Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಮನೆಯಲ್ಲಿ ಪುಟ್ಟ ಮಕ್ಕಳು ಆಟ ಆಡುತ್ತಿರುವಾಗ ಪೋಷಕರು ಆದಷ್ಟು ಎಚ್ಚರ ವಹಿಸಬೇಕು ಇಲ್ಲವಾದರೆ ಹಲವು ದುರಂತಗಳು ಸಂಭವಿಸುತ್ತವೆ ಇದೀಗ ಇಂತಹದ್ದೇ ದುರಂತ ಹಾವೇರಿಯಲ್ಲಿ ನಡೆದಿದ್ದು ಮನೆಯ ಮುಂದೆ ಆಟವಾಡುವಾಗ ಬಕೆಟ್ನಲ್ಲಿ ತಲೆಕೆಳಗಾಗಿ ಬಿದ್ದು ಒಂದು ವರ್ಷದ ಮಗು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಹೌದು ಆಟವಾಡುವಾಗ ನೀರಿನ ಬಕೆಟ್ ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹಾವೇರಿಯ ಶಿವಬಸವ ನಗರದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದ್ದು, ಬಕೆಟ್ನಲ್ಲಿ ಬಿದ್ದು ದಕ್ಷಿತ್ ಯಳಂಬಳ್ಳಿ ಮಠ (1) ಎನ್ನುವ ಮಗು ಸಾವನ್ನಪ್ಪಿದೆ. ಬಕೆಟ್ನಲ್ಲಿ ತಲೆಕೆಳಗಾಗಿ ಬಿದ್ದಿದ್ದ ದಕ್ಷೀತ್ ಸಾವನಪ್ಪಿದ್ದಾನೆ. ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿ ಆಗದೆ ಮಗು ಕೊನೆಯುಸಿರೆಳೆದಿದೆ. ಘಟನೆ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಿರುತೆರೆ ನಟಿ ದಿವ್ಯ ಸುರೇಶ್ ಅವರಿಂದ ಹಿಟ್ ಅಂಡ್ ರನ್ ಆರೋಪ ಕೇಳಿ ಬಂದಿದೆ.ಅತಿ ವೇಗ ಮತ್ತು ನಿರ್ಲಕ್ಷದ ಚಾಲನೆ ಮಾಡಿದ ಆರೋಪ ಕೇಳಿ ಬಂದಿದ್ದು, ಅಪಘಾತದಲ್ಲಿ ಮಹಿಳೆ ಒಬ್ಬರ ಕಾಲು ಮುರಿತವಾಗಿದೆ ಎಂದು ತಿಳಿದುಬಂದಿದೆ. ಅಕ್ಟೋಬರ್ 4 ರಂದು ರಾತ್ರಿ 1:30ರ ವೇಳೆಗೆ ಈ ಒಂದು ಅಪಘಾತ ಸಂಭವಿಸಿದ್ದು ಬೆಂಗಳೂರಿನ ಬ್ಯಾಟರಾಯನಪುರ ಎಂಎಂ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಯ ಕಾಲು ಮುರಿತವಾಗಿದ್ದು ಅದಾದ ಬಳಿಕ ಸೌಜನ್ಯಕಾದರೂ ನಮ್ಮನ್ನು ಬಂದು ಭೇಟಿಯಾಗಿಲ್ಲ ಎಂದು ಅಪಘಾತಕ್ಕೆ ಈಡಾದ ಮಹಿಳೆಯ ಕುಟುಂಬಸ್ಥರು ದಿವ್ಯಾ ಸುರೇಶ್ ವಿರುದ್ಧ ಆಕ್ರೋಶ ಹೋರ್ ಹಾಕಿದ್ದಾರೆ. ಬೇಡರಾಯನಪುರ ಪೊಲೀಸ್ ಠಾಣೆಯಲ್ಲಿ ದಿವ್ಯ ಸುರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕನ್ನಡ ಬಿಗ್ ಬಾಸ್ ಶೋ ಗೆ ಒಂದೊಲ್ಲೊಂದು ಸಂಕಷ್ಟಗಳು ಎದುರಾಗುತ್ತಲೇ ಇವೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೆ ಬಿಗ್ ಬಾಸ್.