Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು, ಅಭಿಮಾನಿಗಳನ್ನು ಉದ್ದೇಶಿಸಿ ಭರ್ಜರಿ ಭಾಷಣ ಮಾಡಿದರು. ಅದಾದ ಬಳಿಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವ ಹಾಗೂ ಆರ್ಟ್ ಆಫ್ ಲಿವಿಂಗ್ ಆಶ್ರಮದ 45ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗಿಯಾದರು. ಇವಳೆ ಧ್ಯಾನ ಮಂದಿರ ಉದ್ಘಾಟಿಸಿದರು. ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ತೆರಳುವ ಮುನ್ನ ಮಾತನಾಡಿದ ಅವರು, ಭಾರತವು ಬಲಿಷ್ಠವಾಗಬೇಕಾದರೆ ಅದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ. ನಮಗೆ ಮಾನಸಿಕ ಶಾಂತಿ ಮತ್ತು ಆಧ್ಯಾತ್ಮಿಕ ಬಲವೂ ಬೇಕು. ಶ್ರೀ ಶ್ರೀ ರವಿಶಂಕರ್ ಗುರೂಜಿಯವರಂತಹ ಮಹನೀಯರು ಈ ಕೆಲಸವನ್ನು ಜಾಗತಿಕ ಮಟ್ಟದಲ್ಲಿ ಮಾಡುತ್ತಿದ್ದಾರೆ. ಅವರ 70ನೇ ಜನ್ಮೋತ್ಸವದ ಸಂದರ್ಭದಲ್ಲಿ ಹೊಸ ಧ್ಯಾನ ಮಂದಿರ ಉದ್ಘಾಟಿಸುತ್ತಿರುವುದು ನನ್ನ ಸೌಭಾಗ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ,…
ಕಲಬುರಗಿ: ಪ್ರೀತಿ ಎಂಬುದು ಎಷ್ಟು ಸುಂದರವೋ, ಅದು ಮುರಿದುಬಿದ್ದಾಗ ಆಗುವ ನೋವು ಅಷ್ಟೇ ಭೀಕರ. ಪ್ರೀತಿಸಿದ ಹುಡುಗಿ ಕೈಕೊಟ್ಟಾಗ ಯುವಕನೊಬ್ಬ ತನ್ನ ಅಜ್ಜಿಯ ಮುಂದೆ ಕಣ್ಣೀರಿಡುತ್ತಾ ಮಗುವಿನಂತೆ ನೋವು ತೋಡಿಕೊಂಡಿರುವ ಹೃದಯಸ್ಪರ್ಶಿ ವಿಡಿಯೋವೊಂದು ಈಗ ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಪ್ರೀತಿಸಿದ ಹುಡುಗಿಯಿಂದ ದೂರಾದ ನೋವು: ಮೂಲತಃ ಕಲಬುರಗಿಯವನಾದ ಮೌನೇಶ್ ಎಂಬ ಯುವಕ ಈ ವಿಡಿಯೋ ಹಂಚಿಕೊಂಡಿದ್ದಾನೆ. ತಾನು ಗಾಢವಾಗಿ ಪ್ರೀತಿಸಿದ ಯುವತಿ, “ನಮ್ಮ ಪ್ರೀತಿಯನ್ನು ಮನೆಯವರು ಒಪ್ಪುತ್ತಿಲ್ಲ” ಎಂಬ ಕಾರಣ ನೀಡಿ ಆತನಿಂದ ದೂರಾಗಿದ್ದಾಳೆ. ಪ್ರೀತಿಯಲ್ಲಿ ಸೋತ ಯುವಕ ಆಘಾತಕ್ಕೊಳಗಾಗಿ, ತನ್ನ ನೋವನ್ನು ತಡೆದುಕೊಳ್ಳಲಾಗದೆ ಅಜ್ಜಿಯ ಮೊರೆ ಹೋಗಿದ್ದಾನೆ. ಅಜ್ಜಿಯ ಬಳಿ ಅಳಲು ತೋಡಿಕೊಂಡ ಮೊಮ್ಮಗ: ತನ್ನ ಇನ್‌ಸ್ಟಾಗ್ರಾಮ್ ಖಾತೆಯಾದ (m.k.bhai.mounesh) ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಯುವಕ ಅಜ್ಜಿಯ ಬಳಿ ಕುಳಿತು ಅಳುತ್ತಿದ್ದಾನೆ. “ನನಗೆ ರಾತ್ರಿ ನಿದ್ದೆ ಬರುತ್ತಿಲ್ಲ, ಆಕೆಯನ್ನು ಮರೆಯಲು ಸಾಧ್ಯವಾಗುತ್ತಿಲ್ಲ, ಸಿಕ್ಕಾಪಟ್ಟೆ ಅಳು ಬರುತ್ತಿದೆ” ಎಂದು ಅಜ್ಜಿಯ ಮಡಿಲಲ್ಲಿ ಮಗುವಿನಂತೆ ಅತ್ತು ತನ್ನ…
