Author: kannadanewsnow05

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಬಿರುಗಾಳಿ ಸಹಿತ ಭಾರಿ ಮಳೆ ಆಗುತ್ತಿರುವುದರಿಂದ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಒಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ಧರೆಗೆ ಉರುಳಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರದ ಚಂದ್ರಿಕಾ ಎಸ್ಟೇಟ್ ಬಳಿ ಈ ಒಂದು ಘಟನೆ ಸಂಭವಿಸಿದೆ. ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಇನಾಮ್ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಸಂಚಾರ ಬಂದ್ ಮಾಡಲಾಗಿದೆ. ರಸ್ತೆಗೆ ಅಡಲಾಗಿ ಬೃಹತ್ ಮರ ಬಿದ್ದು ಪ್ರವಾಸಿಗರು ಮತ್ತು ಸ್ಥಳೀಯರು ಪರದಾಟ ನಡೆಸುತ್ತಿದ್ದಾರೆ. ಅಲ್ಲದೆ ಚಂದ್ರದ್ರೋಣ ಪರ್ವತಕ್ಕೆ ತೆರಳುವ ಕೈಮರ ಚೆಕ್ ಪೋಸ್ಟ್ ಅನ್ನು ಬಂದ್ ಮಾಡಲಾಗಿದೆ ಹೋಲಿ ಸಿಬ್ಬಂದಿ ಪ್ರವಾಸಿಗರನ್ನು ಅಲ್ಲಿಂದ ವಾಪಸ್ ಕಳಿಸುತ್ತಿದ್ದಾರೆ ಚಿಕ್ಕಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಕಾರಣ ಮನೆಯಿಂದ ಹೊರಗೆ ಬರದಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ವಿದ್ಯಾ ಕುಮಾರಿ.ಕೆ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿನಲ್ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ,…

Read More

ಶಿವಮೊಗ್ಗ : ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವುದರಿಂದ ಈಗಾಗಲೇ ದಕ್ಷಿಣ ಕನ್ನಡ, ಚಿಕ್ಕಮಂಗಳೂರು, ಕೊಡಗು ಹಾಗು ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಿನಾಂಕ 16.06.2025 ರಂದು ಅಂದರೆ ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಾದ್ಯಂತ ಮಳೆ ಮತ್ತು ಗಾಳಿ ವ್ಯಾಪಕವಾಗಿರುವುದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ದಿನ ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಆದೇಶದಲ್ಲಿ ತಿಳಿಸಿದ್ದಾರೆ. ರಜಾದಿನದಲ್ಲಿನ ತರಗತಿ ಪಠ್ಯವನ್ನು ಮುಂದಿನ ಅವದಿಯಲ್ಲಿ ಸರಿದೂಗಿಸುವಂತೆ ತಿಳಿಸಿದೆ ಸಾಗರ ತಹಶೀಲ್ದಾರರು ಸೂಚಿಸಿದ್ದಾರೆ. ವಸಂತ ಬಿ ಈಶ್ವರಗೆರೆ, ಸಂಪಾದಕರು, kannadanewsnow.com 9738123234

Read More

ದಕ್ಷಿಣಕನ್ನಡ : ರಾಜ್ಯದಲ್ಲಿ ಅವಧಿಗೂ ಮುನ್ನ ಮುಂಗಾರು ಮಳೆ ಆರಂಭವಾಗಿದ್ದು ಅಲ್ಲದೆ, ಕಳೆದ ಹಲವಾರು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಭಾರಿ ಮಳೆಯಿಂದಾಗಿ ಈಗಾಗಲೇ ಹಲವರು ಬಲಿಯಾಗಿದ್ದು, ಆದಷ್ಟು ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಇದೀಗ ಉತ್ತರಕನ್ನಡ ಜಿಲ್ಲೆಯಲ್ಲಿ ಅಂತದ್ದೇ ಘಟನೆ ನಡೆದಿದ್ದು ಮನೆಯ ಬಳಿ ಆಟವಾಡುತ್ತಲೇ ನಾಲೆಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ದುರಂತ ಸಂಭವಿಸಿದೆ. ಹೌದು ಮನೆಯ ಬಳಿ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನಾಲೆಗೆ ಬಿದ್ದು ಸಾವನ್ನಪ್ಪಿರುವ ಘೋರ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಭಟ್ಕಳ ತಾಲೂಕಿನ ಜಾಲಿ ಪಟ್ಟಡಲ್ಲಿ ಈ ದುರಂತ ಸಂಭವಿಸಿದೆ. 2 ವರ್ಷದ ಕಂದಮ್ಮ ನಾಲೆಯಲ್ಲಿ ಬಿದ್ದು ಕೊಚ್ಚಿ ಹೋಗಿದ್ದಾಳೆ. ತೌಸಿಫ್ ಹಾಗೂ ಅರ್ಜು ದಂಪತಿಯ ಎರಡು ವರ್ಷದ ಮಗಳು ಆಟವಾಡುತ್ತಾ ಒಬ್ಬಳೇ ಮನೆಯಿಂದ ಹೊರಬಂದಿದ್ದಾಳೆ. ಹೀಗೆ ಬಂದವರು ಮನೆಯ ಬಳಿ ನಾಲೆ ಬಳಿ ಹೋಗಿದ್ದರೂ ಪೋಷಕರು ಗಮನಿಸಿಲ್ಲ. ಆಕಸ್ಮಿಕವಾಗಿ ಮಗು ನಾಲೆಗೆ ಬಿದ್ದಿದ್ದಾಳೆ. ಇದನ್ನು ಕಂಡ ಸ್ಥಳೀಯರು ತಕ್ಷಣ…

