಿಯೆಯಲ್ಲಿ ಕೆಎಂಎಫ್ ಭಾಗಿಯಾಗಿರಲಿಲ್ಲ ಹಾಗಾಗಿ ಅಮೂಲ್ ಗೆ ಅವಕಾಶ ಕಲ್ಪಿಸಲಾಗಿದೆ. ಅಷ್ಟಾಗಿಯೂ ಕೆಎಂಎಫ್ ಗೆ ಮೆಟ್ರೋ ನಿಲ್ದಾಣಗಳಲ್ಲಿ ಕಿಯಾಸ್ಕ್​ಗಳನ್ನು ಅರಂಭಿಸಲು ತಿಳಿಸಲಾಗಿದೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವ ಇರೋದ್ರಿಂದ ಅಮುಲ್ ಮಳಿಗೆಗಳನ್ನು ತೆಗೆಸುವ ಗೋಜಿಗೇನೂ ತಮ್ಮ ಸರ್ಕಾರ ಹೋಗಿಲ್ಲ ಎಂದರು. ಜಾಗತಿಕ ಟೆಂಡರ್ ಪ್ರಕ್ರಿಯೆಯಲ್ಲಿ ಕೆಎಂಎಫ್ ನ ನಂದಿನಿ ಭಾಗಿಯಾಗಿರಲಿಲ್ಲ, ಹಾಗಾಗಿ ಅಮುಲ್ ಗೆ ಮಳಿಗೆ ಓಪನ್ ಮಾಡುವ ಅವಕಾಶ ಸಿಕ್ಕಿದೆ, ಟೆಂಡರ್​​ನಲ್ಲಿ ಭಾಗಿಯಾಗುವಂತೆ ಕೆಎಂಎಫ್​ಗ ಸೂಚಿಸಲಾಗಿದೆ. ಅಮುಲ್ ಈಗಾಗಲೇ 2-3 ಸ್ಥಳಗಳಲ್ಲಿ ಮಳಿಗೆ ಶುರು ಮಾಡಿದೆ ಎಂದರು.

Read More

ಬಳ್ಳಾರಿ : ರಾಜ್ಯದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಮೂವರು ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬರದನಹಳ್ಳಿಯ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅಭಿಜ್ಞಾ (8) ಅವನಿ (6) ಆರ್ಯ (4) ಎಂಬ ಮಕ್ಕಳ ಜೊತೆಗೆ ತಾಯಿ ಸಿದ್ದಮ್ಮ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿದ ಬಳಿಕ ತಾನು ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಮೂಲದ ಸಿದ್ದಮ್ಮ ಪತಿಯ ಜೊತೆಗೆ ಕುರಿ ಮೇಯಿಸಲು ಬಂದಿದ್ದರು. ಬಳ್ಳಾರಿ ಜಿಲ್ಲೆಯ ಕುರಗೋಡು ತಾಲೂಕಿನ ಬರದನಹಳ್ಳಿಯ ರಾಘವೇಂದ್ರ ಎಂಬುವವರ ಜಮೀನಿನಲ್ಲಿ ಕುರಿ ಮಂದೆ ಹಾಕಿದ್ದರು. ನಿನ್ನೆ ಸಿದ್ದಮ್ಮ ಪತಿ ಕುಮಾರ್ ಜೊತೆಗೆ ಗಲಾಟೆ ಮಾಡಿಕೊಂಡಿದ್ದಾರೆ. ಗಲಾಟೆಯ ನಂತರ ಸಿದ್ದಮ್ಮ ತನ್ನ ಮೂವರು ಮಕ್ಕಳ ಜೊತೆ ಸೇರಿ ಕುರಿ ಮೇಯಿಸಲು ತೆರಳಿದ್ದಾಳೆ. ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಸಿದ್ದಮ್ಮ ಹಾರಿದ್ದಾಳೆ. ಸಂಜೆಯಾದರೂ ಕುರಿಗಳು ಮತ್ತು ಪತ್ನಿ ಮಕ್ಕಳು…

