Author: kannadanewsnow05

ಶ್ರೀನಗರ : ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವೇದಿಕೆ ಮೇಲೆ ಬಾಷಣ ಮಾಡುತ್ತಿದ್ದಾಗ ಏಕಾಏಕಿ ಅಸ್ವಸ್ಥರಾಗಿ ಕುಸಿದಿರುವ ಘಟನೆ ನಡೆದಿದೆ. ಹೌದು ಇಂದು ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿಯಾಗಿದ್ದಾರೆ.ಇಂದು ಪ್ರಚಾರ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬೀಳುತ್ತಿದ್ದರು. ಕೂಡಲೇ ಅಕ್ಕಪಕ್ಕದಲ್ಲಿದ್ದವರು ಅವರನ್ನು ತಡೆದು ನಿಲ್ಲಿಸಿದ್ದಾರೆ. ಕೂಡಲೇ ಅವರಿಗೆ ನೀರು ಕುಡಿಸಿದ್ದಾರೆ.ಈ ವೇಳೆ ಸಾವರಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ನಂತರ ಕುರ್ಚಿಯ ಮೇಲೆ ಕುಳಿತುಕೊಂಡು ಭಾಷಣ ಮುಂದುವರಿಸಿದರು.

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ಉದೇಶ ನೇತೃತ್ವದಲ್ಲಿ ನಾಲ್ಕು ತಂಡಗಳು ರಚನೆಯಾಗಿದ್ದು, ಈ ಕುರಿತಾಗಿ ಲೋಕಾಯುಕ್ತ ತನಿಖೆಯಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು. ಲೋಕಾಯುಕ್ತ ಎಡಿಜಿಪಿ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ನಡುವಿನ ಗುದ್ದಾಟದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಎಚ್‌ಡಿ ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Read More

ನವದೆಹಲಿ : ಚುನಾವಣಾ ಬಾಂಡ್ ಹೆಸರಲ್ಲಿ ವಸೂಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಮೇಲೆ ಎಫ್ಐಆರ್ ದಾಖಲಾಗಿದೆ. ಹಾಗಾಗಿ ಕೂಡಲೇ ಅವರು ರಾಜಿನಾಮೆ ನೀಡಲೇಬೇಕು ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನುಸಿಂಘ್ವಿ ಆಗ್ರಹಿಸಿದರು. ನವದೆಹಲಿಯಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಅನ್ನೋದು ಬಿಜೆಪಿಯ ವಸೂಲಿಯ ಒಂದು ಮಾರ್ಗ. ಮಹಾ ಷಡ್ಯಂತ್ರದ ಹಿಂದೆ 8,000 ಕೋಟಿ ರೂಪಾಯಿ ವಸೂಲಿ ಕಥೆ ಇದೆ. ಎಫ್ಐಆರ್ ದಾಖಲಾಗಿದೆ. ನಿರ್ಮಲಾ ಸೀತಾರಾಮನ್ ವಿರುದ್ಧ ಸಮನ್ಸ್ ಜಾರಿ ಆಗಲೇಬೇಕು. ಅದಾದ ಮೇಲೆ ವಿಚಾರಣೆ ಬಳಿಕ ಬಂಧನ ಆಗಲೇಬೇಕು. ಇದಕ್ಕಿಂತ ಫಿಟ್ ಕೇಸ್ ಇನ್ನೊಂದು ಇಲ್ಲ. ಹೀಗಾಗಿ ಈ ಕೇಸ್ ನಲ್ಲಿ ಸಚಿವೆ ನಿರ್ಮಲ ಸೀತಾರಾಮನ್ ರಾಜೀನಾಮೆ ಕೊಡಲೇಬೇಕು ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನುಸಿಂಘ್ವಿ ಆಗ್ರಹಿಸಿದರು. ಹಣಕಾಸು ಸಚಿವರು ಒಬ್ಬರೇ ಮಾಡಲು ಅವರಿಗೆ ಧೈರ್ಯ ಇಲ್ಲ. ಯಾರ ಆದೇಶ ಮತ್ತು ನಿರ್ದೇಶನ ಮೇಲೆ ಆಗಿದೆ ಎಲ್ಲರಿಗೂ ಗೊತ್ತಿದೆ. RBI ಪತ್ರ ಬರೆದರೆ ಸರ್ಕಾರ ಅದನ್ನು…

