Author: kannadanewsnow05

ಚಿತ್ರದುರ್ಗ : ಚಿತ್ರದುರ್ಗದ ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಭಾನುವಾರ ಬೆಳಿಗ್ಗೆ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು (ಆರ್‌ಎಸ್‌ಐ) ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಸಬ್ ಇನ್‌ಸ್ಪೆಕ್ಟರ್‌ಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಆರ್‌ಎಸ್‌ಐಗಳಾದ ಮಂಜುನಾಥ್‌, ಅಂಬರೀಷ್‌, ಸಚಿನ್ ಮೃತಪಟ್ಟಿದ್ದಾರೆ. ಸಬ್ ಇನ್‌ಸ್ಪೆಕ್ಟರ್‌ಗಳಾದ ಈಶ್ವ‌ರ್, ಮಹಾಂತೇಶ್‌ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್‌ ಸಿಬ್ಬಂದಿ ಬೆಂಗಳೂರಿಂದ ಬಳ್ಳಾರಿಗೆ ತೆರಳುವ ವೇಳೆ ಹೆಗ್ಗೆರೆ ಬಳಿ ಎದುರಿನಿಂದ ಬಂದ ಲಾರಿಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆಯ ನಂತರ 2 ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತ ಸ್ಥಳ ಹಿರಿಯೂರು ತಾಲ್ಲೂಕು ಐಮಂಗಲ ಪೊಲೀಸ್‌ ಠಾಣಯಲ್ಲಿದ್ದು ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ನಮ್ಮ ಬಾಲಗಂಗಾಧರ ನಾಥ ಸ್ವಾಮೀಗಳು ಒಂದು ಹೆಜ್ಜೆಯನ್ನ ಹಾಕೊಟ್ಟಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು,ಎಲ್ಲರನ್ನು ಭಾವೈಕ್ಯತೆ ಕಂಡು, ಬಡವ ಶ್ರೀಮಂತ ಎನ್ನದೆ ಎಲ್ಲರನ್ನು ಒಂದೇ ತರ ನೋಡ್ತಾ ಹೆಜ್ಜೆ ಹಾಕ್ತಿದ್ರು.ಆದ್ರೆ ಇತ್ತೀಚಿನ ದಿನದಲ್ಲಿ ಅದು ಅಳಿಸಿ ಹೋಗ್ತಿದ ಎಂದು ಶ್ರೀಮಠ ಹಾಗು ಶ್ರೀಮಠದ ಸ್ವಾಮೀಜಿ ವಿರುದ್ದ ಕಿಡಿ ಕಾಂಗ್ರೆಸ್ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದಲ್ಲಿ ನಡೆದ BGS ಮಠದ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದರು. ಈ ಬಹಿರಂಗ ಹೇಳಿಕೆಗೆ ವೇದಿಕೆಯಲ್ಲೇ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಟಕ್ಕರ್ ಕೊಟ್ಟಿದ್ದು, ಶ್ರೀ ಮಠದ ಬಗ್ಗೆ ಮಾತನಾಡುವಷ್ಟು ದೊಡ್ಡವನಾಬಿಟ್ಟಿದ್ಯ ಬೇಸರ ಎಂದು ಆಕ್ರೋಶ ಹೊರಹಾಕಿದ್ದಾರೆ. ನಾನು ಕೂಡ ಒಮ್ಮೆ ಮಾತನಾಡಿ ಬಳಿಕ ಸ್ವಾಮೀಜಿಗಳ ಎದುರೇ ಕ್ಷಮೆ ಕೇಳಿದ್ದೀನಿ. ಈ ರೀತಿ ‌ ಶ್ರೀಮಠ ಮತ್ತು ಶ್ರೀಗಳ ವಿರುದ್ದ ಮಾತನಾಡಬಾರದು ಎಂದು ಟಕ್ಕರ್ ಕೊಟ್ಟಿದ್ದರೆ. ಶ್ರೀಮಠದ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡುವಂತೆ ಬಿಜೆಪಿ ಮುಖಂಡ ಸಚ್ಚಿದಾನಂದ ಸಲಹೆ. ನೀಡಿದರು. ಈಗಲಾದರು ಅವರಿಗೆ ಕಾಲಭೈರವೇಶ್ವರ ಬುದ್ದಿ ಕೊಡಲಿ‌…

