Subscribe to Updates
Get the latest creative news from FooBar about art, design and business.
Author: kannadanewsnow05
ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .. ಗೃಹಕಲಹವು ನಿಂತುಹೋಗುತ್ತದೆ .. ದೇವರ ಅನುಗ್ರಹ ಹಾಗೂ ಗುರುಗಳ ಅನುಗ್ರಹ ಎಂದೆಂದೂ ಇದ್ದು, ಶುಭಕಾರ್ಯಗಳು ಯಾವುದೇ ತೊಂದರೆ ಇರದೆ ಸುಸೂತ್ರವಾಗಿ ನಡೆಯುತ್ತದೆ.. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಈ ಎಣ್ಣೆಯ ಬೆಲೆ ಜಾಸ್ತಿ..…
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ನವೆಂಬರ್ ಬಂದರೆ ರಾಜ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸುತ್ತದೆ. ಇದರ ಬೆನ್ನಲ್ಲೆ, ಸಂಪುಟ ಪುನರ್ ರಚನೆ ಬಗ್ಗೆ ಕೂಡ ಹಲವು ನಾಯಕರಿಂದ ಕೂಗು ಕೇಳಿ ಬರುತ್ತಿದ್ದು, ಇದರ ಮಧ್ಯ ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಇದ್ದೇನೆ. ಎರಡುವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಆಗುತ್ತೆ. ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು, ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾತ ತೀರ್ಮಾನಿಸುತ್ತದೆ. ಸಂಪುಟ ಪುನರು ರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ ಎಂದರು. ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನವನ್ನು ನೀಡಿದೆ. ಅರ್ಹತೆ ಮೀರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ ಹೈ ಕಮಾಂಡ್ ಹೇಳಿದರೆ ನಾನು…
ಬೆಂಗಳೂರು : ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದು, ನಟ ಮತ್ತು ಚಿಂತಕ ಪ್ರಕಾಶ್ ಬಳವಾಡಿ ಅವರು ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರ ಪರವಾಗಿ ಬಿಜೆಪಿ ಸಂಸದ ಹಾಗೂ ವಕೀಲ ತೇಜಸ್ವಿ ಸೂರ್ಯ ವಾದ ಮಂಡಿಸಿದರು. ತಾಂತ್ರಿಕ ವಿಶ್ಲೇಷಣೆ ಮತ್ತು ಪರಿಸರ ಪರಿಣಾಮ ಅಧ್ಯಯನ ನಡೆಸದೆ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನ ಲಾಲ್ಬಾಗ್ನಲ್ಲಿ 6.5 ಎಕರೆ ಭೂಮಿ ಸ್ವಾಧೀನಕ್ಕೆ ಉದ್ದೇಶಿಸಲಾಗಿದೆ. ನೈಸರ್ಗಿಕವಾಗಿ ರಚನೆ ಆಗಿರುವ ಬಂಡೆಗೆ ಹಾನಿಯಾಗುವ ಸಾಧ್ಯತೆ ಇದೆ. ಕಾನೂನು ಪ್ರಕ್ರಿಯೆಗಳನ್ನು ಪಾಲಿಸದೆ ಯೋಜನೆ ರೂಪಿಸಲಾಗಿದೆ. ಹೀಗಾಗಿ ಟೆಂಡರ್ ಅಧಿಪೂಚನೆಗೆ ತಡೆ ನೀಡುವಂತೆ ಮನವಿ ಮಾಡಿದರು. ಲಾಲ್ಬಾಗ್ನಲ್ಲಿ ಮರ ಕಡಿಯುವ ಪ್ರಸ್ತಾವನೆ ಇದೆಯಾ ಎಂದು ಹೈಕೋರ್ಟ್ ಪ್ರಶಿಸಿತು. ಈ ವೇಳೆ ಸರ್ಕಾರಿ ವಕೀಲರು ಕಾಲಾವಕಾಶ ಕೋರಿದ್ದಾರೆ.
