Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಭಾರಿ ಪೈಪೋಟಿ ನಡೆಯುತ್ತಿದ್ದು ಒಂದು ಕಡೆ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಮತ್ತೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರ ಜೊತೆ ಈ ವಿಚಾರವಾಗಿ ಚರ್ಚಿಸುತ್ತಿದ್ದಾರೆ. ಇದೀಗ ಇನ್ನೊಂದು ಕಡೆಗೆ ಸಿಎಂ ಸಿದ್ದರಾಮಯ್ಯ ಅವರು ಕಟ್ಟಿದ ಕೈಗಡಿಯಾರ ಕೆಟ್ಟು ನಿಂತಿತ್ತು . ಈ ವೇಳೆ ಜೆಸಿ ಜಯಚಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ ಗಡಿಯಾರ ಪಡೆದುಕೊಂಡು ರಿಸೆಟ್ ಮಾಡಿಕೊಟ್ಟಿದ್ದಾರೆ. ರಾಜಕೀಯ ಬೆಳವಣಿಗೆ ಮಧ್ಯ ಈ ಒಂದು ಘಟನೆ ಗಮನ ಸೆಳೆದಿದೆ. ಹೈಕಮಾಂಡ್ ಮಟ್ಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರ ಬೆಂಬಲಿಗರು ದೆಹಲಿಯಲ್ಲಿ ಬೀಡುಬಿಟ್ಟಿರುವುದು ಅಧಿಕಾರ ಹಂಚಿಕೆಯ ಕುರಿತಾದ ಚರ್ಚೆ ತೀವ್ರಗೊಂಡಿರುವುದನ್ನು ಸೂಚಿಸುತ್ತದೆ. ಗಡಿಯಾರ ರಿಸೆಟ್ ಮಾಡಿದ ಜಯಚಂದ್ರ: ಸಿಎಂ ಅವರ ಗಡಿಯಾರ ಕೆಟ್ಟು ನಿಂತಾಗ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರು ಅದನ್ನು ಸರಿಪಡಿಸಿಕೊಟ್ಟಿದ್ದಾರೆ. ಸಾಂಕೇತಿಕ ಅರ್ಥ: ರಾಜಕೀಯ…

Read More

ಚಾಮರಾಜನಗರ : ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಸಾರಿಗೆ ಬಸ್ ಕೊಳ್ಳೇಗಾಲಕ್ಕೆ ಬರುತ್ತಿತ್ತು ತಾಳಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿ ಇದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಬಸ್ ಪಾರ್ಟಿ ಆದ ಹಿನ್ನೆಲೆಯಲ್ಲಿ ಕಿಲೋಮೀಟರ್ ಘಟನೆ ಸಂಚಾರ ಘಟನೆ ಯಾಗಿದ್ದು ಸವಾರರು ಪರದಾಟ ನಡೆಸುತ್ತಿದ್ದಾರೆ.

Read More

ನವದೆಹಲಿ : ವಿಮಾನ ಪ್ರಯಾಣಿಕರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಈಗಾಗಲೇ ದುಬಾರಿ ಎನಿಸಿರುವ ಅಂತರಾಷ್ಟ್ರೀಯ ವಿಮಾನ ಪ್ರಯಾಣದ ದರಗಳು ಈಗ ಮತ್ತಷ್ಟು ಏರಿಕೆಯಾಗಿದ್ದು, ವಿಮಾನಗಳು ಬಳಸುವ ಇಂಧನದ ಶೇ. 5ರಷ್ಟು ಏರಿಕೆ ಹಿನ್ನೆಲೆಯಲ್ಲಿ ಭಾರತದಲ್ಲಿ ಅಂತರಾಷ್ಟ್ರೀಯ ವಿಮಾನಯಾನ ದರದಲ್ಲಿ ಇದೀಗ ಮತ್ತೆ ಹೆಚ್ಚಳ ಆಗಿದೆ. ಇಂಧನ ದರ ಏರಿಕೆಯೇ ಪ್ರಮುಖ ಕಾರಣ ವಿಮಾನಗಳು ಬಳಸುವ ಇಂಧನ ಅಂದರೆ ಎಟಿಎಫ್ (Aviation Turbine Fuel) ಬೆಲೆಯಲ್ಲಿ ಶೇ. 5ರಷ್ಟು ಏರಿಕೆಯಾಗಿರುವುದೇ ಈ ಬೆಲೆ ಏರಿಕೆಗೆ ಮೂಲ ಕಾರಣವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಏರಿಳಿತಗಳು ನೇರವಾಗಿ ವಿಮಾನಯಾನ ಸಂಸ್ಥೆಗಳ ಕಾರ್ಯಚರಣೆಯ ವೆಚ್ಚದ ಮೇಲೆ ಪರಿಣಾಮ ಬೀರಿದ್ದು, ಅನಿವಾರ್ಯವಾಗಿ ಆ ಹೊರೆಯನ್ನು ಪ್ರಯಾಣಿಕರ ಮೇಲೆ ವರ್ಗಾಯಿಸಲಾಗುತ್ತಿದೆ. ಯಾವ ದೇಶಗಳಿಗೆ ದರ ಏರಿಕೆ? ಭಾರತದಿಂದ ಅಮೆರಿಕ, ಯುರೋಪ್ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಟಿಕೆಟ್ ದರಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ಪ್ರಮುಖವಾಗಿ ಲಂಡನ್, ದುಬೈ, ಸಿಂಗಾಪುರ ಮತ್ತು ಅಮೆರಿಕದ ಪ್ರಮುಖ ನಗರಗಳಿಗೆ ಸಂಚರಿಸುವ…

Read More

ಚಾಮರಾಜನಗರ: ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗಿದೆ. ಇಲಾಖೆಯ ಸುಧಾರಿತ ‘ಕಾವೇರಿ 2.0’ ಪೋರ್ಟಲ್ ಮೂಲಕ ರಾಜ್ಯದಲ್ಲೇ ಮೊದಲ ಬಾರಿಗೆ ಸಂಪೂರ್ಣ ಕಾಗದ ರಹಿತ (Paperless) ಆಸ್ತಿ ನೋಂದಣಿ ಪ್ರಕ್ರಿಯೆಗೆ ಚಾಮರಾಜನಗರದ ಉಪನೋಂದಣಿ ಕಚೇರಿಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಮುದ್ರಾಂಕ ಇಲಾಖೆಯ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರಾದ ಎಂ. ಪಿ. ಮುಲ್ಲೈ ಮುಗಿಲನ್ ಅವರು ಈ ನೂತನ ವ್ಯವಸ್ಥೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ತಂತ್ರಜ್ಞಾನದ ಬಳಕೆಯಿಂದ ಸಾರ್ವಜನಿಕರಿಗೆ ಪಾರದರ್ಶಕ ಮತ್ತು ವೇಗದ ಸೇವೆ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಈ ಕ್ರಾಂತಿಕಾರಿ ಬದಲಾವಣೆ ಆರಂಭವಾಗಿರುವುದು ಹೆಮ್ಮೆಯ ವಿಷಯ,” ಎಂದು ತಿಳಿಸಿದರು. ಏನಿದು ಕಾಗದ ರಹಿತ ನೋಂದಣಿ? ಈ ಹೊಸ ವ್ಯವಸ್ಥೆಯಡಿ ಸಾರ್ವಜನಿಕರು ಆಸ್ತಿ ನೋಂದಣಿಗಾಗಿ ದಸ್ತಾವೇಜುಗಳ ಕಟ್ಟುಗಳನ್ನು ಹಿಡಿದು ಕಚೇರಿಗೆ ಅಲೆಯುವ ಅಗತ್ಯವಿರುವುದಿಲ್ಲ. ಎಲ್ಲ ದಾಖಲೆಗಳನ್ನು ಕಾವೇರಿ 2.0 ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕವೇ ಅಪ್‌ಲೋಡ್ ಮಾಡಲಾಗುತ್ತದೆ. ನೋಂದಣಿ…

