Subscribe to Updates
Get the latest creative news from FooBar about art, design and business.
Author: kannadanewsnow05
ಗದಗ : ಹೋಳಿ ಹಬ್ಬದ ಅಂಗವಾಗಿ ಇಂದು ಎಲ್ಲೆಡೆ ಬಣ್ಣ ರಚೋ ಮೂಲಕ ಯುವಜನತೆ ಬಣ್ಣದಲ್ಲಿ ಮಿಂದೆದ್ದಿದೆ. ಹೋಳಿ ಹಬ್ಬದ ಲ್ಲಿ ಆದಷ್ಟು ನೈಸರ್ಗಿಕ ಬಣ್ಣ ಬಳಸುವುದು ಉತ್ತಮ. ಆದರೆ ಗದಗದಲ್ಲಿ ಕಿಡಿಗೇಡಿಗಳು ಕೆಮಿಕಲ್ ಮೀಸರಿತ ಬಣ್ಣವನ್ನು ವಿದ್ಯಾರ್ಥಿಯ ನೆರ ಮೇಲೆ ಎರಚಿದ ಪರಿಣಾಮ ನಾಲ್ವರು ವಿದ್ಯಾರ್ಥಿಯರು ಅಸ್ವಸ್ಥರಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ನಡೆದಿದೆ. ಕೆಮಿಕಲ್ ಮಿಶ್ರಿತ ಬಣ್ಣ ಎರಚಿದ ಪರಿಣಾಮ ಉಸಿರಾಟ ಸಮಸ್ಯೆ ಕಾಣಿಸ್ಕೊಂಡು ನಾಲ್ವರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕಿಡಿಗೇಡಿಗಳು ಕೆಮಿಕಲ್ ಬಣ್ಣ ಎರಚಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುವರ್ಣ ಗಿರಿ ತಾಂಡಾದಲ್ಲಿ ಈ ಒಂದು ಘಟನೆ ನಡೆದಿದೆ. ಗೌರಿ ಪೂಜಾರ, ದಿವ್ಯಾ ಲಮಾಣಿ, ಅಂಕಿತಾ ಲಮಾಣಿ ಹಾಗೂ ತನುಷ ಅಸ್ವಸ್ಥರಾಗಿದ್ದಾರೆ. ಉಸಿರಾಟ ತೊಂದರೆ ಹಾಗೂ ಎದೆ ನೋವಿನಿಂದ ವಿದ್ಯಾರ್ಥಿನಿಯರು ನರಳುತ್ತಿದ್ದಾರೆ. ಗೌರಿ ಪೂಜಾರ, ಮತ್ತು ದಿವ್ಯಾ ಲಮಾಣಿಗೆ ಗದಗದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಅಂಕಿತ ಮತ್ತು ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಟ್ಟೆ, ಸಗಣಿ,…
ಬೆಂಗಳೂರು : ಅಕ್ರಮವಾಗಿ ತಂಬಾಕು ಶೇಖರಿಸಿ ಇಟ್ಟಿದ್ದ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಬೆಂಗಳೂರಿನಲ್ಲಿ ಸಿಸಿಬಿ ಇಂದ ಅಕ್ರಮವಾಗಿ ಶೇಖರಿಸಿ ಇಟ್ಟಿದ್ದ 45 ಲಕ್ಷ ಮೌಲ್ಯದ ತಂಬಾಕು ಜಪ್ತಿ ಮಾಡಿಕೊಳ್ಳಲಾಗಿದೆ. ಗಣೇಶ ಕಂಪನಿಯ ತಂಬಾಕು ಶೇಖರಿಸಿ ಇಡಲಾಗಿತ್ತು. ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯ ಭೋಗಲ್ ಮ್ಯಾನ್ಶನ್ ಗೋದಾಮಿನಲ್ಲಿ ಬಿಲ್ ಇಲ್ಲದೆ ಅಕ್ರಮವಾಗಿ ತಂಬಾಕು ವಸ್ತುಗಳ ಶೇಖರಣೆ ಮಾಡಲಾಗಿತ್ತು. ಸರ್ಕಾರದ ನಿಯಮ ಪ್ರಕಾರ ತಂಬಾಕು ಆರೋಗ್ಯಕ್ಕೆ ಹಾನಿಕರ ಅಂತ ತಂಬಾಕು ಪ್ಯಾಕೆಟ್ ಮೇಲೆ ಕಾಣಿಸುವ ಹಾಗೆ ಬರಹ ಹಾಕಿಸಬೇಕು. ಆದರೆ ಪ್ಯಾಕೆಟ್ಗಳ ಮೇಲೆ ಸರಿಯಾಗಿ ನಮೂದಿಸದೆ ಮಾರಾಟ ಮಾಡಲಾಗುತ್ತಿತ್ತು . ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಆರೋಪಿ ದಿಲೀಪ್ ನನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಬಳಿಕ ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ನೀಡಿತ್ತು. ಈ ಒಂದು ಸಮನ್ಸ್ ಪ್ರಶ್ನೆಸಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲು ಏರಿದ್ದರುಇಂದು ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿ, ಕಾಗ್ನಿಜೆನ್ಸ್ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಬಿಎಸ್ ಯಡಿಯೂರಪ್ಪ ಅವರಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ವೈಗೆ ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ನೀಡಿತ್ತು. ಈ ಒಂದು ಸಮನ್ಸ್ ಪ್ರಶ್ನೆಸಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲು ಏರಿದ್ದರು ಇದೀಗ ಅಲ್ಲದೇ ಬಿಎಸ್ ಯಡಿಯೂರಪ್ಪ ಅವರ ಖುದ್ದು ಹಾಜರಾತಿಗೂ ಹೈಕೋರ್ಟ್ ವಿನಾಯಿತಿ ನೀಡಿದೆ. ಬಿಎಸ್ ಯಡಿಯೂರಪ್ಪ ಅರ್ಜಿಯ…
ಹಾವೇರಿ : ಕಳೆದ ವರ್ಷ ಹುಬ್ಬಳ್ಳಿಯಲ್ಲಿ ಬಿವಿಬಿ ಕಾಲೇಜು ಆವರಣದಲ್ಲಿ ನೇಹ ಹಿರೇಮಠಗಳನ್ನು ಫಯಾಜ್ ಎನ್ನುವ ಹಂತಕ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣ ಇಡೀ ದೇಶದಾದ್ಯಂತ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಹಾವೇರಿಯಲ್ಲಿ ಅಂತದ್ದೇ ಘಟನೆ ಮರುಕಳಿಸಿದ್ದು, ಮುಸ್ಲಿಂ ಯುವಕನೊಬ್ಬ ಹಿಂದು ಯುವತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ಯುವತಿಯನ್ನು ಸ್ವಾತಿ ರಮೇಶ್ ಬ್ಯಾಡಗಿ (22) ಎಂದು ತಿಳಿಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಹತ್ಯೆ ಪ್ರಕರಣದಲ್ಲಿ ನಯಾಜ್ ಇರುವ ಅನುಮಾನ ವ್ಯಕ್ತವಾಗಿದೆ. ಮೃತ ಸ್ವಾತಿ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ನಿವಾಸಿಯಾಗಿದ್ದು, ಆರೋಪಿ ನಯಜ್ ನನ್ನು ಹಲಗೇರಿ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಹಿನ್ನೆಲೆ? ಮಾರ್ಚ್ 3 ರಂದು ಸ್ವಾತಿ ರಮೇಶ್ ಬ್ಯಾಡಗಿ ಕಾಣೆಯಾಗಿದ್ದಳು. ಈ ಕುರಿತು ಸ್ವಾತಿ ಪೋಷಕರು ಮಿಸ್ಸಿಂಗ್ ದೂರು ದಾಖಲಿಸಿದ್ದರು. ಮಾರ್ಚ್ 6…
ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಈ ಒಂದು ಪ್ರಕರಣದಲ್ಲಿ ನಟಿ ರನ್ಯಾ ಅವರ ಸ್ನೇಹಿತ ಎನ್ನಲಾದ ಹಾಗೂ ಉದ್ಯಮಿಯ ಪುತ್ರ ತರುಣ್ ರಾಜುಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಡಿಆರ್ ಐ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ತರುಣ ರಾಜುವನ್ನು ಅಧಿಕಾರಿಗಳು ಜಡ್ಜ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಿದ್ದರು.ಈ ಹಿನ್ನೆಲೆ ಇಂದು ಜಡ್ಜ್ ವಿಚಾರಣೆ ನಡೆಸಿ ತರುಣ್ ರಾಜು ಗೆ 14 ದಿನಗಳ ಕಾಲ ನ್ಯಾಯಾಂಗ ಬಂದನಕೆ ನೀಡಿ ಆದೇಶ ನೀಡಿದೆ. ಉದ್ಯಮಿಯ ಪುತ್ರನಾಗಿರುವ ತರುಣ್ ರಾಜು, ನಟಿ ರನ್ಯಾ ರಾವ್ ಸ್ನೇಹಿತನಾಗಿದ್ದು, ರನ್ಯಾ ರಾವ್ ಳಿಂದ ವಿದೇಶಗಳಿಂದ ಅಕ್ರಮವಾಗಿ ಚಿನ್ನ ತರಿಸುತ್ತಿದ್ದ ಎನ್ನಲಾಗಿದೆ. ತರುಣ್ ರಾಜುನನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯದ ಜಡ್ಜ್ ಮುಂದೆ ಅಧಿಕಾರಿಗಳು ಹಾಜರುಪಡಿಸಿದ್ದರು.
ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ ಶಸ್ತ್ರಚಿಕಿತ್ಸೆಯ ಮುಖಾಂತರ ವಿಕಲಚೇತನತೆಯನ್ನು ನಿವಾರಣೆ ಮಾಡಿಕೊಳ್ಳಲು ಅಥವಾ ಕಡಿಮೆ ಮಾಡಿಕೊಳ್ಳಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಅಥವಾ ಕರ್ನಾಟಕದ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು 1 ಲಕ್ಷ ರೂಪಾಯಿ ವರೆಗೆ ಸಹಾಯ ಧನ ಮಂಜೂರು ಮಾಡಲಾಗುತ್ತಿದೆ ಎಂದು ಹೇಳಿದರು. ಪ್ರಸ್ತುತ ರಾಜ್ಯದಲ್ಲಿ ನ್ಯಾಷನಲ್ ಟ್ರಸ್ಟ್ ಆಕ್ಟ್ ಅಡಿಯಲ್ಲಿ ನಿರಾಮಯ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಬಡತನ ರೇಖೆಗಿಂತ ಕೆಳಗಿರುವ ಕುಟಂಬದ ವಿಕಲಚೇತನ ವ್ಯಕ್ತಿ ಒಂದು ಬಾರಿ ವಾರ್ಷಿಕ 250 ರೂಪಾಯಿಗಳನ್ನು…
