Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಗದ್ದನಕೇರಿಯ ರಾಮಾರೂಢ ಮಠದ ಸ್ವಾಮೀಜಿಗೆ ನಿಮ್ಮ ಮೇಲೆ ಗಂಭೀರ ಆರೋಪ ಬಂದಿದೆ ಎಂದು, ಮೊಬೈಲ್ ಅಲ್ಲಿ ಎಡಿಜಿಪಿ ಮಾತನಾಡುತ್ತಿದ್ದೇನೆ ಹೇಳಿಕೊಂಡು ಎರಡು ಕಂತಿನಲ್ಲಿ 1 ಕೋಟಿ ರೂ. ಪಡೆದು ವಂಚನೆ ಮಾಡಿದ್ದ ಜೆಡಿಎಸ್ ನಾಯಕ ಪ್ರಕಾಶ್ ಮುಧೋಳನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಮುಧೋಳನಿಂದ ಇದೀಗ ಪೊಲೀಸರು 87 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಬಾಗಲಕೋಟೆ ಎಸ್ ಪಿ ಅಮರನಾಥ ರೆಡ್ಡಿ ನೇತೃತ್ವದಲ್ಲಿ ಮೂರು ಪೊಲೀಸ್ ತಂಡ ರಚಿಸಲಾಗಿತ್ತು. ಕೂಡಲೇ ಕ್ರಮ ಕೈಗೊಂಡು ಒಂದೇ ದಿನದಲ್ಲಿ ಪ್ರಕಾಶ್ ಮುಧೋಳ ಬಂಧನ ಮಾಡಲಾಗಿದೆ.ಬಂಧಿತನಿಂದ 87 ಲಕ್ಷ ರೂ.ಹಣ, ಇನ್ನೋವಾ, ಔರಾ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕಾಶ್ ಮುಧೋಳ್ ಹಿನ್ನೆಲೆ? ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಿರ್ಜಿ ಮೂಲದವನಾದ ಆರೋಪಿ ಪ್ರಕಾಶ್ ಎಂಬಾತ 2024 ರಲ್ಲಿ ರಾಮದುರ್ಗ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಲೆಕ್ಷನ್ಗೆ ನಿಂತಿದ್ದ. ಇತನ ಮೇಲೆ ಈ ಹಿಂದೆ 3 ಕಳ್ಳತನ, 3 ಚೀಟಿಂಗ್, 3 ಸುಲಿಗೆ,…
ಬೆಂಗಳೂರು : ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಅತ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ. ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ…
ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದೆ. ಇದರ ಮಧ್ಯ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, ಈ ಹಿಂದೆ ಸಿಎಂ ಸಿದ್ದರಾಮಯ್ಯ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿ ಡಿನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯ ನುಂಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲನೇ ಆರೋಪಿಯಾಗಿದ್ದು, ಒಟ್ಟು 18 ಆರೋಪಿಗಳು ಇದ್ದಾರೆ.ನ್ಯಾಯಾಲಯದಿಂದ ಸಿದ್ದರಾಮಯ್ಯ ವಿರುದ್ಧ ತೀರ್ಪು ಕೂಡ ಬಂದಿದೆ. ಅದನ್ನು ಪ್ರಶ್ನಿಸಿ ಹೈಕೋರ್ಟ್ ನಿಂದ ರಿಲೀಫ್ ಪಡೆದುಕೊಂಡರು ಎಂದು ತಿಳಿಸಿದರು. ಈ ಒಂದು ಪ್ರಕರಣ 14 ಸೈಟ್ ಗಿಂತಲೂ ದೊಡ್ಡ ಹಗರಣವಾಗಿದೆ. ಊರಿಗೆ ಬುದ್ದಿ ಹೇಳೋರು ಇಲ್ಲಿ ಏನೇನು ಮಾಡಿದ್ದಿರಿ, ಸತ್ಯ ಹೇಳಿ. ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನು ಎರಡು…
ಚಿಕ್ಕಬಳ್ಳಾಪುರ : ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ಸಾಮಗ್ರಿ ಮೈ ಮೇಲೆ ಬಿದ್ದು ಮಹಿಳಾ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಗ್ರಾಮದ ಬಳಿ ಈ ಒಂದು ಅವಘಡ ಸಂಭವಿಸಿದೆ. ಖಾಸಗಿ ಕಂಪನಿಯಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದರು. ಸಾಮಗ್ರಿಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಿಸುವಾಗ ಈ ಅವಘಡ ಸಂಭವಿಸಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕೆಲಸ ಮಾಡುತ್ತಿದ್ದ ಹಿನ್ನಲೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮುಡಾ ಸೈಟ್ ವಾಪಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮುಡಾ ಆಯುಕ್ತರಿಗೆ 14 ನಿವೇಶನಗಳನ್ನು ವಾಪಸ್ ಮಾಡುತ್ತಿದ್ದೇನೆ ಎಂದು ಪತ್ರ ಬರೆದಿದ್ದರು. ಹಾಗಾಗಿ ಇದೀಗ 14 ನಿವೇಶನಗಳನ್ನು ಇದೀಗ ರದ್ದು ಮಾಡಲಾಗಿದೆ. ಹೌದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರೇ ಸಬ್ ರಿಜಿಸ್ಟರ್ ಕಚೇರಿಗೆ ಬಂದು 14 ನಿವೇಶನಗಳ ಖಾತೆಯನ್ನು ರದ್ದು ಪಡಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ನಿನ್ನೆ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ 14 ನಿವೇಶನಗಳನ್ನು ಹಿಂತಿರುಗಿಸುತ್ತಿದ್ದೇನೆ ಎಂದು ಮುಡಾ ಆಯುಕ್ತರಿಗೆ ಪತ್ರದ ಮೂಲಕ ತಿಳಿಸಿದ್ದರು. ಇದೀಗ ಇಂದು ಖುದ್ದು ಅವರೇ ಸಬ್ ರಿಜಿಸ್ಟರ್ ಕಚೇರಿಗೆ ಹಾಜರಾಗಿ 14 ನಿಮಿಷಗಳ ಖಾತೆ ರದ್ದುಗೊಳಿಸಿದ್ದಾರೆ.