Read More

ಬೆಂಗಳೂರು : ಕೇವಲ ಡಿಕೆ ಡಿಕೆ ಎಂದು ಘೋಷಣೆ ಕೂಗೋದಲ್ಲ. ಮುಂದಿನ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿ ಇನ್ನೊಂದು ಚಾನ್ಸ್ ಕೊಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷವಾಗಿ ತಾವು ಮುಖ್ಯಮಂತ್ರಿ ಆಗುವ ಕನಸನ್ನು ಬಿಚ್ಚಿಟ್ಟಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಟಿಸಿಎಲ್ (KPTCL) ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ವೇಳೆ ಡಿಕೆ ಶಿವಕುಮಾರ್ ಭಾಷಣ ಮಾಡಲು ಬಂದ ಕೂಡಲೇ ವಿದ್ಯುತ್ ಇಲಾಖೆ ಸಿಬ್ಬಂದಿಗಳು, ನೌಕರರು ಡಿಕೆ ಡಿಕೆ ಅಂತ ಘೋಷಣೆ ಕೂಗಿದರು.ಈ ವೇಳೆ ಮಾತಾನಾಡಿದ ಡಿಕೆ ಶಿವಕುಮಾರ್ ಈಗ ಡಿಕೆ ಡಿಕೆ ಅನ್ನೋದು ಅಲ್ಲ. ಎಲೆಕ್ಷನ್ ‌ನಲ್ಲಿ ಇನ್ನೊಂದು ಸಾರಿ ಡಿಕೆ ಶಿವಕುಮಾರ್ ತಂದು ಕೂರಿಸಿದ ಮೇಲೆ ಈ ಘೋಷಣೆ ಕೂಗಿ ಎಂದರು. ತಾವು ಇಂಧನ ಇಲಾಖೆ ಸಚಿವನಾಗಿ ಇದ್ದಾಗ ಮಾಡಿದ ಸಾಧನೆ ಹೇಳಿದ್ರು. ನೀವು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ನನ್ನು ಮೇಲಕ್ಕೆ ಎತ್ತಬಹುದು. ಕೆಳಗೆ ಇಳಿಸಬಹುದು. ಅಷ್ಟು ಶಕ್ತಿ ನಿಮಗೆ ಇದೆ. ನಾವು ನಿಮಗೆ…

Read More

ಬೆಂಗಳೂರು : ಆರ್ ಎಸ್ ಎಸ್ ಬಜರಂಗದಳದ ವಿರುದ್ಧ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೇ ACJM ಕೋರ್ಟ್ ನಲ್ಲಿ ವಕೀಲ ಅರುಣ್ ಎಂಬುವವರು ಸಲ್ಲಿಸಿದ ಖಾಸಗಿ ದೂರು ವಿಚಾರಣೆ ನಡೆಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕೇಸ್ ಸ್ವೀಕರಿಸುವ ಮುನ್ನ ಸಿದ್ದರಾಮಯ್ಯ ವಾದ ಆಲಿಸಲು ಅವಕಾಶ ಕಲ್ಪಿಸಲಾಗಿದ್ದು, BNS ಸೆಕ್ಷನ್ 253 ಅಡಿ ಕೋರ್ಟ್ ಇದೀಗ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಅತಿ ಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್ ಎಸ್ ಎಸ್ ಮತ್ತು ಬಜರಂಗದಳದಿಂದ ಎಂದು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಖಂಡಿಸಿ, ಜನರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಅಡಿ ವಕೀಲ ಕಿರಣ್ ಎಂಬುವವರು ಕೇಸ್ ದಾಖಲಿಸಿದ್ದರು. ಜೂನ್ 26ರ ಒಳಗಾಗಿ ನೋಟಿಸ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಬೇಕಾಗಿದೆ.

Read More

ಮೈಸೂರು : ಮೈಸೂರಲ್ಲಿ ಘೋರವಾದ ಘಟನೆ ನಡೆದಿದ್ದು, ಹಾಸ್ಟೆಲ್ ನಲ್ಲಿ ಬಿ ಎಸ್ ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಟೆರೇಶಿಯನ್ ಕಾಲೇಜು ಹಾಸ್ಟೆಲ್ ನಲ್ಲಿ ಜೆ ಶಖಿನಾ (20) ಆತ್ಮಹತ್ಯೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಇಂದು 6 ನೇ ಸೆಮಿಸ್ಟರ್ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಾಗಿತ್ತು. ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ

Read More