Subscribe to Updates
Get the latest creative news from FooBar about art, design and business.
Author: kannadanewsnow05
ಹಣವಿಲ್ಲದಿದ್ದರೂ ಮನುಷ್ಯ ತನ್ನ ಜೀವನವನ್ನು ನಡೆಸಬಹುದು. ಆದರೆ ಸಾಲದಿಂದ ಬದುಕುವುದು ತುಂಬಾ ಕಷ್ಟ. ಆ ಸಾಲದ ಸಮಸ್ಯೆಯಿಂದ ಹೊರಬರಲು ಇಂದು ಮಾಡಬೇಕಾದ ಸರಳ ತಾಂತ್ರಿಕ ಪೂಜೆಯನ್ನು ನಾವು ತಿಳಿಯಲಿದ್ದೇವೆ. ಇಂದು ಪುರಟಾಸಿ ಮಾಸದ ಕೊನೆಯ ಶನಿವಾರ. ತಿರುವೋಣಾ ನಕ್ಷತ್ರವೂ ಇದೆ. ಅಷ್ಟೇ ಅಲ್ಲ ಇಂದು ವಿಜಯದಶಮಿ ದಿನ. ಹಲವು ವಿಶೇಷತೆಗಳನ್ನು ಹೊಂದಿರುವ ಈ ದಿನದಂದು ವಿಶ್ವಾದ್ಯಂತ ಧನಾತ್ಮಕ ಶಕ್ತಿ ತುಂಬಿರುತ್ತದೆ. ಈ ಭೂಮಿಯಲ್ಲಿ ಎಷ್ಟು ಜನರ ಪ್ರಾರ್ಥನೆಗಳು, ಎಷ್ಟು ಜನರ ಸಕಾರಾತ್ಮಕ ಆಲೋಚನೆಗಳು, ಎಷ್ಟು ಜನರ ಪ್ರಾರ್ಥನೆಗಳು ಸಂಭವಿಸಿರಬಹುದು. ಆ ಸಕಾರಾತ್ಮಕ ಶಕ್ತಿಯೊಂದಿಗೆ, ನಾವು ಮಾಡುವ ಯಾವುದೇ ಪ್ರಾರ್ಥನೆಯನ್ನು ದೇವರು ಖಂಡಿತವಾಗಿಯೂ ಪೂರೈಸುತ್ತಾನೆ. ಅದಕ್ಕೆ ಒಂದು ವಿಧಾನವೇ ನಾವೀಗ ನೋಡಲಿರುವ ಈ ಪರಿಹಾರ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು…
ತುಮಕೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇದೆ ಮೊದಲ ಬಾರಿಗೆ ತುಮಕೂರಲ್ಲಿ ಚಾಮುಂಡೇಶ್ವರಿ ದೇವಿಯ ಜಂಬೂ ಸವಾರಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ತಮಟೆ ಸೌಂಡ್ ಗೆ ಗೃಹ ಸಚಿವ ಜಿ ಪರಮೇಶ್ವರ್ ರವರು ಭರ್ಜರಿ ಸ್ಟೆಪ್ ಹಾಕಿದರು. ಹೌದು ಇಂದು ತುಮಕೂರಲಿ ನಡೆದ ಮೊದಲ ಬಾರಿಯ ಜಂಬೂ ಸವಾರಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಪತ್ನಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಈ ವೇಳೆ ತಾಯಿ ಚಾಮುಂಡೇಶ್ವರಿ ಅಂಬಾರಿ ಮುಂದೆ ಹೆಜ್ಜೆ ಹಾಕಿದರು. ಪರಮೇಶ್ವರ ಜೊತೆ ಅವರ ಅಭಿಮಾನಿಗಳು ಸಹ ನೃತ್ಯ ಮಾಡಿ ಸಾಥ್ ನೀಡಿದರು.