Read More

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಾದ್ಯಂತ ಮಹಿಳೆಯರು ಮತ್ತು ಯುವತಿಯರು ನಾಪತ್ತೆಯಾಗುತ್ತಿರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿವೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದೂರುಗಳ ಪ್ರಕಾರ, ಒಟ್ಟು 3,255 ಮಹಿಳೆಯರು ಕಣ್ಮರೆಯಾಗಿದ್ದಾರೆ. ರಾಜ್ಯ ಗೃಹ ಇಲಾಖೆ ಅಂಕಿ- ಅಂಶಗಳ ಮಾಹಿತಿಯಂತೆ, 2023ರಿಂದ 2026 ಫೆ.20ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್‌ ಠಾಣೆಗಳಲ್ಲಿ ಮಹಿಳೆಯರು ಹಾಗೂ ಯುವತಿಯರು ಕಾಣೆಯಾದ ಒಟ್ಟು 52,438 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 49,183 ಮಂದಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ, 3,255 ಮಂದಿಯ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ. ಹಾಗಾಗಿ ಪ್ರಕರಣಗಳು ತನಿಖಾ ಹಂತದಲ್ಲೇ ಉಳಿದಿವೆ. ಮಹಿಳೆಯರ ನಾಪತ್ತೆಗೆ ಸಂಬಂಧಿಸಿದಂತೆ 2023ರಲ್ಲಿ 13,392 ಪ್ರಕರಣಗಳು, 2024ರಲ್ಲಿ14,272 ಪ್ರಕರಣ, 2025ರಲ್ಲಿ 15,027 ಪ್ರಕರಣಗಳು ಹಾಗೂ 2026ರಲ್ಲಿ ಫೆ.20ರವರೆಗೆ 2,135 ಪ್ರಕರಣಗಳು ಸೇರಿದಂತೆ ಒಟ್ಟು 44,826 ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಕಳೆದ 3 ವರ್ಷಗಳಲ್ಲಿ ಒಟ್ಟು 42,573 ಕಾಣೆಯಾದ…

Read More

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಎದುರಾಗಿರುವ ಅಡುಗೆ ಅನಿಲ (LPG) ಸಿಲಿಂಡರ್ ವಿತರಣೆಯ ವಿಳಂಬ ಮತ್ತು ತಾಂತ್ರಿಕ ಸಮಸ್ಯೆಗಳು ಇನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ಬಗೆಹರಿಯಲಿವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಹೋಟೆಲ್ ಮಾಲೀಕರು ತಾತ್ಕಾಲಿಕವಾಗಿ ಪರಿಸ್ಥಿತಿಗೆ ಹೊಂದಿಕೊಳ್ಳಬೇಕು ಎಂದು ಮನವಿ ಮಾಡಿದರು.ಇರಾನ್ ಈಗಾಗಲೇ ಭಾರತ ದೇಶದೊಂದಿಗೆ ಸ್ನೇಹ ಸಂಬಂಧವನ್ನು ಬಲಪಡಿಸುವ ಬಗ್ಗೆ ಹೇಳಿಕೆ ನೀಡಿದ್ದು, ಭಾರತಕ್ಕೆ ಹತ್ತರಿಂದ ಹನ್ನೆರಡು ಹಡಗುಗಳ ಮೂಲಕ ಗ್ಯಾಸ್ ಸರಬರಾಜು ಆಗಲಿದೆ. ಈಗಾಗಲೇ ಎರಡು ಹಡಗುಗಳು ಭಾರತಕ್ಕೆ ಪ್ರಯಾಣ ಬೆಳೆಸಿವೆ ಎಂದು ಸಚಿವರು ಮಾಹಿತಿ ನೀಡಿದರು. ಹೋಟೆಲ್ ತಿಂಡಿಗಳ ಮೇಲೆ ಬಹಳಷ್ಟು ಜನರು ಅವಲಂಬಿತರಾಗಿರುವುದರಿಂದ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ವಿಚಾರವಾಗಿ ಸೋಮವಾರ ಅಧಿಕಾರಿಗಳ ಸಭೆ ಕರೆದಿದ್ದು, ಸಮಸ್ಯೆ ಪರಿಹಾರ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದರು.ಇದೇ…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿ, ಕಾರು ಮತ್ತು ಲಾರಿ ಮಧ್ಯೆ ಭೀಕರವಾದ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೇರಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತರ ಕುರಿತು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆ ಕುರಿತಂತೆ ಚಳ್ಳಕೆರೆ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆ ಸುರಕ್ಷತೆಗಾಗಿ ಕೆಲವು ಅಗತ್ಯ ಕ್ರಮಗಳು: ಇಂತಹ ಘಟನೆಗಳು ಮರುಕಳಿಸದಿರಲು ಚಾಲಕರು ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ವಹಿಸುವುದು ಅತ್ಯಗತ್ಯ: ವೇಗದ ಮಿತಿ: ಹೆದ್ದಾರಿಗಳಲ್ಲಿ ನಿಗದಿಪಡಿಸಿದ ವೇಗದ ಮಿತಿಯನ್ನು ಎಂದಿಗೂ ಮೀರಬೇಡಿ. ಏಕಾಗ್ರತೆ: ಚಾಲನೆ ಮಾಡುವಾಗ ಮೊಬೈಲ್ ಬಳಕೆ ಅಥವಾ ಗಮನ ಬೇರೆಡೆ ಸೆಳೆಯುವ ಕೆಲಸಗಳನ್ನು ಮಾಡಬೇಡಿ. ನಿದ್ರೆ ಮತ್ತು ಆಯಾಸ: ದೀರ್ಘ ಪ್ರಯಾಣದ ಸಂದರ್ಭದಲ್ಲಿ ಆಯಾಸವಾದರೆ ಅಥವಾ ನಿದ್ರೆ ಬರುತ್ತಿದ್ದರೆ ಕೂಡಲೇ ವಾಹನ ನಿಲ್ಲಿಸಿ ವಿಶ್ರಾಂತಿ ಪಡೆಯಿರಿ. ಓವರ್‌ಟೇಕ್: ತಿರುವುಗಳಲ್ಲಿ ಅಥವಾ…