GOOD NEWS : ಅಂಗವಿಕಲರಿಗೆ ಸಿಹಿಸುದ್ದಿ : ವಿಮಾ ಮೊತ್ತ 5 ಲಕ್ಷಕ್ಕೆ ಏರಿಸಲು ಚಿಂತನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ 1 ಲಕ್ಷದವರೆಗೆ ವಿಮೆ ಸೌಲಭ್ಯವಿದೆ. 1 ವರ್ಷಕ್ಕೆ 1 ಲಕ್ಷದವರೆಗೂ ವಿಮೆ ಸೌಲಭ್ಯವಿದೆ ಮುಂಬರುವ ದಿನಗಳಲ್ಲಿ 5 ಲಕ್ಷಕ್ಕೆ ವಿಮೆ ಮೊತ್ತ ಏರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಇಂದು ವಿಧಾನಪರಿಷತ್ ನಲ್ಲಿ ಎಲ್ಲ ರೀತಿಯ ಅಂಗವೈಕಲ್ಯ ಒಳಗೊಂಡ ವಿಮೆ ಯೋಜನೆಗಳಿವೆಯೇ? ವಿಶೇಷವೇತನರಿಗೆ ಯಾವ ರೀತಿಯ ಸೌಲಭ್ಯಗಳಿವೆ ಎಂದು ವೈ.ಎಂ ಸತೀಶ ಪ್ರಶ್ನಿಸಿದರು.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರ ನೀಡಿದ್ದು ಅಂಗವಿಕಲತಾ ನಿವಾರಣ ವೈದ್ಯಕೀಯ ಪರಿಹಾರ ನಿಧಿ ಹಾಗು ನಿರಾಮಯ ಆರೋಗ್ಯ ವಿಮಾ ಯೋಜನೆ ಇದೆ. ಆದರೆ ಈ ಯೋಜನೆಯನ್ನು ಇನ್ನಷ್ಟು ವಿಸ್ತರಿಸುವ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು. ವಿಮೆ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಎಂದು ಇದೆ ವೇಳೆ ವೈ.ಎಂ ಸತೀಶ್ ಕೇಳಿದಾಗ ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ 1 ಲಕ್ಷದವರೆಗೆ ವಿಮೆ ಸೌಲಭ್ಯವಿದೆ. 1 ವರ್ಷಕ್ಕೆ 1 ಲಕ್ಷದವರೆಗೂ ವಿಮೆ…
ರಾಯಚೂರು : ರಾಯಚೂರಿನಲ್ಲಿ ಘೋರವಾದಂತಹ ದುರಂತ ಸಂಭವಿಸಿದ್ದು, ಅಡುಗೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು 5 ಕುರಿಗಳು ಸಾವನ್ನಪ್ಪಿವೆ. ಆದರೆ ಅದೃಷ್ಟವಶಾತ್ ಶೆಡ್ ನಲ್ಲಿ ಇದ್ದಂತಹ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಯಚೂರಿನ ಏಗನೂರು ಗ್ರಾಮದಲ್ಲಿ ನಡೆದಿದೆ. ಏಗನೂರು ಗ್ರಾಮದ ನರಸಿಂಹಲು ಎಂಬವರು ವಾಸಿಸುವ ಟಿನ್ ಶೆಡ್ನಲ್ಲಿ ಘಟನೆ ಸಂಭವಿಸಿದೆ. ಗುಡಿಸಲಿನ ಪಕ್ಕದಲ್ಲಿ ಕಟ್ಟಿಹಾಕಿದ್ದ ಕುರಿಗಳು ಜೀವಂತವಾಗಿ ಮೃತಪಟ್ಟಿವೆ. 