Author: kannadanewsnow05

ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಇಂದು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಇನ್ನು ಇದೇ ವಿಚಾರವಾಗಿ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರು, ಭ್ರಷ್ಟಾಚಾರದಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ತಮಗೆ ಬೇಕಾದವರನ್ನು ಲೋಕಾಯುಕ್ತ ಎಡಿಜಿಪಿಯನ್ನಾಗಿ ನೇಪಿಸಿಕೊಂಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಭಯಭೀತರಾಗಿದ್ದಾರೆ. ಭಯದಿಂದಲೇ ಕಾಂಗ್ರೆಸ್ ಪಕ್ಷ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ಆರೋಪ ಇಲ್ಲದವರಿಗೆ ಸನ್ಮಾನಿಸುತ್ತೇವೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನೀವೇ ದೊಡ್ಡ ಭ್ರಷ್ಟಾಚಾರಿಗಳು ನೀವು ಏನು ಮಾತನಾಡುತ್ತೀರಿ ಅಂತ ಸಿಎಂಗೆ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರೇ 70 ಲಕ್ಷ ರೂಪಾಯಿ ಮೌಲ್ಯದ ವಾಚ್ ಏನಾಯ್ತು? ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಏನಾಯ್ತು? ನೀವೇ ಮಾಡಿದ ರೀಡೂ ವಿಷಯದಲ್ಲಿ ಕೆಂಪಣ್ಣ ವರದಿ ಏನಾಯಿತು? ಈಗ…

Read More

ಪಂಜಾಬ್ : ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರ ಆರೋಗ್ಯದಲ್ಲಿ ಇದೀಗ ಏರುಪೇರು ಉಂಟಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ನಿನ್ನೆ ರಾತ್ರಿ ಅವರಿಗೆ ಅನಾರೋಗ್ಯ ಕಂಡುಬಂದಿದ್ದು, ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿತ್ತು. ಇದೀಗ ಈ ಒಂದು ಆದೇಶದ ಪ್ರತಿ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಅವರ ಕೈಗೆ ತಲುಪಿದೆ. ಹಾಗಾಗಿ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗುತ್ತಾ ಎಂದು ಕಾದು ನೋಡಬೇಕಾಗಿದೆ. ಕೋರ್ಟ್ ನಿಂದ ಆದೇಶ ಪ್ರತಿಯನ್ನು ಲೋಕಾಯುಕ್ತ ಎಸ್ ಪಿ ಉದೇಶ ಇದೀಗ ಪಡೆದುಕೊಂಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಂದು ಆದೇಶದ ಪ್ರತಿ ಪಡೆದಿದ್ದಾರೆ.ಹಾಗಾಗಿ ಶೀಘ್ರವೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುತ್ತಾ ಎಂದು ಕಾದು ನೋಡಬೇಕು.