Read More

ಚಿಕ್ಕಮಗಳೂರು : ಸಾಮಾನ್ಯವಾಗಿ ಹಿಂದೂ ಸಂಪ್ರದಾಯದಲ್ಲಿ ಮನೆಯಲ್ಲಿ ಯಾರಾದರೂ ಮೃತಪಟ್ಟರೆ ಅಂತ್ಯ ಸಂಸ್ಕಾರ ಹಾಗೂ ದೇಹಕ್ಕೆ ಅಗ್ನಿಸ್ಪರ್ಶ ಮಾಡುವ ವಿಧಿ-ವಿಧಾನಗಳನ್ನು ಸಾಮಾನ್ಯವಾಗಿ ಗಂಡು ಮಕ್ಕಳೇ ಮಾಡುವ ಸಂಪ್ರದಾಯ ಈ ಹಿಂದಿನಿಂದಲೂ ಇದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಸಂಪ್ರದಾಯಕ್ಕೆ ಸೆಡ್ಡು ಹೊಡೆದು, ಅದಕ್ಕೆ ಮೀರಿದ ಘಟನೆಯೊಂದು ನಡೆದಿದೆ. ಇದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಹೆಣ್ಣುಮಕ್ಕಳು ತಂದೆಯ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಲಿಂಗ ಸಮಾನತೆಯ ಸಂದೇಶ ಸಾರಿದ್ದಾರೆ. ಭಾವಸಾರ ಕ್ಷತ್ರಿಯ ಸಮಾಜದ ಬಿ.ಎಸ್.ವಿಶ್ವನಾಥ ಎಂಬವರು ನಿಧನರಾಗಿದ್ದರು. ಆದರೆ, ಅವರಿಗೆ ಗಂಡು ಮಕ್ಕಳು ಇರಲಿಲ್ಲ. ಹೀಗಾಗಿ, ಮಗಳು ಐಶ್ವರ್ಯ ಅವರೇ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ತಂಗಿ ಹಾಗೂ ಭಾವನ ಜೊತೆ ಸೇರಿ ತಂದೆಯ ಅಂತಿಮ ಧಾರ್ಮಿಕ ವಿಧಿ, ವಿಧಾನಗಳನ್ನು ಪೂರೈಸಿದ್ದಾರೆ. ಮೃತದೇಹದ ಸುತ್ತ ಹೆಗಲ ಮೇಲೆ ಕುಡಿಕೆ ಹೊತ್ತು ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನೆರವೇರಿಸಿದ ಹೆಣ್ಣುಮಗಳು ಎಲ್ಲರ ಗಮನ ಸೆಳೆದರು. ಬೀರೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.…

