Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು :ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಪ್ರೌಢಶಾಲೆ ವಿಭಾಗ ಫಲಿತಾಂಶ : ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್‌ಆರ್‌ಪಿ,ಮಚ್ಚೆ,ಬೆಳಗಾವಿ(ಪ್ರಥಮ),ಸಮರ್ಥ ನಾಗರಾಜ ಅರ್ಕಸಾಲಿ ,ಸರ್ಕಾರಿ ಪ್ರೌಢಶಾಲೆ,ಹುನಗುಂದ,ತಾ.ಮುಂಡಗೋಡ,ಉತ್ತರ ಕನ್ನಡ ಜಿಲ್ಲೆ(ದ್ವಿತೀಯ), ಚೈತನ್ಯ ಕೆ.ಎಂ.ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ, ಕೊಡಗು ಜಿಲ್ಲೆ(ತೃತೀಯ) ಪದವಿಪೂರ್ವ ಕಾಲೇಜು ವಿಭಾಗ ಫಲಿತಾಂಶ : ವಿಜಯಕುಮಾರ್ ಬ.ದೊಡ್ಡಮನಿ,ಸರ್ಕಾರಿ ಪ.ಪೂ.ಕಾಲೇಜು, ಮುಳಗುಂದ,ಗದಗ ಜಿಲ್ಲೆ (ಪ್ರಥಮ), ಪರೀಕ್ಷಾನಂದ್, ಮರಿಮಲ್ಲಪ್ಪ ಪ.ಪೂ.ಕಾಲೇಜು,ಮೈಸೂರು (ದ್ವಿತೀಯ),ಗೋರಮ್ಮ,ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜು,ಕೋಲಾರ(ತೃತೀಯ) ಪದವಿ/ಸ್ನಾತಕೋತ್ತರ ವಿಭಾಗ : ಫಲಿತಾಂಶ ಪ್ರವೀಣ್ ನಿಂಗಪ್ಪ ಕಿತ್ನೂರ,ಕನ್ನಡ ವಿ.ವಿ.ಹಂಪಿ,ವಿಜಯನಗರ ಜಿಲ್ಲೆ (ಪ್ರಥಮ), ಶರಣಪ್ಪ,ತುಮಕೂರು ವಿ.ವಿ.ತುಮಕೂರು(ದ್ವಿತೀಯ), ನಸೀಮಾ ಇ.ಚಪ್ಪರಬಂದ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರ (ತೃತೀಯ) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ,ಗಾಂಧೀಜಿ ವಿಚಾರದಲ್ಲಿ ಸತ್ಯಾಗ್ರಹ,ಅಸ್ಪೃಶ್ಯತೆ ನಿವಾರಣೆಗೆ ಗಾಂಧೀಜಿಯವರ ಪ್ರಯೋಗಗಳು,ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ಸ್ವರಾಜ್, ಆರ್ಥಿಕ…
ಧಾರವಾಡ : ಇಂದು ಧಾರವಾಡದಲ್ಲಿ ವರುಣ ಅಬ್ಬರಿಸಿದ್ದು, ಭಾರಿ ಮಳೆಯಿಂದಾಗಿ ಸಂಪೂರ್ಣವಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಅಲ್ಲದೆ ದೇವಸ್ಥಾನಕ್ಕೆ ನೀರು ನುಗ್ಗಿರುವ ಘಟನೆ ಕೂಡ ನಡೆದಿದೆ. ಹೌದು ಧಾರವಾಡದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ದೇಗುಲಕ್ಕೆ ನೀರು ನುಗ್ಗಿದೆ. ಶಿವಾಜಿ ವೃತ್ತದ ಬಳಿಯ ತುಳಜಾಭವಾನಿ ದೇಗುಲ ಸಂಪೂರ್ಣವಾಗಿ ಜಲಾವೃತವಾಗಿದೆ. ದೇವಸ್ಥಾನವನ್ನು ಸಂಪೂರ್ಣವಾಗಿ ಮಳೆಯ ನೀರು ಆವರಿಸಿಕೊಂಡಿದೆ. ಧಾರಾಕಾರ ಮಳೆಗೆ ಧಾರವಾಡದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಹೊರವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮ ಸ್ಥಳವನ್ನು ಇಂದು ಪರಿಶೀಲಿಸಿದರು. ಕಾರ್ಯಕ್ರಮದ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಡೆಯುವ ಆಕರ್ಷಕ ಕಾರ್ಯಕ್ರಮಗಳಲ್ಲಿ “ಯುವ ದಸರಾ” ಪ್ರಮುಖವಾಗಿದ್ದು, ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವರು. ಹೀಗಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸುವಂತೆ ಸೂಚಿಸಿದರು. ಯುವ ದಸರಾಗೆ ಸಹಸ್ರಾರು ಸಂಖ್ಯೆಯಲ್ಲಿ ಯುವಜನರು ಆಗಮಿಸಿ ಸಂಭ್ರಮಿಸುತ್ತಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವುದರಿಂದ ಯಾವುದೇ ಅನಾನುಕೂಲ ಉಂಟಾಗದಂತೆ ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಲಹೆ ನೀಡಿದರು. ನಗರದಿಂದ ಬರುವ ದಾರಿಯುದ್ದಕ್ಕೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೀದಿದೀಪದ ವ್ಯವಸ್ಥೆ ಮಾಡಬೇಕು. ವಾಹನ ಪಾರ್ಕಿಂಗ್ ಸ್ಥಳದಲ್ಲಿ ವ್ಯವಸ್ಥಿತವಾಗಿ ನಿಲ್ಲಿಸಲು ಸೂಚನಾ ಫಲಕ ಅಳವಡಿಸಿ ಮಾರ್ಗದರ್ಶನ ನೀಡಬೇಕು ಎಂದರು.ಬಹುಮುಖ್ಯವಾಗಿ ಮಹಿಳೆಯರು ಹೆಚ್ಚಿನ ಭದ್ರತೆ ಒದಗಿಸಬೇಕು. ರಾತ್ರಿ ವೇಳೆ ಕಾರ್ಯಕ್ರಮ…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಭಾನುವಾರ ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಟುವರ್ಧನ, ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಚಂದ್ರಶೇಖರ್ ಸೇರಿದಂತೆ ಮುಂತಾದವರು ಹಾಜರಿದ್ದರು.
ಮೈಸೂರು : ಈ ಬಾರಿ ಮೈಸೂರು ದಸರಾ ಕಾರ್ಯಕ್ರಮಕ್ಕೆ ರಾಜವಂಶಸ್ಥೆ ಆದಂತಹ ಪ್ರಮೋದ ದೇವಿ ಒಡೆಯರ್ ಅವರಿಗೆ ಮೈಸೂರು ಜಿಲ್ಲಾ ಆಡಳಿತ ಅಧಿಕೃತವಾಗಿ ಆಹ್ವಾನ ನೀಡಿದೆ. ಜಿಲ್ಲಾ ಉಸ್ತುವಾರಿ ಸಚಿವ HC ಮಹಾದೇವಪ್ಪ ಅವರಿಂದ ರಾಜವಂಶಸ್ಥೆ ಪ್ರಮೋದಾ ದೇವಿ ಅವರಿಗೆ ಅಹ್ವಾನ ನೀಡಲಾಯಿತು. ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ಹಲವರು ಸಚಿವರಿಗೆ ಸಾಥ್ ನೀಡಿದ್ದಾರೆ. ಈ ವೇಳೆ ಪ್ರಮೋದಾ ದೇವಿಗೆ ಗೌರವಧನ ನೀಡಿ ಜಿಲ್ಲಾಡಳಿತ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ.
BREAKING : ಇಂದು ನಡೆದ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯ ಪ್ರಶ್ನೆ ಪತ್ರಿಕೆ ಲೀಕ್ ಆರೋಪ : ದೂರು ಕೊಟ್ಟ ಪರೀಕ್ಷಾರ್ಥಿ!
