Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಭೀಕರ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಸಿ ಕೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯ ಕತ್ತರಿಗುಪ್ಪೆಯಲ್ಲಿ ರೌಡಿಶೀಟರ್ ಗಳು ಲಾಂಗು ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಹೌದು ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಇದೀಗ ಮತ್ತೊಮ್ಮೆ ಲಾಂಗು ಮತ್ತು ಮಚ್ಚುಗಳು ಝಳಪಿಸಿವೆ. ಸಿ.ಕೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ಕತ್ತರಿಗುಪ್ಪೆಯಲ್ಲಿ ಈ ಒಂದು ಘಟನೆ ನಡೆದಿದೆ. ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ರೌಡಿಶೀಟರ್ ಗಳ ಹಾವಳಿಗೆ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಅಭಿ ಹಾಗೂ ದೀಪಕ್ ಮೇಲೆ ರೌಡಿಶೀಟರ್ ಪ್ರದೀಪ ಮತ್ತು ಗ್ಯಾಂಗ್ನಿಂದ ಹಲ್ಲೆ ನಡೆಸಲಾಗಿದೆ. ಪ್ರದೀಪ್ ಅಲಿಯಾಸ್ ಜೂಲಿ ಹಾಗೂ ಆತನ ತಂಡದಿಂದ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೆ ಒಳಗಾದ ಅಭಿ ಎಂಬಾತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿ ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆಯಾಗಿದ್ದ ಬಿಜೆಪಿ ಶಾಸಕ ಮುನಿರತ್ನ, ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಜೈಲು ಸೇರಿದ್ದಾರೆ. ಇದೀಗ ಮುನಿರತ್ನ ವಿರುದ್ಧ ಸಾಕ್ಷಿ ಹೇಳದಂತೆ ಅವರ ಬೆಂಬಲಿಗರು ಜೀವ ಬೆದರಿಕೆ ಹಾಕಿದರೆ ಎಂಬ ಆರೋಪದ ವಿಚಾರವಾಗಿ ಇಂದು ಮಾಜಿ ಕಾರ್ಪೊರೇಟರ್ ವೇಲುನಾಯಕ್ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದ್ದಾರೆ. ಹೌದು ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತೆ ಪುತ್ರನಿಗೆ ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಮುನಿರತ್ನ ನಾಯ್ಡು ಬೆಂಬಲಿಗರಿಂದ ಜೀವ ಬೆದರಿಕೆ ಹಿನ್ನೆಲೆ ಮಾಜಿ ಕಾರ್ಪೊರೇಟರ್​ ವೇಲು ನಾಯಕ್ ಹಾಗೂ ದಲಿತ ಸಂಘಟನೆ ಮುಖಂಡರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.ದೂರು ನೀಡಿದ್ದವರಿಗೆ ಹಾಗೂ ನಮಗೆ ಜೀವ ಬೆದರಿಕೆ ಕರೆ ಬರುತ್ತಿವೆ. ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ನಮಗೆ ತೊಂದರೆ ಕೊಡುತ್ತಿದ್ದಾರೆ. ಮುನಿರತ್ನ ಆಪ್ತ ಹೆಬ್ಬಗೂಡಿ ಠಾಣೆ ಐ.ಎನ್.ರೆಡ್ಡಿ ಸಸ್ಪೆಂಡ್ ಮಾಡುವಂತೆಯೂ ಸಿಎಂಗೆ ಮನವಿ ಮಾಡಲಾಗಿದೆ. ಮುನಿರತ್ನ ನಾಯ್ಡು ಆಪ್ತೆ ಸುನಂದಮ್ಮ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಹಾವಳಿ ಮಿತಿಮೀರಿದೆ. ಪೊಲೀಸರು ಎಷ್ಟೇ ಕಠಿಣವಾದ ಅಂತಹ ಕ್ರಮ ಕೈಗೊಂಡರು ಸಹ ಇಂತಹ ಪುಂಡರು ಆಗಾಗ ಬಾಲ ಬಿಚ್ಚುತ್ತಿರುತ್ತಾರೆ. ಇದೀಗ ಮೂರು ಬೈಕ್ ಗಳಿಗೆ ಪೆಟ್ರೋಲ್ ಹಾಕಿ ಸುಟ್ಟು ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನ ಎಚ್ ಎಮ್ ಟಿ ಲೇಔಟ್ ನಲ್ಲಿ ನಡೆದಿದೆ. ಹೌದು ಬೆಂಗಳೂರು ನಗರದಲ್ಲಿ ಪುಂಡರ ಹಾವಳಿ ಮತ್ತೆ ಮುಂದುವರೆದಿದ್ದು, ಯಾರು ಇಲ್ಲದ ವೇಳೆಯಲ್ಲಿ ಮೂರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದಾರೆ. ಉತ್ತರ ಭಾರತದ ವಿದ್ಯಾರ್ಥಿಗಳ ಬೈಕ್ ಗಳೇ ಈ ಒಂದು ಪುಂಡರಿಗೆ ಮೇನ್ ಟಾರ್ಗೆಟ್ ಆಗಿವೆ.ಬೆಂಗಳೂರಿನ ಎಚ್ ಎಮ್ ಟಿ ಲೇಔಟ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಕಿಡಿಗೇಡಿಗಳು ಬುಲೆಟ್ ಬೈಕ್ ನಿಂದ ಪೆಟ್ರೋಲ್ ಕದ್ದು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಬುಲೆಟ್ ಬೈಕ್ ಸೇರಿದಂತೆ ಮೂರು ವಾಹನಗಳಿಗೆ ಬೆಂಕಿ ಹಚ್ಚಿ ಪುಂಡರು ಪರಾರಿಯಾಗಿದ್ದಾರೆ. ಸೆಪ್ಟೆಂಬರ್ 18ರಂದು ತಡರಾತ್ರಿ ನಡೆದಿದ್ದ ಘಟನೆ ತಡವಾಗಿ ಬಳಕೆಗೆ ಬಂದಿದೆ. ಕಿಡಿಗೇಡಿಗಳು ಬೈಕ್…