ಬೆಂಗಳೂರು : ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ (BJP) ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು, ಅಭಿಮಾನಿಗಳನ್ನು ಉದ್ದೇಶಿಸಿ ಭರ್ಜರಿ ಭಾಷಣ ಮಾಡಿದರು. ಬಂಗಾಳದ ಗೆಲುವಿನ ಸಂಭ್ರಮದ ಜೊತೆಗೆ ಕರ್ನಾಟಕದೊಂದಿಗಿನ ತಮ್ಮ ಅವಿನಾಭಾವ ಸಂಬಂಧ ಮತ್ತು ದೇಶದ ಅಭಿವೃದ್ಧಿಯಲ್ಲಿ ಕನ್ನಡಿಗರ ಪಾತ್ರವನ್ನು ಪ್ರಧಾನಿ ಮುಕ್ತಕಂಠದಿಂದ ಶ್ಲಾಘಿಸಿದರು. ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲ ಒಂದೊಂದು ಸಮಸ್ಯೆ ಇದ್ದೇ ಇರುತ್ತದೆ. ಹಿಮಾಚಲ ಪ್ರದೇಶದಲ್ಲಿ ಸಫಾಯಿ ಕರ್ಮಚಾರಿಗಳಿಗೆ ವೇತನ ದೊರೆಯುತ್ತಿಲ್ಲ. ತೆಲಂಗಾಣದಲ್ಲಿ ರೈತರ ಆತ್ಮಹತ್ಯೆಗಳಾಗುತ್ತಿವೆ. ಕೇರಳದಲ್ಲಿ ಬಹುಮತದೊಂದಿಗೆ ಚುನಾವಣೆ ಗೆದ್ದರೂ ಇನ್ನೂ ಸಿಎಂ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇಲ್ಲಿ ಕರ್ನಾಟಕದಲ್ಲೂ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ಆಂತರಿಕ ಕಚ್ಚಾಟವನ್ನು ಮೋದಿ ಲೇವಡಿ ಮಾಡಿದರು. ಬೆಂಗಳೂರನ್ನು ಭಾರತದ ಭವಿಷ್ಯದ ಎಂಜಿನ್ ಎಂದು ಕರೆದ ಪ್ರಧಾನಿ, ‘ಇಂದು ಇಡೀ…
ಚೈನ್ನೈ : ತಮಿಳುನಾಡಿನ ಚೆನ್ನೈನಲ್ಲಿ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ತಮಿಳುನಾಡು ಸಿಎಂ ಆದ ಬಳಿಕ ವಿಜಯ್ ಮೊದಲ ಭಾಷಣ ಮಾಡಿದ್ದು ಇದು ನನ್ನ ಗೆಲುವಲ್ಲ ಇದು ತಮಿಳುನಾಡಿನ ಜನತೆಯ ಗೆಲುವು. ಇಂದಿನಿಂದ ತಮಿಳುನಾಡಲ್ಲಿ ಹೊಸ ಯುಗ ಆರಂಭವಾಗಿದೆ ಎಂದು ಹೇಳಿದರು. ಪ್ರಣಾಳಿಕೆಯ ಮೊದಲ ಭರವಸಿಗೆ ವಿಜಯ್ ಸಹಿ ಹಾಕಿದ ಬಳಿಕ ಮಾತನಾಡಿದ ಅವರು, ನಾನು ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸುತ್ತೇನೆ.10 ಲಕ್ಷ ಕೋಟಿ ಸಾಲವನ್ನು ನನ್ನ ಮೇಲೆ ಹೊರಿಸಿದ್ದಾರೆ. ಸ್ಟಾಲಿನ್ ನೇತೃತ್ವದ ಹಿಂದಿನ ಸರ್ಕಾರ ರಾಜ್ಯದ ಖಜಾನೆ ಖಾಲಿ ಮಾಡಿದೆ. ಮೇಲೆ ಏಳಲು ಕಷ್ಟವಾಗಿದೆ. ತಮಿಳುನಾಡಿನ ಆರ್ಥಿಕ ದುಸ್ಥಿತಿಯಲ್ಲಿದೆ. ಇಂತಹ ಸಮಯದಲ್ಲಿ ನಾನು ಬಂದಿದ್ದೇನೆ. ರಾಜ್ಯದ ಆರ್ಥಿಕತೆ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇನೆ. ತಮಿಳುನಾಡಿನಲ್ಲಿ ಇದೀಗ ಹೊಸ ಯುಗ ಆರಂಭವಾಗಿದೆ. ತಮಿಳುನಾಡಿನ ಎಂಟು ಕೋಟಿ ಜನರು ನಮ್ಮವರೇ ನಿಮ್ಮ ಒಂದು ರೂಪಾಯಿಯನ್ನು ಲೂಟಿ ಹೊಡೆಯಲು ಬಿಡಲ್ಲ ಎಂದು ತಿಳಿಸಿದರು.…
ನವದೆಹಲಿ : ಇಂದು ಚೆನ್ನೈನ ಜವಾಹರ್ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದಲ್ಲಿ ದಳಪತಿ ವಿಜಯ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಈ ವಿಚಾರವಾಗಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಭವಿಷ್ಯದಲ್ಲಿ INDIA ಒಕ್ಕೂಟವನ್ನು ಸೇರಬಹುದು ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಆಶಾವಾದ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯ್ ಅವರ ಟಿವಿಕೆ ಪಕ್ಷವನ್ನು ಕೂಡ ‘ಇಂಡಿಯಾ’ ಕೂಟಕ್ಕೆ ಸೇರಲು ಮನವೊಲಿಸಬೇಕು ಎಂಬುದು ನನ್ನ ಆಸೆ. ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆಯೇ ಹೊರತು ಇಲ್ಲಿಯವರೆಗೆ ಇಂಡಿಯಾ ಕೂಟದ ಬಗ್ಗೆ ನಕಾರಾತ್ಮಕವಾಗಿ ಮಾತನಾಡಿಲ್ಲ. ಆದ್ದರಿಂದ ಅವರು ಮೈತ್ರಿಯಲ್ಲೇ ಉಳಿಯುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದರು. ರಾಜ್ಯ ಮಟ್ಟದಲ್ಲಿ ನಾವು ಪರಸ್ಪರ ಎದುರಾಳಿಗಳಾಗಿದ್ದರೂ ರಾಷ್ಟ್ರಮಟ್ಟದಲ್ಲಿ ಇಂಡಿಯಾ ಕೂಟದಲ್ಲಿ ಜೊತೆಯಾಗಿರಬಹುದು. ಇದಕ್ಕೆ ಕೇರಳದ ಸಿಪಿಎಂ ಮತ್ತು ಪಶ್ಚಿಮ ಬಂಗಾಳದ ಟಿಎಂಸಿ ಉದಾಹರಣೆಗಳಾಗಿವೆ ಎಂದರು.
ಚೈನ್ನೈ: ತಮಿಳುನಾಡಿನ ರಾಜಕೀಯ ರಂಗದಲ್ಲಿ ದಶಕಗಳ ಕಾಲದ ಸಿನೆಮಾ ವರ್ಚಸ್ಸಿನ ನಂತರ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ ದಳಪತಿ ವಿಜಯ್ ಅವರು ಇಂದು ಅಧಿಕೃತವಾಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಚೈನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಸಾಕ್ಷಿ ಮತ್ತು ಪ್ರತಿಜ್ಞಾವಿಧಿ: ತಮಿಳುನಾಡಿನಲ್ಲಿ ಸುದೀರ್ಘ ರಾಜಕೀಯ ಕಸರತ್ತು ಮತ್ತು ತೀವ್ರ ಪೈಪೋಟಿಯ ನಂತರ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ವಿಜಯ್ ಅವರಿಗೆ, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ವಿಜಯ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇಡೀ ಕ್ರೀಡಾಂಗಣದಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಈ ಮೂಲಕ ದ್ರಾವಿಡ ರಾಜಕಾರಣದಲ್ಲಿ ಹೊಸ ಪೀಳಿಗೆಯ ನಾಯಕತ್ವಕ್ಕೆ ನಾಂದಿ ಹಾಡಿದ್ದಾರೆ. ಗಣ್ಯರ ಉಪಸ್ಥಿತಿ ಮತ್ತು ರಾಜಕೀಯ ಮಹತ್ವ: ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಾಷ್ಟ್ರಮಟ್ಟದ…
ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಜೋರಾಗಿರಲಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಇದರೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ತಲುಪುವ…
ಬೆಳಗಾವಿ: ಹಳ್ಳಿಯ ಮಣ್ಣಿನ ಪ್ರತಿಭೆಯೊಂದು ರಾಷ್ಟ್ರಮಟ್ಟದಲ್ಲಿ ಮಿಂಚಿದಾಗ ಆ ಸಂಭ್ರಮ ಇಡೀ ನಾಡಿಗೆ ಹರಡುತ್ತದೆ. ಅಂತಹದ್ದೇ ಒಂದು ಐತಿಹಾಸಿಕ ಸಾಧನೆಯನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಸವದಿ ಗ್ರಾಮದ ಬಸವರಾಜ ಕೆಂಪವಾಡ ಮಾಡಿದ್ದಾರೆ. ಕೇಂದ್ರ ಲೋಕಸೇವಾ ಆಯೋಗವು (UPSC) ನಡೆಸಿದ 2025ನೇ ಸಾಲಿನ ಭಾರತೀಯ ಅರಣ್ಯ ಸೇವೆ (Indian Forest Service – IFS) ಪರೀಕ್ಷೆಯಲ್ಲಿ ಬಸವರಾಜ ಅವರು ಇಡೀ ದೇಶಕ್ಕೆ ಮೊದಲ ರ್‍ಯಾಂಕ್ (All India Rank 1) ಪಡೆಯುವ ಮೂಲಕ ಕರ್ನಾಟಕದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದ್ದಾರೆ. ಶುಕ್ರವಾರ ಪ್ರಕಟವಾದ ಫಲಿತಾಂಶವು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಕೃಷಿ ಕುಟುಂಬದ ಹಿನ್ನೆಲೆ ಮತ್ತು ಬಾಲ್ಯದ ಶಿಸ್ತು ಬಸವರಾಜ ಕೆಂಪವಾಡ ಅವರು ಅತ್ಯಂತ ಸಾಧಾರಣ ಕೃಷಿ ಕುಟುಂಬದಿಂದ ಬಂದವರು. ಇವರ ತಂದೆ ಮತ್ತು ತಾಯಿ ಕೇವಲ ಮೂರೂವರೆ ಎಕರೆ ಜಮೀನಿನಲ್ಲಿ ಹಗಲಿರುಳು ಶ್ರಮಿಸಿ ಕೃಷಿ ಮಾಡುತ್ತಾ ಮಕ್ಕಳ ಶಿಕ್ಷಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಆರ್ಥಿಕ ಮುಗ್ಗಟ್ಟಿನ ನಡುವೆಯೂ ಶಿಕ್ಷಣಕ್ಕೆ…
ಚೈನ್ನೈ: ತಮಿಳುನಾಡಿನ ರಾಜಕೀಯ ರಂಗದಲ್ಲಿ ದಶಕಗಳ ಕಾಲದ ಸಿನೆಮಾ ವರ್ಚಸ್ಸಿನ ನಂತರ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ ದಳಪತಿ ವಿಜಯ್ ಅವರು ಇಂದು ಅಧಿಕೃತವಾಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಚೈನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಸಾಕ್ಷಿ ಮತ್ತು ಪ್ರತಿಜ್ಞಾವಿಧಿ: ತಮಿಳುನಾಡಿನಲ್ಲಿ ಸುದೀರ್ಘ ರಾಜಕೀಯ ಕಸರತ್ತು ಮತ್ತು ತೀವ್ರ ಪೈಪೋಟಿಯ ನಂತರ ಬಹುಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದ ವಿಜಯ್ ಅವರಿಗೆ, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ವಿಜಯ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಇಡೀ ಕ್ರೀಡಾಂಗಣದಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಈ ಮೂಲಕ ದ್ರಾವಿಡ ರಾಜಕಾರಣದಲ್ಲಿ ಹೊಸ ಪೀಳಿಗೆಯ ನಾಯಕತ್ವಕ್ಕೆ ನಾಂದಿ ಹಾಡಿದ್ದಾರೆ. ಗಣ್ಯರ ಉಪಸ್ಥಿತಿ ಮತ್ತು ರಾಜಕೀಯ ಮಹತ್ವ: ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಾಷ್ಟ್ರಮಟ್ಟದ…
ಬೆಂಗಳೂರು : ಶ್ವಾಸಕೋಶ ಸೋಂಕಿನಿಂದ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ ಸುಧಾಕರ್ ಇಂದು ನಿಧನರಾಗಿದ್ದಾರೆ. ಸಚಿವ ಡಿ ಸುಧಾಕರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕರಾದ ಆರ್ ಅಶೋಕ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಿವೈ ವಿಜಯೇಂದ್ರ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಟ್ವೀಟ್ ನಲ್ಲಿ ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು. ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು…













