Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬಿಜೆಪಿ ಶಾಸಕ ಭೈರತಿ ಬಸವರಾಜಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದೀಗ ಪ್ರಮುಖ ಆರೋಪಿಗಳಿಗೆ ಡೀಫಾಲ್ಟ್ ಜಾಮೀನು ಮಂಜೂರು ಮಾಡಲಾಗಿದೆ. ಪೊಲೀಸರ ಲೋಪದಿಂದ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ವಿಳಂಬವಾಗಿ ಆರೋಪ ಪಟ್ಟಿ ಸಲ್ಲಿಸಿದ ಕಾರಣಕ್ಕೆ ಜಾಮೀನು ನೀಡಲಾಗಿದೆ. ಜಗ್ಗ ಅಲಿಯಾಸ್ ಜಗದೀಶ್, ಕೆ ಕಿರಣ್, ಬಿ ವಿಮಲ್ ರಾಜ್ ಹಾಗೂ ಮದನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿದೆ. ಕೊಲೆ ಕೇಸ್ನಲ್ಲಿ 90 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಬೇಕಾಗಿತ್ತು. ಆದರೆ ಕೋಕಾ ಕಾಯ್ದೆ ಅನ್ವಯಿಸಿ ಪೊಲೀಸರು ಹೆಚ್ಚುವರಿ ಸಮಯ ಪಡೆದಿದ್ದರು. ಕೋಕ ಕಾಯಿದೆ ಅನ್ವಯಿಸಿದ್ದನ್ನು ಡಿಸೆಂಬರ್ 19 ರಂದು ಹೈಕೋರ್ಟ್ ರದ್ದು ಪಡಿಸಿತ್ತು. ಕೋಕ ಕಾಯ್ದೆ ಅಡಿ ಚಾರ್ಜ್ ಶೀಟ್ ಸಲ್ಲಿಸಲು ಹೆಚ್ಚುವರಿ ಸಮಯವೂ ರದ್ದಾಗಿತ್ತು ಡಿಸೆಂಬರ್ 22ರಂದು ಡಿಫಾಲ್ಟ್ ಜಮೀನಿಗೆ…
ಬೆಂಗಳೂರು : ಈಗಾಗಲೇ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿರುವ ಹಿನ್ನೆಲೆ, ಬೆಂಗಳೂರು ಜನ ತತ್ತರಿಸಿ ಹೋಗಿದ್ದು, ಇದರ ಬೆನ್ನಲ್ಲೆ, ಇದೀಗ ಅಡುಗೆ ಎಣ್ಣೆ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಾಗಾಗಿ ಬೆಂಗಳೂರು ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಹೌದು ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್ ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್ ಮಾಲೀಕರ ಸ್ಥಿತಿ ಕೇಳತೀರದಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್ಗಳು ಬಂದ್ ಕೂಡ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್ನಂತೆ ಅಡುಗೆ ಆಯಿಲ್ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಇದೆ. 1. ಸಮಸ್ಯೆಯ ಮೂಲ ಏನು? ವರದಿಗಳ ಪ್ರಕಾರ, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ಮಾರಾಟಗಾರರ ನಡುವಿನ ದರ ವ್ಯತ್ಯಾಸ ಅಥವಾ ಪೂರೈಕೆ ಸರಪಳಿಯಲ್ಲಿನ ಅಡಚಣೆಗಳು ಈ ದಿಢೀರ್ ಬಂದ್‌ಗೆ ಕಾರಣ ಎನ್ನಲಾಗುತ್ತಿದೆ. ಕೆಲವು ಕಡೆಗಳಲ್ಲಿ ಸ್ಟಾಕ್ ಮಿತಿ ಅಥವಾ ಬೆಲೆ ಏರಿಕೆಯ ಮುನ್ಸೂಚನೆಯಿಂದಾಗಿ ಈ ರೀತಿಯ…
