Author: kannadanewsnow05

ಬೆಂಗಳೂರು : ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು, ದಾಳಿ ಮಾಡಿ ಲಂಚಬಾಕ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ. ಆದರೆ ಲೋಕಾಯುಕ್ತ ಅಧಿಕಾರಿಗಳೇ ಇಂತಹ ಭ್ರಷ್ಟಾಚಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಮುಖ ಆರೋಪಿ ಆಗಿರುವ ಶ್ರೀನಾಥ್ ಜೋಶಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ. ಹೌದು ಲೋಕಾಯುಕ್ತ ಪೊಲೀಸರ ದಾಳಿ ಬೆದರಿಕಯೋಡ್ಡಿ ಅಧಿಕಾರಿಗಳಿಂದ ಹಣ ಹೊಸೂಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀನಾಥ್ ಜೋಶಿ ವಿರುದ್ಧದ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ. ವಿಚಾರಣೆಯನ್ನು ಹೈಕೋರ್ಟ್ ಜೂನ್ 30ಕ್ಕೆ ನಿಗದಿಪಡಿಸಿದೆ. ಶ್ರೀನಾಥ್ ಜೋಶಿ ಲೋಕಾಯುಕ್ತ ಪೊಲೀಸರ ನೋಟಿಸ್ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀನಾಥ್ ಜೋಶಿ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.

Read More

ಮೈಸೂರು : ಇಂದು ಮೈಸೂರು ಊರಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ತಾಲೂಕಿನ ನಾಗನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರಸನ್ನ (64) ಎಂದು ಗುರುತಿಸಲಾಗಿದೆ. ಕುಕ್ಕೆ ಸುಬ್ರಮಣ್ಯ ಮಠದ ನಿಕಟವರ್ತಿಯಾಗಿದ್ದ ಪ್ರಸನ್ನ ಮೈಸೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳುವಾಗ ಈ ಒಂದು ದುರಂತ ಸಂಭವಿಸಿದೆ. ಪೊಲೀಸರು ಸದ್ಯ ಪ್ರಸನ್ನ ಅವರ ಮೃತದೇಹವನ್ನು ಕೆ.ಆರ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ ಘಟನೆ ಕುರಿತು ಮೈಸೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಖಾಸಗಿ ಅಪಾರ್ಟ್ಮೆಂಟ್ನ ಇಂಗು ಗುಂಡಿಯಲ್ಲಿ ಅಸ್ತಿ ಪಂಜರ ಪತ್ತೆಯಾಗಿದ್ದು ಬೆಂಗಳೂರಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದೆ ಎರಡು ದಿನದ ಹಿಂದೆ ನಾಲ್ಕೈದು ಅಸ್ತಿ ಪಂಜರದ ಅವಶೇಷಗಳು ಪತ್ತೆಯಾಗಿವೆ. ಇದರಿಂದ ಸಹಜವಾಗಿ ಅಪಾರ್ಟ್ಮೆಂಟ್ನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಹೌದು ಬೆಂಗಳೂರಿನ ಬೇಗೂರಿನಲ್ಲಿ ಇರುವ ಅಪಾರ್ಟ್​​ಮೆಂಟ್​​ವೊಂದರಲ್ಲಿ ಒಳಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರ, ಮೂಳೆ ಸೇರಿದಂತೆ ಹಲವು ಭಾಗಗಳು ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಆಗ್ನೇಯ ಬೆಂಗಳೂರಿನ ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ನಡೆದಿದೆ. ಶೌಚಗುಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರಿಗೆ ಇವೆಲ್ಲಾ ಸಿಕ್ಕಿದ್ದು, ಅವರು ಒಮ್ಮೆ ಶಾಕ್​ಗೆ ಒಳಗಾಗಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣ ಸಂಬಂಧ ಪೂರ್ವ ವಿಭಾಗದ ಜಂಟಿ ಆಯುಕ್ತ ರಮೇಶ್ ಬಾನೋತ್ ಪ್ರತಿಕ್ರಿಯೆ ನೀಡಿದ್ದು, ಅಪಾರ್ಟ್ಮೆಂಟಿನ ಇಂಗು ಗುಂಡಿಯಲ್ಲಿ ಪಳೆಯುಳಿಕೆ ಸಿಕ್ಕಿದೆ. ಮೇಲ್ನೋಟಕ್ಕೆ ಇದು ಪುರುಷರ ಅಸ್ತಿಪಂಜರದ ರೀತಿ ಕಾಣಿಸುತ್ತಿದೆ. ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ…