ಶೂಟಿಂಗ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯ ಜಾಲಿವುಡ್ ಸ್ಟೂಡಿಯೋವನ್ನು ಮುಚ್ಚಿತ್ತು. ಇದೀಗ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲಹಳ್ಳಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ಸಲ್ಲಿಸಿದ್ದು, KSPCB ಆದೇಶವನ್ನು ಉಲ್ಲಂಘಿಸಿ, ಅಕ್ರಮವಾಗಿ ಮರುಪ್ರಾರಂಭಗೊಂಡಿದೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಿಗೆ ದೂರು ಸಲ್ಲಿಸಿದ್ದಾರೆ. ದಿನೇಶ್ ಕಲ್ಲಹಳ್ಳಿ ಅವರು, ಇ-ಮೇಲ್ ಮೂಲಕ ಕೆಎಸ್ಪಿಸಿಬಿ ಅಧ್ಯಕ್ಷರಿಗೆ ನೀಡಿದ ದೂರಿನ ಪ್ರಕಾರ, ಮಾಲಿನ್ಯ ನಿಯಂತ್ರಣ ಮಂಡಳಿಯು 2025ರ ಅಕ್ಟೋಬರ್ 6 ರಂದು ಮುಚ್ಚುವ ಆದೇಶವನ್ನು ಜಾರಿಗೊಳಿಸಿದ್ದರೂ, ರಾಮನಗರ ಜಿಲ್ಲಾಧಿಕಾರಿಯವರು ಯಾವುದೇ ಲಿಖಿತ ಆದೇಶವಿಲ್ಲದೆ ಮೌಖಿಕ ನಿರ್ದೇಶನದ ಮೂಲಕ ಘಟಕವನ್ನು…
ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸದಂತೆ ಹೊರಡಿಸಿರುವ ಮಧ್ಯಂತರ ರಕ್ಷಣಾ ಆದೇಶವನ್ನು ತೆರವುಗೊಳಿಸುವಂತೆ ಸಿಐಡಿ ಪೊಲೀಸರು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ. ಈ ವೇಳೆ ಶಾಸಕ ಬೈರತಿ ಬಸವರಾಜ್ ಪರ ಹಿರಿಯ ವಕೀಲ ಸಂದೇಶ್ ಚೌಟ ಹಾಜರಾಗಿ, ಪ್ರಕರಣದಲ್ಲಿ ಈಗಾಗಲೇ ಅರ್ಜಿದಾರರ ಬಂಧನ ಮಾಡದಂತೆ ತನಿಖಾಧಿಕಾರಿಗಳಿಗೆ ಸೂಚಿಸಿ ಹೈಕೋರ್ಟ್ ಮಧ್ಯಂತರ ರಕ್ಷಣೆ ಮಾಡಿದೆ. ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗಲು ಸೂಚಿಸಿ ಅರ್ಜಿದಾರರಿಗೆ ಎರಡು ಬಾರಿ ಸಮನ್ಸ್ ನೀಡಿದ್ದರು. ಅದರಂತೆ ಅರ್ಜಿದಾರರ ವಿಚಾರಣೆಗೆ ಹಾಜರಾಗಿ ಅಗತ್ಯ ಸಹಕಾರ ನೀಡಿದ್ದಾರೆ. ಹೀಗಿದ್ದರೂ ತನಿಖೆ/ವಿಚಾರಣೆಗೆ ಸಹರಿಸುತ್ತಿಲ್ಲ. ಬಂಧಿಸಿ ವಿಚಾರಣೆಗೆ ಒಳಪಡಿಸಬೇಕಿದೆ ಎಂದು ಸಿಐಡಿ ಪೊಲೀಸರು ಮಂಡಿಸುತ್ತಿರುವ ವಾದ ಸರಿಯಲ್ಲ ಎಂದು ಪ್ರತಿ ಆಕ್ಷೇಪಣೆ ವ್ಯಕ್ತಪಡಿಸಿದರು. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೋಕಾ ಕಾಯ್ದೆಯ ಸೆಕ್ಷನ್ 3 ಮತ್ತು ಸೆಕ್ಷನ್ 4 ಹೇರಲು ಸಿಐಡಿ ಉಪ ಅಧೀಕ್ಷಕರಿಗೆ ಅನುಮತಿ ನೀಡಿ ಸಿಐಡಿ ಪೊಲೀಸ್ ಮಹಾ ನಿರ್ದೇಶಕರು…
ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್ನ ಬೆಂಗಳೂರು – ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ನಲ್ಲಿ ಸಂತಾಪ ಸೂಚಿಸಿ, ಬಸ್ ಅಪಘಾತದಲ್ಲಿ ಬಸ್ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. https://twitter.com/siddaramaiah/status/1981574866039185648?t=jquF_oca5CwiN-BDpOVYww&s=19 ಅದೇ ರೀತಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಸಂತಾಪ ಸೂಚಿಸಿದ್ದು, ಹೈದರಾಬಾದ್-ಬೆಂಗಳೂರು ಮಾರ್ಗದ ಕರ್ನೂಲ್ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಬಾಧಿತ ಎಲ್ಲರೊಂದಿಗೂ ನಾವು ನಿಲ್ಲುತ್ತೇವೆ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇವೆ. https://twitter.com/DKShivakumar/status/1981567926647034247?t=D2ulyYf7bzisKiF2P-nMGw&s=19