ಬೆಂಗಳೂರು : ಸನ್ನಡತೆ ಆಧಾರದ ಮೇಲೆ ರಾಜ್ಯ ಸರ್ಕಾರವು ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜೈಲುಗಳಿಂದ ಮೂವರು ಮಹಿಳೆಯರೂ ಸೇರಿದಂತೆ 30ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ, ಸಂವಿಧಾನದ ಆರ್ಟಿಕಲ್ 161ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಪರಿಶೀಲನಾ ಸಮಿತಿಯ ಶಿಫಾರಸಿನ ಮೇರೆಗೆ, ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಸಂವಿಧಾನದ ಆರ್ಟಿಕಲ್ 161 ಅನ್ವಯ ರಾಜ್ಯಪಾಲರ ಅನುಮೋದನೆಯೂ ಇದಕ್ಕೆ ದೊರೆತಿದೆ. ವಿವಿಧ ಕೇಂದ್ರ ಕಾರಾಗೃಹಗಳಿಂದ ಬಂದ 54 ಪ್ರಕರಣಗಳನ್ನು ಪರಿಶೀಲಿಸಿದ LCR ಸಮಿತಿ, ಅವುಗಳಲ್ಲಿ 30 ಜೀವಾವಧಿ ಕೈದಿಗಳನ್ನು ಬಿಡುಗಡೆಗೆ ಆಯ್ಕೆ ಮಾಡಿದೆ. ಮುಖ್ಯಾಂಶಗಳು: ಸನ್ನಡತೆಯ ಮಾನದಂಡ : ಜೈಲಿನ ನಿಯಮಗಳನ್ನು ಪಾಲಿಸಿ, ಉತ್ತಮ ನಡವಳಿಕೆ ತೋರಿದ ಕೈದಿಗಳನ್ನು ಈ ಪಟ್ಟಿಗೆ ಆಯ್ಕೆ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆ: ಸರ್ಕಾರದ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಈ ಬಿಡುಗಡೆಗೆ ಅಂಕಿತ ಹಾಕಿದ್ದಾರೆ. ಪುನರ್ವಸತಿಗೆ ಅವಕಾಶ: ಬಿಡುಗಡೆಯಾದ ಕೈದಿಗಳು ಸಮಾಜದ ಮುಖ್ಯವಾಹಿನಿಗೆ ಸೇರಿ ಹೊಸ ಜೀವನ ಆರಂಭಿಸಲು ಈ ನಿರ್ಧಾರ ಪೂರಕವಾಗಲಿದೆ.…
“ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ, ನನ್ನಂತೆ ಯತಿಂದ್ರನನ್ನು ರಾಜಕೀಯವಾಗಿ ಬೆಳೆಸಿ” : ಸಿಎಂ ಸಿದ್ದರಾಮಯ್ಯ
ಮೈಸೂರು : ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನನ್ನಂತೆ ಯತಿಂದ್ರನನ್ನು ಬೆಳೆಸಿ ಎಂದು ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ವರಕೋಡು ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ಜನರ ಸೇವೆಯನ್ನು ಮಾಡುತ್ತೇನೆ. ನನ್ನ ರಾಜಕೀಯದಲ್ಲಿ ಹಲವಾರು ಬಾರಿ ಸೋಲು ಗೆಲುವು ಕಂಡಿದ್ದೇನೆ. ಚುನಾವಣೆಯಲ್ಲಿ ಸೋತಾಗಲು, ನಾನು ಜನಸೇವೆ ಬಿಟ್ಟಿಲ್ಲ. ಹಾಗಾಗಿ ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ ಎಂದು ವರಕೊಡು ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಆದ್ಯತಾ ಪಡಿತರ ಚೀಟಿಗೆ (ಬಿಪಿಎಲ್ ಕಾರ್ಡ್) ಸಂಬಂಧಿಸಿದಂತೆ ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು ಈಗಿರುವ 1.20 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗೆ ಹೆಚ್ಚಳ ಮಾಡುವ ಚಿಂತನೆಯಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಸಭೆಯ ಪ್ರಶೋತ್ತರ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿಪಿಎಲ್ ಕಾರ್ಡ್ ಪಡೆಯಲು ಈಗ ಇರುವ ನಿಯಮಗಳು 2017ರಲ್ಲಿ ರಚನೆಯಾಗಿದ್ದು, ಈಗ ಸಾಕಷ್ಟು ಬದಲಾವಣೆಗಳಾಗಿವೆ. ಆದರೂ 8 ವರ್ಷದಿಂದ ಅದೇ ಮಾನದಂಡಗಳನ್ನು ಅನುಸರಿಸಲಾಗುತ್ತಿದೆ ಎಂದರು. ಅದರಲ್ಲೂ ಇಡೀ ರಾಜ್ಯಕ್ಕೆ ಈ ನಿಯಮಗಳನ್ನು ಅನ್ವಯಿಸುವುದೂ ಸರಿಯಲ್ಲ. ಬೆಂಗಳೂರಿನ ಜೀವನ ನಿರ್ವಹಣಾ ವೆಚ್ಚಕ್ಕೂ, ಗ್ರಾಮಾಂತರ ಪ್ರದೇಶಗಳ ನಿರ್ವಹಣಾ ವೆಚ್ಚಕ್ಕೂ ಬಹಳಷ್ಟು ವ್ಯತ್ಯಾಸಗಳಿವೆ. ಎರಡೂ ಪ್ರದೇಶಗಳಿಗೆ ಏಕರೂಪದ ಆದಾಯ ಮಿತಿ ನಿಗದಿಪಡಿಸುವುದು ತಪ್ಪು. ಇದನ್ನು ವೈಜ್ಞಾನಿಕವಾಗಿ ಪರಿಷ್ಕರಿಸಬೇಕು ಎಂದು ಒತ್ತಾಯಿಸಿದರು. ವಿಧವೆಯರು, ವಿಕಲಚೇತನರು, ಮಾರಕ ರೋಗಗಳಿಂದ ಬಳಲುತ್ತಿರುವವರ ಕುಟುಂಬಕ್ಕೆ ಬಿಪಿಎಲ್‌ಗಿಂತ ಅಂತ್ಯೋದಯ ಅನ್ನ ಕಾರ್ಡ್…
ಬೆಂಗಳೂರು : ನಟಿ ರಮ್ಯಾಗೆ ಸಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಹಾಕಿದ್ದ ಪ್ರಕರಣದ ಬೆನ್ನೆಲ್ಲೆ, ಜಾಲತಾಣಗಳಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೂಡ ಅಶ್ಲೀಲ ಕಮೆಂಟ್ ಹಾಗೂ ನಿಂದಿಸಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, 6 ಆರೋಪಿಗಳ ವಿರುದ್ಧ 45ನೇ ಎಸಿಎಂಎಂ ಕೋರ್ಟ್‌ಗೆ 473 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ವಿಜಯಲಕ್ಷ್ಮೀ ಅವರು 2025ರ ಡಿಸೆಂಬರ್‌ನಲ್ಲಿ ತಮ್ಮ ವಿರುದ್ಧ ಅಶ್ಲೀಲ ಕಮೆಂಟ್ ಹಾಕಿದ್ದ ಕಿಡಿಗೇಡಿಗಳ ವಿರುದ್ಧ ಸೈಬರ್‌ಕ್ರೆ,,0 ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದ ಸಿಸಿಬಿ ಖಾಸೀಂ ರಾಜಾ ಅವರ ನೇತೃತ್ವದ ತಂಡ 6 ಮಂದಿ ಆರೋಪಿಗಳನ್ನು ಬಂಧಿಸಿತ್ತು. ಇದೀಗ ತನಿಖೆ ಪೂರ್ಣಗೊಂಡಿದ್ದು ಎಲ್ಲಾ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳ ಪೈಕಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎಂದು ಹೇಳಿಕೊಂಡಿದ್ದಾರೆ. ಆದರೆ, ವಿಚಾರಣೆಯಲ್ಲಿ ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಹಾಗೂ ನಿಂದಿಸಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪೋಸ್ಟ್ ಮಾಡುತ್ತಿರುವುದು ಅಶ್ಲೀಲ…
ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮವಾಗಿ ಇದೀಗ ರಾಜ್ಯದಲ್ಲಿ ಸಿಲಿಂಡರ್ ಅಭಾವ ಇದ್ದು ಅದರಲ್ಲೂ ಬೆಂಗಳೂರಿನಲ್ಲಿ ಸಿಲಿಂಡರ್ ಇಲ್ಲದೆ ಬಹುತೇಕ ದೊಡ್ಡ ದೊಡ್ಡ ಹೋಟೆಲ್ ಗಳು ಬಂದ್ ಆಗಿವೆ. ಇದರ ಮಧ್ಯ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಇನ್ನೂ ಒಂದು ವಾರ ಅಥವಾ 10 ದಿನ ಸಿಲಿಂಡರ್ ಸಿಗಲ್ಲ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ಆಹಾರ ಸಚಿವ ಮುನಿಯಪ್ಪ ಹೇಳಿಕೆ ನೀಡಿದ್ದು ಇನ್ನೂ ಒಂದು ವಾರ ಅಥವಾ ಹತ್ತು ದಿನ ಸಿಲಿಂಡರ್ ಸಿಗಲ್ಲ. ಕಮರ್ಷಿಯಲ್ ಸಿಲಿಂಡರ್ ಸದ್ಯಕ್ಕೆ ಸ್ಟಾಕ್ ಇಲ್ಲ. ಹಾಗಾಗಿ ಹೋಟೆಲ್ ಮಾಲೀಕರು ತಾಳ್ಮೆಯಿಂದ ಕಾಯಬೇಕು. ಆಸ್ಪತ್ರೆ, ಹಾಸ್ಟೆಲ್ ಮತ್ತು ವಸತಿ ನಿಲಯಕ್ಕೆ ಗ್ಯಾಸ್ ನೀಡುತ್ತೇವೆ. ಹೋಟೆಲ್ ನವರು ಎಲೆಕ್ಟ್ರಿಕ್ ಸ್ಟವ್ ಬಳಸಬೇಕು. ಒಂದು ವಾರ ಹತ್ತು ದಿನ ಸುಧಾರಿಸಿಕೊಂಡರೆ ಸಮಸ್ಯೆ ಬಗ್ಗೆ ಹರಿಯುತ್ತದೆ ಎಂದು ಸಚಿವ ಮುನಿಯಪ್ಪ ಉತ್ತರಿಸಿದರು.
ಬೆಂಗಳೂರು : ರಾಜ್ಯದಲ್ಲಿ ಮರ್ಯಾದ ಹತ್ಯೆ ನಿಷೇಧಿಸುವ ಮಾಸೂದೆಗೆ ರಾಜ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.ವಿವಾಹದಲ್ಲಿ ಆಯ್ಕೆ ಸ್ವಾತಂತ್ರ್ಯವನ್ನು ಒದಗಿಸಿ, ಜಾತಿ ಆಧಾರಿತ ಅಪರಾಧಗಳನ್ನು ತಡೆಯಲು ಹಾಗೂ ನಿಷೇಧಿಸಲು ಈ ಮಸೂದೆ ಮಂಡನೆ ಮಾಡಲಾಗಿದೆ. ರಾಜ್ಯದಲ್ಲಿ ಜಾತಿ ಆಧಾರಿತ ಭೇದಭಾವ ಇನ್ನೂ ಕ್ರೂರ ಹಿಂಸಾಚಾರದ ರೂಪದಲ್ಲಿ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಅಂತರ್ಜಾತಿ ವಿವಾಹಗಳ ಮೂಲಕ ತಮ್ಮ ಜೀವನ ಸಂಗಾತಿಯನ್ನು ಆಯ್ಕೆಮಾಡುವ ಸಂವಿಧಾನಾತ್ಮಕ ಹಕ್ಕನ್ನು ಬಳಸಿಕೊಳ್ಳುವ ಯುವಕರ ವಿರುದ್ಧ ಗೌರವ ಹತ್ಯೆಗಳಂತಹ ಅಪರಾಧಗಳು ನಡೆಯುತ್ತಿರುವ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಮಸೂದೆ ರೂಪಿಸಲಾಗಿದೆ. ಜಾತಿ ಆಧಾರಿತ ಅಪರಾಧಗಳ ಮೂಲಕ ಮಾನವಹಕ್ಕು ಉಲ್ಲಂಘನೆ ತಡೆಯಲು, ಅಂತರ್ಜಾತಿ ವಿವಾಹಗಳಿಗೆ ಗೌರವ ನೀಡಲು, ವೈಯಕ್ತಿಕ ಆಯ್ಕೆಗಳ ಮೇಲೆ ಜಾತಿ ಆಧಾರಿತ ಬಲವಂತದ ಭೇದ ಭಾವವನ್ನು ತಡೆಯಲು ಮತ್ತು ಅಂತರ್ಜಾತಿ ವಿವಾಹವನ್ನು ನೆರವೇರಿಸಲು ‘ಇವ ನಮ್ಮವ ಇವ ನಮ್ಮವ ವೇದಿಕೆ’ ಸ್ಥಾಪಿಸಲು ಮಸೂದೆಯಲ್ಲಿ ನಿಯಮ ರೂಪಿಸಲಾಗಿದೆ. ಜಾತಿ, ಸಂಸ್ಕೃತಿ, ಸಂಪ್ರದಾಯ, ಗೌರವದಂತಹ ಹೆಸರಲ್ಲಿ ಯಾವುದೇ ವ್ಯಕ್ತಿ ಕೃತ್ಯಗಳನ್ನು ನಡೆಸುವ…
ನವದೆಹಲಿ : ಅಮೇರಿಕಾ ಇಸ್ರೆಲ್ ಹಾಗೂ ಇರಾನ್ ಮಧ್ಯ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಅಮೆರಿಕಾಗೆ ಇರಾನ್ ಬಿಗ್ ಶಾಕ್ ನೀಡಿದೆ. ಇರಾನ್ ಕ್ಷಿಪಣಿ ದಾಳಿಗೆ ಅಮೇರಿಕಾ ವಿಮಾನವೊಂದು ಪತನವಾಗಿದೆ. ಹೌದು ಅಮೆರಿಕಾದ ಇಂಧನ ತುಂಬುವ ವಿಮಾನ ಇರಾನ್ ನ ಕ್ಷಿಪಣಿ ದಾಳಿಗೆ ಪತನವಾಗಿದ್ದು, ಪಶ್ಚಿಮ ಇರಾಕ್ ನಲ್ಲಿ ಅಮೆರಿಕಾದ ವಿಮಾನ ಪತನಗೊಂಡಿದೆ. ಈ ಒಂದು ದಾಳಿಯಲ್ಲಿ ಅಮೆರಿಕಾದ ಐವರು ಸಿಬ್ಬಂದಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ. ಇನ್ನು ಸಿಬ್ಬಂದಿಗಳ ಮೃತದೆಹಕ್ಕಾಗಿ ಅಮೆರಿಕ ಸೇನೆಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.
ಬೆಂಗಳೂರು : ಇರಾನ್ ಹೆಸರಲ್ಲಿ ಯುದ್ಧದ ಪರಿಣಾಮ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಆದರೆ ಇದೀಗ ರಾಜ್ಯದಲ್ಲಿ ಅಡುಗೆ ಅನಿಲದ ಕೊರತೆಯಿಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದೆ. ಹೌದು ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಅಡುಗೆ ಅನಿಲ (LPG) ಅಭಾವ ಉಂಟಾಗಲಿದೆ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆ ಮಾಡಿತ್ತು. ಪ್ರಮುಖವಾಗಿ ಹೋಟೆಲ್, ಶಾಲೆ-ಕಾಲೇಜು, ದೇವಾಲಯಗಳ ದಾಸೋಹ ಭವನ, ಇಂದಿರಾ ಕ್ಯಾಂಟೀನ್ ಹಾಗೂ ಐಟಿ ಕಂಪನಿಗಳ ಕ್ಯಾಂಟೀನ್‌ಗಳಲ್ಲಿ ಗ್ಯಾಸ್ ಸಮಸ್ಯೆ ಎದುರಾದ ಬೆನ್ನಲ್ಲೇ ಜನಸಾಮಾನ್ಯರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ರಾಜ್ಯದಲ್ಲಿ ಅಡುಗೆ ಅನಿಲದ ಕೊರತೆಯಿಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ಸುತ್ತೋಲೆ ಹೊರಡಿಸಿದೆ. ಗ್ಯಾಸ್ ಅಭಾವವಾಗಬಹುದು ಎಂಬ ಭೀತಿಯಲ್ಲಿ ಅನೇಕ ಗ್ರಾಹಕರು ಮುನ್ನೆಚ್ಚರಿಕೆ ಕ್ರಮವಾಗಿ ಅಥವಾ ಗಾಬರಿಯಿಂದ ಅನಗತ್ಯವಾಗಿ ಸಿಲಿಂಡರ್ ಬುಕಿಂಗ್ ಮಾಡುತ್ತಿದ್ದಾರೆ. ಇದರಿಂದ…