ವಿಜಯಪುರ : ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮೇಲೆ ವಿಜಯಪುರದ ಆರೋಪಿಗಳು ಹೊರ ಬಂದಿದ್ದಾರೆ.ವಿಜಯಪುರ ತಾಲೂಕಿನ ರತ್ನಾಪೂರ ಗ್ರಾಮದ ಮನೋಹರ ಯಡವೆ, ಸಿಂದಗಿ ಪಟ್ಟಣದ ಬಸವನಗರ ವಾಸಿ ಪರಶುರಾಮ್ ವಾಗ್ಮೋರೆ ಇಂದು ಬಿಡುಗಡೆಯಾದರು.ಇಬ್ಬರು ಆರೋಪಿತರನ್ನು ಜಿಲ್ಲೆಯ ಹಿಂದೂ ಪರ ಸಂಘಟನೆಗಳ ಹಾಗೂ ಶ್ರೀರಾಮ ಸೇನೆಯ ಮುಖಂಡರು ಪದಾಧಿಕಾರಿಗಳು ಸ್ವಾಗತ ಮಾಡಿದ್ದಾರೆ. ನಿನ್ನೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಈ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಆರೋಪಿಗಳು ಬಿಡುಗಡೆಯಾಗಿದ್ದಾರೆ.ಗೌರಿ ಹತ್ಯೆ ಬಳಿಕ ಸುಮಾರು ಆರುವರೆ ವರ್ಷಗಳ ಬಳಿಕ 25 ಜನ ಆರೋಪಿತರಲ್ಲಿ 18 ಜನರಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಜಾಮೀನು ನೀಡಿದ್ದು ಇನ್ನೂ 7 ಜನ ಆರೋಪಿತರಿಗೂ ಜಾಮೀನು ಸಿಗಲಿದೆ ಎನ್ನಲಾಗಿದೆ. ಗೌರಿ ಹತ್ಯೆಯ ಇಬ್ಬರು ಆರೋಪಿತರನ್ನು ಜಿಲ್ಲೆಯ ಹಿಂದೂ ಪರ ಸಂಘಟನೆಗಳ ಹಾಗೂ ಶ್ರೀರಾಮ ಸೇನೆಯ ಮುಖಂಡರು ಪದಾಧಿಕಾರಿಗಳು ಸ್ವಾಗತ ಮಾಡಿದ್ದಾರೆ. ನಗರದ ಕಾಳಿಕಾ ಮಂದಿರದಲ್ಲಿ ಇಬ್ಬರೂ ಆರೋಪಿತರು ಪೂಜೆ ಮಾಡಿ ಪ್ರಾರ್ಥಣೆ ಸಲ್ಲಿಸಿದ್ದಾರೆ.…
ಕಲಬುರ್ಗಿ : ಒಳ ಮೀಸಲಾತಿ ಸಂಬಂಧ ಇಂದು ಕಲಬುರ್ಗಿ ಜಿಲ್ಲಾ ಮಾದಿಗರ ಒಕ್ಕೂಟವು ಕಲ್ಬುರ್ಗಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒಳಮಿಸಲಾತಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ಮಾದಿಗರ ಒಕ್ಕೂಟವು ಮನವಿ ಮಾಡಿದೆ. ಹೌದು ಒಳ ಮೀಸಲಾತಿ ಜಾರಿ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಲಾಯಿತು. ಕಲಬುರ್ಗಿ ಜಿಲ್ಲಾ ಮಾದಿಗರ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮನವಿ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುವಂತೆ ಮನವಿ ಸಲ್ಲಿಸಿದರು. ನ್ಯಾ.ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿ ಜಾರಿಗೆ ಮನವಿ ಮಾಡಿದರು.
GOOD NEWS :ಅನರ್ಹಗೊಂಡ ‘BPL’ ಕಾರ್ಡ್ ‘APL’ ಗೆ ವರ್ಗಾವಣೆ : ಮುಂದಿನ ವಾರ ‘DBT’ ಹಣ ಖಾತೆಗೆ ಜಮಾ : ಸಚಿವ ಮುನಿಯಪ್ಪ
ಕೋಲಾರ : ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾ ಆಗುತ್ತಿತ್ತು. ಇತ್ತೀಚಿಗೆ ಕೆಲವು ತಿಂಗಳಗಳವರೆಗೆ ಹಣ ಜಮೆ ಆಗಿರಲಿಲ್ಲ.ಸರ್ವರ್ ಸಮಸ್ಯೆಯಿಂದ ಈ ಒಂದು ಹಣ ಜಮೆ ಆಗಿಲ್ಲ. ಹಾಗಾಗಿ ಮುಂದಿನ ವಾರ ಎಲ್ಲಾ ಹಣ ಒಟ್ಟಿಗೆ ಜಮಾ ಆಗುತ್ತದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟಪಡಿಸಿದರು. ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿ ತಿಂಗಳು 10ರಂದು ಹಣ ಬಿಡುಗಡೆಯಾಗುತ್ತಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಹಣ ಬಿಡುಗಡೆ ವಿಳಂಬವಾಗಿದೆ. ಬಾಕಿ ಹಣ ಮುಂದಿನ ವಾರ ಬಿಡುಗಡೆಯಾಗಲಿದೆ. ಅದೇ ರೀತಿ ಬಿಪಿಎಲ್ ಅರ್ಹತೆ ಪರಿಶೀಲಿಸಿ ಅನರ್ಹರನ್ನ ಎಪಿಎಲ್ಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಬಿಪಿಎಲ್ ಕಾರ್ಡ್‌ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170ರೂ ನೀಡಲಾಗುತ್ತಿತ್ತು. ಅದರಂತೆ ಫಲಾನುಭವಿಗಳ…