ಕೋಲಾರ : ಕೋಲಾರದಲ್ಲಿ ಒಂದೇ ಕುಟುಂಬದ 6 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಈ ವೇಳೆ ಘಟನೆಲ್ಲಿ ಓರ್ವ ವ್ಯಕ್ತಿ ಸಾವನಪ್ಪಿದ್ದು, ಉಳಿದವರಿಗೆ ಗಂಭೀರವಾದಂತಹ ಗಾಯಗಳಾಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೌದು ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಜಂಗಾಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.ಹೆಜ್ಜೇನು ದಾಳಿಯಿಂದಾಗಿ ವೆಂಕಟಸ್ವಾಮಿ (60) ಸಾವನ್ನಪ್ಪಿದ್ದಾರೆ.ಒಂದೇ ಕುಟುಂಬದ 6 ಜನರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಶಾಮಣ್ಣ, ಸುಂದರ್ ರಾಜ್, ಕಾರ್ತಿಕ್, ಶ್ರೀನಿವಾಸ್ ಹಾಗೂ ವೆಂಕಟ ಗಿರಿಯಪ್ಪ ಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ : ಕೃಷಿ ಹೊಂಡದ ಬಳಿ ಆಟ ಆಡುತ್ತಿದ್ದ ವೇಳೆ, ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಸಗೋಡು ವಡ್ಡರಹಟ್ಟಿ ಗ್ರಾಮದಲ್ಲಿ ನಡೆದಿದೆ. ಗಂಗೋತ್ರಿ (10) ತನುಶ್ರೀ (11) ಮೃತ ಬಾಲಕಿಯರು ಎಂದು ತಿಳಿದುಬಂದಿದೆ. ಶಾಲೆ ಬಿಟ್ಟ ಬಳಿಕ ನಾಲ್ವರು ವಿದ್ಯಾರ್ಥಿಗಳು ಎಂದಿನಂತೆ ಮನೆಗೆ ತೆರಳುತ್ತಿದ್ದರು. ರಸ್ತೆ ಮಾರ್ಗದಲ್ಲಿ ಕೃಷಿ ಹೊಂಡ ನೋಡಿದ್ದಾರೆ. ಈ ಹೊಂಡದ ಮೇಲೆ ಆಟವಾಡುತ್ತಾ ಬರುತ್ತಿದ್ದಾಗ ಈ ವೇಳೆ ಓರ್ವ ಬಾಲಕಿ ಕಾಲು ಜಾರಿ ಬಿದ್ದಿದ್ದಾಳೆ. ತಕ್ಷಣ ಮತ್ತೋರ್ವ ಬಾಲಕಿ ಕಾಪಾಡಲು ಹೋಗಿದ್ದು, ಇಬ್ಬರೂ ಮೃತಪಟ್ಟಿದ್ದಾರೆ. ಮೃತ ಬಾಲಕಿಯರ ಜೊತೆ ಖುಷಿ ಎಂಬ ಬಾಲಕಿಯೂ ಹೊಂಡದಲ್ಲಿ ಬಿದ್ದಿದ್ದು, ಆಕೆಯನ್ನು ಜಮೀನಿನ ಮಾಲೀಕನ ಮಗ ಕಾಪಾಡಿದ್ದಾನೆ. ಇವರೊಂದಿಗಿದ್ದ ಶೈಲಜಾ ಎಂಬ ಬಾಲಕಿ ಗಾಬರಿಯಿಂದ ಮನೆಗೆ ತೆರಳಿದ್ದಾಳೆ. ಮೃತಪಟ್ಟ ಬಾಲಕಿಯರ ಪೋಷಕರು ಕೂಲಿ ಕೆಲಸಕ್ಕೆ ಮಲೆನಾಡಿಗೆ ಹೋಗಿದ್ದಾರೆ. ಮೃತ ಬಾಲಕಿಯರು ಅಜ್ಜಿಯ ಮನೆಯಲ್ಲಿ ಇದ್ದಾರೆ. ಘಟನೆ ಕುರಿತಂತೆ ಬಿಳಿಚೋಡು…
ಬೆಳಗಾವಿ : ಕೌಟುಂಬಿಕ ಕಲಹದಿಂದ ಮನನೊಂದು ತಾಯಿಯೊಬ್ಬಳು ತನ್ನ 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ. ಹೌದು 17 ತಿಂಗಳ ಮಗುವಿನೊಂದಿಗೆ ಬಾವಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ಘಟನೆ ನಡೆದಿದ್ದು, ತನ್ನ 17 ತಿಂಗಳ ಹಸೂಗೂಸಾದ ಕುಶಾಲ್ ನೊಂದಿಗೆ ಗಾಯತ್ರಿ ವಾಗಮೊರೆ (26) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿದುಬಂದಿದೆ.ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕದಲ್ಲಿ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ, ತಾಯಿ ಮತ್ತು ಮಗುವಿನ ಶಿವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಉಡುಪಿ : ಲಾರಿ ಹರಿದು ಪ್ರಥಮ ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಹಾಲಾಡಿ ರಸ್ತೆಯ ಕಾಗೇರಿ ಪ್ರದೇಶದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಾಗೇರಿ ಪ್ರದೇಶ ಕೋಟೇಶ್ವರದ ವರದರಾಜ ಶೆಟ್ಟಿ ಸರ್ಕಾರಿ ಕಾಲೇಜು ವಿದ್ಯಾರ್ಥಿ ಧನುಷ್ (19) ಎಂದು ತಿಳಿದುಬಂದಿದೆ. ಕಾಲೇಜು ಮುಗಿಸಿ ಸ್ನೇಹಿತರ ಜೊತೆಗೆ ಧನುಶ್ ತೆರಳುತ್ತಿದ್ದ, ಫುಟ್ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ಎದುರುನಿಂದ ಬರುತ್ತಿದ್ದ ಕಾರು ತಪ್ಪಿಸಲು ಹೋಗಿ ಲಾರಿ ಚಾಲಕರ ಧನುಷ್ಗೆ ಡಿಕ್ಕಿ ಹೊಡೆದಿದ್ದಾನೆ.ಈ ವೇಳೆ ಲಾರಿ ಹರಿದು ವಿದ್ಯಾರ್ಥಿ ಧನುಷ್ ಸ್ಥಳದಲ್ಲಿ ಸವಣಪ್ಪಿದ್ದಾನೆ ಘಟನೆ ಕೊಡಿತಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಜಪ್ತಿ ಮಾಡಿದ್ದ ವಸ್ತುಗಳನ್ನು ಹಿಂತಿರುಗಿಸಿಲ್ಲ ಎಂದು ಆರೋಪಿಸಿ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧವೇ fir ದಾಖಲಾಗಿದೆ. ಜೆಪಿ ನಗರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಎಂ ಎಸ್ ಹಿತೇಂದ್ರ ಜೆಪಿ ನಗರ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಸ್ಸು ನೀಡಿರಲಿಲ್ಲ.ಅಲ್ಲದೆ ಹಿಂದಿನ ಇನ್ಸ್ಪೆಕ್ಟರ್ ಹಸ್ತಾಂತರಿಸಿದ ಮಾಲೂ ಸಹ ಹಾಜರುಪಡಿಸಿರಲಿಲ್ಲ. ಜಪ್ತಿ ಮಾಡಿದ್ದ ವಸ್ತುಗಳನ್ನು ವಾಪಸ್ ನೀಡುವಂತೆ ಹಲವು ಬಾರಿ ಸೂಚನೆ ನೀಡಲಾಗಿತ್ತು. ಈ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನ ಪತ್ರ ನೀಡಿದರು ಸಹ ಉತ್ತರ ನೀಡಿರಲಿಲ್ಲ. ಜಪ್ತಿ ಮಾಡಿದ್ದ ಮಾಲು ಹಿಂದಿರುಗಿಸದೆ ದುರುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಜೆಪಿ ನಗರ ಠಾಣೆಯ ಹಿಂದಿನ ಇನ್ಸ್ಪೆಕ್ಟರ್ ಜಿತೇಂದ್ರ ಎಂಎಸ್ ವಿರುದ್ಧ ಇದೀಗ ಹಾಲಿ ಇನ್ಸ್ಪೆಕ್ಟರ್ ಆಗಿರುವಂತಹ ರಾಧಾಕೃಷ್ಣ ಎಫ್ ಐ ಆರ್…













