Author: kannadanewsnow05

ಬೆಂಗಳೂರು : ಇಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸರಿದಂತೆ ನಾಲ್ವರು ಆರೋಪಿಗಳ ಬಂಧನ ವಿಚಾರವಾಗಿ ಇದೀಗ ಜಿಗಣಿ ಪೊಲೀಸರು ಎಲ್ಲಾ ಆರೋಪಿಗಳನ್ನು ಇಂದು ಕೋರ್ಟಿಗೆ ಹಾಜರುಪಡಿಸಿದ್ದರು. ವಿಚಾರಣೆಯ ಬಳಿಕ ಪಾಕ್ ಪ್ರಜೆಗಳಾದ ರಶೀದ್, ಪತ್ನಿ ಆಯೇಷಳನ್ನು 10 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಇಂದು ಜಿಗಣಿಯಲ್ಲಿ ಪಾಕ್ ಸೇರಿ ನಾಲ್ವರು ವಿದೇಶಿಗರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಗಣಿ ಪೊಲೀಸ್ ಠಾಣೆಗೆ ಐಬಿ ಅಧಿಕಾರಿಗಳು ಭೇಟಿ ನೀಡಿದ್ದು, ಆರೋಪಿಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಗುಪ್ತಚರ ಇಲಾಖೆ ಅಧಿಕಾರಿಗಳು ಪೊಲೀಸರಿಂದ ಆರೋಪಿಗಳ ಪೂರ್ವಾಪರ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಇದೀಗ ಜಿಗಣಿ ಪೊಲೀಸರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ್ದು 10 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹಿನ್ನೆಲೆ? ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನ ಪ್ರಜೆ ಸೇರಿಂದತೆ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನ ಪ್ರಜೆ…

Read More

ಕಲಬುರ್ಗಿ : ಕಲುಷಿತ ನೀರು ಸೇವಿಸಿ ಸುಮಾರು 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರಗಾ ಎಂಬ ಈ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸದೆ, ಗ್ರಾಮಕ್ಕೆ ನೀರು ಪೂರೈಸಲಾಗುತ್ತಿತ್ತು. ಇದರಿಂದ, ಸುಮಾರು 30ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ಕುರಿತಂತೆ ಆಳಂದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಒಂದು ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್, ಸೇಷನ್ಸ್ (24ನೇ ಎಸಿಎಂಎಂ) ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲುವಾಸಿಗಳಾಗಿದ್ದು, ಇದೀಗ ಈ ಒಂದು ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್, ಸೆಷನ್ಸ್ ಕೋರ್ಟ್ ಗೆ ವರ್ಗಾವಣೆ ಮಾಡಿದೆ. ಹಾಗಾಗಿ ಇನ್ನು ಮುಂದೆ ಸಾಕ್ಷಗಳ ವಿಚಾರಣೆ ಶಶಿನ್ಸ್ ಕೋರ್ಟ್ ನಲ್ಲಿ ನಡೆಯಲಿದೆ. ಇನ್ನು ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರ ನಡೆಸಿದ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅಕ್ಟೋಬರ್ 4ಕ್ಕೆ ವಿಚಾರಣೆಯನ್ನು ಮುಂದುಡಿದೆ. ಅಲ್ಲದೆ ಪ್ರಕರಣದ A1 ಆರೋಪಿ ಆಗಿರುವ ಪವಿತ್ರಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ ಅಕ್ಟೋಬರ್ 4ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.