ಮಂಗಳೂರು : ಮಂಗಳೂರಿನಲ್ಲಿ ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿದಿರುವ ಘಟನೆ ವರದಿಯಾಗಿದೆ. ಮಂಗಳೂರಿನ ಸೂರತ್ಕಲ್ ನಲ್ಲಿ ದೀಪಕ್ ಬಾರ್ ನಲ್ಲಿ ನಿನ್ನೆ ಈ ಒಂದು ಘಟನೆ ನಡೆದಿದ್ದು ಬಾರ್ ನಲ್ಲಿ ಮದ್ಯ ಸೇವಿಸಿ ಹೊರಬರುವಾಗ ಗಲಾಟೆ ನಡೆದಿದೆ. ಮುಕ್ಷಿದ್ ಹಾಗು ನಿಜಾಮ್ ಎಂಬುವವರಿಗೆ ಚಾಕು ಇರಿಯಲಾಗಿದೆ. ರೌಡಿಶೀಟರ್ ಆದಂತಹ ಗುರುರಾಜ್ ಮತ್ತು ಅಲೆಕ್ಸ್ ಸಂತೋಷ್, ಸುಶಾಂತ್ ಹಾಗೂ ನಿತಿನ್ ಎಂಬುವವರು ಇಬ್ಬರಿಗೆ ಚಾಕು ಇರಿದು ದೃಷ್ಕೃತ್ಯ ಎಸಗಿದ್ದಾರೆ. ಘಟನೆ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಆರೋಪಿಗಳ ಬಂಧನಕ್ಕೆ ನಾಲ್ಕು ತಂಡ ರಚನೆ ಮಾಡಿದ್ದಾರೆ. ಕಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹರಿಯಾಣ : ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಒಂದು ದುರಂತದ ಬೆನ್ನಲ್ಲೇ ಹರಿಯಾಣದಲ್ಲಿ ಮತ್ತೊಂದು ಭೀಕರವಾದ ಬಸ್ ಅಪಘಾತ ಸಂಭವಿಸಿದೆ. ಗುರುಗ್ರಾಮದಿಂದ ಬಿಹಾರಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೆ ಈಡಾಗಿದ್ದು, ಈ ಒಂದು ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಕುಶಿ ನಗರದ ಬಳಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಿಟ್ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ ಅರ್ಜಿ ಇಂದು ವಿಚಾರಣೆ ನಡೆಯಿತು. ಬಿ ಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದ ಮಂಡಿಸಿದರು. ಹೊಸದಾಗಿ ಪ್ರಕರಣವನ್ನು ಪರಿಗಣಿಸಲು ಹೈಕೋರ್ಟ್ ಈ ವೇಳೆ ಸೂಚನೆ ನೀಡಿತು. ತನಿಖೆಯ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಕಾಗ್ನೀಜೆನ್ಸ್ ಪಡೆಯಬೇಕಿತ್ತು ಸಂತ್ರಸ್ತೆಯ ಹೇಳಿಕೆಯನ್ನು ಬಿಟ್ಟು ಉಳಿದ ಸಾಕ್ಷಿಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆಯನ್ನು ಪರಿಗಣಿಸಿಲ್ಲ. ಆಡಿಯೋ ರೆಕಾರ್ಡಿಂಗ್ ಅನ್ನು ಸಹ ನ್ಯಾಯಾಲಯ ಪರಿಗಣಿಸಿಲ್ಲ. ಹೊಸದಾಗಿ ಪಡೆದಿರುವ ಆದೇಶ ಸರಿ ಇಲ್ಲ ಎಂದು ವಾದಿಸಿದರು. ಆಗ ಇದು ರದ್ದುಪಡಿಸಬೇಕಾದ ಪ್ರಕರಣವೆಂದು ನನಗೆ ಮನವರಿಕೆ ಆಗಿಲ್ಲ ಆದರೆ ಕಾಗ್ನೀಜೆನ್ಸ್ ಪಡೆದ ವಿಧಾನದ ಬಗ್ಗೆ ಪ್ರಶ್ನೆಗಳಿವೆ ಎಂದು ಹೈಕೋರ್ಟ್ ತಿಳಿಸಿತು. ಇನ್ನು ರಾಜ್ಯ ಸರ್ಕಾರದ ಪರವಾಗಿ ಪ್ರೊ. ರವಿವರ್ಮ ಕುಮಾರ್ ಅವರು ವಾದ ಮಂಡಿಸಿದರು. ರೂಮ್ನಲ್ಲಿ ಲಾಕ್ ಮಾಡಿಕೊಂಡಿದ್ದರಿಂದ ಸಂತ್ರಸ್ತದೆ ಹೇಳಿಕೆಗೆ…