ಬೀದರ್ : ಇಂದು ರಾಜ್ಯಾದ್ಯಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಪರೀಕ್ಷಾರ್ಥಿಯೊಬ್ಬ ಪರೀಕ್ಷಾ ಪ್ರಾಧಿಕಾರಕ್ಕೆ ದೂರು ನೀಡಿದ್ದಾನೆ.ಈ ಕುರಿತಂತೆ ಪರೀಕ್ಷೆ ಬರೆದ ಅಭ್ಯರ್ಥಿ ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾನೆ. ಹೌದು ಇಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗಿದೆ. ಈ ವೇಳೆ ಬೀದರ್ ಜಿಲ್ಲಾ ಕೇಂದ್ರದಲ್ಲಿನ ದತ್ತಗಿರಿ ಕಾಲೇಜಿನ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ನೇಮಕಾತಿ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುತ್ತಿದ್ದ ಕೇಂದ್ರದಲ್ಲಿ ಈ ಎಡವಟ್ಟು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಹಾಜರಾಗಿದ್ದ ಅಭ್ಯರ್ಥಿ ತಮಗೆ ಸೀಲ್ ಓಪನ್ ಮಾಡಿದ ಪ್ರಶ್ನೆ ಪತ್ರಿಕೆ ಬಂದಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆ ಚಿಂಚೋಳಿ ಮೂಲದ ಸಂತೋಷ್ ಎಂಬ ಪರೀಕ್ಷಾರ್ಥಿ, ಬೀದರ್ ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಗ್ರಾಮ…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ ಹಾಗಾಗಿ ನಾಳೆಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರ ಕುರಿತು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದರ ಬೆನ್ನಲ್ಲೆ, ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ ಬಗ್ಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ನಿಮ್ಮ ಆಶೀರ್ವಾದ ಇರುವವರೆಗೂ ಏನು ಮಾಡೋಕಾಗಲ್ಲ. ಯಾರೂ ನನ್ನ ಏನು ಮಾಡೋಕಾಗಲ್ಲ. ಸ್ವಲ್ಪ ದಿನ ತೊಂದರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು ಮಾಡುವುದಕ್ಕೆ ಆಗಲ್ಲ. ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರಂತೆ ಅಂತ ಹೇಳುತ್ತಿದ್ದಾರೆ. ರಾಜೀನಾಮೆ ಕೇಳುತ್ತಿದ್ದಾರೆ ಎಂದು ನನಗೆ ಎಷ್ಟೋ ಜನ ಹೇಳುತ್ತಿದ್ದಾರೆ. ನಾನು ಯಾರಿಗೂ ಹೆದರಲ್ಲ, ಜಗ್ಗಲ್ಲ, ಬಗ್ಗಲ್ಲ, ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು. ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯ ಮೇಲೆ ಗುಡುಗಿದರು.
