Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿದ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಅಮಾಯಕರು ಬಲಿಯಾದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ (GBA) ಇಬ್ಬರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡ ಅಧಿಕಾರಿಗಳು: ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (EE) ಮೊಹಮ್ಮದ್ ಜಾವೇದ್ ಹಾಗೂ ವಸಂತನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ರುದ್ರಮುನಿ ಅಮಾನತುಗೊಂಡ ಅಧಿಕಾರಿಗಳು. ಮಳೆಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಲ್ಲಿ ಹಾಗೂ ದುರ್ಬಲವಾಗಿದ್ದ ಕಾಂಪೌಂಡ್ ಗೋಡೆಯ ಸುರಕ್ಷತೆಯನ್ನು ಪರಿಶೀಲಿಸುವಲ್ಲಿ ಇವರು ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಈ ಶಿಸ್ತು ಕ್ರಮ ಜರುಗಿಸಲಾಗಿದೆ. ಘಟನೆಯ ಹಿನ್ನೆಲೆ: ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆ ದಿಢೀರನೆ ಕುಸಿದು ಬಿದ್ದಿತ್ತು. ಈ ವೇಳೆ ಗೋಡೆಯ ಪಕ್ಕದಲ್ಲೇ ಆಶ್ರಯ ಪಡೆದಿದ್ದ ಹಾಗೂ…

Read More

ಬೆಳಗಾವಿ : ಸಾಲ ತೀರಿಸಲು ಅಳಿಯನ ಮನೆಗೆ ಮತ್ತೆ ಕನ್ನ ಹಾಕಿದ್ದು ಅಳಿಯನ ಮನೆಯಲ್ಲಿ ಕಳ್ಳತನ ಮಾಡಿದ ಅತ್ತೆ ಇದೀಗ ಜೈಲು ಪಾಲಾಗಿದ್ದಾರೆ. 16 ಲಕ್ಷ ಮೌಲ್ಯದ 110 ಗ್ರಾಂ ಚಿನ್ನಾಭರಣವನ್ನು ಅತ್ತೆ ಕಳ್ಳತನ ಮಾಡಿದ್ದಳು ಬೆಳಗಾವಿಯ ವಿರುಣವಾಡಿ ನಿವಾಸಿ ಉಜ್ವಲ ಎನ್ನುವ ಮಹಿಳೆಯಿಂದ ಈ ಕೃತ್ಯ ನಡೆದಿದೆ. ಸ್ನೇಹಿತರ ಮದುವೆಗೆ ಎಂದು ಬೇರೆ ಊರಿಗೆ ಹೋಗಿದ್ದ ಅಳಿಯ ಈ ವೇಳೆ ಮದುವೆ ಮುಗಿಸಿ ಬಂದ ನೋಡಿದಾಗ ಕಳ್ಳತನ ಆಗಿದ್ದು ಬೆಳಕಿಗೆ ಬಂದಿದೆ. ಈ ವೇಳೆ ಅತ್ತೆ ಉಜ್ವಲ ತನಗೇನು ಗೊತ್ತಿಲ್ಲ ಎಂದು ನಾಟಕವಾಡಿದ್ದಾಳೆ. ಪೊಲೀಸರು ವಿಚಾರಣೆ ನಡೆಸಿದಾಗ ಅತ್ತೆಯ ಕಳ್ಳಾಟ ಬಯಲಾಗಿದೆ. ಇದೀಗ ಉಜ್ವಲ ಮತ್ತು ಶಿವಣ್ಣನನ್ನು ಬಂಧಿಸಿ ಪೊಲೀಸರು ಟಿಳಕವಾಡಿ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿ ಈ ಒಂದು ಘಟನೆ ನಡೆದಿದೆ. ಇದು ಆತ್ಮಹತ್ಯೆ ಅಲ್ಲ ಕೊನೆಯಲ್ಲಿ ಗೃಹಿಣಿ ಪೋಷಕರು ಆರೋಪಸಿದ್ದು, ಪತಿಯ ಮನೆಯವರೇ ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆತ್ಮಹತ್ಯೆಗೆ ಶರಣಾದ ಗ್ರಹಿಣಿಯನ್ನು ವಂದನ ಎಂದು ತಿಳಿದುಬಂದಿದೆ. ಪತಿ ವಿಕ್ರಂ, ಮಾವ ಶ್ರೀನಿವಾಸ್ ಹಾಗೂ ಮೈದುನ ವಿನಿಶ್ ವಿರುದ್ಧ ಇದೀಗ ದೂರು ದಾಖಲಾಗಿದೆ. ಮದುವೆ ಸಮಯದಲ್ಲಿ ವಿಕ್ರಮಗೆ ಬೈಕ್ ಚಿನ್ನಾಭರಣ ಕೊಟ್ಟಿದ್ದರು. ಅದ್ದೂರಿಯಾಗಿ ಮದುವೆಯನ್ನು ಸಹ ಮಾಡಿಕೊಟ್ಟಿದ್ದರು. ಆದರೂ ವರದಕ್ಷಿಣೆಗಾಗಿ ವಿಕ್ರಂ ಪದೇ ಪದೇ ವಂದನಾಗೆ ಕಿರುಕುಳ ನೀಡುತ್ತಿದ್ದ. ಈ ವೇಳೆ ಎಲ್ಲಾ ಹಿರಿಯರು ಸೇರಿ ರಾಜಿ ಸಂಧಾನ ಮಾಡಿದರು ಕೂಡ ಪತ್ನಿಗೆ ವಿಕ್ರಂ ಕಿರುಕುಳ ನೀಡಿದ್ದಾನೆ. ಗಂಡನ ಹಣದ ಹಪಾಹಪಿಗೆ ವಂದನಾ ಬಲಿಯಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಇದೀಗ ಮರಣೋತರ ಪರೀಕ್ಷೆ ನಡೆಸಿದ ಬಳಿಕ ವಂದನಾ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

