Author: kannadanewsnow05

ಮಂಡ್ಯ : ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಇದೀಗ ಬಸ್ ಅಪಘಾತದ ಕುರಿತು ಚಾಲಕ ಶಿವಕುಮಾರ್ ಅವರು ಮಾತನಾಡಿದ್ದಾರೆ. ಮಂಡ್ಯ ಹೊರವಲಯದಲ್ಲಿ ಕೆಎಸ್ಆರ್ಟಿಸಿ ಬಸ್ ಅಪಘಾತದ ಕುರಿತಾಗಿ ಮಧ್ಯಮಗಳ ಜೊತೆಗೆ ಮಾತನಾಡಿದರು. ಸದ್ಯ ಮೀಮ್ಸ್ ಆಸ್ಪತ್ರೆಯಲ್ಲಿ ಚಾಲಕ ಶಿವಕುಮಾರ್ ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ಸಿನ ಸ್ಟೇರಿಂಗ್ ಎಡಗಡೆ ಎಳೆದಾಗ ನಿಯಂತ್ರಣಕ್ಕೆ ಸಿಗಲಿಲ್ಲ. ತುಮಕೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಈ ಒಂದು ಅಪಘಾತವಾಗಿದೆ. ಬಸ್ ಈ ವೇಳೆ ೪೦ ಕಿಲೋಮೀಟರ ಸ್ಪೀಡ್ ನಲ್ಲಿ ಇತ್ತು ಲೈನರ್ ಜಾಮ್ ಆಗಿತ್ತು ಏನೋ ಗೊತ್ತಾಗಲಿಲ್ಲ. ಎಕ್ಸ್ಪ್ರೆಸ್ ವೇನಿಂದ ಬಸ್ ಸರ್ವಿಸ್ ರಸ್ತೆಗೆ ಬಂದಾಗ ಅಪಘಾತವಾಗಿದೆ. ಸರ್ವಿಸ್ ರಸ್ತೆಯಲ್ಲಿ ಗುಂಡಿ ಇದ್ದದ್ದನ್ನು ನಾನು ಗಮನಿಸಿರಲಿಲ್ಲ. ಬಸ್ ಚಾಲನೆ ವೇಳೆ ನಾನು ಮೊಬೈಲ್ ಫೋನ್ ಬಳಸುತ್ತಿರಲಿಲ್ಲ ಎಂದು ಬಸ್ ಚಾಲಕ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

Read More

ಕೋಲಾರ : ಭೂಮಿ ಪರಿವರ್ತನೆ ಮಾಡಿಕೊಡಲು ಆರ್.ಐ ಮತ್ತು ಕೇಸ್ ವರ್ಕರ್, ರೈತರೊಬ್ಬರ ಬಳಿ ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಹೌದು ಆರ್.ಐ ಗೋಪಾಲಕೃಷ್ಣ ಹಾಗೂ ಕೇಸ್ ವರ್ಕರ್ ನಾಗೇಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಿ ಪರಿವರ್ತನೆಗೆ 8.5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಹೊಸಕೋಟೆ ಮೂಲದ ಮಹೇಶ್ ಎಂಬವರಿಂದ ಇವರು ಲಂಚ ಸ್ವೀಕರಿಸುತ್ತಿದ್ದರು ಎಂದು ತಿಳಿದುಬಂದಿದೆ. ಆಲಂಬಾಡಿ ಗ್ರಾಮದ 5 ಎಕರೆ ಭೂಮಿ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆಲಂಬಾಡಿ ಗ್ರಾಮದ 5 ಎಕರೆ ಭೂಮಿ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುತ್ತಿದ್ದ ವೇಳೆ ಗೋಪಾಲಕೃಷ್ಣ ಹಾಗೂ ಕೇಸ್ ವರ್ಕರ್ ನಾಗೇಂದ್ರನನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರು ಇತ್ತೀಚಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬಳಿಕ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು ನಟ ದರ್ಶನ್ ಅವರು ಜಾಮೀನು ಕೋರಿ ಇತ್ತೀಚೆಗೆ ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್, ದರ್ಶನ್ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರಿಂದ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಈ ಮೂಲಕ ನಟ ದರ್ಶನ್ ಗೆ ಮತ್ತೆ ನಿರಾಸೆಯಾಗಿದೆ. ಇದೆ ವೇಳೆ ಇಂದು ಸಂಜೆ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಮತ್ತೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಈ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ.ಆದರೂ ಅವರಿಗೆ ಯಾರು ಶೂರೀಟಿ ನೀಡದ ಕಾರಣ ಇನ್ನೂ ಮೂವರು…