ವಿಜಯನಗರ : ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಪತಿಯೊಬ್ಬ ಕೊಡಲಿಯಿಂದ ಯುವಕನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಲುಗೋಡು ಗ್ರಾಮದಲ್ಲಿ ನಡೆದಿದೆ. ಆನಂದೇವನಹಳ್ಳಿ ಬಸವರಾಜ್ (26) ಎಂಬಾತ ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ಇನ್ನು ಕೊಲೆ ಮಾಡಿದ ವ್ಯಕ್ತಿ ಚಿಲುಗೋಡು ಗ್ರಾಮದ ಬಸರಕೋಡು ಪಕ್ಕೀರಸ್ವಾಮಿ ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಬಸವರಾಜ್ ಅವರು ಪಕ್ಕೀರಸ್ವಾಮಿ ಅವರ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಮೂರು ತಿಂಗಳ ಹಿಂದೆ ಬಸವರಾಜ್ ಮತ್ತು ಫಕೀರಪ್ಪನ ಹೆಂಡತಿ ಓಡಿ ಹೋಗಿದ್ದರು. ಈ ಕುರಿತು ಫಕೀರಪ್ಪ ತಂಬ್ರಹಳ್ಳಿ ಠಾಣೆಗೆ ದೂರು ನೀಡಿದ್ದ. ಬಳಿಕ ಪೊಲೀಸರು ಇವರಿಬ್ಬರನ್ನು ಪತ್ತೆ ಹಚ್ಚಿ ರಾಜಿಪಂಚಾಯಿತಿ ಮೂಲಕ ಸಂಧಾನ ನಡೆಸಿದ್ದರು. ಅದಾದ ಬಳಿಕ ಬಸವರಾಜ್ ಇತ್ತೀಚಿಗೆ ಊರಿಗೆ ಬಂದಿದ್ದ. ಮತ್ತೆ ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಫಕೀರಪ್ಪ ಶಂಕೆ ವ್ಯಕ್ತಪಡಿಸಿದ್ದಾನೆ. ಕೋಪದಲ್ಲಿ ಇಂದು ಹಗರಿಬೊಮ್ಮನಹಳ್ಳಿ ಮುಖ್ಯ ರಸ್ತೆಯ…
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದಂತಹ ಎಚ್ ಸಿ ಮಹದೇವಪ್ಪ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಈ ಒಂದು ಜಂಬೂ ಸವಾರಿಯು ಅರಮನೆಯಿಂದ ಬನ್ನಿಮಂಟಪದವರೆಗೆ ನಡೆಯಲಿದೆ. ಒಟ್ಟು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು 7ನೇ ಬಾರಿಗೆ ಅಭಿಮನ್ಯು ಹೊತ್ತಿದ್ದಾನೆ.ಈ ಒಂದು ಜಂಬೂ ಸವಾರಿಯು ಅರಮನೆಯಿಂದ ಹೊರಟು, ಜಯಚಾಮರಾಜ ವೃತ್ತ, ಕೆ ಆರ್ ವೃತ್ತ, ಸಯಾಜಿ ರಾವ್ ರಸ್ತೆ, ಆಯುರ್ವೇದ ಆಸ್ಪತ್ರೆಯ ವೃತ್ತ, ತಿಲಕ ನಗರ, ಆರ್‌ಎಂಸಿ ವೃತ್ತ, ಬಂಬೂ ಬಜಾರ್, ಹೈವೇ ರೋಡ್ ಬನ್ನಿಮಂಟಪ ಮೈದಾನ, ಬನ್ನಿಮಂಟಪ ತಲುಪಲಿದೆ. ಈ ಬಾರಿಯ ಜಂಬೂ ಸವಾರಿಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತಿದ್ದಾನೆ.ಇನ್ನು ಕುಮ್ಕಿ ಆನೆಗಳಾಗಿ ಹಿರಣ್ಯ ಮತ್ತು ಲಕ್ಷ್ಮಿ ಭಾಗವಹಿಸಿದ್ದು, ನಿಶಾನೆ ಆನೆಯಾಗಿ…
ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಜಂಬೂ ಸವಾರಿಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿಗೆ ಚಾಲನೆ ನೀಡಲಾಗುತ್ತೆ. ಈಗಾಗಲೇ ಜಂಬೂ ಸವಾರಿಗೆ ಎಲ್ಲಾ ಸಿದ್ಧತೆಗಳು ನಡೆದಿದ್ದು, ಅಭಿಮನ್ಯು ಆನೆ 750 ಕೆ.ಜಿಯ ಅಂಬಾರಿಯನ್ನು ಹೊತ್ತಿದ್ದಾನೆ. ಅಭಿಮನ್ನುವಿಗೆ ಕುಮ್ಕಿ ಆನೆಗಳಾಗಿ ಹಿರಣ್ಯ ಮತ್ತು ಲಕ್ಷ್ಮಿ ಭಾಗವಹಿಸಲಿವೆ. ಅದೇ ರೀತಿಯಾಗಿ ಆನೆಯಾಗಿ ಧನಂಜಯ ಸಾಲಗಳಾಗಿ ಗೋಪಿ, ಮಹೇಂದ್ರ, ಸುಗ್ರೀವ, ಏಕಲವ್ಯ ಮತ್ತು ಪ್ರಶಾಂತ ಆನೆಗಳು ಭಾಗವಹಿಸಿವೆ. ಇನ್ನು ರಾಜ ಮನೆತನದ ದಸರೆಯಲ್ಲಿ ಭೀಮ ಮತ್ತು ಕಂಜನ್ ಆನೆಗಳು ಸೇರಿದಂತೆ ಒಟ್ಟು 9 ಆನೆಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.