Read More

ತುಮಕೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಪತ್ನಿ ಪರಪುರುಷನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದು ಅಲ್ಲದೆ bಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಲಕೆರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು ಜೀವನ್ (10) ಪ್ರಾಣೇಶ್ (5) ಮಕ್ಕಳನ್ನು ಕೊಲೆಗೈದು ಶಿವಣ್ಣ (40) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಗಂಡು ಮಕ್ಕಳನ್ನು ಉಸಿರುಗುಟ್ಟಿಸಿ ಸಾಯಿಸಿ ಶಿವಣ್ಣ ನೇಣಿಗೆ ಶರಣಾಗಿದ್ದಾರೆ. ಪಾಲ್ಕೆರೆ ಗ್ರಾಮದ ಮಲ್ಲೇಶ್ವರ ಸ್ವಾಮಿ ದೇಗುಲದ ಅರ್ಚಕನಾಗಿದ್ದ ಶಿವಣ್ಣ. ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ ಶಿವಣ್ಣ ಪತ್ನಿ, ಪರಪುರುಷನ ಜೊತೆಗೆ ಅಕ್ರಮ ಸಂಬಂಧ ಹೊಂದಿದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಪತ್ನಿ ಆತನ ಜೊತೆಗೆ ಪರಾರಿಯಾಗಿದ್ದಾಳೆ ಮನೆಯಲ್ಲಿ ಇದ್ದ ಚಿನ್ನ ಮತ್ತು ಹಣದ ಸಮೇತ ಪತ್ನಿ ಎಸ್ಕೇಪ್ ಆಗಿದ್ದಾಳೆ ಇದರಿಂದ ಮನನೊಂದು ಮಕ್ಕಳನ್ನು ಕೊಂದು ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ.