Read More

ಮೈಸೂರು : ಮಹಿಷಾ ದಸರಾ ಆಚರಣೆಗೆ ಅವಕಾಶ ಇಲ್ಲ ಎಂದು ಈಗಾಗಲೇ ತಿಳಿಸಿತ್ತು. ಆದರೂ ಇಂದು ಮೈಸೂರಿನ ಟೌನ್ ಹಾಲ್ ಬಳಿ ಮಹಿಷ ದಸರಾ ಸಮಿತಿಯ ಸದಸ್ಯರು ಮಹಿಷ ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಿ ಎಂದು ದಿಢೀರ್ ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ. ಹೌದು ಮಹಿಷ ಮೂರ್ತಿ ಪುಷ್ಪಾರ್ಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಿ ಎಂದು ದಿಢೀರ್ ಎಂದು ಭಾರಿ ಪ್ರತಿಭಟನೆ ನಡೆಸಲಾಗಿದೆ. ಮೈಸೂರಿನ ಟೌನ್ ಹಾಲ್ನಲ್ಲಿ ಸಮಿತಿಯ ಸದಸ್ಯರಿಂದ ಹೈಡ್ರಾಮ ನಡೆದಿದೆ. ಈ ವೇಳೆ ಪೊಲೀಸರ ಜೊತೆ ಮತ್ತು ಮಹಿಷ ದಸರಾ ಸಮಿತಿ ಸದಸ್ಯರ ನಡುವೆ ಚಾಮುಂಡಿ ಬೆಟ್ಟದಲ್ಲಿ ವಾಗ್ವಾದ ನಡೆದಿದೆ.

Read More

ದಾವಣಗೆರೆ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮತ್ತೊಂದು ಬಿಗ್ ಪ್ಲಾನ್ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಠಾವೋ ಎಂಬ ಅಭಿಯಾನ ಆರಂಭ ಮಾಡುವ ಕುರಿತು ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ದಾವಣಗೆರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹಠಾವೋ ಆರಂಭದ ಕುರಿತು ಯತ್ನಾಳ ನೇತ್ರತ್ವದಲ್ಲಿ ಜೆಐಎಂಟಿ ಸಭಾಂಗಣದಲ್ಲಿ ಸಭೆ ನಡೆಯುತ್ತಿದೆ. ಬಿಜೆಪಿ ಮಾಜಿ ಸಂಸಾರದ ಪ್ರತಾಪ್ ಸಿಂಹ, ಜಿ.ಎಂ ಸಿದ್ದೇಶ್ವರ ಹಾಗೂ ಹರಿಹರದ ಬಿಜೆಪಿ ಶಾಸಕ ಹರೀಶ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಜಿಎಂಐಟಿ ಅತಿಥಿ ಗೃಹದ ವಿಐಪಿ ರೂಮ್ನಲ್ಲಿ ಗುಪ್ತವಾಗಿ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಒಂದು ಬಂಡಾಯ ನಾಯಕರ ಸಭೆಗೆ ರಮೇಶ್ ಜಾರಕಿಹೊಳಿ ಗೈರಾಗಿದ್ದಾರೆ.ಈಗಾಗಲೇ ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಕಡೆ ಸಭೆ ನಡದಿತ್ತು. ದಾವಣಗೆರೆಯಲ್ಲಿ ಬಿಜೆಪಿ ಬಂಡಾಯ…

Read More

ಮೈಸೂರು : ಹಂದಿ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಕೇರಳ ಮೂಲದ ಮ್ಯಾನೇಜರ್ ನನ್ನು ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡಿಗೆ ಸಮೀಪದ ಹೆಬ್ಬಳ್ಳ ಗ್ರಾಮದಲ್ಲಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯನ್ನು ಕೇರಳದ ವಯನಾಡ್ ಜಿಲ್ಲೆಯ ಗಿರೀಶ್ ಅಬ್ರಹಂ(38) ಎಂದು ತಿಳಿದುಬಂದಿದೆ.ಹಂತಕನನ್ನು ಶಂಸುದ್ದಿನ್ ಎಂದು ಹೇಳಲಾಗುತ್ತಿದ್ದು, ಇಬ್ಬರು ಕೂಡ ಒಂದೇ ಹಂದಿ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದರು.ಆರೋಪಿ ಶಂಸುದ್ದೀನ್ ತನಗೆ ಹೆಚ್ಚಿನ ಕೆಲಸ ಹೇಳುವುದು, ತನ್ನ ವಿರುದ್ದ ಮಾಲಕರಿಗೆ ಚಾಡಿ ಹೇಳುತ್ತಾನೆಂಬ ಕಾರಣಕ್ಕೆ ಶುಕ್ರವಾರ ರಾತ್ರಿ ಶೆಡ್‌ನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಶಂಸುದ್ದೀನ್ ಚಾಕುವಿನಿಂದ ಗಿರೀಶ್ ಬೆನ್ನಿಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುವನ್ನು ಸಹಕಾರ್ಮಿಕರು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಗಿರಿಶ್ ಅಬ್ರಹಂ ಕೊಲೆ ಸಂಬಂಧ ಸಹೋದರ ವಿನೋದ್ ಅಬ್ರಹಂ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…