Read More

ಅಸ್ಸಾಂ : ದೆಹಲಿಯಲ್ಲಿ AI ಶೃಂಗಸಭೆ ನಡೆದಿದ್ದನ್ನು ನೀವೆಲ್ಲ ನೋಡಿದ್ದೀರಿ. ಕಳೆದ ತಿಂಗಳು ದೆಹಲಿಯಲ್ಲಿ ವಿಶ್ವದ ಎಐ ಶೃಂಗ ಸಭೆ ಆಯೋಜಿಸಿದ್ದೆವು. ಈಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಿದರು ನಾನು ನಿಮಗೆ ಕೇಳಲು ಬಯಸುತ್ತೇನೆ ನೀವು ಈಗಾಗಲೇ ಬೆತ್ತಲಾಗಿದ್ದೀರಿ ಎನ್ನುವುದು ದೇಶಕ್ಕೆ ಗೊತ್ತಿದೆ ಆದರೂ ನಿಮಗೆ ಅನಿಸಿತು ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದರು. ಅಸ್ಸಾಂನ ಚಿಲಚರ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದು, ವಿಶ್ವದ 80ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ದೆಹಲಿಗೆ ಬಂದಿದ್ದರು. ಇದುವರೆಗೂ ಅಭಿವೃದ್ಧಿ ಶೀಲ ರಾಷ್ಟ್ರದಲ್ಲಿ ಇಂತಹ ಸಮ್ಮೇಳನ ನಡೆದಿರಲಿಲ್ಲ. ಆದರೆ ಕಾಂಗ್ರೆಸ್ ಪಕ್ಷದವರು ಭಾರತದ ಜಾಗತಿಕ ಕಾರ್ಯಕ್ರಮವನ್ನು ತಮ್ಮ ಬೆತ್ತಲೆ ಮತ್ತು ಕೊಳಕು ರಾಜಕೀಯದ ಅಖಾಡವನ್ನಾಗಿ ಪರಿವರ್ತಿಸಿದರು. ಅತಿಥಿಗಳ ಮುಂದೆ ವಿವಸ್ತ್ರಗೊಳ್ಳುತ್ತ ಶೃಂಗಸಭೆ ಸ್ಥಳಕ್ಕೆ ಬಂದಿದ್ದರು. ಕಾಂಗ್ರೆಸ್ ನಾಯಕರು ಮತ್ತು ಮುಖಂಡರನ್ನು ನಾನು ಕೇಳಲು ಬಯಸುತ್ತೇನೆ ನೀವು ಈಗಾಗಲೇ ಬೆತ್ತಲೆಯಾಗಿದ್ದೀರಿ ಎಂದು ಇಡೀ ದೇಶಕ್ಕೆ ತಿಳಿದಿದೆ. ಹಾಗಿದ್ದು ನಿಮ್ಮ ಬಟ್ಟೆಗಳನ್ನು ತೆಗೆಯಬೇಕೆಂದು ನಿಮಗೆ ಏಕೆ…

Read More

ದಾವಣಗೆರೆ : ದಾವಣಗೆರೆಯಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಖಾಸಗಿ ಆಸ್ಪತ್ರೆ ನರ್ಸ್​​ ಎಂದು ಹೇಳಿಕೊಂಡು ಕಷ್ಟ ಅಂತ ಹೇಳಿಕೊಂಡು ಉದ್ಯಮಿ ಹನಿಟ್ರ್ಯಾಪ್ ಮಾಡಲು ಹೋಗಿದ್ದ ಮಹಿಳೆ ಮತ್ತು ಆಕೆಯ ಜತೆಗೆ ಇದ್ದ ವ್ಯಕ್ತಿಗಳು ಇದೀಗ ತಮ್ಮ ತಪ್ಪಿನ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ. ಆರೋಪ ಹೊತ್ತಿರುವ ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಇಂದು ಸುದ್ದಿಗೋಷ್ಠಿ ನಡೆಸಿ, ನಾವು ಹನಿಟ್ರ್ಯಾಪ್ ಮಾಡಿಲ್ಲ, ಬದಲಾಗಿ ನಮ್ಮನ್ನು ಪ್ರಭಾವಿಗಳು ಸಂಚು ರೂಪಿಸಿ ಸಿಲುಕಿಸಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಮಹಿಳೆ, ಓರ್ವ ಪ್ರಭಾವಿ ವ್ಯಕ್ತಿಯಿಂದ ನಮಗೆ ತೊಂದರೆಯಾಗಿತ್ತು. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು. ಬಡ ಹೆಣ್ಣು ಮಕ್ಕಳ ಮತ್ತು ಸಾಮಾನ್ಯ ಜನರ ಜೀವನದ ಜೊತೆ ಆಟವಾಡುವ ಪ್ರಭಾವಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಆರೋಪಿತರು ಪೂರ್ವ ವಲಯ ಐಜಿಪಿ (IGP) ಅವರಿಗೆ ಸಮಗ್ರ ತನಿಖೆ ಕೋರಿ ಮನವಿ ಸಲ್ಲಿಸಿದ್ದಾರೆ.ಈ ಹಿಂದೆ ಇದೇ ಪ್ರಕರಣದಲ್ಲಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್…