Read More

ಬೆಂಗಳೂರು : ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ A16 ಆರೋಪಿಯಾಗಿರುವ ಕೇಶವಮೂರ್ತಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಚಾರಣೆಯ ವೇಳೆ ಕೇಶವಮೂರ್ತಿ ಅವರ ಪರ ವಕೀಲರಾದ ರಂಗನಾಥ್ ರೆಡ್ಡಿ ವಾದ ಮಂಡಿಸಿ, ಕೇವಲ ಕೊಲೆಯ ನಂತರದ ಸಾಕ್ಷಿಯ ನಾಶದ ಆರೋಪ ಮಾತ್ರವಿತ್ತು. ಈ ಜಾಮೀನು ಇತರೆ ಆರೋಪಿಗಳ ಮೇಲಿನ ಕೇಸಿಗೆ ಸಂಬಂಧಿಸಿದಲ್ಲ. ಹಾಗಾಗಿ ಈ ಒಂದು ಕಾರಣಕ್ಕೆ ಜಾಮೀನು ಮಂಜೂರು ಮಾಡಿದೆ. ವಿಚಾರಣೆ ವೇಳೆ ನ್ಯಾಯಾಧೀಶರಾದ ಎಸ್ ವಿಶ್ವಜೀತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಕೇಶವಮೂರ್ತಿ ವಿರುದ್ಧ ಕೊಲೆ ಆರೋಪ ಇರಲಿಲ್ಲ ಕೇವಲ ಕೊಲೆಯ ನಂತರದ ಸಾಕ್ಷ ನಾಶದ ಆರೋಪ ಮಾತ್ರವಿತ್ತು. ಆರೋಪಿ ವಿರುದ್ಧದ ಜಾಮೀನು ನೀಡಬಹುದಾದ ಅಪರಾಧಗಳಿವೆ ಆರೋಪ ಪಟ್ಟಿಯಲ್ಲಿ ಈತನ ಮೇಲೆ ಕೊಲೆ ಆರೋಪವಿಲ್ಲವೆಂದು ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದರು. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ…

