Subscribe to Updates
Get the latest creative news from FooBar about art, design and business.
Author: kannadanewsnow05
ಜೈಲಲ್ಲಿ ನಟ ದರ್ಶನ್ ಗೆ ಕಾಟ ಕೊಟ್ಟಿದ್ದ ರೇಣುಕಾಸ್ವಾಮಿಯ ಪ್ರೇತಾತ್ಮ, ಮಂಗಳೂರಲ್ಲಿ ಪ್ರತ್ಯಕ್ಷ: ಏನಿದು ‘ಆತ್ಮ’ದ ಕಥೆ!
ಮಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಟ ದರ್ಶನವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಅವರಿಗೆ ತೀವ್ರವಾಗಿ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವೈದ್ಯರು, ಅವರನ್ನು ತಪಾಸಣೆ ಮಾಡಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಎಷ್ಟೇ ಹೇಳಿದರು ಕೂಡ ಅವರು ಬೇಡ ಬೆಂಗಳೂರಿಗೆ ಹೋಗಿ ನಾನು ಸ್ಕ್ಯಾನಿಂಗ್ ಮಾಡಿಸಿಕೊಳ್ಳುತ್ತೇನೆ ಎಂದು ಹಠ ಹಿಡಿದಿದ್ದಾರೆ. ಅಲ್ಲದೆ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 54ನೇ ಸಿಸಿಎಚ್ ಕೋರ್ಟ್, ವಿಚಾರಣೆಯ ಬಳಿಕ ಅಕ್ಟೋಬರ್ 14ರಂದು ತೀರ್ಪು ಕಾಯ್ದಿರಿಸಿ ಆದೇಶ ನೀಡಿದೆ.ಇದರ ಮಧ್ಯ ಜೈಲಿನಲ್ಲಿ ಆಗಾಗ ದರ್ಶನ್ ಗೆ ರೇಣುಕಾ ಸ್ವಾಮಿಯ ಆತ್ಮ ಕಾಟ ಕೊಡುತ್ತಿದೆ ಎಂಬ ಗಾಳಿ ಸುದ್ದಿ ಹರಡಿತ್ತು. ಇದು ಎಷ್ಟು ಸತ್ಯವೋ ಅಥವಾ ಮಿಥ್ಯವೋ ಎಂಬುದು ಗೊತ್ತಿಲ್ಲ. ಆದರೆ ರೇಣುಕಾ ಸ್ವಾಮಿಯ ಆತ್ಮ ನಟ ದರ್ಶನ್ ಅವರಿಗೆ ಕಾಟ ಕೊಡುತ್ತಿತ್ತು ಎಂಬ ಊಹಾಪೋಹಗಳು ಎದ್ದಿದ್ದವು. ಇದೀಗ ದರ್ಶನ್ ಹಾಗೂ ಗ್ಯಾಂಗ್ನಿಂದ…
ರಾಮನಗರ : ನವೆಂಬರ್ ನಲ್ಲಿ ಮಹಾರಾಷ್ಟ್ರ ಹಾಗೂ ಜಾರ್ಖಂಡ್ನಲ್ಲಿ ಚುನಾವಣೆ ನಡೆಯಲಿದ್ದು, ಅದಕ್ಕೂ ಪೂರ್ವದಲ್ಲಿ ಚನ್ನಪಟ್ಟಣ ಉಪಚುನಾವಣೆ ನಡೆಯಲಿದೆ. ಹಾಗಾಗಿ ಚುನಾವಣೆ ಪೂರ್ವ ಸಿದ್ಧತೆ ಕುರಿತು ಇಂದು ಸಭೆ ಕರೆದಿದ್ದೆ. ಇನ್ನೂ ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಲಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡ್ತೇವೆ ಎಂದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ತಿಳಿಸಿದರು. ಇಂದು ಜಿಲ್ಲೆಯ ಬಿಡದಿಯ ಕೇತಿಗಾನಹಳ್ಳಿಯ ತೋಟದ ಮನೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿ ಯಾರು ಆಗಬೇಕು ಅನ್ನೋದಕ್ಕೆ ಸಭೆ ಕರೆದಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಲ್ಲಿ ಕೆಲಸ ಮಾಡಬೇಕು. ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಕೂಡ ನಡೆಯಲಿದೆ ಎಂದರು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ.. 2013 ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡ್ತೇವೆ.…
ಮೈಸೂರು : ನಾಡಿನ ಜನತೆಗೆ ನಾಡಹಬ್ಬ ಮೈಸೂರು ದಸರಾದ ಶುಭಾಶಯಗಳು. ಈ ಹಬ್ಬ ದುಷ್ಟ ಶಕ್ತಿಗಳ ಸಂಹಾರ ಮಾಡಿ ಶಿಷ್ಟರನ್ನು ರಕ್ಷಿಸುವ ಹಬ್ಬವಾಗಿದೆ. ಜನರ ಆಶೀರ್ವಾದ ಸಿಕ್ಕಿದೆ ಅದಕ್ಕೆ 7 ಬಾರಿ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ್ದೇನೆ ಎಂದು ನಂದಿದ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇಂದು ಮೈಸೂರು ಅರಮನೆ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ, ಸಚಿವ ಮಂಕಾಳು ವೈದ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಇಂದು ನಂದಿ ದ್ವಜ ಪೂಜೆಯಲ್ಲಿ ಭಾಗವಹಿಸಿದ್ದರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ವಿಜಯದಶಮಿಯು ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ, ಪಂಜಿನ ಮೆರವಣಿಗೆ ಸೇರಿದಂತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ…
ಮೈಸೂರು : ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಇಂದು ಮೈಸೂರಿನ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು ಸೇರಿ ನಂದಿ ದ್ವಜಕ್ಕೆ ಪೂಜೆ ನೆರವೇರಿಸಿದರು. ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಈಡುಗಾಯಿ ಒಡೆಯುವ ಮೂಲಕ ಪೂಜೆಯನ್ನು ನೆರವೇರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯವಿಜಯದಶಮಿಯು ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ, ಪಂಜಿನ ಮೆರವಣಿಗೆ ಸೇರಿದಂತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರೆಯ ಶುಭಾಶಯಗಳು. ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ರೈತರಲ್ಲಿ ನೆಮ್ಮದಿ ಮನೆಮಾಡಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು ಹಾರೈಸುತ್ತೇನೆ.…
ಬೆಂಗಳೂರು : ಕೇಂದ್ರ ಸರ್ಕಾರದಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ತೆರಿಗೆ ತಾರತಮ್ಯ ವಿಚಾರವಾಗಿ ಬೆಂಗಳೂರಿನಲ್ಲಿ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ತಮ್ಮ ವೈಯಕ್ತಿಕ ಸಿಟ್ಟನ್ನು ಕಕನ್ನಡಿಗರ ಮೇಲೆ ತೀರಿಸಿಕೊಳ್ಳಬೇಡಿ ಎಂದು ವಾಗ್ದಾಳಿ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ವಿಚಾರ ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ್ದು, ನಾವು ಕಟ್ಟುವ ತೆರಿಗೆಗೆ ಸೂಕ್ತವಾಗಿ ಮರುಪಾವತಿ ಮಾಡಿ ಅನ್ನುತ್ತಿದ್ದೇವೆ. ಉತ್ತರ ಪ್ರದೇಶ 100 ರೂಪಾಯಿ ತೆರಿಗೆ ಪಾವತಿ ಮಾಡಿ 300 ರೂಪಾಯಿ ಪಡೆಯುತ್ತಿದೆ. ಮಧ್ಯಪ್ರದೇಶ 100 ರೂಪಾಯಿ ತೆರಿಗೆ ಪಾವತಿಸಿ 290 ರೂಪಾಯಿ ಪಡೆಯುತ್ತಿದೆ. ಬಿಹಾರ 100 ರೂಪಾಯಿ ತೆರಿಗೆ ಪಾವತಿಸಿ 918 ರೂಪಾಯಿ ಪಡೆಯುತ್ತಿದೆ. ಆದರೆ ನಮ್ಮ ರಾಜ್ಯ 100 ರೂಪಾಯಿ ಪಾವತಿಸಿದರೆ 13 ರೂಪಾಯಿ ಅಷ್ಟೇ ಸಿಗುತ್ತಿದೆ. ತೆರಿಗೆ ತಾರತಮ್ಯ ಬಗ್ಗೆ ಹಣಕಾಸು ಆಯೋಗಕ್ಕೂ ಮನವಿ ಮಾಡಿದ್ದೇವೆ. ತಮ್ಮ ವೈಯಕ್ತಿಕ ಸಿಟ್ಟನ್ನು…