ಹಾವೇರಿ : ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತದೆ. ಪ್ರತಿವರ್ಷ ಈ ಒಂದು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿರುತ್ತಾರೆ. ನಿನ್ನೆ ತಾನೆ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದರು. ಇದೀಗ ಹೋರಿ ತಿವಿದು ಮತ್ತೊರ್ವ ಯುವಕ ಸಾವನ್ನಪ್ಪಿದ್ದಾನೆ. ಹೌದು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮತ್ತೊಂದು ದುರಂತವಾಗಿದ್ದು ಹಾವೇರಿ ಜಿಲ್ಲೆಯಲ್ಲಿ ಹೋರಿ ತೀವಿದು ಮತ್ತೊಬ್ಬ ಯುವಕ ಸಾವನಪ್ಪಿದ್ದಾನೆ. ತಿಳುವಳ್ಳಿ ಗ್ರಾಮದಲ್ಲಿ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾನೆ.ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೋರಿ ತೆಗೆದು ಭರತ್ (22) ಎನ್ನುವ ಯುವಕ ಸಾವನ್ನಪ್ಪಿದ್ದಾನೆ. ಹೋರಿ ಹಬ್ಬ ನೋಡಲು ಹೋಗಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ.
ಬೆಂಗಳೂರು : ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯಾಗಿರುವ ಪತಿ ಮಹೇಂದ್ರ ರೆಡ್ಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 29ನೇ ACMM ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಲ್ಲಿ ಕೃತಿಕಾ ರೆಡ್ಡಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಪಾಪಿ ಪತಿ ಮಹೇಂದ್ರ ಕೃತಿಕಾಳನ್ನು ಕೊಂದ ನಂತರ ವಾಟ್ಸ್ ಅಪ್ ನಲ್ಲಿ ‘i have killed krutika’ ಎಂದು ಮೆಸೇಜ್ ಮಾಡಿರೋದು ಬೆಳಕಿಗೆ ಬಂದಿದೆ. ಇದೀಗ ಆರೋಪಿಪತಿಯನ್ನು ಪೊಲೀಸರು ಬೆಂಗಳೂರಿನ 29 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದು ವಿಚಾರಣೆ ಬಳಿಕ ಜಡ್ಜ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು. ಪ್ರಕರಣ ಹಿನ್ನೆಲೆ? ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ್ದ ಹಂತಕ ಡಾಕ್ಟರ್ ಮಹೇಂದ್ರ ರೆಡ್ಡಿಯ ಕರಾಳ ಮುಖ ತನಿಖೆಯ ವೇಳೆ ಬಯಲಾಗುತ್ತಿದೆ. ವೃತ್ತಿಯಲ್ಲೂ ಇಬ್ಬರೂ ವೈದ್ಯರಾಗಿದ್ದರೂ ಕೂಡ ಪತ್ನಿಯನ್ನು ಯಾಕೆ ಕೊಲೆ…