ಚಿಕ್ಕಮಗಳೂರು : ಇತ್ತೀಚಿಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮನೆಗಳ್ಳತನದಲ್ಲಿ ಚಡ್ಡಿ ಗ್ಯಾಂಗ್ ಅಲರ್ಟ್ ಆಗಿತ್ತು. ಇದೀಗ ಮನೆಗಳ್ಳತನ ಮಾಡುತ್ತಿದ್ದ ಚಡ್ಡಿ ಗ್ಯಾಂಗಿನ ಇಬ್ಬರು ಕಳ್ಳರನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಮಹಾರಾಷ್ಟ್ರ ಮೂಲದ ಪಪ್ಪು ಟಿಪ್ಪ ಪವಾರ್ ಮತ್ತು ಮಂಗೇಶ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತರ ಬಳಿ ಇದ್ದ 32 ಲಕ್ಷ ಮೌಲ್ಯದ ಚಿನ್ನ ಬೆಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಡಾವಣೆಯಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದರು. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ತೀವ್ರವಾದ ಹುಡುಕಾಟ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಚಿತ್ರದುರ್ಗ, ಗದಗ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಮನೆಗಳತನ ಪ್ರಕರಣಗಳು ದಾಖಲಾಗಿದ್ದವು.
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಚಾಲಕ ಸೇರಿ ಮೂವರ ಸ್ಥಿತಿ ಗಂಭೀರವಾಗಿದ್ದು ಮೈಸೂರು ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಮೃತರನ್ನು ಕೇರಳದ ಕಲ್ಪಟ್ಟ ಮೂಲದ ರಶೀದ್ (40) ಮತ್ತು ನಜೀರಾ (38) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಬೇಗುರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ನವೆಂಬರ್ ಬಂದರೆ ರಾಜ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸುತ್ತದೆ. ಇದರ ಬೆನ್ನಲ್ಲೆ, ಸಂಪುಟ ಪುನರ್ ರಚನೆ ಬಗ್ಗೆ ಕೂಡ ಹಲವು ನಾಯಕರಿಂದ ಕೂಗು ಕೇಳಿ ಬರುತ್ತಿದ್ದು, ಇದರ ಮಧ್ಯ ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಇದ್ದೇನೆ. ಎರಡುವರೆ ವರ್ಷದ ಬಳಿಕ ಸಂಪುಟ ಪುನರ್ ರಚನೆ ಆಗುತ್ತೆ. ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು, ಸಚಿವರಾಗಲು ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು. ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾತ ತೀರ್ಮಾನಿಸುತ್ತದೆ. ಸಂಪುಟ ಪುನರು ರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ ಎಂದರು. ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನವನ್ನು ನೀಡಿದೆ. ಅರ್ಹತೆ ಮೀರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ ಹೈ ಕಮಾಂಡ್ ಹೇಳಿದರೆ ನಾನು…