Read More

ಹುಬ್ಬಳ್ಳಿ : ಹುಬ್ಬಳ್ಳಿ ಮತ್ತು ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಸುಮಾರು 17 ಕಳ್ಳತನ ಕೇಸ್ ನಲ್ಲಿ ಭಾಗಿಯಾಗಿದ್ದ ಆರೋಪಿಯ ಮೇಲೆ ಹುಬ್ಬಳ್ಳಿ ತಾಲೂಕಿನ ಬೆಂಡಿಗೇರಿ ಠಾಣೆಯ ಎಸ್ಐ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಹೌದು ಆರೋಪಿ ವಿನೋದ್ ಕಾಲಿಗೆ ಗುಂಡು ಹಾರಿಸಲಾಗಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಇದೀಗ ಗುಂಡಿನ ದಾಳಿ ನಡೆದಿದೆ. ತಾರಿಹಾಳ ಬಳಿ ಆರೋಪಿ ವಿನೋದ್ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕಳ್ಳತನ ಪ್ರಕರಣದಲ್ಲಿ ಪೊಲೀಸರು ನಿನ್ನೆ ವಿನೋದನನ್ನು ಬಂಧಿಸಿದ್ದರು. ತನ್ನ ಸಹಚರನ್ನು ತೋರಿಸುತ್ತೇನೆ ಎಂದು ವಿನೋದ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಪೊಲೀಸರ ಮೇಲೆ ವಿನೋದ್ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯಶ್ರೀ ಛಲವಾದಿ, ಕಾನ್ಸ್ಟೇಬಲ್ ರಮೇಶ್ ಹಿತ್ತಲಮನಿ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮ ರಕ್ಷಣೆಗಾಗಿ ಪಿಐ ಜಯಶ್ರೀ ವಿನೋದ ಕಾಲಿಗೆ ಗುಂಡು…

Read More

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಜೈಲಾಧಿಕಾರಿಗಳು ಕೈದಿ ನಂಬರ್ ನೀಡಿದ್ದಾರೆ. ಹೌದು ಮುನಿರತ್ನಗೆ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್-9273 ನೀಡಿದ್ದಾರೆ. ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸೆಗಿದ್ದಾನೆ ಎಂದು ಇತ್ತೀಚೆಗೆ ಮಹಿಳೆ ಒಬ್ಬರು ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದರು. ಈ ಒಂದು ದೂರಿನ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮೊದಲು ಅಟ್ರಾಸಿಟಿ ಪ್ರಕರಣದಲ್ಲಿ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಈ ವೇಳೆ ಬಿಡುಗಡೆಯಾದ ತಕ್ಷಣ ಮತ್ತೆ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಬಳಿಕ ರಾಜ್ಯ ಸರ್ಕಾರ ಮುನಿರತ್ನ ಪ್ರಕರಣವನ್ನು ಎಸ್ ಐ ಟಿ ಇ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು.ಇದೀಗ ಇಂದು ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆ 25ಕ್ಕೆ ಮುಂದೂಡಿದೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಕ್ಕೆ ಮಂದೂಡಿ ಕೋರ್ಟ್ ಆದೇಶ ನೀಡಿದೆ. ಹೌದು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಸಪ್ಟೆಂಬರ್ 27ಕ್ಕೆ ಮುಂದೂಡಿ ಜಡ್ಜ್ ಆದೇಶ ನೀಡಿದರು.ಅಲ್ಲದೆ ಇದೇ ವೇಳೆ ಪ್ರಕರಣದ A1 ಆರೋಪಿ ಆಗಿರುವಂತಹ ಪವಿತ್ರಗೌಡ ಜಾಮೀನು ಅರ್ಜಿ ಸಹ ಸೆಪ್ಟೆಂಬರ್ 25ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

Read More

ಮಂಡ್ಯ : ಇತ್ತೀಚಿಗೆ ಸರ್ಕಾರ ಹಾಲು, ಪೆಟ್ರೋಲ್, ಅಡುಗೆ ಎಣ್ಣೆ ಏರಿಕೆ ಮಾಡಿತ್ತು. ಇದೀಗ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಕಾವೇರಿ ನೀರಿನ ದರವನ್ನು ಏರಿಕೆ ಮಾಡಲಾಗುತ್ತದೆ. ಯಾವಾಗಿನಿಂದ ನೀರಿನ ದರ ಏರಿಕೆ ಮಾಡುತ್ತೇವೆ ಎಂಬುದರ ಕುರಿತು ಶೀಘ್ರದಲ್ಲಿ ತಿಳಿಸಲಾಗುತ್ತದೆ ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ ಬಳಿ ಇರುವ ಪಂಪ್ ಹೌಸ್ ಗೆ ಡಿಸಿಎಂ ಅಡಿಗೆ ಶಿವಕುಮಾರ್ ಭೇಟಿ ನೀಡಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡಿನಹಳ್ಳಿ ಬಳಿ ಇರುವ ಪಂಪ ಹೌಸ್ ಗೆ ಭೇಟಿ ನೀಡಿ, ಬೆಂಗಳೂರು ಜಲ ಮಂಡಳಿಯ ಪಂಪ ಹೌಸನ್ನು ಪರಿಶೀಲಿಸಿದರು. ಕಾವೇರಿ 5ನೇ ಹಂತದಲ್ಲಿ ನಿರ್ಮಿಸಲಾಗಿರುವ ಪಂಪ ಹೌಸ್ ವೀಕ್ಷಣೆ ಮಾಡಿದರು ಈ ವೇಳೆ ಸಚಿವ ಚೆಲುವರಾಯ ಸ್ವಾಮಿ ಸೇರಿದಂತೆ ಹಲವರು ಡಿಕೆ ಶಿವಕುಮಾರ್ ಗೆ ಸಾಥ್ ನೀಡಿದರು. ಇನ್ನು ತಿರುಪತಿ ಲಡ್ಡು ವಿನಲಿ ಕಲಬರಕೆ…