Read More

ಬೆಂಗಳೂರು : ಲೋಕಾಯುಕ್ತ ಹಾಗೂ ಎಸ್‌ಐಟಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದರೆ ಅವರದ್ದೇ ಆದ ಕೆಲವು ಕ್ರಮಗಳನ್ನು ಪೊಲೀಸ್‌ನವರು ತೆಗೆದುಕೊಳುತ್ತಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಇಂದು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, ಎಚ್.ಡಿ. ಕುಮಾರಸ್ವಾಮಿ ಮತ್ತು ಎಡಿಜಿಪಿ ಚಂದ್ರಶೇಖರ್ ಜಟಾಪಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಡಿಜಿಪಿ ಚಂದ್ರಶೇಖರ್ ಗಾದೆಯ ಅರ್ಥದಲ್ಲಿ ಹೇಳಿದ್ದಾರೆ ಆದರೆ ಕುಮಾರಸ್ವಾಮಿ ಅವರು ನನಗೆ ಅಂದಿದ್ದಾರೆ ಅಂತ ಯಾಕೆ ಅನ್ಕೋ ಬೇಕು? ಅವರು ಹೇಳಿದ್ದು ಬರ್ನಾಡ್ ಷಾ ಬಗ್ಗೆ ಆದರೆ ಕುಮಾರಸ್ವಾಮಿ ನನಗೆ ಹೇಳಿದ್ದಾರೆ ಅಂತ ತಿಳಿದುಕೊಳ್ಳುವುದು ತಪ್ಪು ಎಂದು ತಿಳಿಸಿದರು. ಚಂದ್ರಶೇಖರ್ ನೇತೃತ್ವದ ಎಸ್‌ಐಟಿಯನ್ನು ಕಾನೂನು ಪ್ರಕಾರವೇ ರಚಿಸಲಾಗಿದೆ.ಅವರು ಅವರ ಕೆಲಸ ಮಾಡ್ತಾರೆ. ಕೆಲಸಕ್ಕೆ ಅಡ್ಡಿಪಡಿಸಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು. ಎಡಿಜಿಪಿ ಚಂದ್ರಶೇಖರ ಅವರ ಮೇಲೆ ಎಚ್‍ಡಿ ಕುಮಾರಸ್ವಾಮಿ ಗಂಭೀರವಾದ ಆರೋಪ ಮಾಡಿದ್ದರು. ಇದಕ್ಕೆ ಚಂದ್ರಶೇಖರ್ ಅವರು ತಮ್ಮ ಸಿಬ್ಬಂದಿಗೆ ಪತ್ರ ಬರೆಯುವ ಮೂಲಕ ಹೆಚ್‍ಡಿ ಕುಮಾರಸ್ವಾಮಿಯವರಿಗೆ ತಿರುಗೇಟು…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿಸಲು ಈಗಾಗಲೇ ಹಲವರು ಸಾವಿರಾರು ಕೋಟಿ ರೂಪಾಯಿ ರೆಡಿ ಮಾಡಿ ಇಟ್ಟುಕೊಂಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕವಾದ ಹೇಳಿಕೆ ನೀಡಿದ್ದರು. ಯತ್ನಾಳ್ ಹೇಳಿಕೆಗೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಹೇಳಿಕೆ ಕುರಿತಾಗಿ ಐಟಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹೇಳಿಕೆ ಕುರಿತು ಚರ್ಚಿಸಲು ​ಕಾಂಗ್ರೆಸ್ ಕಾನೂನು ತಂಡದ ಸಭೆ ಕರೆದಿದ್ದೇನೆ. 1,200 ಕೋಟಿ ರೂಪಾಯಿ ರೆಡಿಯಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಕಡೆಯಿಂದ ಈ ಹಣ ರೆಡಿಯಾಗಿದೆ ಎಂಬ ಮಾಹಿತಿ ಇದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಈ ಮಾಹಿತಿಯನ್ನು ತಿಳಿಸಿದ್ದೇನೆ. ಇದು ತೆರಿಗೆ ಇಲಾಖೆ (IT) ಹಾಗೂ ಇಡಿ (ED) ತನಿಖೆಯ ವ್ಯಾಪ್ತಿಗೆ ಬರುವ ವಿಚಾರ. ದೂರು ನೀಡುವ ಸಂಬಂಧ ಇಂದು ಚರ್ಚೆ ಮಾಡಲಿದ್ದೇನೆ ಎಂದರು. ಯತ್ನಾಳ್ ಹೇಳಿದ್ದೇನು? ಇತ್ತೀಚೆಗೆ ದಾವಣಗೆರೆಯಲ್ಲಿ ಬಿಜೆಪಿ ಬಂಡಾಯ ನಾಯಕರ ಗುಪ್ತಸಭೆ…

