Subscribe to Updates
Get the latest creative news from FooBar about art, design and business.
Author: kannadanewsnow05
ಕೊಪ್ಪಳ : ತಮ್ಮ ಪಾಡಿಗೆ ತಾವು ಮಕ್ಕಳು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ, ಏಕಾಏಕಿ ಬೀದಿ ನಾಯಿಗಳು ಮೂರು ಮಕ್ಕಳ ಮೇಲೆ ದಾಳಿ ಮಾಡಿವೆ. ದೇಹದ ಹಲವೆಡೆ ಕಚ್ಚಿ ಗಾಯಗೊಳಿಸಿವೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿಗಳ ದಾಳಿ ಮಾಡಿವೆ. ಕೊಪ್ಪಳದ ದಿನ್ಯಾರ್ ಬಡಾವಣೆ ಹಾಗೂ ಕನಕನಗಿರಿ ಬಡಾವಣೆಯಲ್ಲಿ ಘಟನೆ ನಡೆದಿದ್ದು ಮೂರು ಮಕ್ಕಳನ್ನು ಬೀದಿ ನಾಯಿಗಳು ಕಚ್ಚಿ ಗಾಯಗೊಳಿಸಿವೆ. ಅಬ್ರಾರ್, ಫರ್ಹಾನ್ ಹಾಗೂ ಮಂಜುಗೆ ಬೀದಿ ನಾಯಿಗಳು ಕಚ್ಚಿ ಘಾಸಿಗೊಳಿಸಿವೆ. ಕೂಡಲೇ ಗಾಯಗೊಂಡ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವೇಳೆ ಸ್ಥಳೀಯರು ಕೊಪ್ಪಳ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಪಡಿಸಿದ್ದಾರೆ.
ಬೆಂಗಳೂರು : ಹೆಸರು ಬದಲಾಯಿಸಿಕೊಂಡು ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿನಲ್ಲೇ ಠಿಕಾಣಿ ಹೂಡಿದ್ದ, ಪಾಕಿಸ್ತಾನ ಪ್ರಜೆಗಳನ್ನು ಇದೀಗ ಎನ್ಐಎ ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಅಧಿಕಾರಿಗಳು ಬೆಚ್ಚಿ ಬೀಳಿಸುವಂತಹ ಹಲವು ಮಾಹಿತಿಗಳು ಬಹಿರಂಗವಾಗಿವೆ. ಹೌದು ಪ್ರಮುಖ ಆರೋಪಿಯಾಗಿರುವ ಪಾಕಿಸ್ತಾನ ಪ್ರಜೆ ರಶೀದ್ ಅಲಿ ಸಿದ್ಧಕಿ ಮತ್ತು ಈತನ ಕುಟುಂಬಸ್ಥರ ಬಳಿ ಭಾರತದ ಪಾಸ್‌ಪೋರ್ಟ್ ಪತ್ತೆಯಾಗಿದೆ. ಆತನ ಕುಟುಂಬ ಭಾರತಕ್ಕೆ ಅಕ್ರಮವಾಗಿ ನುಸುಳಲು, ಭಾರತೀಯ ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಡಿಎಲ್ ಎಲ್ಲವನ್ನು ಹೊಂದಲು ಮೆಹದಿ ಫೌಂಡೇಷನ್ನ ಪ್ರಮುಖ ವ್ಯಕ್ತಿ ಪರ್ವೇಜ್ ಸಹಾಯ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಜಿಗಣಿ ಪೊಲೀಸರು ಪರ್ವೇಜ್ ಮತ್ತು ಇತನ ಸಂಪರ್ಕದಲ್ಲಿದ್ದವವರಿಗಾಗಿ ಹುಡುಕಾಟ ನಡೆಸಿದ್ದಾರೆ. ಪಾಕಿಸ್ತಾನ ಪ್ರಜೆ ರಶೀದ್ ಅಲಿ ಸಿದ್ಧಕಿಗೆ ಮುಂಬೈ ಮತ್ತು ದೆಹಲಿಯಲ್ಲಿ ಹಲವರು ಪರಿಚಯಸ್ಥರಿದ್ದಾರೆ. ಹೀಗಾಗಿ, ಎರಡು ಪೊಲೀಸ್ ತಂಡ ಮುಂಬೈ ಮತ್ತು ದೆಹಲಿಗೆ ತೆರಳಿದೆ. ರಶೀದ್ ಕುಟುಂಬದವರ ಸಂಪರ್ಕದಲ್ಲಿರುವವರಿಗಾಗಿ ಶೋಧ ನಡೆಸುತ್ತಿವೆ. ನಿನ್ನೆ ಬೆಂಗಳೂರು ಗ್ರಾಮಾಂತರ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮುಡಾಗೆ 14 ನಿವೇಶನಗಳನ್ನ ಹಿಂತಿರುಗಿಸಿದ್ದು, ಈ ಒಂದು ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು ಎಂದು ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಎಲ್ಲಾ ಭಾಗ್ಯಗಳನ್ನು ಕೊಟ್ಟವರು. 40 ವರ್ಷದಿಂದ ಯಾವುದೇ ಕಳಂಕ ಇರಲಿಲ್ಲ. ಸೈಟ್ ವಿಚಾರ ನಮಗೆ ಸಾಕಷ್ಟು ಬೇಸರವಾಗಿತ್ತು. ಜೊತೆಯಲ್ಲಿ ಉಂಡು ತಿಂದವರೇ ಸಿಎಂ ಸಿದ್ದರಾಮಯ್ಯ ಇಂದಿನ ಪರಿಸ್ಥಿತಿಗೆ ಕಾರಣರಾಗಿದ್ದಾರೆ. ಅಲ್ಲದೆ ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು. ಯಾವುದೇ ಕಾರಣಕ್ಕೂ ಸಿಎಂ ಪತ್ನಿ ನಿವೇಶನಗಳನ್ನು ಹಿಂತಿರುಗಿಸಬಾರದಾಗಿತ್ತು ಎಂದು ಅವರು ತಿಳಿಸಿದರು. ಮರಿಗೌಡ ನಮ್ಮ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಆತನಿಂದಲೇ ಇಷ್ಟೆಲ್ಲಾ ಆಗಿರುವುದು ವಿಶ್ವನಾಥ ಮಾತನ್ನು ಸಿಎಂ ಕೇಳಿದ್ದರೆ ಈ ಆರೋಪ ಬರುತ್ತಿರಲಿಲ್ಲ ಆದರೆ…
ಕಲಬುರ್ಗಿ : ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಬಳಿಕ ಲಾಡ್ಜ್ ಗೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ ಎಸೆಗಿರುವ ಕೆ ಎಸ್ ಆರ್ ಪಿ ಪೊಲೀಸ್ ಸಿಬ್ಬಂದಿಯ ವಿರುದ್ಧ ಇದೀಗ ಸಂತ್ರಸ್ತೇ ಯುವತಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಹೌದು ಅತ್ಯಾಚಾರ ಎಸಗಿರುವ KSRP ಸಿಬ್ಬಂದಿಯನ್ನು ಯಲ್ಲಾಲಿಂಗ ಮೇತ್ರಿ ಎಂದು ಹೇಳಲಾಗುತ್ತಿದ್ದು, ಇಬ್ಬರು ಸುಮಾರು ಐದು ತಿಂಗಳು ಇನ್ಸ್ಟಾಗ್ರಾಮ್ನಲ್ಲಿ ಮೇಸೆಜ್ ಮಾಡಿದ್ದಾರೆ. ಬಳಿಕ ಮೊಬೈಲ್ ನಂಬರ್ ಬದಲಾಯಿಸಿಕೊಂಡಿದ್ದಾರೆ. ಇಬ್ಬರ ಸ್ನೇಹ ಪ್ರೀತಿಗೆ ತಿರುಗಿದೆ. ಆರೋಪಿ ಯಲ್ಲಾಲಿಂಗ ಸಂತ್ರಸ್ತೆಗೆ ಮದುವೆಯಾಗುವುದಾಗಿ ನಂಬಿಸಿದ್ದಾನೆ. ಆರೋಪಿ ಯಲ್ಲಾಲಿಂಗನ ಮಾತನ್ನು ಸಂತ್ರಸ್ತೆ ನಂಬಿದ್ದಾಳೆ. ಯಲ್ಲಾಲಿಂಗನ ಮಾತು ನಂಬಿ ಯುವತಿ ಹೈದರಾಬಾದ್ ನಿಂದ ಕಲಬುರ್ಗಿ ಬಂದಿದ್ದಾಳೆ.