Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಮೈಸೂರು ರಸ್ತೆಯ ಆರ್.ಆರ್.ವೈದ್ಯಕೀಯ ಕಾಲೇಜು ಬಳಿ ನಡೆದಿದೆ. ಈ ಕಾಲೇಜಿನಲ್ಲೇ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಕೃತಿಕಾ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಹಂಸ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನಿನ್ನೆ ಸಂಜೆ 4:15ರ ಸುಮಾರಿಗೆ ಸ್ಕೂಟರ್ ಮೂಲಕ ಹೊರಟ ಕೃತಿಕಾ ಹಾಗೂ ಹಂಸ ಆರ್.ಆರ್.ವೈದ್ಯಕೀಯ ಕಾಲೇಜಿನ ನಿರ್ಗಮನ ದ್ವಾರದಿಂದ ಮೈಸೂರು ರಸ್ತೆಯ ಕಡೆ ತೆರಳುತ್ತಿದ್ದರು. ಈ ವೇಳೆ ಮೈಸೂರು ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಚಲಾಯಿಸುತ್ತಿದ್ದ ಹಂಸ ರಸ್ತೆಯ ಎಡಭಾಗಕ್ಕೆ ಬಿದ್ದರೆ, ಹಿಂಬದಿ ಸವಾರೆ ಕೃತಿಕಾ ಬಲಭಾಗಕ್ಕೆ ಬಿದ್ದಿದ್ದಾರೆ.ದುರಾದೃಷ್ಟವಶಾತ್ ಕೃತಿಕಾ ಅವರ ದೇಹದ ಮೇಲೆ ಟಿಪ್ಪರ್ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಹಂಸಳನ್ನು ಆರ್ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರ…
ನವದೆಹಲಿ : ಇಸ್ರೇಲ್ ಇರಾನ್ ಯುದ್ಧದ ಬಳಿಕ ಭಾರತದ ಬಂದರಿಗೆ ಮೊದಲ ಬಾರಿಗೆ ಭಾರತದ ಬಂದರಿಗೆ ತೈಲನೌಕೆ ಆಗಮಿಸಿದೆ ಜಲಸಂಧಿಯಿಂದ ಈ ಒಂದು ತೈಲನೌಕೆ ಬಂದಿದೆ. ಹೊರ್ಮೊಜ್ ಜಲಸಂಧಿಯಿಂದ ಮುಂಬೈ ಬಂದರಿಗೆ ತೈಲ ನೌಕೆ ಆಗಮಿಸಿದೆ. ಮಾರ್ಚ್ 8ರವರೆಗೆ ಜಲಸಂಧಿಯಲ್ಲಿ ಈ ಒಂದು ತೈಲ ನೌಕೆ ಸಿಲುಕಿತ್ತು. ಹರ್ಮೋಜ್ ಜಲಸಂಧಿ ಬಂದ್ ಆಗಿದ್ದರಿಂದ ತೈಲ ನೌಕೆ ಸಿಲುಕಿತ್ತು. ಮಾರ್ಚ್ 9 ರಂದು ಹೊರಟಿದ್ದ ಭಾರತದ ತೈಲ ನೌಕೆ ಇದೀಗ ಮುಂಬೈ ತಲುಪಿದೆ. ಇರಾನ್ ಇಸ್ರೇಲ್ ಯುದ್ಧದ ನಡುವೆ ಹಾರ್ಮೋನ್ಸ್ ಜಲಸಂಧಿಯಲ್ಲಿ ಭಾರತೀಯ ತೈಲ ನೌಕೆ ಸಿಲುಕಿತ್ತು. ಒಂದು ವೇಳೆ ಯಾವುದೇ ಹಡಗುಗಳನ್ನು ಅಲ್ಲಿಂದ ತೆಗೆದುಕೊಂಡು ಹೋದರೆ ನಡುವೆಯೇ ದಾಳಿ ಮಾಡಿ ಧ್ವಂಸಗೊಳಿಸಲಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿತ್ತು. ಆದರೆ ಇದೀಗ ಭಾರತಕ್ಕೆ ಅತಿ ದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಂತಾಗಿದೆ. ಪ್ರಮುಖ ಅಂಶಗಳು: ಸುರಕ್ಷಿತ ಸಂಚಾರ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿಯಿದ್ದರೂ, ಅಂತರಾಷ್ಟ್ರೀಯ ಜಲಮಾರ್ಗಗಳಲ್ಲಿ ತೈಲ ಸಾಗಾಣಿಕೆ ಪುನರಾರಂಭಗೊಂಡಿರುವುದು ಭಾರತದ ಇಂಧನ ಭದ್ರತೆಗೆ…