Read More

ಬೆಂಗಳೂರು : ನಿರ್ಲಕ್ಷದ ಚಾಲನೆ ಹಾಗೂ ಅತಿ ವೇಗದ ಚಾಲನೆಯಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಅನೇಕರು ಬಲಿಯಾಗುತ್ತಿರುತ್ತಾರೆ. ಇದೀಗ ಇಂದು ಬಿಎಂಟಿಸಿಗೆ ಮತ್ತೊಂದು ಜೀವ ಹೋಗಿದ್ದು, ಬಿಎಂಟಿಸಿ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ಸಾವನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರದ ಬಳಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಯಶವಂತಪುರದ ಮಾರಮ್ಮ ದೇವಸ್ಥಾನದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಎಂಎಸ್ ಪಾಳ್ಯದಿಂದ ಯಶವಂತಪುರ ಕಡೆಗೆ ಬಿಎಂಟಿಸಿ ಬಸ್ ಬರುತ್ತಿತ್ತು, ಈ ವೇಳೆ ಬೈಕ್ ಸವಾರನೊಬ್ಬ ಕಾರಿಗೆ ತನ್ನ ಬೈಕ್ ಟಚ್ ಮಾಡಿದ್ದರಿಂದ ಬಸ್ ಚಕ್ರದ ಕೆಳಗೆ ಬೈಕ್ ಸವಾರ ಬಿದ್ದಿದ್ದಾನೆ. ಈ ವೇಳೆ ಬಿಎಂಟಿಸಿ ಬಸ್ ಬೈಕ್ ಸವಾರನ ಮೇಲೆ ಹರಿದು ಸ್ಥಳದಲ್ಲೇ ಸವಾರ ಮೃತಾಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಎಡಿಜಿಪಿ ಚಂದ್ರಶೇಖರ್ ನಡುವೆ ಇದೀಗ ವಾಕ್ಸಮರ ತಾರಕಕ್ಕೆ ಏರಿದ್ದು, ಇದರ ಮಧ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಹಾಗೂ ಎಸ್ಐಟಿ ಅಧಿಕಾರಿಗಳು ಎಚ್ ಡಿ ಕುಮಾರಸ್ವಾಮಿ ಅವರ ಜಾಮೀನು ರದ್ದತಿಗೆ ಕೋರ್ಟಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೌದು ಕುಮಾರಸ್ವಾಮಿಯವರ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸದ್ಯ ಶ್ರೀ ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಎಚ್ ಡಿ ಕುಮಾರಸ್ವಾಮಿ ಜಾಮೀನೀನಲ್ಲಿ ಹೊರಗಡೆ ಇದ್ದಾರೆ. ಹೀಗಾಗಿ ಈ ಒಂದು ಜಾಮೀನನ್ನು ರದ್ದುಗೊಳಿಸಿ ಎಂದು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಲೋಕಾಯುಕ್ತ ಹಾಗೂ ಎಸ್ಐಟಿ ಇಂದ ಹೆಚ್‍ಡಿ ಕುಮಾರಸ್ವಾಮಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾಮೀನು ರದ್ದು ಕೋರಿ ಲೋಕಾಯುಕ್ತ ಅಧಿಕಾರಿಗಳು ಹಾಗೂ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತಹ ಸಾಧ್ಯತೆ ಇದೆ ಎಂದು ತಿಳಿದು…

Read More

ಬೆಂಗಳೂರು : ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ವಿರುದ್ಧ ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ನೇತೃತ್ವದ ಜೆಡಿಎಸ್ ನಿಯೋಗ ಮುಖ್ಯ ಕಾರ್ಯದರ್ಶಿ ಅವರಿಗೆ ದೂರು ನೀಡಿ, ಅಮಾನತುಗೊಳಿಸುವಂತೆ ಒತ್ತಾಯಿಸಿದೆ. ಹೌದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ವಿರುದ್ಧ ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತ್ತುಗೊಳಿಸಿ ಎಂದು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರದಲ್ಲಿ ಎಂ.ಚಂದ್ರಶೇಖರ್ ಮೂಲತಃ ಹಿಮಾಚಲ ಪ್ರದೇಶ ಐ.ಪಿ.ಎಸ್ ಕೇಡರ್‌ಗೆ ಸೇರಿದವರಾಗಿದ್ದಾರೆ. ನಂತರ, ತನ್ನ ಪತ್ನಿಯ ಅನಾರೋಗ್ಯ ಮತ್ತು ಹಿಮಾಚಲ ಪ್ರದೇಶದ ವಾತಾವರಣ ಮತ್ತು ಹವಾಗುಣ ಹೊಂದುವುದಿಲ್ಲ ಎನ್ನುವ ಕುಂಟು ನೆಪ ಹೇಳಿ ಮತ್ತು ಸುಳ್ಳು…