Read More

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣವನ್ನು ರದ್ದುಗೊಳಿಸುವಂತೆ ನಳಿನ್ ಕುಮಾರ್ ಕಟೀಲು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ನಳಿನ್ ಕುಮಾರ್ ಕಟೀಲ್ ಪರ ಕೆಜಿ ರಾಘವನ್ ವಾದ ಮಂಡಿಸಿದ್ದು, ಸುಲಿಗೆ ವ್ಯಾಖ್ಯಾನದ ಸನಿಹದಲ್ಲೂ ಆರೋಪ ಬರುವುದಿಲ್ಲ. ಜಾರಿ ನಿರ್ದೇಶನಾಲಯವನ್ನು ಆರೋಪಿಯನ್ನಾಗಿಸಲಾಗಿದೆ ಎಂದು ಜಡ್ಜ್ ಮುಂದೆ ತಿಳಿಸಿದರು.ಈ ವೇಳೆ ದೂರುದಾರ ಆದರ್ಶ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದು, ಇಡಿ ಭಯದಲ್ಲಿ ರಾಜಕೀಯ ಪಕ್ಷಕ್ಕೆ ದೇಣಿಗೆ ಸಂಗ್ರಹಿಸಲಾಗಿದೆ.ಇದು ಸುಲಿಗೆ ಅಲ್ಲದೆ ಮತ್ತೇನು ಅಲ್ಲವೆಂದು ಪ್ರಶಾಂತ ಭೂಷಣ್ ವಾದಿಸಿದರು. ಈ ವೇಳೆ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ. ಎಂ. ನಾಗ ಪ್ರಸನ್ನ ಅವರು ಸುಲಿಗೆ ಎಂದರೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿರಬೇಕು.ಸುಲಿಗೆಗೆ ಒಳಗಾದವರೇ ಪೊಲೀಸರಿಗೆ ದೂರು ನೀಡಬೇಕು ಆದರೆ ದೂರುದಾರ ತಾವು ಸುಲಿಗೆಗೆ ಒಳಗಾಗಿದ್ದೇನೆ ಎಂದು…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಶಿಕ್ಷಣ ಕೊಡಿಸುವವರೆಗೂ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಆರಂಭವಷ್ಟೇ ಅಂತ್ಯವಲ್ಲ. ಇಂದು ಲೋಕಾಯುಕ್ತ ಕಚೇರಿಗೆ ಮನವಿ ನೀಡಲು ಆಗಮಿಸಿದ್ದೇನೆ. ತನಿಖೆಯ ಕುರಿತು ಲೋಕಾಯುಕ್ತ ಕಚೇರಿಗೆ ಮನವಿ ನೀಡಲು ಬಂದಿದ್ದೆ. ಯಾವುದೇ ಕೇಸ್ ದಾಖಲಿಸಿದರು ಫಾಲೋ ಅಪ್ ಮಾಡುತ್ತೇನೆ ತನಿಖೆಗೆ ಸಹಕಾರಿ ಆಗುವ ಅಂಶ ಪತ್ರದಲ್ಲಿ ದಾಖಲಿಸಿದ್ದೇನೆ ಎಂದರು. ನನಗೆ ಈಗಲೂ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಇಡಿಗೆ ಇಂದು ನೇರವಾಗಿ ದೂರನ್ನು ನೀಡಲಾಗಿದೆ. ಸಿಬಿಐ ಇಡಿ ತನಿಖೆಯಿಂದ ಮಾತ್ರ ನ್ಯಾಯ ಸಿಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟವರಿಗೆ ಶಿಕ್ಷೆ ಕೊಡಿಸುವವರೆಗೂ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ…