ಮೈಸೂರು : ಮುಡಾ ಹಗರಣದ ಸಂಕಷ್ಟದ ನಡುವೆ ಕೂಡ ಕ್ಷಮಿಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಆಯುಧ ಪೂಜೆ ವಿಜಯದಶಮಿ ಹಾಗೂ ಇಂದು ನಡೆವ ಜಂಬೂ ಸವಾರಿ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳ ಅಲ್ಲಿ ಅವರು ಭಾಗವಹಿಸಲಿದ್ದಾರೆ. ಇಂದು ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ವೈರಿಗಳು ಇರುತ್ತಾರೆ ಹಿತೈಷಿಗಳು ಕೂಡ ಇರುತ್ತಾರೆ, ನನಗೆ ದೇವರ ಆಶೀರ್ವಾದವಿದೆ ಎಂದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ಧರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡಿನ ಜನರಿಗೆ ದಸರಾ ಹಬ್ಬದ ಶುಭಾಶಯಗಳು ತಿಳಿಸಿದ ಸಿಎಂ ಸಿದ್ದರಾಮಯ್ಯ ಅವರು, ನಾಳೆ ನಡೆಯುವ ಜಂಬೂಸವಾರಿಯಲ್ಲಿ ನಾನು ಭಾಗವಹಿಸುತ್ತೇನೆ. ಸುಧೀರ್ಘವಾಗಿ ಹೆಚ್ಚು ಬಾರಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡುತ್ತಿದ್ದೇನೆ. ನಾಡಿನ ಜನ ಹಾಗೂ ದೇವರ ಆಶೀರ್ವಾದದಿಂದ ಪುಷ್ಪರ್ಚನೆ ಮಾಡುತ್ತಿದ್ದೇನೆ ಎಂದು ತಿಳಿಸಿದರು. ನನ್ನ ಮೇಲೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಸದಾ ಇರುತ್ತದೆ. ಜನರು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಅದಕ್ಕೆ ಇಷ್ಟೊಂದು ಬಾರಿ…
ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಳೆ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದ ವಿಚಾರವಾಗಿ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಅವರು, ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಅಂತವರನ್ನ ಪೂಜಿಸುವ ಬಿಜೆಪಿಯಿಂದ ಏನು ನಿರೀಕ್ಷಿಸಲು ಸಾಧ್ಯ? ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕಾಂಗ್ರೆಸ್ ಮೊಟ್ಟ ಮೊದಲ ಬಾರಿಗೆ ಒಳ್ಳೆಯ ಕೇಸನ್ನು ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು. ಹಳೆ ಹುಬ್ಬಳ್ಳಿ ಕೇಸ್ ಹಿಂಪಡೆದ ವಿಚಾರವಾಗಿ ಪ್ರಹ್ಲಾದ್ ಜೋಶಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಭಾರತದ ಮೊಟ್ಟ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಗೋಡ್ಸೆಯನ್ನು ಬಿಜೆಪಿ ಪ್ರಹ್ಲಾದ್ ಜೋಶಿ ಪೂಜೆ ಮಾಡುತ್ತಾರೆ. ಇಂಥವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿ : 2022 ರಲ್ಲಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಂತಹ ಗಲಭೆ ಪ್ರಕರಣವನ್ನು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಹಿಂಪಡೆದ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿಯವರ ಬ್ಯಾಟರಿ ಡೌನ್ ಆಗಿದೆ ಎಂದು ವ್ಯಂಗ್ಯವಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪರ ಜೀವಿ ಪಕ್ಷ. ಬೇರೆಯವರ ಬಲದ ಮೇಲೆ ಕಾಂಗ್ರೆಸ್ನವರು ಬದುಕುತ್ತಾರೆ. ಕಾಂಗ್ರೆಸ್ ಕುರುಡು ಪಾರ್ಟಿ ಆಗಿದೆ. ಮುಂದೆ ಹೋಗಬೇಕಾದರೆ ಬೇರೆಯವರು ಹೆಗಲು ಕೊಡಬೇಕಾಗಿದೆ ಹೀಗಾಗಿ ಕಾಂಗ್ರೆಸ್ ಪಕ್ಷದವರಿಗೆ ಕೆಲವರು ಹೆಗಲು ಕೊಡುತ್ತಿದ್ದಾರೆ. ದೇಶದಲ್ಲಿ ಇವಿಎಂ ವ್ಯವಸ್ಥೆ ಬಂದಿರೋದು ಕಾಂಗ್ರೆಸ್ ಆಡಳಿತ. ಸಮಸ್ಯೆ ಆಗಿದೆ ಅಂದ್ರೆ ರಾಹುಲ್ ಗಾಂಧಿ ಬ್ಯಾಟರಿ ಡೌನ್ ಆಗಿದೆ ಅಂತ ಅರ್ಥ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಬ್ಯಾಟರಿ ಡೌನ್ ಆಗಿದೆ. ಕಾಂಗ್ರೆಸ್ ಪಾರ್ಟಿ ಬ್ಯಾಟರಿ ಫೇಲ್ ಆಗಿದೆ ಅದು ಚಾರ್ಜ್…
ಬೆಂಗಳೂರು : ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಕಳೆದ ಬಾರಿಯೇ ಈ ವಿಷಯ ಪ್ರಸ್ತಾಪ ಮಾಡಿದ್ದೆ. ಕರ್ನಾಟಕದ ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅಂತ ಹೇಳಿದ್ದೆ. ಹೊರತು ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಈ ಕೂಗು ಇತ್ತು. ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದು, ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ಅನ್ಯಾಯ ಅಂತ ಹೇಳಿದ್ದೆ. ನಿನ್ನೆ ಕೇಂದ್ರ ಸರ್ಕಾರ ತೆರಿಗೆ ಹಣ ಬಿಡುಗಡೆ ಮಾಡಿದೆ. ದಕ್ಷಿಣ ಭಾರತಕ್ಕೆ 28, 152 ಕೋಟಿ ರೂಪಾಯಿ ನೀಡಿದ್ದಾರೆ.ಉತ್ತರ ಪ್ರದೇಶಕ್ಕೆ ಮಾತ್ರ 32,000 ಕೋಟಿ ಕೊಟ್ಟಿದ್ದಾರೆ. ಪದೇ ಪದೇ ಕೆಣಕುವ ಪ್ರಯತ್ನ ನಡೆಯುತ್ತಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲವಿದೆ ಆದರೆ ಅವರು…
ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತಹ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 43 ಪ್ರಕರಣಗಳನ್ನು ಸಂಪುಟ ಹಿಂಪಡೆದಿತ್ತು. ಈ ಒಂದು 43 ಕೇಸ್ ಗಳಲ್ಲಿ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಕೂಡ ಒಂದಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆಗೆ ಮುಂದಾಗಿದೆಯಾ ಎಂಬ ಅನುಮಾನ ಮೂಡುತ್ತಿದೆ. ಹೌದು ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 16.4.2022 ರಂದು ಹಳೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಗಲಭೆ ಪ್ರಕರಣ ನಡೆದಿದೆ. 43 ಕೇಸ್ ಪ್ರಕರಣಗಳನ್ನು ಪಡೆದಿದೆ. ಆ ಒಂದು 43 ಪ್ರಕರಣಗಳಲ್ಲಿ ಹುಬ್ಬಳ್ಳಿಯ ಗಲಭೆ ಕೇಸ್ ಕೂಡ ಒಂದಾಗಿದೆ. ಹುಬ್ಬಳ್ಳಿಯ ಹಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಗಲಭೆ ನಡೆದಿತ್ತು. ಪ್ರಕರಣ ಹಿನ್ನೆಲೆ? ಮಸೀದಿ ಮೇಲೆ ಭಗವಾಧ್ವಜ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕೆ ಏಪ್ರಿಲ್ 16, 2022ರಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಗಲಭೆ ನಡೆದಿತ್ತು. ಸಾವಿರಾರು ಮುಸ್ಲಿಮರು ಪೊಲೀಸ್ ಠಾಣೆ ಮುಂದೆ ಸೇರಿ…