40 ಸಾವಿರ ರೂ ನಗದು, 5 ಗ್ರಾಂ ಚಿನ್ನದ ಕಿವಿಯೋಲೆ, ಬೆಳ್ಳಿಯ ಕಾಲ್ಗೆಜ್ಜೆ, ದವಸ-ಧಾನ್ಯಗಳು ಸುಟ್ಟು ಕರಕಲಾಗಿವೆ. ಶೆಡ್ನಲ್ಲೇ ಇದ್ದ ನರಸಿಂಹಲು ಹಾಗೂ ಪತ್ನಿ ಪಾರಾಗಿದ್ದಾರೆ. ಕೊಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು : ಇಂದು ಎಲ್ಲೆಡೆ ಹೋಳಿ ಹಬ್ಬದ ಅಂಗವಾಗಿ ಪ್ರತಿಯೊಬ್ಬರೂ ಬಣ್ಣದಲ್ಲಿ ಮಿಂದೆದ್ದು ಅತ್ಯಂತ ಸಡಗರ ಸಂಭ್ರಮದಿಂದ ಹೋಳಿ ಹಬ್ಬ ಆಚರಿಸುತ್ತಾರೆ. ಆದರೆ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲಿನಲ್ಲಿ ಹೋಳಿ ಹಬ್ಬ ಆಚರಣೆಗೆ ನಿರ್ಬಂಧ ವಿಧಿಸಲಾಗಿದ್ದು, ಈ ಕುರಿತು BMRCL ಮೆಟ್ರೋ ಪ್ರಯಾಣಿಕರಿಗೆ ಹೋಳಿ ಹಬ್ಬದ ಶುಭಾಶಯ ತಿಳಿಸಿ ಈ ಮೂಲಕ ಸೂಚನೆ ನೀಡಿದೆ. ಹೌದು ನಮ್ಮ ಮೆಟ್ರೋ ರೈಲಿನಲ್ಲಿ ಹೋಳಿ ಹಬ್ಬ ಆಚರಣೆಗೆ ನಿರ್ಬಂಧ ಹೋಳಿ ಮುಗಿಯುವವರೆಗೂ ಮೆಟ್ರೋದಲ್ಲಿ ಬಣ್ಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹೋಳಿ ಹಬ್ಬದ ಶುಭಾಶಯಗಳು ತಿಳಿಸಿ BMRCL ಈ ಸಂದೇಶ ನೀಡಿದೆ. ಒಗ್ಗಟ್ಟು ಸಂತೋಷದಿಂದ ಹೋಳಿ ಹಬ್ಬವನ್ನು ಆಚರಿಸಿ ಎಂದು ಪ್ರಯಾಣಿಕರಿಗೆ ಸುರಕ್ಷಿತ ಹೋಳಿ ಹಬ್ಬದ ಶುಭಾಶಯಗಳು ತಿಳಿಸಿದೆ. ಮೆಟ್ರೋದಲ್ಲಿ ಪ್ರಯಾಣಿಸಿ ಎಂದು ಹೋಳಿ ಹಬ್ಬದ ಪ್ರಯುಕ್ತ ಬಿಎಂಆರ್ಸಿಎಲ್ ಪ್ರಯಾಣಿಕರಿಗೆ ಶುಭಾಶಯಗಳು ಹೇಳಿ ಆದರೆ ಮೆಟ್ರೋದಲ್ಲಿ ಬಣ್ಣ ತರಬೇಡಿ ಎಂದು ಪ್ರಯಾಣಿಕರಿಗೆ ಸೂಚನೆ ನೀಡಿದೆ.ಒಗ್ಗಟ್ಟು, ಸಂತೋಷ ಮತ್ತು ವರ್ಣರಂಜಿತ ನೆನಪುಗಳ ಪ್ರಯಾಣದೊಂದಿಗೆ ಈ ಹೋಳಿ ಹಬ್ಬವನ್ನು ಆಚರಿಸೋಣ.…
ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯರಾವ್ ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ರನ್ಯಾ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಇದೀಗ ಇಡಿ ತನಿಖೆ ಚುರುಕುಗೊಳಿಸಲು ರನ್ಯಾರಾವ್ಳನ್ನು ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಕೋರ್ಟ್ನಲ್ಲಿ ಇಡಿ ಸ್ಟೇಟ್ಮೆಂಟ್ ಮಾಡಲಿದ್ದು, ಅರ್ಜಿ ಸಲ್ಲಿಕೆ ನಂತರ ಕಷ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ನಟಿ ರನ್ಯಾರಾವ್ ಅವರ ಡ್ಯಾಮಿನ ಅರ್ಜಿ ವಿತರಣೆ ಕೂಡ ನಡೆಯಲಿದೆ ಹಾಗಾಗಿ ಈ ಒಂದು ಪ್ರಕರಣ ಇದೀಗ ತೀವ್ರ ಕುತೂಹಲ ಮೂಡಿಸಿದೆ.