Read More

ಚಿಕ್ಕಬಳ್ಳಾಪುರ : ಇಂದು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಬೇಕಿತ್ತು ಆದರೆ ಕಾರಣಾಂತರಗಳಿಂದ ಈ ಒಂದು ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿತ್ತು. ಇದೀಗ ಜುಲೈ 3ರಂದು ಮತ್ತೆ ನಂದಿ ಬೆಟ್ಟದಲ್ಲಿ ರಾಜ್ಯಸಭೆ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಇದೀಗ ತೀರ್ಮಾನಿಸಿದೆ. ಹೌದು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಬೆಟ್ಟದಲ್ಲಿ ಜುಲೈ 3ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಇದೀಗ ನಿರ್ಧರಿಸಿದೆ. ಇಂದು ನಂದಿ ಬೆಟ್ಟದಲ್ಲಿ ನಿಗದಿಯಾಗಿದ್ದ ಸಂಪುಟ ಸಭೆ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇದೀಗ ಜುಲೈ 3ರಂದು ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

Read More

ಬೆಂಗಳೂರು : ಈಗಾಗಲೇ ಮುಸ್ಲಿಮರಿಗೆ ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೆ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದ್ದು ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 10ರಷ್ಟು ಇದ್ದಂತಹ ಮೀಸಲಾತಿಯನ್ನು ಶೇಕಡ 15ಕ್ಕೆ ಹೆಚ್ಚಳ ಮಾಡಿ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೌದು ಮತ್ತೆ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ. ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲೂ ಈ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ್ದು. ಹಾಗಾಗಿ ವಸತಿ ಯೋಜನೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ಖಚಿತ ಸಚಿವ ಸಂಪುಟ ಅನುಮೋದನೆ ನೀಡಿದೆ.

Read More

ಧಾರವಾಡ : ಇಂದು ಧಾರವಾಡದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಆಟ ಆಡುತ್ತಿರುವಾಗಲೇ ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಮಕ್ಕಳನ್ನು ಮುದಸ್ಸೀರ್ ಮತ್ತು ಮುಜಮ್ಮಿಲ್ ಎಂದು ಗುರುತಿಸಲಾಗಿದೆ. ಇಂದು ಇಬ್ಬರೂ ಮಕ್ಕಳು ಮನೆಯ ಸಮೀಪದಲ್ಲಿದ್ದ ಕೆರೆಯ ಬಳಿ ಆಟವಾಡಲು ತೆರಳಿದ್ದಾರೆ. ಈ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಕರೆಯಲ್ಲಿ ಮುಳುಗಿ ಅವಳಿ ಮಕ್ಕಳು ಸಾವನ್ನಪ್ಪಿದ್ದಾರೆ. ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Read More

ಬೆಂಗಳೂರು : ಈಗಾಗಲೇ ಮುಸ್ಲಿಮರಿಗೆ ರಾಜ್ಯ ಸರ್ಕಾರ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೆ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದ್ದು ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 10ರಷ್ಟು ಇದ್ದಂತಹ ಮೀಸಲಾತಿಯನ್ನು ಶೇಕಡ 15ಕ್ಕೆ ಏರಿಸುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹೌದು ಮತ್ತೆ ಮುಸ್ಲಿಂ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ. ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲೂ ಈ ವಿಷಯದ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ವಸತಿ ಮೀಸಲಾತಿ ಹೆಚ್ಚಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತಮ್ಮ ಸಮುದಾಯಕ್ಕೆ ವಸತಿ ಯೋಜನೆ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಜಮೀರ್ ಅಹ್ಮದ್ ಪ್ರಸ್ತಾಪಿಸುವ ಸಾಧ್ಯತೆ ಇದೆ. ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 10 ರಷ್ಟು ಮೀಸಲಾತಿ ಇದೆ. ಈ…