Read More

ಬೆಂಗಳೂರು : ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲರೂ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್‌ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದಿದ್ದ ಇನ್ಸ್‌ಟಾಗ್ರಾಮ್‌ ಇನ್‌ಫ್ಲುಯೆನ್ಸರ್‌ ಸುಗಂಧ್‌ ಶರ್ಮ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾಳೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಸುಗಂಧ ಶರ್ಮ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕನ್ನಡಿಗರನ್ನು ಕೆಣಕಿ, ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಳು. ಆಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ನೀವು ಬೆಂಗಳೂರು ಬಿಟ್ಟು ತೊಲಗಿ ಎಂದು ಸಾಕಷ್ಟು ಮಂದಿ ಹೇಳಿದ್ದರು. ಕರ್ನಾಟಕದ ಬಗ್ಗೆ ಮಾತನಾಡಿದ್ದ ಸುಗಂಧ ಶರ್ಮ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆಕೆ ಕೆಲಸ ಮಾಡುತ್ತಿದ್ದ ಕಂಪನಿ ಕೂಡ ಎಚ್ಚೆತ್ತುಕೊಂಡಿದೆ. ವಿಡಿಯೋ ವೈರಲ್ ಆಗ್ತಿದ್ದಂತೆ ಸುಗಂಧ ಶರ್ಮರನ್ನ ಕಂಪನಿ ಕೆಲಸದಿಂದ ತೆಗೆದುಹಾಕಿದೆ. ಫ್ರೀಡಂ ಕಂಪನಿಯಲ್ಲಿ ಸುಗಂಧ ಶರ್ಮ ಕೆಲಸ ಮಾಡುತ್ತಿದ್ದರು. ಸದ್ಯ ಮಹಿಳೆಯನ್ನ ಫ್ರೀಡಂ ಕಂಪನಿ ಟರ್ಮಿನೇಟ್‌ ಮಾಡಿದೆ. ಫ್ರೀಡಂ ಕಂಪನಿಗೆ ತೆರಳಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದರ ಮಾಹಿತಿ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ…

Read More

ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆಗಾರ ಯಾರೆಂದು ಗೊತ್ತಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿಕೆ ನೀಡಿದ್ದಾರೆ. ಹೌದು ಇಂದು ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹಾಲಕ್ಷ್ಮೀ ಕೊಲೆ ಪ್ರಕರಣ ಸಂಬಂಧ ಇದೀಗ ಆರೋಪಿಯ ಗುರುತು ಪತ್ತೆಯಾಗಿದ್ದು, ಆರೋಪಿಯ ಹುಡುಕಾಟ ಮುಂದುವರೆದಿದೆ. ಆರೋಪಿ ಹೊರರಾಜ್ಯದವನಗಿದ್ದು, ಬೆಂಗಳೂರಿನಲ್ಲೇ ವಾಸವಾಗಿದ್ದ ಎಂದು ತಿಳಿಸಿದ್ದಾರೆ. ಬೆಂಗಳೂರಿನ ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 50ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್​ನಲ್ಲಿ ತುಂಬಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯ ಪತಿ ಹೇಮಂತ್ ಪತ್ನಿ ಸಾವಿಗೆ ಆಕೆ ಕೆಲಸ ಮಾಡುತ್ತಿದ್ದ ನಾಲ್ವರು ಸಹೋದ್ಯೋಗಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಆರೋಪಿಯ ಗುರುತು ಪತ್ತೆ ಹಚ್ಚಲಾಗಿದೆ.

Read More