Read More

ತುಮಕೂರು : ಕಳೆದ ಕೆಲವು ದಿನಗಳ ಹಿಂದೆ ತುಮಕೂರಲ್ಲಿ ನವಿಲುಗಳು ಸಾವನ್ನಪ್ಪಿದ್ದವು. ಇದೀಗ ಜಿಲ್ಲೆಯಲ್ಲಿ ಹಕ್ಕಿಜ್ವರದ ಭೀತಿ ಹೆಚ್ಚಾಗಿದ್ದು, 44 ನವಿಲುಗಳ ಬೆನ್ನಲ್ಲೇ ಈಗ 30 ಕೋಳಿಗಳ ಸರಣಿ ಸಾವು ವರದಿಯಾಗಿದೆ. ಮೃತ ಕೋಳಿಗಳ ಸ್ಯಾಂಪಲ್​ ಅನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ. ಜಿಲ್ಲಾಧಿಕಾರಿಗಳು ಕಲ್ಲಳ್ಳಿ ಸೇರಿದಂತೆ 5 ಗ್ರಾಮಗಳನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಿ, ಚಿಕನ್ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಕಳೆದ ಏಪ್ರಿಲ್ 16ರಿಂದ ತುಮಕೂರು ತಾಲೂಕಿನಾದ್ಯಂತ ನವಿಲುಗಳ ಸರಣಿ ಸಾವು ಆರಂಭವಾಗಿತ್ತು. ಕೇವಲ 11 ದಿನಗಳಲ್ಲಿ ಬರೋಬ್ಬರಿ 44 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ಜಿಲ್ಲೆಯಲ್ಲಿ ತಾಪಮಾನ ಏರುತ್ತಿದ್ದ ಕಾರಣ, ಅತಿಯಾದ ಶಾಖ ಮತ್ತು ನಿರ್ಜಲೀಕರಣದಿಂದ ಈ ಸಾವುಗಳು ಸಂಭವಿಸಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದರು. ಆದರೆ ನಂತರ ಬಂದ FSL ವರದಿಯಲ್ಲಿ ಹಕ್ಕಿ ಜ್ವರದ ಸೋಂಕಿನಿಂದಲೇ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ. ಇದೀಗ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಕೋಳಿ ಫಾರಂನಲ್ಲಿ ಏಕಾಕಾಲದಲ್ಲಿ ಸುಮಾರು 30 ಕೋಳಿಗಳು ಸಾವನ್ನಪ್ಪಿದ್ದು, ಈ ಘಟನೆ…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸಿಡಿಲಿಗೆ ಮತ್ತೊಂದು ಬಲಿಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕುಂಬಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಂಬಾರಹಳ್ಳಿ ಗ್ರಾಮದ ನಾರಾಯಣಸ್ವಾಮಿ (50) ಸಾವನ್ನಪ್ಪಿದ್ದಾರೆ. ಊಟ ಮುಗಿಸಿ ಆಚೆ ಮುಗಿಸಿ ಆಚೆ ವಿಶ್ರಾಂತಿ ಪಡೆಯುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದರೆ. ಮರಣೋತ್ತರ ಪರೀಕ್ಷೆಗೆ ನಾರಾಯಣಸ್ವಾಮಿ ಶವ ಜಿಲ್ಲಾಸ್ಪತ್ರೆಗೆ ರವಾನೆ ಡಿಬ್ಬುರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಾಮರಾಜನಗರ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ನಿಧಿ ಆಸೆಗಾಗಿ ಸ್ವಂತ ತಾಯಿಯನ್ನೇ ಬಲಿ ಕೊಡಲು ಪಾಪಿ ಪುತ್ರ ಯತ್ನಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹುಣ್ಣಿಮೆಯ ದಿನ ನರಬಲಿ ನೀಡಿದರೆ ನಿಧಿ ಸಿಗುವ ಆಸೆ ಹಿನ್ನೆಲೆಯಲ್ಲಿ ಪಾಪಿ ಮಗನೊಬ್ಬ 80 ವರ್ಷದ ಹೆತ್ತ ತಾಯಿಯನ್ನೇ ಬಲಿಕೊಡಲು ಮುಂದಾಗಿದ್ದಾನೆ. ಮನೆಯಲ್ಲಿಯೇ ನಾಲ್ಕು ಅಡಿ ಗುಂಡಿ ತೆಗೆದು ನಿಂಬೆಹಣ್ಣು ಇಟ್ಟು ಮಾಟ ಮಂತ್ರ ಮಾಡಿ ಅರಿಶಿಣ, ಕುಂಕುಮ, ವಿಭೂತಿ, ಕಳಶ ಇಟ್ಟು ಕ್ಷುದ್ರ ಪೂಜೆ ಮಾಡಿದ್ದಾರೆ. ಕೊಂಡಯ್ಯನ ಮಾದಶೆಟ್ಟಿ ಎಂಬ ವ್ಯಕ್ತಿಯಿಂದ ಈ ಒಂದು ಕೃತ್ಯ ನಡೆದಿದೆ. ಕಣ್ಣು ಕಾಣದೆ ಇರೋ ಕಿವಿ ಕೇಳದೆ ಇರೋ ತಾಯಿಯನ್ನು ಬಲಿಕೊಡಲು ಮುಂದಾಗಿದ್ದಾನೆ. ಇಂದು ಹುಣ್ಣಿಮೆ ಆಗಿದ್ದರಿಂದ ತಾಯನ್ನು ಬಲಿಕುಟರೆ ನಿಧಿ ಸಿಗುತ್ತದೆ ಎನ್ನುವ ಆಸೆಗಾಗಿ ಹೆತ್ತಿರುವ ತಾಯನೇ ಬಲಿಕೊಡುವುದಕ್ಕೆ ಈ ರೀತಿ ಮಾಟ ಮಂತ್ರ ಮಾಡಿ ಬಲಿಕೊಡಲು ಮುಂದಾಗಿದ್ದಾನೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಹೆಣ್ಣೂರು ಮತ್ತು ಬಾಗಲೂರು ಮುಖ್ಯ ರಸ್ತೆಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಅಂಗಡಿಗೆ ಹೋಗಿ ಮನೆಗೆ ವಾಪಸ್ ಬರುವಾಗ ಈ ಒಂದು ಅಪಘಾತ ಸಂಭವಿಸಿದೆ. 15 ವರ್ಷದ ಬಾಲಕ ವರುಣ್ ಎಂಬಾತ ದಾರುಣವಾಗಿ ಸಾವನಪ್ಪಿದ್ದಾನೆ. ಇಂದು ಬೆಳಿಗ್ಗೆ 9 ಗಂಟೆಗೆ ಅರುಣ್ ಅಂಗಡಿಗೆ ಎಂದು ಹೋಗಿದ್ದ ಬಳಿಕ ಮನೆಗೆ ಬರುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ನಡೆಯುತ್ತಿತ್ತುವಾಗ ಖಾಸಗಿ ಬಸ್ ಒಂದು ವೇಗವಾಗಿ ಬಂದು ವರುಣನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಆತ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಚಂಡೀಗಢ: ಪಂಜಾಬ್ ವಿಧಾನಸಭೆಯಲ್ಲಿ ಕಾರ್ಮಿಕ ದಿನಾಚರಣೆಯ ವಿಶೇಷ ಅಧಿವೇಶನದ ವೇಳೆ ಮುಖ್ಯಮಂತ್ರಿ ಭಗವಂತ್ ಮಾನ್ ಕುಡಿದ ಮತ್ತಿನಲ್ಲಿ ಸದನಕ್ಕೆ ಹಾಜರಾಗಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಮುಖ್ಯಮಂತ್ರಿ ಮದ್ಯದ ಅಮಲಿನಲ್ಲಿ ವಿಧಾನಸಭೆಗೆ ಬಂದಿದ್ದಾರೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಹೇಳಿಕೊಂಡ ನಂತರ ವಿವಾದ ಭುಗಿಲೆದ್ದಿತು. ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ ಅವರು ಎಲ್ಲಾ ಶಾಸಕರು ಆಲ್ಕೋಹಾಲ್ ಮೀಟರ್ ಪರೀಕ್ಷೆಗೆ ಒಳಗಾಗಬೇಕೆಂದು ಒತ್ತಾಯಿಸಿದ್ದಾರೆ. ಘಟನೆಯ ಹಿನ್ನೆಲೆ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ನಡೆದ ವಿಶೇಷ ಅಧಿವೇಶನದ ವೇಳೆ, ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮದ್ಯ ಸೇವಿಸಿ ಸದನಕ್ಕೆ ಬಂದಿದ್ದಾರೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಈ ಆರೋಪವು ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಯಿತು. ಪ್ರತಿಪಕ್ಷಗಳ ವಾದ ಮತ್ತು ಒತ್ತಾಯ ಕಾಂಗ್ರೆಸ್ ಆರೋಪ: ಮುಖ್ಯಮಂತ್ರಿಗಳು ಮದ್ಯದ ಅಮಲಿನಲ್ಲಿರುವುದನ್ನು ತಾನು ಗಮನಿಸಿದ್ದೇನೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಪ್ರತಾಪ್ ಸಿಂಗ್ ಬಜ್ವಾ ಆಗ್ರಹ: ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ ಅವರು…

Read More

ಮೈಸೂರು : ಮೈಸೂರು ಜಿಲ್ಲೆಯ ಟಿ ನರಸೀಪುರದ ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ ವಿಷ ಕೊಟ್ಟು ಕೊಲೆಗೆ ಯತ್ನಿಸಿದ್ದರು. ಈಗ ಮತ್ತೊಬ್ಬ ಯುವತಿ ಜೊತೆ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾಳೆ.ಈ ಸಂಬಂಧ ಮದನ್ ರಾಜ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹುಡುಕಾಟ ನಡೆಸುತ್ತಿದ್ದಾರೆ.

Read More