Read More

ಬೆಂಗಳೂರು : ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಅಕ್ರಮಗಳ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಇಂದು ಆರೋಪ ಮಾಡಿದ್ದರು ಇವರ ಒಂದು ಆರೋಪಕ್ಕೆ ಇದೀಗ ಎಡಿಜಿಪಿ ಚಂದ್ರಶೇಖರ್ ಅವರು ಏಕವಚನದಲ್ಲಿರುವ ವಾಗ್ದಾಳಿ ನಡೆಸಿದ್ದು ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ ಎಂದು ವಾಗ್ದಾಳಿ ನಡೆಸಿದ್ದಾರೆ. ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಗಂಭೀರವಾದಂತಹ ಆರೋಪ ಮಾಡಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಆರೋಪಕ್ಕೆ ಇದೀಗ ಚಂದ್ರಶೇಖರ್ ಟಾಂಗ್ ನೀಡಿದ್ದಾರೆ. ತಮ್ಮ ಸಿಬ್ಬಂದಿಗೆ ಪತ್ರದ ಮೂಲಕ ಎಡಿಜಿಪಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣ ಒಂದರ ಆರೋಪಿ ಎಂದು ಪತ್ರ ಪ್ರಾರಂಭಿಸಿರುವ ಚಂದ್ರಶೇಖರ್, ಇಂದು ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ನನ್ನ ಮೇಲೆ ಹೆಚ್‍ಡಿ ಕುಮಾರಸ್ವಾಮಿ ಸುಳ್ಳು ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ.ಎಸ್ಐಟಿ ಸಮಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್ ಮಂಜೂರಾತಿ ಕೋರಿದೆ. ಆರೋಪಿ ಹೆಚ್‍ಡಿ ಕುಮಾರಸ್ವಾಮಿ ಜಾಮೀನು ಪಡೆದಿದ್ದಾರೆ.ನಮ್ಮನ್ನು ಕುಗ್ಗಿಸುವ ಪ್ರಯತ್ನ ಹಾಗೂ ಭಯ ಹುಟ್ಟಿಸುವ ಉದ್ದೇಶ…

Read More

ಧಾರವಾಡ : ಧಾರವಾಡದಲ್ಲಿ ಬಡ್ಡಿ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವ್ಯಕ್ತಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನಜೀರ್ ಸಾಬ್ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡ ನಜೀರ್ ಸಾಬ್ ಮಂಡಕ್ಕಿ ವ್ಯಾಪಾರ ಮಾಡುತ್ತಿದ್ದರು. ವ್ಯಕ್ತಿ ಒಬ್ಬರಿಂದ 1. 20 ಲಕ್ಷ ಸಾಲ ಪಡೆದಿದ್ದ ನಜೀರ್, ಎರಡು ವರ್ಷದಿಂದ 2.50 ಲಕ್ಷ ರೂಪಾಯಿ ಬಡ್ಡಿ ಕಟ್ಟುತ್ತಾ ಬಂದಿದ್ದಾರೆ. ಎರಡು ತಿಂಗಳಿಂದ ಬಡ್ಡಿ ಕಟ್ಟದಿದ್ದಕ್ಕೆ ವ್ಯಕ್ತಿ ಗಲಾಟೆ ಮಾಡಿದ್ದಾನೆ.ಮನೆ ಖಾಲಿ ಮಾಡಿಸುವುದಾಗಿ ಕೂಡ ವಾರ್ನಿಂಗ್ ಮಾಡಿದ್ದ. ಇದರಿಂದ ನಜೀರ್ ಸಾಬ್ ಮನನೊಂದು ವಿಷ ಸೇವಿಸಿದ್ದ ಸೆಪ್ಟೆಂಬರ್ 26ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಕೂಡಲೇ ನಜೀರ್ ಸಾಬ್ ನನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸಿದೆ ನಜೀರ್ ಸಾವನಪ್ಪಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ.