Read More

ಮೈಸೂರು : ಇಂದು ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಶೋಕಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ 245 ವೀಳ್ಯದೆಲೆ ಬೆಳೆಗಾರರಿಗೆ ತಲಾ 0.5 ಗುಂಟೆ ಜಾಗ ನೀಡುವುದು ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣದಲ್ಲಿ ಒಂದೆರಡು ತಿಂಗಳು ತೊಂದ್ರೆ ಕೊಡಬಹುದು ಅಷ್ಟೆ ಆದರೆ ಯಾವುದೇ ಷಡ್ಯಂತ್ರಗಳಿಗೆ ಹೆದರಲ್ಲ ಎಂದು ಗುಡುಗಿದರು. ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ. ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೀನಿ. ಹೀಗಾಗಿ ನಾನು ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ. ಜನರ ಆಶೀರ್ವಾದ, ನಿಮ್ಮೆಲ್ಲರ ಬೆಂಬಲ ಇರುವವರೆಗೂ ನಾನು ಅಲ್ಲಾಡುವುದಿಲ್ಲ. ಬಹಳ ಜನ ಬಂದು ಬಂದು ನನಗೆ, ಧೈರ್ಯವಾಗಿರಿ, ರಾಜೀನಾಮೆ ಕೊಡಬೇಡಿ ಅಂತಾರೆ. ನಾನು ಷಡ್ಯಂತ್ರಗಳಿಗೆ ಹೆದರುವವನೇ ಅಲ್ಲ. ರಾಜಕೀಯವಾಗಿ ನನಗೆ ಒಂದೆರಡು ತಿಂಗಳು ತೊಂದರೆ ಕೊಡಬಹುದು. ಆದ್ರೆ, ಕಾನೂನಾತ್ಮಕವಾಗಿ ನಾನು ಗೆದ್ದೇ ಗೆಲ್ಲುತ್ತೇನೆ. ರಾಜಕೀಯವಾಗಿ ಇದನ್ನೆಲ್ಲಾ ಎದುರಿಸಿ ನಿಲ್ಲೋದು ನನಗೆ ಗೊತ್ತಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಅಶೋಕಪುರಂನ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕಾರ್ಯಕ್ರಮಗಳ…

Read More

ಶ್ರೀನಗರ : ಇಂದು ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಮಲ್ಲಿಕಾರ್ಜುನ ಖರ್ಗೆಯವರು, ಅಸ್ವಸ್ಥರಾಗಿ ಕುಸಿದು ಬಿದ್ದಿರುವ ಘಟನೆ ನಡೆದಿತ್ತು. ಇದೇ ವೇಳೆ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂಬ ಹೇಳಿದ್ದು ಕೂಡ ಭಾರೀ ವೈರಲ್ ಆಗುತ್ತಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ವಿಡಿಯೋ ಸದ್ಯ ಬಾರಿ ವೈರಲ್ ಆಗಿದೆ.ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದರು.ಬಳಿಕ ಸುಧಾರಿಸಿಕೊಂಡು ಮಾತನಾಡಲು ಶುರು ಮಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ ಎಂದು ಹೇಳಿದ್ದು, ಈ ಹೇಳಿಕೆ ಸದ್ಯ ವೈರಲ್ ಆಗಿದೆ. ಅಸ್ವಸ್ಥಗೊಂಡಿದ್ದ ಅವರು ಬಳಿಕ ಸುಧಾರಿಸಿಕೊಂಡು ಮತ್ತೆ ಭಾಷಣ ಆರಂಭಿಸಿದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಈ ಹೇಳಿಕೆಯು ಬಾಯಿತಪ್ಪಿನಿಂದ ಬಂದದ್ದು ಅಥವಾ ಉದ್ದೇಶಪೂರ್ವಕವಾಗಿ ಹೇಳಿದ್ದಾರಾ ಎಂದು ಚರ್ಚೆಗಳು ನಡೆಯುತ್ತಿದೆ.ದೌರ್ಬಲ್ಯದ ಕ್ಷಣದಲ್ಲಿ ಸತ್ಯ ಹೊರಬರುತ್ತದೆ…

Read More