Read More

ಉಡುಪಿ : ರಾಜ್ಯದಲ್ಲಿ ಇಂದು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಅಪಘಾತದ ಘಟನೆ ಮಾಸುವ ಮನವೇ ಇದೀಗ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಮತ್ತೊಂದು ಭೀಕರ ಅಪಘಾತ ಸಂಬಂಧಿಸಿದ್ದು, ಲಾರಿ ಹಾಗೂ ಬೈಕ್ ಮಧ್ಯ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೌದು ಕಾರ್ಕಳ ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಮೂವರು ಮಕ್ಕಳು ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೊಸಗುಡ್ಡೆ ಬಳಿ ಈ ಒಂದು ದುರಂತ ಸಂಭವಿಸಿದೆ. ಸುರೇಶ್ ಆಚಾರ್ಯ (36) ಮಕ್ಕಳಾದ ಸಮೀಕ್ಷ, (7) ಸುಶ್ಮಿತಾ (5) ಸುಶಾಂತ್ (2) ಸಾವನ್ನಪ್ಪಿದ್ದಾರೆ ಇನ್ನು ಪತ್ನಿ ಮೀನಾಕ್ಷಿ ಆಚಾರ್ಯ (32) ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂದಿನಿಂದ ಲೋಕಾಯುಕ್ತ ಅಧಿಕಾರಿಗಳು ತಮ್ಮ ನಾಲ್ಕು ತಂಡಗಳ ಜೊತೆಗೆ ತನಿಖೆಯನ್ನು ಆರಂಭಿಸಿವೆ. ಇದರ ಬೆನ್ನಲ್ಲೇ ಬಿಜೆಪಿಯ ಶಾಸಕ ಸುರೇಶ್ ಗೌಡ ಡಿಸೆಂಬರ್ ನಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನವರೇ ಸಿಎಂ ಸ್ಥಾನದಿಂದ ಕೆಳಗಿಳಿಸಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡಿಸೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಇಳಿಸುತ್ತಾರೆ. ಕಾಂಗ್ರೆಸ್ ನವರೇ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತಾರೆ. ಮುಂದೆ ಮಾರ್ಚ್ ಮತ್ತು ಏಪ್ರಿನಲ್ಲಿ ಚುನಾವಣೆ ನಡೆಯಲಿದೆ. ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಅವರ ಪಕ್ಷದಲ್ಲೇ ಷಡ್ಯಂತರ ನಡೆಸಿ, ಸಿಎಂ ಸ್ಥಾನದಿಂದ ಕೆಳಗೆ ಇಳಿಸಿ ಯಾರು ಯಾರು ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಗೋಕೆ ತಯಾರಾಗಿದ್ದಾರೆ ಎಲ್ಲರಿಗೂ ಗೊತ್ತಿದೆ. ಡಿಸೆಂಬರಲ್ಲಿ ಒಂದು ಕ್ರಾಂತಿಯಾಗುತ್ತದೆ. ಕುಮಾರಸ್ವಾಮಿಯವರು ಹೇಳಿದ್ದಾರೆ ಎಲ್ಲರೂ ಹೇಳಿದ್ದಾರೆ. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ನವರು ಇಳಿಸುತ್ತಾರೆ…

Read More

ಮೈಸೂರು : ನಾನು, ಸಿದ್ದರಾಮಯ್ಯ ಕಾಲೇಜು ದಿನಗಳಲ್ಲಿ ಒಟ್ಟಿಗೆ ಇದ್ದವರು. ಸಿದ್ದರಾಮಯ್ಯ ಈ ದುಃಸ್ಥಿತಿ ನೋಡಿ ನನಗೆ ಬೇಸರವಾಗಿದೆ, ಮನಸ್ಸಿಗೆ ನೋವಾಗಿದೆ. ಪ್ರಜಾಪ್ರಭುತ್ವದಲ್ಲಿ ಸಿಎಂ ಸ್ಥಾನ ದೊಡ್ಡ ಅವಕಾಶ ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯಗೆ ಈ ಸ್ಥಿತಿ ಬರಬಾರದಿತ್ತು ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್.‌ ವಿಶ್ವನಾಥ್‌ ಬೇಸರ ವ್ಯಕ್ತಪಡಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ಪೊನ್ನಣ್ಣ, ಮರಿಗೌಡ ಎಲ್ಲರೂ ಸೇರಿ ನಿಮ್ಮ ದಿಕ್ಕು ತಪ್ಪಿಸಿದ್ದಾರೆ. ಇವರೆಲ್ಲಾ ಸೇರಿ ನಿಮ್ಮ ಕುಟುಂಬವನ್ನು ಕಷ್ಟಕ್ಕೆ ತಳ್ಳಿದ್ದಾರೆ. ನೀವು ಈ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಲೋಕಾಯುಕ್ತವನ್ನೇ ತೆಗೆದು ಎಸಿಬಿ ತಂದ ನೀವು ಯಾವ ಸೀಮೆ ಸತ್ಯವಂತರು. ಕೆಂಪಣ್ಣ ವರದಿ ಹೊರಗೆ ತರಬೇಕು. ಒಬ್ಬ ಜನ ನಾಯಕನಿಗಿರುವ ಗುಣ ನಿಮ್ಮಲ್ಲಿ ಇಲ್ಲ ಎಂದು ವಾಗ್ದಾಳಿ ನಡೆಸಿದರು. 14 ಸೈಟ್​ಗಳನ್ನು ವಾಪಸ್​ ಕೊಟ್ಟು ಮುಡಾದ ಎಲ್ಲ ಪ್ರಕರಣಗಳನ್ನು ತನಿಖೆ ಮಾಡಿಸಿ ಎಂದು ನಾನು ಹಿಂದೆಯೇ ಹೇಳಿದ್ದೆ. ಆದರೆ ಇಂದು ಈ ಪ್ರಕರಣ ಲೋಕಾಯುಕ್ತಕ್ಕೆ ಬಂದಿದೆ.…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿತರಣೆ ನಡೆಸಿ ಅಕ್ಟೋಬರ್ 4ಕ್ಕೆ ವಿಚಾರಣೆ ಮುಂದೂಡಿತ್ತು. ಇದೀಗ ಪ್ರಕರಣದ A1 ಆರೋಪಿ ಆಗಿರುವ ಪವಿತ್ರ ಗೌಡ ಜಾಮೀನು ಅರ್ಜಿ ಕೂಡ ಅಕ್ಟೋಬರ್ 4ಕ್ಕೆ ಮಂದೂಡಿದೆ. ಹೌದು ಇಂದು ಪ್ರಕರಣದ ಏ ಒನ್ ಆರೋಪಿ ಆಗಿರುವ ಪವಿತ್ರ ಗೌಡ ಸಲ್ಲಿಸಿದ ಜಾಮೀನು ಅರ್ಜಿಯ ಕುರಿತು, ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಇವಳೇ ಪವಿತ್ರ ಗೌಡ ಪರ ವಕೀಲರು ವಾದಿಸಿದರು. ಬಳಿಕ ನ್ಯಾಯಾಧೀಶರು ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಪ್ರಕರಣದ ಮತ್ತೊರ್ವ ಆರೋಪಿಯಾಗಿರುವ ರವಿಶಂಕರ್ ಜಾಮೀನು ಅರ್ಜಿಯ ವಿಚಾರಣೆ ಕೂಡ ಕೋರ್ಟ್ ಮಂದೂಡಿದೆ ಈಗಾಗಲೇ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಆದರೆ, ಈ ಮೂವರು…