ಕೊಡಗು : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಇಂದು ಕಾಡಾನೆ ದಾಳಿಗೆ ಕಾಫಿ ಬೆಳೆಗಾರನೊಬ್ಬ ಸಾವನಪ್ಪಿರುವ ಘಟನೆ ವರದಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಗಣಪತಿ ಅಲಿಯಾಸ್ ಗಪ್ಪು (49) ಸಾವನ್ನಪ್ಪಿರುವ ವ್ಯಕ್ತಿ. ಸಿದ್ದಾಪುರ ಸಮೀಪದ ಹೈಸ್ಕೂಲ್ ಪೈಸಾರಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನವದೆಹಲಿ : ಇರಾನ್ ಇಸ್ರೇಲ್ ಯುದ್ಧದ ನಡುವೆಯೇ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ನಡುವಿನ ಮಾತುಕತೆಯ ನಂತರ, ಆಯಕಟ್ಟಿನ ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ ತೈಲ ಹಡಗುಗಳು ಸಾಗಲು ಇರಾನ್ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಇದೀಗ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ತೈಲ ಹಡಗುಗಳಿಗೆ ಯಾವುದೇ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ವಿಶ್ವದ ಅತ್ಯಂತ ಪ್ರಮುಖ ತೈಲ ಸಾಗಾಣಿಕೆ ಮಾರ್ಗವಾಗಿರುವ ‘ಹಾರ್ಮುಜ್ ಜಲಸಂಧಿ’ಯಲ್ಲಿ (Strait of Hormuz) ಭಾರತೀಯ ತೈಲ ಹಡಗುಗಳ ಸಂಚಾರಕ್ಕೆ ಯಾವುದೇ ವಿಶೇಷ ಅನುಮತಿ ಅಥವಾ ವಿನಾಯಿತಿ ನೀಡಿಲ್ಲ ಎಂದು ಇರಾನ್ ಸರ್ಕಾರ ಅಧಿಕೃತವಾಗಿ ಸ್ಪಷ್ಟಪಡಿಸಿದೆ. ಮುಖ್ಯಾಂಶಗಳು: ಸ್ಪಷ್ಟನೆ ನೀಡಿದ ಇರಾನ್: ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಯಾವುದೇ ರೀತಿಯ ಪ್ರತ್ಯೇಕ ಸೌಲಭ್ಯ ಅಥವಾ ಸುರಕ್ಷತೆಯ ಭರವಸೆ ನೀಡಿಲ್ಲ ಎಂದು ಇರಾನ್ ವಿದೇಶಾಂಗ ಇಲಾಖೆ…
ಬೆಂಗಳೂರು : ಹಾಲು ಉತ್ಪಾದಕರಿಗೆ ಬಮುಲ್ ಇದೀಗ ಯುಗಾದಿ ಉಡುಗೊರೆ ನೀಡಿದ್ದು ಲೀಟರ್ ಹಾಲಿಗೆ 1 ರೂಪಾಯಿ ಪ್ರೋತ್ಸಾಹ ಧನವನ್ನು ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್ ಘೋಷಣೆ ಮಾಡಿದ್ದಾರೆ. ರೈತರಿಂದ 59, 39, 78,492 ಲೀಟರ್ ಹಾಲು ಖರೀದಿಸಿದ್ದೇವೆ. ಈ ಬಾರಿ 500 ಕೋಟಿ ಹೆಚ್ಚುವರಿ ಟರ್ನ್ ಓವರ್ ಮಾಡುವ ಗುರಿ ಇದ್ದು, ಕಾರ್ಮಿಕರಿಗೆ ಸುಮಾರು 6 ಕೋಟಿ ರೂಪಾಯಿ ಡಿಎ ಕೊಡಬೇಕು. ನಾವು ಸುಮಾರು 60 ಕೋಟಿ ಲಾಭಗಳಿಸುವ ಮಟ್ಟಿಗೆ ಬಂದಿದ್ದೇವೆ. ಹೀಗಾಗಿ ಸಿಬ್ಬಂದಿಗಳಿಗೆ ಬಾಕಿ ಇದ್ದ ಹಣ ಕೊಡಲು ತೀರ್ಮಾನಿಸಲಾಯಿತು. ಗುತ್ತಿಗೆದಾರರಿಗೆ 5000 ಬೋನಸ್ ಕೊಡುತ್ತೇವೆ. ಗುಣಮಟ್ಟದ ಹಾಲು ಕೊಡುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಡಿಕೆ ಸುರೇಶ ತಿಳಿಸಿದರು. ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಇದು ನಿಜಕ್ಕೂ ಸಿಹಿ ಸುದ್ದಿ! ಯುಗಾದಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಹಾಲು ಒಕ್ಕೂಟ (ಬಮುಲ್) ತನ್ನ ವ್ಯಾಪ್ತಿಯ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 1 ರೂಪಾಯಿ ಪ್ರೋತ್ಸಾಹ ಧನ ಹೆಚ್ಚಳ…
ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ನೀರಿನ ಸಂಪಿಗೆ ಬಿದ್ದು ಎರಡು ವರ್ಷದ ಮಗು ಸಾವನಪ್ಪಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ ನಿವಾಸದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಅಣ್ಣಯ್ಯ ಮತ್ತು ಋತು ದಂಪತಿಯ ಎರಡುವರೆ ವರ್ಷದ ಮಗ ಸಂಪಿಗೆ ಬಿದ್ದು ಸಾವನಪ್ಪಿದ್ದಾನೆ. ನಿನ್ನೆ ಕಾರು ತೊಳೆಯಲು ಮನೆಯಲ್ಲಿದ್ದ ಸಂಪ್ ತೆಗೆದಿದ್ದ ಅಣ್ಣಯ್ಯ, ಕಾರು ತೊಳೆದು ನಂತರ ಸಂಪ್ ಕ್ಲೋಸ್ ಮಾಡದೇ ತೆರಳಿದ್ದಾರೆ. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪಗೆ ಬಿದ್ದು ಸಾವನಪ್ಪಿದ್ದಾನೆ. ಸುರಕ್ಷತೆಗಾಗಿ ಗಮನಿಸಬೇಕಾದ ಅಂಶಗಳು: ಸಂಪ್‌ಗಳಿಗೆ ಸುರಕ್ಷಿತ ಮುಚ್ಚಳ: ಮನೆಯಲ್ಲಿ ನೀರಿನ ಸಂಪ್‌ಗಳಿದ್ದರೆ ಅವುಗಳಿಗೆ ಯಾವಾಗಲೂ ಗಟ್ಟಿಯಾದ ಕಬ್ಬಿಣದ ಅಥವಾ ಸಿಮೆಂಟ್ ಮುಚ್ಚಳಗಳನ್ನು ಅಳವಡಿಸಿರಬೇಕು. ಲಾಕ್ ವ್ಯವಸ್ಥೆ: ಮುಚ್ಚಳಗಳನ್ನು ಕೇವಲ ಮುಚ್ಚಿಡುವುದು ಸಾಲದು, ಮಕ್ಕಳು ಸುಲಭವಾಗಿ ತೆಗೆಯದಂತೆ ಅದಕ್ಕೆ ಲಾಕ್ (Lock) ಹಾಕುವ ವ್ಯವಸ್ಥೆ ಇರುವುದು ಉತ್ತಮ. ನಿರಂತರ ನಿಗಾ: ಸಣ್ಣ ಮಕ್ಕಳಿರುವ ಮನೆಯಲ್ಲಿ ಅವರು ಆಟವಾಡುವಾಗ ದೊಡ್ಡವರ ಕಣ್ಣು ಯಾವಾಗಲೂ ಅವರ ಮೇಲಿರಲಿ. ಆಟದ…
ಬೆಂಗಳೂರು : ರಾಜ್ಯಾ, ದೇಶ ಸೇರಿದಂತೆ ಎಲ್ಲೆಡೆ ಸಿಲಿಂಡರ್ ವ್ಯತ್ಯಯದಲ್ಲಿ ಭಾರಿ ಸಮಸ್ಯೆ ಉಂಟಾಗಿದೆ. ಈಗಲೇ ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್ ಗಳು ಬಂದ್ ಆಗಿವೆ. ಸಿಲಿಂಡರ್ ಸಮಸ್ಯೆ ಬೆನ್ನಲ್ಲೇ ತುಂಬಿದ ಸಿಲಿಂಡರ್ ಕಳ್ಳತನ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಕಲ್ಯಾಣ ನಗರದಲ್ಲಿ ಈ ಒಂದು ಕಳ್ಳತನ ನಡೆದಿದೆ. ಕಲ್ಯಾಣ ನಗರದಲ್ಲಿ ಬೈಕಿನಲ್ಲಿ ಬಂದು ಮನೆಯ ಕಂಪೌಂಡ್ ನಲ್ಲಿದ್ದಂತ ಚೀಲದ ಸಮೇತ ಸಿಲಿಂಡರ್ ಕಳ್ಳತನ ನಡೆದಿದೆ. ಮನೆಯವರು ಸಿಲಿಂಡರ್ ಫುಲ್ ಮಾಡಿ ಚೀಲದಲ್ಲಿ ಇಟ್ಟಿದ್ದರು. ಇದನ್ನು ಮೊದಲೇ ಗಮನಿಸಿದ್ದ ಕಳ್ಳ ರಾತ್ರಿ ಬೈಕ್ ನಲ್ಲಿ ಬಂದು ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿದ್ದಾನೆ.