ವಿಜಯಪುರ : ರಾಜ್ಯದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಕುರಿತು ಈಗಾಗಲೇ ಭಾರಿ ಚರ್ಚೆಗೆ ಗ್ರಾಸವಾಗಿದ್ದು ಅದರಲ್ಲೂ ಚಿತ್ತಾಪುರದಲ್ಲಿ ಆರ್‌ಎಸ್ ಪಥ ಸಂಚಲನ ಕುರಿತು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು ಎಂದು ಗಂಭೀರವಾಗಿ ಆರೋಪಿಸಿದ್ದಾರೆ ವಿಜಯಪುರದಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು. ಆರ್ ಎಸ್ ಎಸ್ ಸ್ವತಂತ್ರ ಹೋರಾಟದಲ್ಲಿ ಯಾಕೆ ಪಾಲ್ಗೊಂಡಿರಲಿಲ್ಲ? ಸ್ವತಂತ್ರ ಹೋರಾಟ ಎಂಬುವುದೇ ಒಂದು ದೊಡ್ಡ ಸುನಾಮಿ. ಯಾಕೆ ಆರ್ ಎಸ್ ಎಸ್ ಆ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ? ಇವರೆಲ್ಲ ದೇಶಭಕ್ತರಂತೆ, ಇವರಿಂದ ನಾವು ಕಲಿಯಬೇಕಾ? ಯಾರು ಸ್ವತಂತ್ರ ಹೋರಾಟದಲ್ಲಿ ಭಾಗವಹಿಸಿಲ್ಲವೋ ಅವರಿಂದ ನಾವು ಈಗ ಕಲಿಯಬೇಕಿದೆ ಎಂದು ಟಾಂಗ್ ನೀಡಿದರು. ರಾಜ್ಯದಲ್ಲಿ ಆರ್ ಎಸ್ ಎಸ್ ಗೆ ಕಡಿವಾಣ ಹಾಕುವ ವಿಚಾರವಾಗಿ ಯಾವುದೇ ಕಾರ್ಯಕ್ರಮ ಇರಲಿ, ಅನುಮತಿ ಪಡೆಯಲೇಬೇಕು. ಇದರಲ್ಲಿ…
ಯಾದಗಿರಿ : ರಾಜ್ಯದಲ್ಲಿ ಒಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯೊಬ್ಬರ ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದೆ. ಅ.16 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಗಂಗಾಬಾಯಿ ಶಂಕರ ಚಿನ್ನಾರಾಠೋಡ (35) ಸಂತ್ರಸ್ತೆ ಎಂದು ತಿಳಿದುಬಂದಿದೆ.ಸಂತ್ರಸ್ತೆ ಆರೋಗ್ಯ ಸಮಸ್ಯೆಯಿಂದಾಗಿ ಕಲಬುರಗಿ ಇರುವ ಚಿಕ್ಕಮ್ಮನ ಮನೆಗೆ ಆಗಾಗ ಹೋಗುತ್ತಿದ್ದಳು. ಆಕೆಯ ಅಳಿಯ ರಾಮು ರಾಠೋಡ ಎಂಬಾತ ಆಕೆಯನ್ನು ಕರೆದುಕೊಂಡು ಹೋಗುತ್ತಿದ್ದ. ಆದ್ರೆ ಆರೋಪಿಗಳು ಅಳಿಯನ ಜೊತೆಗೆ ಸಂಬಂಧ ಇಟ್ಟುಕೊಂಡು ಓಡಿ ಹೋಗಿ ಮರ್ಯಾದೆ ತೆಗೆದಿದ್ದೀಯಾ ಅಂತ ನಿಂದಿಸಿ ಮನಸೋಇಚ್ಛೆ ಥಳಿಸಿದ್ದಾರೆ. ಸುಮಾರು 11 ಜನ ಗಂಗೂಭಾಯಿಯನ್ನ ಒದ್ದು ನೆಲಕ್ಕೆ ಕೆಡವಿದ್ದಾರೆ. ಆಕೆಯನ್ನ ಹಿಡಿದು ತಲೆಕೂದಲು ಕತ್ತರಿಸಿದ್ದಾರೆ. ನಂತರ ತಲೆಗೆ ಸುಣ್ಣ ಹಚ್ಚಿ, ಮೈಮೇಲೆ ಕಾರದಪುಡಿ ಹಾಕಿ ದುಷ್ಕೃತ್ಯ ಎಸಗಿದ್ದಾರೆ. ಜೊತೆಗೆ ಗಂಗಾಭಾಯಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ.ಪ್ರಕರಣ ಸಂಬಂಧ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಎಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಗಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆದರು.
ಆಂಧ್ರಪ್ರದೇಶ : ಆಂಧ್ರಪ್ರದೇಶ ಮತ್ತು ಬೆಂಗಳೂರು ನಡುವೆ ಕರ್ನೂಲ್ ನಲ್ಲಿ ಖಾಸಗಿ ಬಸ್ ದುರಂತದಲ್ಲಿ ಇದುವರೆಗೂ 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಸ್ ಚಾಲಕ ಮಿರಿಯಾಲ ಲಕ್ಷ್ಮಯ್ಯನನ್ನು ಅರೆಸ್ಟ್ ಮಾಡಲಾಗಿದೆ. ಚಾಲಕರನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕ ಅಂಶ ಬಯಲಾಗಿದ್ದು ಚಾಲಕ ಮಿರ್ಯಾಲ ಲಕ್ಷ್ಮಯ್ಯ ಪಲ್ನಾಡ್ ನಗರದ ನಿವಾಸಿಯಾಗಿದ್ದು, ಆತ ನಕಲಿ ಅಂಕಪಟ್ಟಿ ನೀಡಿ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದ ಎಂದು ತಿಳಿದುಬಂದಿದೆ. ಹತ್ತನೇ ಕ್ಲಾಸ್ ಪಾಸ್ ಆಗಿರೋ ನಕಲಿ ಅಂಕಪಟ್ಟಿ ಸಲ್ಲಿಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ. ಆರೋಪಿ ಚಾಲಕನನ್ನು ಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.