ಬೀದರ್ : ಇಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಯಾಕೆ ತಡವಾಗಿ ಬಂದಿದ್ದೀರಾ ಎಂದು ಪ್ರಶ್ನೆ ಮಾಡಿದ ಪಿಎಸ್ಐ ಮೇಲೆ ಕಾನ್ಸ್ಟೇಬಲ್ ಒಬ್ಬ ಹಲ್ಲೆ ನಡೆಸಿರುವ ಘಟನೆ ಬೀದರ್ನ ಮಾದವನಗರದಲ್ಲಿ ನಡೆದಿದೆ. ಹೌದು ಇಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷಾ ಹಿನ್ನಲೆ ಬೀದರ್ನ ಮಾದವನಗರದ ಪರೀಕ್ಷಾ ಕೇಂದ್ರದಲ್ಲಿ ಪೊಲೀಸರು ಭದ್ರತಾ ಕರ್ತವ್ಯದಲ್ಲಿದ್ದರು. ಅದರಂತೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಪಿಸಿ ತಡವಾಗಿ ಬಂದಿದ್ದರು. ಇದನ್ನು ಪ್ರಶ್ನಿಸಿದ ಪಿಎಸ್ಐ ಯಲ್ಲಮ್ಮ ಅವರ ತಲೆಯನ್ನು ಗೋಡೆಗೆ ಡಿಕ್ಕಿ ಹೊಡೆಸಿದ್ದಾರೆ ಎಂದು ಪಿಎಸ್ಐ ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು ನಾಳೆಯಿಂದ ತನಿಖೆ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ ಇದರ ಮಧ್ಯ ಈ ಒಂದು ಹಗರಣದಲ್ಲಿ ನೀವು ರಾಜೀನಾಮೆ ನೀಡಬೇಡಿ ಎಂದು ಸಿದ್ದರಾಮಯ್ಯ ಅಭಿಮಾನಿ ಒಬ್ಬರು ರಕ್ತದ ಮೂಲಕ ಪತ್ರ ಬರೆದು ಮನವಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹೌದು ರಾಜೀನಾಮೆ ನೀಡದಂತೆ ಮುಖ್ಯಮಂತ್ರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ. ಮಂಡ್ಯ ಜಿಲ್ಲೆಯ ಮುತ್ತಹಳ್ಳಿಯ ಸಚಿನ್, ಅರಸು ಬಳಿಕ ಅತಿ ಹೆಚ್ಚು ಸರಕಾರಿ ಯೋಜನೆ ನೀಡಿದ್ದೀರಿ. ಬಡ ಜನರಿಗೆ ಅತಿ ಹೆಚ್ಚು ಯೋಜನೆ ನೀಡಿದ ಮುಖ್ಯಮಂತ್ರಿ ನೀವು. ಬಡವರು ಹಾಗೂ ದೀನ ದಲಿತರ ಪರವಾಗಿರುವಂತಹ ಮುಖ್ಯಮಂತ್ರಿಗಳು ನೀವು. ಮುಡಾ ಹಗರಣದಲ್ಲಿ ನೀವು ರಾಜೀನಾಮೆ ನೀಡಬಾರದು ನಿಮ್ಮೊಂದಿಗೆ ನಾವಿದ್ದೇವೆ ಎಂದು ರಕ್ತದಲ್ಲಿ ಸಚಿನ್ ಪತ್ರ ಬರೆದಿದ್ದಾರೆ.
ಕೋಲಾರ : ಹಿಂದೂ ಕೋಲಾರದಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ತರಬೇತಿ ನಿಮಿತ್ಯ ಹಾರಾಟ ನಡೆಸುತ್ತಿದ್ದ ಸೇನಾ ಹೆಲಿಕ್ಯಾಪ್ಟರ್ ಒಂದು ತಾಂತ್ರಿಕ ದೋಷ ಕಂಡುಬಂದಿದ್ದರಿಂದ ತುರ್ತಾಗಿ ಭೂಸ್ಪರ್ಶ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿಕೆ ಹಳ್ಳಿ ಎಂಬಲ್ಲಿ ನಡೆದಿದೆ. ಹೌದು ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಡಿಕೆ ಹಳ್ಳಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಡಿಕೆ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮದ ಕರೆ ಅಂಗಳದಲ್ಲಿ ಹೆಲಿಕಾಪ್ಟರ್ ತುರ್ತು ಸ್ಪರ್ಶ ಮಾಡಿದೆ. ಹೆಲಿಕ್ಯಾಪ್ಟರ್ ನಲ್ಲಿ ಇದ್ದ ಅಧಿಕಾರಿಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ತರಬೇತಿ ನಿಮಿತ್ಯ ಕೆಜಿಫ್ ಹಾಗೂ ಬಂಗಾರಪೇಟೆಯಲ್ಲಿ ಸೇನಾ ಹೆಲಿಕಾಪ್ಟರ್ ಹಾರಾಟ ನಡೆಸಲಾಗುತ್ತಿತ್ತು.