Read More

ಬೆಂಗಳೂರು : ರಾಜ್ಯದಲ್ಲಿ ಓಲಾ, ಉಬರ್‌ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ಜೂನ್‌ 24ಕ್ಕೆ ನಿಗದಿ ಪಡಿಸಿದೆ. ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಬೈಕ್‌ ಟ್ಯಾಕ್ಸಿ ಸೇವೆ ಬಂದ್ ಆಗಲಿದೆ. ರಾಜ್ಯದಲ್ಲಿ ಸೂಕ್ತ ನಿಯಮಗಳ ರಚನೆ ಯಾಗದ ಹಿನ್ನೆಲೆಯಲ್ಲಿ ಬೈಕ್‌ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕ ಸದಸ್ಯಪೀಠ ಆದೇಶ ಪ್ರಶ್ನಿಸಿ ಉಬರ್‌ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್‌ ಲಿಮಿಟೆಡ್‌, ಎಎನ್‌ಐ ಟಕ್ನಾಲಜಿ ಪ್ರೈವೇಟ್‌ ಲಿಮಿಟೆಡ್‌ (ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ(ಬೈಕ್‌ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ವಿ.ಕಾಮೇಶ್ವರ ರಾವ್‌ ಮತ್ತು ನ್ಯಾಯ ಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ವೇಳೆ ಅಡ್ವೋಕೆಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ವಾದಿಸಿ, ನಾಲ್ಕು ಚಕ್ರ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಂಗಳೂರು ಶೃಂಗೇರಿ ರಸ್ತೆಯಲ್ಲಿ ಗುಡ್ಡ ನಿರಂತರವಾಗಿ ಕುಸಿಯುತ್ತಿದೆ. ಈ ಹಿನ್ನೆಲೆ ರಸ್ತೆ ತುಂಬೆಲ್ಲ ಮಣ್ಣು, ಮರಗಳು ಹಾಗೂ ಕಲ್ಲು ಬಂಡೆಗಳು ಬಿದ್ದಿದ್ದು, ಶೃಂಗೇರಿ ಮಂಗಳೂರು ಸಂಚಾರ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಹಾಗಾಗಿ ಈ ರಸ್ತೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ವಾಹನಗಳ ಸಂಚಾರವನ್ನು ನಿಷೇಧಿಸಿದೆ. ಹೌದು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಶೃಂಗೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಸಂಚಾರ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಇಂದು ಬೆಳಿಗ್ಗೆ 8 ರವರೆಗೆ ಸಂಚಾರ ನಿಷೇಧಿಸಿರುವ ಚಿಕ್ಕಮಂಗಳೂರು ಜಿಲ್ಲಾ ಆಡಳಿತ. ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ಮಣ್ಣು ನಿರಂತರವಾಗಿ ಕುಸಿಯುತ್ತಿದೆ. ಸುಮಾರು 40 ಅಡಿ ಎತ್ತರದಿಂದ ರಸ್ತೆಗೆ ಮಣ್ಣು ಅಡ್ಡ ಬೀಳುತ್ತಿದ್ದು, ಮರ ಬಂಡೆಗಳು ಸಹ ರಸ್ತೆಗೆ ಬಿದ್ದಿವೆ. ಮಂಜಾಗ್ರಹ ಕ್ರಮವಾಗಿ ಜಿಲ್ಲಾಡಳಿತದಿಂದ ವಾಹನ ಸಂಚಾರ ನಿಷೇಧಿಸಲಾಗಿದೆ. ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಬಿದರಗೋಡು, ಆಗುಂಬೆ, ಉಡುಪಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ…

Read More

ಬೆಂಗಳೂರು : ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಗುಂಪುಗಳನ್ನು ವರ್ತಮಾನದ ಆಯುಧಗಳನ್ನಿಡಿದು ನಾಶಪಡಿಸಿ, ಕೊಲ್ಲಿ. ದೇಶದಲ್ಲಿ ಸನಾತನ ಧರ್ಮವೊಂದೇ ಇರುವುದು, ಉಳಿದೆಲ್ಲವೂ ಗುಂಪುಗಳಷ್ಟೇ ಎಂದು ಬೆಂಗಳೂರಿನ ಸಮರ್ಥ ಶ್ರೀಧರರಾಶ್ರಮ ಟ್ರಸ್ಟ್‌ನ ಆತ್ಮಾನಂದ ಸರಸ್ವತಿ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಗುಂಪುಗಳನ್ನು ದಯೆಯಿಲ್ಲದೆ ಕೊಚ್ಚಿ ಹಾಕಿ. ಇಂತಹವರು ನಮ್ಮ ದೇಶ, ಧರ್ಮವನ್ನು ಶಾಂತಿಯಾಗಿರಲು ಬಿಡುವುದಿಲ್ಲ. ಹಿಂದಿನ ಮಹಾನಾಯಕರು ದಯೆ ಇಟ್ಟುಕೊಂಡು ಇಂತಹವನ್ನು ಕೊಲ್ಲದೆ ಬಿಟ್ಟರು. ಈಗಿದು ಮುಗಿದುಹೋಗಬೇಕು, ಪುನಃ ಮಹಾಭಾರತ ಆಗುವ ಅವಶ್ಯಕತೆಯಿಲ್ಲ. ಪುನಃ ಸಮರ್ಥರು ಬರಬೇಕು ಅಥವಾ ಶಿವಾಜಿ ಬರಬೇಕು ಎಂಬ ಅವಶ್ಯಕತೆಯಿಲ್ಲ. ನಾವೇ ಪ್ರತಿಯೊಬ್ಬರೂ ಶಿವಾಜಿಯಾಗಿ ಹೊರಬರಬೇಕು. ನಾನು ಹಿಂದೂ ಸಮಾಜಕ್ಕೆ ಕರೆ ಕೊಡುತ್ತಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿ ಹೇಳಿಕೆ ನೀಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ವಿವಾದಕ್ಕೆ ಎಡೆಮಾಡಿದೆ. ಅದರಲ್ಲಿ, ದುಷ್ಟರನ್ನು ನಾಶಪಡಿಸುವುದಕ್ಕೆಂದೇ ಹಿಂದೂ ಧರ್ಮವಿದೆ. ಆದ್ದರಿಂತ ಯಾವುದೇ ಕರುಣೆಯಿಲ್ಲದೆ ದುಷ್ಟರನ್ನು ಕೊಲ್ಲಬೇಕು. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ.…

Read More

ಬೆಂಗಳೂರು : ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆ ಸುರಿಯಲಿದೆ. ಅದರಲ್ಲೂ ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.

Read More

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೊಚ್ಚಲ ಕಪ್ ಎತ್ತಿ ಹಿಡಿದ ಆರ್‌ಸಿಬಿ ತಂಡ ಇತ್ತೀಚಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಒಂದನ್ನು ಹಮ್ಮಿಕೊಂಡಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಕಲ್ತುಡಿದ ನಡೆದು 11 ಜನ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಇನ್ನು ಮುಂದೆ ಯಾವುದೇ ಸಭೆ ಸಮಾರಂಭ ಅಥವಾ ಲಕ್ಷಾಂತರ ಜನರು ಸೇರುವ ಕಾರ್ಯಕ್ರಮಗಳಿಗೆ ಹೊಸ ಕಾನೂನು ಜಾರಿಗೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಇನ್ಮುಂದೆ ನಡೆಯುವ ಸಭೆ ಸಮಾರಂಭಗಳಲ್ಲಿ ಕಾಲ್ತುಳಿತ ಘಟನೆಗಳು ಏನಾದರೂ ಸಂಭವಿಸಿದರೆ, ಮೂರು ವರ್ಷ ರೈಲು ಹಾಗೂ 5 ಲಕ್ಷ ದಂಡ ವಿಧಿಸುವ ಕಾನೂನು ಜಾರಿಗೆ ಸರ್ಕಾರ ನಿರ್ಧರಿಸಿದೆ. ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟ ಬೆನ್ನಲ್ಲೆ, ಬೃಹತ್‌ ರಾಜಕೀಯ ರ‍್ಯಾಲಿ, ದೊಡ್ಡ ಸಮಾವೇಶ, ಸಾಮೂಹಿಕ ಸಮಾರಂಭಗಳಿಗೆ ಸೇರುವ ಜನಸಾಗರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ, ನಿಯಂತ್ರಿಸುವ ಉದ್ದೇಶದಿಂದ ಕಾನೂನು ಜಾರಿಗೆ ತರಲು…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಕಾರಣ ಮನೆಯಿಂದ ಹೊರಗೆ ಬರದಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ವಿದ್ಯಾ ಕುಮಾರಿ.ಕೆ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿನಲ್ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ,…

Read More