Read More

ಬೆಂಗಳೂರು : ಪ್ರತಿಯೊಬ್ಬರು 12 ಗಂಟೆ ಕೆಲಸ ಮಾಡಬೇಕು ಎಂದು ಇನ್ಫೋಸಿಸ್ ನಾರಾಯಣಮೂರ್ತಿ ಹೇಳಿಕೆಗೆ ಇದೀಗ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಎಂಎಲ್ಸಿ ಬಿ ಕೆ ಹರಿಪ್ರಸಾದ್ ಆಕ್ರೋಶ ಹೊರ ಹಾಕಿದ್ದು, ಕಾರ್ಮಿಕ ದಿನಾಚರಣೆಯ ವೇಳೆ ಕೆಲಸದ ಅವಧಿಯ ಬಗ್ಗೆ ಪ್ರಸ್ತಾಪಿಸಿ ಆಯಮ್ಮ ಯಾರು ಸಿಂಪಲ್ ಸುಧಾ ಅಂತೆ ಗೊತ್ತಿಲ್ಲ ಸುಧಾಮೂರ್ತಿ ಗಂಡ ಹೇಳುತ್ತಾರೆ ಹೆಚ್ಚು ಕೆಲಸ ಮಾಡಿ ಅಂತ ಹೇಳುತ್ತಾರೆ. ವಾರಕ್ಕೆ 75 ಗಂಟೆ ಕೆಲಸ ಮಾಡಬೇಕು ಅಂತ ಹೇಳುತ್ತಾರೆ. ದಿನಕ್ಕೆ 12 ಗಂಟೆ ಕೆಲಸ ಅಂದರೆ ನಾವೇನು ಪ್ರಾಣಿಗಳ ನಾವೇನು ಮನುಷ್ಯರ ಪ್ರಾಣಿಗಳ ಎಂದು ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಕೆ ಹರಿಪ್ರಸಾದ್ ಮಾತನಾಡಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂತ ಹೇಳಿದರು. ಮಾಲಿಕ ಕೆಲಸ ಕೊಡಬಹುದು ನಾವು ಕೆಲಸ ಮಾಡಿದರೆ ಒಂದು ರೂಪಾಯಿ ಲೆಕ್ಕದಲ್ಲಿ ಅವರಿಗೆ ಕಂಪನಿ ಕೊಡೋಕೆ ನೂರಾರು ಎಕರೆ ಕೊಟ್ಟರು. ನಾವು…

Read More

ನವದೆಹಲಿ : ಅಸ್ಸಾಂ ಪೊಲೀಸರು ದಾಖಲಿಸಿರುವ ಮಾನನಷ್ಟ ಮತ್ತು ಫೋರ್ಜರಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಏಪ್ರಿಲ್ 24ರಂದು ಗುವಾಹಟಿ ಹೈಕೋರ್ಟ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ಬದಲಿಸುವ ಮೂಲಕ ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ: ಈ ಹಿಂದೆ ಏಪ್ರಿಲ್ 24ರಂದು ಗುವಾಹಟಿ ಹೈಕೋರ್ಟ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್‌ನ ಈ ತೀರ್ಪಿನಿಂದಾಗಿ ಖೇರಾ ಅವರಿಗೆ ಬಂಧನದ ಭೀತಿ ಎದುರಾಗಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ಹೈಕೋರ್ಟ್ ನೀಡಿದ್ದ ಆದೇಶವನ್ನು ಬದಿಗೆ ಸರಿಸಿ ಅವರಿಗೆ ಜಯ ನೀಡಿದೆ. ಪ್ರಕರಣದ ಹಿನ್ನೆಲೆ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನೀಡಿದ್ದಾರೆ ಎನ್ನಲಾದ…