Read More

ಬೆಂಗಳೂರು : ಬಮೂಲ್ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಅವರು ಇದೀಗ ಆಯ್ಕೆಯಾಗಿದ್ದಾರೆ. ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್ ಆಯ್ಕೆಯಾಗಿದ್ದಾರೆ ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರಿಂದ ಡಿಕೆ ಸುರೇಶ್ ಆಯ್ಕೆಯಾಗಿದ್ದಾರೆ. ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸುರೇಶ್ ಇಂದು ನಾಮಪತ್ರ ಸಲ್ಲಿಸಲಿದ್ದರು. ಬೆಂಗಳೂರು ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದು, ಒಟ್ಟು 14 ನಿರ್ದೇಶಕರನ್ನು ಬಮೂಲ್ ಒಳಗೊಂಡಿದೆ.ಈ ವೇಳೆ ಬಮೂಲ್ ಕಚೇರಿಯ ಬಳಿ ಸಿಹಿ ಹಂಚಿ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ಡಿಕೆ ಸುರೇಶ್ ಅವರಿಗೆ ಹಾರ ಹಾಕಿ ಅಭಿಮಾನಿಗಳು ಸಂಭ್ರಮಿಸಿದರು.

Read More

ಬೆಂಗಳೂರು : ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಹೃದಯಸ್ಥಂಬನದಿಂದ ಅಕ್ಷಯ್ ಸಾವನಪ್ಪಿದ್ದಾನೆ. ಹೌದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬೈಕ್ ಸವಾರ ಅಕ್ಷಯ್​​ ಸದ್ಯ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಲಾಗಿದ್ದು, ತಲೆಗೆ ಶಸ್ತ್ರ ಸಹ ಮಾಡಲಾಗಿದೆ. ಆದ್ರೆ, ಅಕ್ಷಯ್ ಬ್ರೈನ್ ಡೆಡ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ದೇವರ ಮೇಲೆ ಭಾರ ಹಾಕಿ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ನಿನ್ನೆ ಅಕ್ಷಯ್ ಅವರ ತಾತ ಅಜ್ಜಿ ಮೊಮ್ಮಗ ಉಳಿಯಲಿ, ಆಯಸ್ಸು ಗಟ್ಟಿಯಾಗಲಿ ಕಣ್ಣು ಬಿಟ್ಟು ನಮ್ಮನ್ನ ನೋಡಲಿ ಎಂದು ಸೀತಾ ಸರ್ಕಲ್ ನಲ್ಲಿರೋ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಜಯ ಮೃತ್ಯುಂಜಯ ಹೋಮ ಮಾಡಿಸಿದ್ದರು. ಆದರೆ ಇಂದು ಅಕ್ಷಯ್ ಸಾವನಪ್ಪಿದ್ದಾನೆ. ಹೃದಯ ಸ್ತಂಭನದಿಂದ ಅಪೋಲೋ ಆಸ್ಪತ್ರೆಯಲ್ಲಿ ಅಕ್ಷಯ್ ಸಾವನ್ನಪ್ಪಿದ್ದಾನೆ. ಆಸ್ಪತ್ರೆಗೆ…

Read More

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಇತ್ತೀಚಿಗೆ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮತ್ತು ರಹಿಮಾನ್ ಅನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ಮಧ್ಯಪ್ರವೇಶಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ತನಿಖೆ ಆರಂಭಿಸಿದೆ. ಈ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರತಿಕ್ರಿಯಿಸಿದ್ದು, ಪೊಲೀಸರು ಕೆಲವು ಕ್ರಮ ಕೈಗೊಂಡಿದ್ದಾರೆ? ಸಣ್ಣಪುಟ್ಟ ಲೋಪ ಆಗಿರಬಹುದು. ಪೊಲೀಸರಿಗೆ ಕೆಲಸ ಮಾಡಲು ಬಿಡಬೇಕು ಅವರಿಗೆ ಯಾವುದೇ ದುರುದ್ದೇಶ ಇಲ್ಲ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರು ಯಾರನ್ನು ಸಹ ಟಾರ್ಗೆಟ್ ಮಾಡಿಲ್ಲ. ಎಲ್ಲಾದರೂ ಲೋಪಗಳು ಆಗಿದ್ದರೆ ಸರಿಪಡಿಸಿಕೊಳ್ಳುವಂತೆ ಅವರಿಗೆ ತಿಳಿಸಿದ್ದೇನೆ. ಯಾವುದೇ ಕ್ರಮ ಕಾನೂನಿನ ಪ್ರಕಾರ ಆಗಬೇಕೆ ಹೊರತು ಕಾನೂನಿನ ವಿರುದ್ಧವಾಗಿ ಆಗಬಾರದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.

Read More