ಹುಬ್ಬಳ್ಳಿ : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ರಾಜಿನಾಮೆ ನೀಡಿ ಎಂದು ವಿಪಕ್ಷಗಳು ಆಗ್ರಹಿಸುತ್ತಿದ್ದರೆ. ಇನ್ನೊಂದೆಡೆ ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಇದರ ಮಧ್ಯ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಇದು ಸಿದ್ದರಾಮಯ್ಯ ಅವರಿಗೆ ಕೊನೆಯ ದಸರಾ ಹಾಗೂ ವಿಜಯದಶಮಿ ಆಗಲಿದ್ದು, ಬಳಿಕ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕೊಡುತ್ತಾರೆ ಎಂದು ಸ್ಪೋಟಕ ಭವಿಷ್ಯ ನುಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ಅವರ ಪಕ್ಷದಲ್ಲಿ ಹಲವರು ಟವಲ್ ಹಾಕಿಕೊಂಡು ಕಾಯುತ್ತಿದ್ದಾರೆ.ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಸಿಲುಕಿದೆ. ವಿಷಯ ಡೈವರ್ಟ್ ಮಾಡಲು ಕಾಂಗ್ರೆಸ್ ಸರ್ಕಾರ ಏನೇನೋ ಮಾಡ್ತಿದೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ದೂರಿದರು. ಹಳೆ ಹುಬ್ಬಳ್ಳಿ ಗಲಭೆ ಕೆಸ್ ಅನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಇದನ್ನು ನಾವು ಖಂಡಿಸುತ್ತೇವೆ ಯಾವುದೇ ಕಾರಣಕ್ಕೂ ನಾವು…
ವಿಜಯನಗರ : ಇತ್ತೀಚಿಗೆ ಯುವ ಜನತೆ ಮೊಬೈಲ್ಗೆ ಎಷ್ಟು ಅಡಿಕ್ಟ್ ಆಗಿದೆ ಎಂದರೆ, ತಮ್ಮ ಪ್ರಾಣ ಹೋಗುತ್ತೆ ಎಂದು ತಿಳಿದಿದ್ದರು ಕೂಡ ಕೆಲವು ಹುಚ್ಚಾಟಗಳನ್ನಾಡುತ್ತಾರೆ. ಇದೀಗ ಕೋಡಿ ಬಿದ್ದಿದ್ದ ಕೆರೆಯಲ್ಲಿ ಯುವಕನೊಬ್ಬ ಸೆಲ್ಫಿ ತೆಗೆಯಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗಂಡಬೊಮ್ಮನಹಳ್ಳಿಯ ಚೇತನ್ ಕುಮಾರ್ (21) ಮೃತ ದುರ್ದೈವಿ. ಭಾರಿ ಮಳೆಯಿಂದಾಗಿ ಗಂಡಬೊಮ್ಮನಹಳ್ಳಿ ಕೆರೆ ಸಂಪೂರ್ಣ ಭರ್ತಿಯಾಗಿತ್ತು ಎನ್ನಲಾಗುತ್ತಿದೆ.ಈ ವೇಳೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಕೋಡಿ ಬಿದ್ದ ಕೆರೆಬಳಿ ನಿಂತು ಚೇತನ್ ಕುಮಾರ್ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಸೆಲ್ಫಿ ತೆಗೆಯುತ್ತಿದ್ದಾಗಲೇ ಕಾಲು ಜಾರಿ ಬಿದ್ದು ಯುವಕ ನೀರುಪಾಲಾಗಿದ್ದಾನೆ. ತಕ್ಷಣ ಅಕ್ಕಪಕ್ಕದ ಜನರು ರಕ್ಷಣೆಗೆ ಮುಂದಾಗಿದ್ದಾರೆ. ಆದರೂ ಚೇತನ್ ನನ್ನು ಕಾಪಾಡಲು ಆಗಲಿಲ್ಲ ನೋಡನೋಡುತ್ತಿದ್ದಂತೆ ಯುವಕ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಘಟನೆ ಕುರಿತಂತೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