Read More

ಬೆಂಗಳೂರು: ರಾಜ್ಯದ ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಮಾಸಿಕ ಒಂದು ದಿನದ ‘ಋತುಚಕ್ರದ ವೇತನ ಸಹಿತ ರಜೆ’ (Paid Menstrual Leave) ನೀಡುವ ಸಂಬಂಧ ಕಾನೂನು ಜಾರಿಗೆ ತರಲು ಗಂಭೀರ ಪರಿಶೀಲನೆ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಕಾನೂನು ಹೋರಾಟ ಮತ್ತು ಸರ್ಕಾರದ ಸ್ಪಷ್ಟನೆ: ರಾಜ್ಯ ಕಾರ್ಮಿಕ ಇಲಾಖೆಯು 2025ರ ನವೆಂಬರ್ 20ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಕರ್ನಾಟಕ ಎಂಪ್ಲಾಯರ್ಸ್ ಅಸೋಸಿಯೇಷನ್, ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರದ ಪರ ವಕೀಲರು ಹಾಜರಾಗಿ, ಮಹಿಳಾ ನೌಕರರಿಗೆ ಈ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶಾಸನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸರ್ಕಾರ ಮುಕ್ತವಾಗಿದೆ ಎಂದು ತಿಳಿಸಿದರು.…

Read More

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ನಿನ್ನೆ AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಇರಿವುದರಿಂದ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದೀಗ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಅನುಭವಿ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ಹೈಕಮಾಂಡ್‌ ಕುರ್ಚಿಯಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬರುತ್ತದೆ ಎಂಬ ಯತೀಂದ್ರ ಅವರ ಹೇಳಿಕೆಗೆ ಗುರುವಾರ ಪ್ರತಿಕ್ರಿಯಿಸಿದ ಗೃಹ ಸಚಿವರು, ಯತೀಂದ್ರ ಅವರು ಹೇಳಿದ ಮೇಲೆ ಆಯ್ತಲ್ಲ. ನಾನು ಮಾತನಾಡುವುದೇನಿದೆ? ಈ ವಿಚಾರದಲ್ಲಿ ಏನನ್ನೂ ಮಾತನಾಡುವುದಿಲ್ಲ. ಹೈಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು. ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾದರೆ ನಾವು ಸ್ವಾಗತಿಸುತ್ತೇವೆ. ಖರ್ಗೆ ಅವರು ಹಿರಿಯರು, ಅವರ ಸಮಕಾಲೀನರೆಲ್ಲ ಮುಖ್ಯಮಂತ್ರಿ ಆಗಿದ್ದಾರೆ. ವೀರಪ್ಪ ಮೊಯ್ಲಿ, ಗುಂಡೂರಾವ್‌ ಎಲ್ಲರೂ ಮುಖ್ಯಮಂತ್ರಿ ಆಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಐವತ್ತು ವರ್ಷದ ಸಾಧನೆಯಲ್ಲಿ ಹೈಕಮಾಂಡ್‌ ಅವರಿಗೆ…