ಈ ವೇಳೆ ಕಲ್ಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಎದುರುಗಡೆ ಇರುವ ಲಾಡ್ಜ್ ನಲ್ಲಿ ಇಡೀ ರಾತ್ರಿ ಇವತ್ತು ಮೇಲೆ ಅತ್ಯಾಚಾರ ಗೆಸ್ಸಿದ್ದಾನೆ ಬಳಿಕ ನನಗೆ ಬೇರೆ ಕಡೆ ಡ್ಯೂಟಿ ಇದೆ ಅಲ್ಲಿ ಹೋಗಿ ಬಂದು ನಾಳೆ ಮದುವೆ…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಒಬ್ಬರಿಗೇ ಸೈಟ್ ಕೊಟ್ಟಿಲ್ಲ. ಇನ್ನೂ ಹಲವರಿಗೆ ಕೊಟ್ಟ ನಿದರ್ಶನ ಇದೆ. ನಮ್ಮಬಿಜೆಪಿ ಸರ್ಕಾರ ಇದ್ದಾಗಲೇ ಕೊಟ್ಟಿದ್ದು. ಕಾನೂನಿನ ಪ್ರಕಾರವೇ ಸೈಟು ನೀಡಲಾಗಿದೆ, ಬಿಜೆಪಿ ಈಗ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ತಮ್ಮ ಸ್ವಪಕ್ಷದ ವಿರುದ್ಧವೆ ಬೆಂಗಳೂರು ನಗರ ಯಶವಂತಪುರ ವಿಧಾನಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕಿಡಿಕಾರಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸೈಟುಗಳು ಬಿಜೆಪಿ ಸರ್ಕಾರ ಅಸ್ಥಿತ್ವದಲ್ಲಿದ್ದಾಗಲೇ ಬಿಜೆಪಿ ಸರ್ಕಾರವೇ ನೀಡಿತ್ತು.ಈ ಸಂದರ್ಭದಲ್ಲಿ ಕೇವಲ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮಾತ್ರವಲ್ಲ, ಅನೇಕ ಬೇರೆ ಮುಖಂಡರಿಗೆ ಸೈಟ್ ವಿತರಿಸಲಾಗಿದೆ, ಅದನ್ನೂ ಕೂಡ ತನಿಖೆ ನಡೆಸಬೇಕು ಎಂದು ಸೋಮಶೇಖರ್ ಲೋಕಾಯುಕ್ತವನ್ನು ಆಗ್ರಹಿಸಿದ್ದಾರೆ. ಸೈಟ್ ವಾಪಸ್ ಕೊಡಲು ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಸೈಟ್ ಅಲಾಟ್ ಆಗಿತ್ತು. ಅಂದಿನ ರಾಜ್ಯ ಸರ್ಕಾರವೇ ಸೈಟ್ ಅಲಾಟ್ ಮಾಡಿದೆ. ಡೆವಲಪ್ಮೆಂಟ್…
ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದು, ಬಿಜೆಪಿಯ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರು ಅವರ ಮುಖಂಡರಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಕರೆತರುವಂತೆ ಹೇಳಿಸುತ್ತಿದ್ದಾರೆ ಎಂದು ತಿಳಿಸಿದರು. ಇಂದು ರಾಮನಗರ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೂ ಮುನ್ನ ಯೋಗೇಶ್ವರ್ ಬಂದಿದ್ದರೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೆವು. ಅವರಿಗೆ ಗೌರವ ನೀಡುತ್ತಿದ್ದೆವು. ಈಗ ಎಚ್.ಡಿ ಕುಮಾರಸ್ವಾಮಿ ಜೊತೆ ಸೇರಿಸಿಕೊಂಡಿದ್ದಾರೆ. ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಾರೆ ನೋಡೋಣ. ನಮ್ಮ ಹಣೆ ಬರಹ ಏನಿತ್ತೋ ಗೊತ್ತಿಲ್ಲ. ಬಂದಿದ್ದರೆ ಗೌರವವಾಗಿ ನಡೆಸಿಕೊಳ್ಳುತ್ತಿದ್ದೇವು ಎಂದರು. ಚನ್ನಪಟ್ಟಣ ಉಪಚುನಾವಣೆ ದೃಷ್ಟಿಯಿಂದ ಈಗಾಗಲೇ ಕ್ಷೇತ್ರದಲ್ಲಿ ಓಡಾಟ ನಡೆಸಿ ಮುಖಂಡರ ಜೊತೆ ಚರ್ಚೆ ಮಾಡಿ ದ್ದೇವೆ. ಅಂತಿಮವಾಗಿ ನಮ್ಮ ವಿರೋಧಿ ಯಾರು ಅಂತಾ ಗೊತ್ತಾದ ಮೇಲೆ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಹಿಂದೆ ಸಿ ಪಿ ಯೋಗೇಶ್ವರ ಅವರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡದೆ ಹೋದರೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಹಾಗೂ ಇಡಿಯಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಮುಡಾ ಆಯುಕ್ತರಿಗೆ ಪತ್ರದ ಮೂಲಕ ನಿವೇಶನಗಳನ್ನು ಹಿಂದಿರುಗಿಸುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ತಪ್ಪೇ ಮಾಡಿಲ್ಲ ಎಂದರೆ ರಾಜೀನಾಮೆ ಕೊಡು ಪ್ರಶ್ನೆ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಜಮೀನನ್ನು ಡಿ ನೋಟಿಫೈ ಮಾಡಿದ್ದರು. ಅವತ್ತು ಯಡಿಯೂರಪ್ಪ ತಪ್ಪು ಮಾಡಿದ್ದರು. ಆದರೆ ಈ ಪ್ರಕರಣದಲ್ಲಿ ನಾನು ತಪ್ಪು ಮಾಡಿಲ್ಲ ರಾಜಿನಾಮೆ, ಯಾಕೆ ನೀಡಬೇಕು ಕಾನೂನು ಹೋರಾಟ ಮಾಡುತ್ತೇನೆ ಎಂದು ಅವರು ಮತ್ತೆ ತಿಳಿಸಿದ್ದಾರೆ. ಯಡಿಯೂರಪ್ಪನವರು ಡಿನೋಟಿಫೈ ಮಾಡಿದ್ದರು. ನಾನೇನಾದರೂ ಡಿನೋಟಿಫೈ ಮಾಡಿದ್ದೀನಾ? ಅಥವಾ ನಂದೇನಾದರೂ ಆದೇಶ ಇದೆಯಾ? ಅಥವಾ ನಂದೇನಾದರೂ ಪತ್ರ ವ್ಯವಹಾರ ಇದೆಯಾ? ಅಥವಾ ಮನಿಲ್ಯಾಂಡ್ ರಿಂಗ್ ಇದೆಯಾ? ಆ ಪ್ರಕರಣಕ್ಕೂ ಈ ಪ್ರಕರಣಕ್ಕೂ ಬಹಳ…
ಹುಬ್ಬಳ್ಳಿ : ಮುಡಾ ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಆಗಲೇ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದು ಹೋಗುತ್ತಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. ಆದರೆ ಆಗ ಸಮರ್ಥನೆ ಮಾಡಿಕೊಂಡರು. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟು, ಪ್ರಕರಣ ದಾಖಲಾಗಿ, ತನಿಖೆ ನಡೆದಿದೆ. ಈಗ ವಾಪಸ್ ಮಾಡಿರುವುದರಿಂದ ಹಲವಾರು ಪ್ರಶ್ನೆಗಳು ಉದ್ಭವಿಸಿವೆ ಸೈಟ್ ವಾಪಸ್ ಮಾಡುವ ಮೂಲಕ ಮತ್ತಷ್ಟು ಜಟಿಲ ಮಾಡಿಕೊಂಡಿದ್ದಾರೆ ಎಂದು ಹೇಳಿದರು. ಎಫ್ಐಆರ್ ಆದಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದು ಕಡೆ ಇಡಿ ಎಫ್ ಐ ಆರ್ ಮಾಡಿಕೊಂಡು ತನಿಖೆ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರದ ಮೂಲಕ 14 ನಿವೇಶನಗಳ ಕರ ಪತ್ರಗಳನ್ನು ಹಿಂತಿರುಗಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಕೂಡ ಈ ಒಂದು ಪ್ರಕರಣದ ಕುರಿತಾಗಿ ಮಾತನಾಡಿದ್ದು ನಮ್ಮ ಅಣ್ಣನ ವಿರುದ್ಧ HD ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಷಡ್ಯಂತ್ರ ಮಾಡಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಅವರು 40ವರ್ಷದಿಂದ ನಮ್ಮ ಅಣ್ಣನ ಮೇಲೆ ಒಂದು ಕಪ್ಪು ಚುಕ್ಕೆಯೇ ಇಲ್ಲ. ಸೈಟ್ ವಾಪಸ್ ಕೊಟ್ಟ ಮೇಲೆ ಯಾಕೆ ರಾಜೀನಾಮೆ ನೀಡಬೇಕು? ಸಿದ್ದರಾಮಯ್ಯ ಯಾವ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ ಹೇಳಿಕೆ ನೀಡಿದ್ದಾರೆ. ಅಣ್ಣನ ವಿರುದ್ಧ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ, ಕುಮಾರಸ್ವಾಮಿ, ಬಿವೈ ವಿಜಯೇಂದ್ರ ಸೇರಿದಂತೆ ಅನೇಕರು ನಮ್ಮ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರು, ಮುಡಾದ ಎಲ್ಲಾ 14 ನಿಮಿಷಗಳ ಕರಪತ್ರಗಳನ್ನು ಹಿಂದಿರುಗಿಸಲು ಬಯಸುತ್ತೇನೆ ಎಂದು ಪತ್ರ ಬರೆದಿದ್ದಾರೆ. ಇದೇ ವೇಳೆ ಅವರ ಭಾವನಾತ್ಮಕ ಪತ್ರ ಕೂಡ ಬಿಡುಗಡೆ ಮಾಡಿದ್ದಾರೆ. ಹಾಗಾದ್ರೆ ಪತ್ರದಲ್ಲಿ ಏನಿದೆ? ವಿವರ ಇಲ್ಲಿದೆ ನನ್ನ ಪತಿ ಸಿದ್ದರಾಮಯ್ಯ ಸಣ್ಣ ಕಳಂಕವನ್ನು ಅಂಟಿಸಿಕೊಂಡಿಲ್ಲ. ಸಣ್ಣಕಳಂಕ ಅಂಟಿಸಿಕೊಳ್ಳದೆ ನೈತಿಕತೆ ವ್ರತವನ್ನು ಪಾಲಿಸಿದ್ದಾರೆ. ನಾನೆಂದು ಮನೆ, ಆಸ್ತಿ, ಚಿನ್ನ ಸಂಪತ್ತನ್ನು ಬಯಸಿದವಳು ಅಲ್ಲ. ನನ್ನಿಂದ ಅವರ ರಾಜಕೀಯ ಜೀವನಕ್ಕೆ ಕಳಂಕ ಬರಬಾರದು. ಸಣ್ಣ ಹನಿಯಷ್ಟು ಕಳಂಕ ತಟ್ಟಬಾರದು. ಹೀಗಿದ್ದರು ಮುಡಾ ನಿವೇಶನಕ್ಕೆ ಸಂಬಂಧಪಟ್ಟಂತೆ ಆರೋಪ ಬಂದಿರುವುದಕ್ಕೆ ನಾನು ಘಾಸಿಗೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಪತ್ನಿಯ ಭಾವನಾತ್ಮಕ ಪತ್ರ ಬಿಡುಗಡೆ ಮಾಡಿದ್ದಾರೆ. ನಿವೇಶನ, ಮನೆ, ಆಸ್ತಿ, ಯಾವುದು ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿ ಗಿಂತ ದೊಡ್ಡದಲ್ಲ. ಇಷ್ಟು ವರ್ಷ ಅಧಿಕಾರದಲ್ಲಿದ್ದ ಅವರಿಂದ ಏನನ್ನು ನನಗಾಗಲಿ ನನ್ನ…