Read More

ಚಿತ್ರದುರ್ಗ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಪ್ರಕರಣ ಇನ್ನೂ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ಮತ್ತೊಂದು ಗಲಾಟೆ ನಡೆದಿದೆ. ಆದರೆ ಇದು ಹಿಂದೂ ಮುಸ್ಲಿಂ ಗಲಾಟೆಯಲ್ಲ ಬದಲಾಗಿ, ಹಿಂದೂ ಕಾರ್ಯಕರ್ತರು ಹಾಗೂ ನಟ ದರ್ಶನ್ ಅವರ ಅಭಿಮಾನಿಗಳ ನಡುವೆ ನಡೆದಿದ್ದ ಗಲಾಟೆ ಎಂದು ತಿಳಿದುಬಂದಿದೆ. ಇಡೀ ಕರ್ನಾಟಕ ರಾಜ್ಯದಲ್ಲಿ ಅತ್ಯಂತ ದೊಡ್ಡ ಮೆರವಣಿಗೆ ಎಂದು ಹೆಸರುವಾಸಿಯಾಗಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ನಟ ದರ್ಶನ್ ಅವರ ಅಭಿಮಾನಿಗಳ ನಡುವೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಹೌದು ಇಂದು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ನಟ ದರ್ಶನ್ ಅವರ ಭಾವಚಿತ್ರ ಇರುವ ಬಾವುಟ ಹಾರಾಡಿದೆ. ಈ ಕಾರಣಕ್ಕೆ ಮೆರವಣಿಗೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಷ್ಟೇ ಅಲ್ಲ, ಈ ಸಂದರ್ಭದಲ್ಲಿ ಹಿಂದೂ ಮಹಾಗಣಪತಿ ಕಾರ್ಯಕ್ರಮ ಆಯೋಜಿಸಿರುವ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹಾಗು ದರ್ಶನ್…

Read More

ಮೈಸೂರು : ರೋಗಿಯ ಜೀವಗಳನ್ನು ಉಳಿಸುವ, ಕಾಪಾಡುವ ವೈದ್ಯರನ್ನು ವೈದ್ಯೋ ನಾರಾಯಣ ಹರಿ ಎಂದು ಕರೆಯುತ್ತಾರೆ.ಈ ಪದದ ಮಹತ್ವ ಕಡಿಮೆ ಆಗಬಾರದು ಎಂದು ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು. ಇಂದು ಮೈಸೂರು ಮೆಡಿಕಲ್ ಕಾಲೇಜುಗೆ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಈ ಒಂದು ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿ, ವೈದ್ಯೋ ನಾರಾಯಣ ಹರಿ ಎಂದು ವೈದ್ಯರನ್ನು ಕರೆಯುತ್ತಾರೆ. ಈ ಪದದ ಮಹತ್ವ ಕಡಿಮೆಯಾಗಬಾರದು ಎಂದು ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು. ಕೆಲವು ವೈದ್ಯರು ಸ್ಟಿಫ್ ಆಗಿರುತ್ತಾರೆ. ನನ್ನ ತಾಯಿಗೆ ಕ್ಯಾನ್ಸರ್ ಕಾಯಿಲೆ ಬಂದಿತ್ತು ಆಗ ವೈದ್ಯರನ್ನು ಭೇಟಿಯಾಗಲು ಹೋದರೆ ಸ್ಟಿಫ್ ಆಗಿದ್ದರು ವೈದ್ಯರು ಸ್ಟೀಫ್ ಆಗಿ ಇರಬಾರದು. ಜನರ ಜೊತೆ ಬೆರೆಯಬೇಕು ವೈದ್ಯರು ಈ ಸಮಾಜಕ್ಕೆ ಆಸ್ತಿ ಇದ್ದಂತೆ ಎಂದು ಸಿಎಂ ಸಿದ್ದರಾಮಯ್ಯ ವೈದ್ಯರಿಗೆ ಸಲಹೆ ನೀಡಿದರು.

Read More