Read More

ನವದೆಹಲಿ : ಇರಾನಿನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿಯಬಗ್ಗೆ ಸುಳಿವು ನೀಡಿದವರಿಗೆ 10 ಮಿಲಿಯನ್‌ ಡಾಲರ್‌ ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ. ಮೊಜ್ತಾಬಾ ಖಮೇನಿ ಸೇರಿದಂತೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ಗೆ (IRGC) ಸಂಬಂಧಿಸಿದ ಹಲವಾರು ಹಿರಿಯ ಅಧಿಕಾರಿಗಳ ಫೋಟೋವನ್ನು ಅಮೆರಿಕದ ಡಿಪಾರ್ಟ್‌ಮೆಂಟ್‌ನ ಡಿಪ್ಲೊಮ್ಯಾಟಿಕ್ ಸೆಕ್ಯುರಿಟಿ ಸರ್ವಿಸ್‌ ನಡೆಸುವ ರಿವಾರ್ಡ್ಸ್ ಫಾರ್ ಜಸ್ಟೀಸ್ ಅಪ್ಲೋಡ್‌ ಮಾಡಿ ನಗದು ಬಹುಮಾನ ಪ್ರಕಟಿಸಿದೆ ಈ ವ್ಯಕ್ತಿಗಳು ಪ್ರಪಂಚದಾದ್ಯಂತ ಭಯೋತ್ಪಾದನೆಯನ್ನು ಯೋಜಿಸುವ, ಸಂಘಟಿಸುವ ಮತ್ತು ಕಾರ್ಯಗತಗೊಳಿಸುವ ಐಆರ್‌ಜಿಸಿಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಅದನ್ನು ಟಾರ್‌ ಆಧಾರಿತ ಟಿಪ್‌ಲೈನ್ ಅಥವಾ ಸಿಗ್ನಲ್ ಮೂಲಕ ನಮಗೆ ಕಳುಹಿಸಿ ಎಂದು ಕೇಳಿಕೊಂಡಿದೆ. https://twitter.com/RFJ_USA/status/2032482180568654025?t=o1UzWMmZzAiqx1XF45fy9w&s=19

Read More

ಮಹಾರಾಷ್ಟ್ರ : ರೈಲು ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಗರದಲ್ಲಿ ನಡೆದಿದೆ. ಪೊಲೀಸರ ಲಾಠಿ ಚಾರ್ಜ್ ಗೆ ಹೆದರಿ ಮೂವರು ಯುವಕರು ಹೆದರಿ ಓಡಿ ಹೋಗುತ್ತಿದ್ದರು. ಈ ವೇಳೆ ಗೂಡ್ಸ್ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಸ್ವಪ್ನಿಲ್ ಶೈಲೇಶ ಪಲಾಂಡೆ (23) ಕುನಾಲ್ ಕುಮಾರ್ (23) ಹಾಗೂ ಅಪ್ರೋಜ್ ಖಲೀಲ್ ಶೇಕ್ (28) ಮೃತ ದುರ್ದೈವಿಗಳು. ಓಲ್ಡ್ ಪಾಲ್ಗರ್ ನಲ್ಲಿರುವ ಜೈನ ದೇವಸ್ಥಾನದ ಬಳಿ ಗುಂಪು ಸೇರಿತ್ತು. ಗುಂಪು ಚತುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ವೇಳೆ ರೈಲ್ವೆ ಹಳಿಯ ಕಡೆಗೆ ಮೂವರು ಯುವಕರು ಓಡಿ ಹೋಗುತ್ತಿದ್ದರು. ಇದೇ ವೇಳೆ ಬರುತ್ತಿದ ರೈಲು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದರೆ. ಪೊಲೀಸರ ವಿರುದ್ಧ ಮೃತರ ಕುಟುಂಬದವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

Read More