ಬೆಂಗಳೂರು : ಡೈರಿಗಳಿಗೆ ಪೂರೈಕೆಯಾಗುವ ಹಾಲುಗಳಲ್ಲಿ ಕಲಬೆರಕೆ ಆರೋಪ ಕುರಿತಾಗಿ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡ ಪ್ರಶ್ನಿಸಿದರು. ಮಧು ಮಾದೇಗೌಡ ಪ್ರಶ್ನೆಗೆ ಸಭಾ ನಾಯಕ ಎನ್ ಎಸ್ ಬೋಸರಾಜು ಉತ್ತರಿಸಿದರು. ಕೆಎಂಎಫ್ ಗೆ ಪೂರೈಕೆ ಆಗುವ ಹಾಲಿನಲ್ಲಿ ಕಲಬೆರಿಕೆ ಆಗುತ್ತಿದೆ ಒಟ್ಟು 15 ಲಕ್ಷ ಮಾದರಿ ಪರೀಕ್ಷಿಸಲಾಗಿದೆ. ಅದರಲ್ಲಿ 3049 ಮಾದರಿಗಳಲ್ಲಿ ಕಲಬೆರಕೆ ಕಂಡು ಬಂದಿದೆ ಕಲಬೆರಕೆ ಕಂಡು ಬಂದರೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಬಹುದು ಎಂದು ಎನ್ ಎಸ್ ಬೋಸರಾಜು ತಿಳಿಸಿದರು.
ಬೆಂಗಳೂರು, ಮಾ.12: ಕಳೆದ ನವೆಂಬರ್ ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತು ಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು, ಸಫಾರಿ ಸ್ಥಗಿತಗೊಳಿಸಿದ್ದರಿಂದ 4 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದರು. ಸಫಾರಿ ದೇಶಾದ್ಯಂತ ಹಲವು ವರ್ಷದಿಂದ ನಡೆಯುತ್ತಿದೆ. ಒಂದು ಸಮೀಕ್ಷೆಯನ್ನೂ ನಡೆಸದೆ ಸಫಾರಿಯನ್ನು ಏಕಾಏಕಿ ನಿಲ್ಲಿಸಿದ್ದು ಸರಿಯಲ್ಲ ಎಂದರು. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು, ಸಫಾರಿಯನ್ನು ಏಕಾಏಕಿ ನಿಲ್ಲಿಸಲಿಲ್ಲ. ಕಳೆದ ನವೆಂಬರ್ ತಿಂಗಳಲ್ಲಿ 15 ದಿನಗಳ ಅಂತರದಲ್ಲಿ ಮೂರು ಅಮೂಲ್ಯ ಜೀವಹಾನಿ ಆಗಿತ್ತು, ಒಬ್ಬರು ಶಾಶ್ವತವಾಗಿ ಅಂಗವಿಕಲರಾದರು, ಹುಲಿಗಳು ಕಾಡಿನಿಂದ ಹೊರಗೆ ಬಂದು ದಾಳಿ ಮಾಡುತ್ತಿದ್ದವು. ಜನರ ಅಮೂಲ್ಯ ಜೀವ ರಕ್ಷಣೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಯಿತು ಎಂದು ಸ್ಪಷ್ಟಪಡಿಸಿದರು. ನವೆಂಬರ್ ನಲ್ಲಿ ತಾವು ಚಾಮರಾಜನಗರದಲ್ಲಿ ಈ ಸಂಬಂಧ ಸಭೆ ನಡೆಸಿದಾಗ…
ಯಾದಗಿರಿ : ಯಾದಗಿರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕ್ರೂಸರ ವಾಹನ ಡಿಕ್ಕಿಯಾಗಿ ಬೈಕಿನಲ್ಲಿ ಇದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅಲ್ದಾಳ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬೈಕಿಗೆ ಡಿಕ್ಕಿ ಹೊಡೆದು ಕ್ರೂಸರ್ ವಾಹನ ಪಲ್ಟಿಯಾಗಿದೆ. ಇನ್ನು ಕ್ರೂಸರ್ ನಲ್ಲಿ ಇದ್ದಂತಹ ಹಲವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿದಂತೆ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಮೃತರ ಗುರುತು ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.