Read More

ಬೆಂಗಳೂರು : ಬೆಂಗಳೂರು: ತರಬೇತಿ ನಿರತ ಗಗನಸಖಿಯೊಬ್ಬರ(Air Hostess) ಮೇಲೆ ರಸ್ತೆಯಲ್ಲೇ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಬಂಧಿತ ಚಂದ್ರಶೇಖರ್ ಮತ್ತು ಸಂತ್ರಸ್ತ ಯುವತಿ ಇಬ್ಬರೂ ಪರಿಚಯಸ್ಥರಾಗಿದ್ದು, ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಆರಂಭದಲ್ಲಿ ಇಬ್ಬರ ನಡುವೆ ಸ್ನೇಹವಿತ್ತು. ಆದರೆ ಇತ್ತೀಚೆಗೆ ಆರೋಪಿ ಚಂದ್ರಶೇಖರ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸಲು ಆರಂಭಿಸಿದ್ದ ಎನ್ನಲಾಗಿದೆ. ಯುವಕನ ವರ್ತನೆಯಿಂದ ಬೇಸತ್ತಿದ್ದ ಯುವತಿ ಆತನನ್ನು ಸಂಪೂರ್ಣವಾಗಿ ದೂರ ಮಾಡಲು ಮುಂದಾಗಿದ್ದಳು. ನಡೆದಿದ್ದೇನು?: ನಗರದ ಖಾಸಗಿ ಏವಿಯೇಷನ್ ಅಕಾಡೆಮಿಯೊಂದರಲ್ಲಿ ಗಗನಸಖಿ ತರಬೇತಿ ಪಡೆಯುತ್ತಿದ್ದ ಸಂತ್ರಸ್ತೆ, ತನ್ನ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದ ರಸ್ತೆಯಲ್ಲಿ ಯುವತಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದರು. ಇದನ್ನೇ ಹೊಂಚು ಹಾಕಿದ್ದ ಆರೋಪಿ ಚಂದ್ರಶೇಖರ್, ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲೇ ಅಡ್ಡಗಟ್ಟಿದ್ದಾನೆ. ಬಳಿಕ ಆಕೆಯ ಮೇಲೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಲು…

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮುರಗಮಲ್ಲಾದಲ್ಲಿ ಮೃತ್ಯು ದರ್ಶನವಾಗಿದೆ. ಕೆರೆಯಲ್ಲಿ ಮುಳುಗುತ್ತಿದ್ದ ತನ್ನ ಮಕ್ಕಳನ್ನು ಪ್ರಾಣದ ಹಂಗು ತೊರೆದು ರಕ್ಷಿಸಲು ಹೋದ ತಾಯಿಯೋರ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ ನಡೆದಿದೆ. ಬೆಂಗಳೂರಿನ ಬನಶಂಕರಿ ನಿವಾಸಿ ತಬುಸುಮ್ ಖಾನ್ (24) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಬೆಂಗಳೂರಿನಿಂದ ಕುಟುಂಬ ಸಮೇತ ಮುರಗಮಲ್ಲಾದ ದರ್ಗಾಕ್ಕೆ ಭೇಟಿ ನೀಡಲು ಈ ತಂಡ ಆಗಮಿಸಿತ್ತು. ದರ್ಶನದ ನಂತರ ಎಲ್ಲರೂ ಸೇರಿ ಹತ್ತಿರದಲ್ಲೇ ಇರುವ ಕೆರೆಯ ಬಳಿ ವಿಶ್ರಾಂತಿ ಪಡೆಯಲು ತೆರಳಿದ್ದರು. ಈ ಸಂದರ್ಭದಲ್ಲಿ ಕುಟುಂಬಸ್ಥರು ಕೆರೆಯ ದಡದಲ್ಲಿ ಕಾಲ ಕಳೆಯುತ್ತಿದ್ದರು. ಸ್ವಲ್ಪ ದೂರದಲ್ಲಿದ್ದ ಬಟ್ಟೆಯನ್ನು ತರಲೆಂದು ತಾಯಿ ತಬುಸುಮ್ ಖಾನ್ ಅವರು ತೆರಳಿದ್ದಾಗ, ಮಕ್ಕಳು ಕೆರೆಯ ನೀರಿನಲ್ಲಿ ಆಟವಾಡಲು ಹತ್ತಿರ ಹೋಗಿದ್ದಾರೆ. ಮಕ್ಕಳನ್ನು ಉಳಿಸಲು ಹೋದ ತಾಯಿ: ಮಕ್ಕಳು ಆಟವಾಡುತ್ತಾ ಆಳವಾದ ಪ್ರದೇಶಕ್ಕೆ ಹೋದಾಗ ನೀರಿನಲ್ಲಿ ಮುಳುಗಲು ಪ್ರಾರಂಭಿಸಿದ್ದಾರೆ. ಇದನ್ನು ಕಂಡ ತಾಯಿ ತಬುಸುಮ್ ಅವರು ಕ್ಷಣಾರ್ಧದಲ್ಲಿ ಧಾವಿಸಿ…

Read More