Read More

ಕಲಬುರ್ಗಿ : ಕಳೆದ ಕೆಲವು ದಿನಗಳ ಹಿಂದೆ ಕಲ್ಬುರ್ಗಿಯಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರಿ ಸಂಚಲನ ಸೃಷ್ಟಿಸಿತ್ತು. ಈ ಸಂಬಂಧ ಹಲವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದ್ದು, ಉದ್ಯಮಿಯಿಂದ 34 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಉದ್ಯಮಿಯು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೌದು ಕಲ್ಬುರ್ಗಿಯಲ್ಲಿ ನವ ಉದ್ಯಮಿಯಿಂದ ಲಕ್ಷಾಂತರ ರೂಪಾಯಿಯನ್ನು ಹನಿಟ್ರ್ಯಾಪ್ ಮೂಲಕ ದೋಚಿದ್ದಾರೆ.ಆದರೆ ಈ ಹಿಂದಿನ ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳಿಂದಲೇ ಈ ಒಂದು ಹನಿಟ್ರ್ಯಾಪ್ ನಡೆದಿದೆ ಎಂದು ಆಘಾತಕಾರಿ ವಿಷಯ ಬಯಲಾಗಿದೆ. ಈ ಪ್ರಕರಣದಲ್ಲೂ ಪ್ರಭು ಹಿರೇಮಠ, ರಾಜು ಲೇಂಗಟಿ ಪ್ರಮುಖ ಆರೋಪಿಳಾಗಿದ್ದಾರೆ. ಉದ್ಯಮಿ ವಿನೋದಕುಮಾರ ಖೇಣಿ ವ್ಯಾಪಾರಿಯಾಗಿದ್ದು, ಇವರ ಅಂಗಡಿಗೆ ಆರೋಪಿ ಪ್ರಭು ಹಿರೇಮಠ ಖಾಯಂ ಬರುತ್ತಿದ್ದನು. ಆರೋಪಿ ಪ್ರಭು ಹಿರೇಮಠ ಖಾಯಂ ಗ್ರಾಹಕನಾಗಿದ್ದರಿಂದ ಉದ್ಯಮಿ ವಿನೋದಕಮಾರ್​ ಆತನ ಜೊತೆ ಗೆಳತನ ಬೆಳಸಿದ್ದರು. ಈ ವೇಳೆ ಪ್ರಭು ಹಿರೇಮಠ ಮಹಾರಾಷ್ಟ್ರದ ಪೂಜಾ…

Read More