Read More

ದಾವಣಗೆರೆ : ಆಟವಾಡುತ್ತಾ ಆಯತಪ್ಪಿ ನೀರಿನ ತೊಟ್ಟಿಯಲ್ಲಿ ಬಿದ್ದು ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕರೂರು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಮೃತ ಬಾಲಕನನ್ನು ದಾವಣಗೆರೆ ತಾಲೂಕಿನ ಕರೂರು ಗ್ರಾಮದ ಸೈಯದ್ ಆಜಾನ್ ಎಂದು ಹೇಳಲಾಗುತ್ತಿದ್ದು, ವಿನೋಬನಗರದ ನಿವಾಸಿ ಸೈಯದ್ ಶಹಬಾದ್ ಇಕ್ಬಾಲ್ ಅವರ ಪುತ್ರ ಎಂದು ತಿಳಿಬಂದಿದೆ. ನಿನ್ನೆ ಕುಟುಂಬದವರೊಂದಿಗೆ ಮದುವೆಗೆ ಸೈಯದ್ ಶಹಬಾದ್ ಇಕ್ಬಾಲ್ ಕರೂರು ಗ್ರಾಮಕ್ಕೆ ಬಂದಿದ್ದರು. ಈ ವೇಳೆ ರಾತ್ರಿ ಬಾಲಕ ಆಟವಡುತ್ತಾ ಹೋಗಿ ಕಾರ್ಖಾನೆ ಸಲುವಾಗಿ ನಿರ್ಮಾಣ ಮಾಡಿದ್ದ ನೀರಿನ ಸಣ್ಣ ತೊಟ್ಟಿಯಲ್ಲಿ ಆಕಸ್ಮಿಕವಾಗಿ ಬಿದ್ದಿದ್ದಾನೆ. ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸಾವು ಕಂಡಿದ್ದಾನೆ. ಬಾಲಕನ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಗಾಂಧಿಗನರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಹಲವು ಬಿಜೆಪಿ ನಾಯಕರು ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಬಿಜೆಪಿ ಬಂಡಾಯ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದಾರೆ.ಹೌದು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ನಿವಾಸದಲ್ಲಿ ಬಿಜೆಪಿ ಅಸಮಾಧಾನಿತ ನಾಯಕರ ಸಭೆ ನಡೆದಿದೆ. ಈ ಒಂದು ಸಭೆಯಲ್ಲಿ ಪ್ರಮುಖವಾದಂತಹ ನಿರ್ಧಾರ ಕೈಗೊಂಡಿದ್ದು, ಮೈಸೂರು ದಸರಾ ಹಬ್ಬ ಮುಗಿದ ಬಳಿಕ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮದ ಕುರಿತಾಗಿ ಬಸವಕಲ್ಯಾಣದಿಂದ ಬಳ್ಳಾರಿಯ ವರೆಗೆ ಪಾದಯಾತ್ರೆ ನಡೆಸಲು ಬಿಜೆಪಿಯ ಅಸಮಾಧಾನಿತ ನಾಯಕರು ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬಸವಕಲ್ಯಾಣದಿಂದ ಬಳ್ಳಾರಿಯವರಿಗೆ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ ಮಾಡಿಕೊಂಡಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ತಂಡದಿಂದ ಈ ಒಂದು ನಿರ್ಧಾರ ಕೈಗೊಳ್ಳಲಾಗಿದೆ. ಪಾದಯಾತ್ರೆಯ ರೂಪುರೆಷೆಯ ಬಗ್ಗೆ ಪ್ಲಾನ್ ಮಾಡಲಾಗಿದ್ದು, ಈ ಕುರಿತು ಬಸನಗೌಡ ಪಾಟೀಲ ಯತ್ನಾಳ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ವೈಯಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿ ಆಗಿದ್ದ ಮುಕ್ತಿ ರಂಜನ್ ರಾಯ್ ಅವರ ತಾಯಿ ಮಹಾಲಕ್ಷ್ಮಿ ವಿರುದ್ಧ ಸ್ಪೋಟಕ ವಾದಂತಹ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಪಿಯ ತಾಯಿ ಕುಂಜಲತಾ ರಾಯ್, ನನ್ನ ಮಗನ ವಿರುದ್ಧ ಕೊಲೆಯಾದ ಮಹಿಳೆ ಟ್ರ್ಯಾಪ್ ಮಾಡಿದ್ದಳು. ಅವಳು ಅವನಿಂದ ನಿರಂತರವಾಗಿ ಹಣ ಕೇಳುತ್ತಲೇ ಇದ್ದಳು. ಈ ವಿಚಾರವನ್ನು ಆತ ಹೇಳಿಕೊಂಡಿದ್ದ. ನಾನು ಅವನನ್ನು ಬೆಂಗಳೂರು ತೊರೆಯುವಂತೆ ಹೇಳಿದ್ದೆ ಎಂದು ಹೇಳಿಕೊಂಡಿದ್ದಾರೆ. ಮುಕ್ತಿ ರಂಜನ್ ರಾಯ್ ಹಾಗೂ ಮಹಾಲಕ್ಷ್ಮಿ ಬೆಂಗಳೂರಿನ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಮೊದಲ ಪರಿಚಯ ಸ್ನೇಹದಿಂದ ಆರಂಭವಾಗಿ ನಂತರ ಪ್ರೀತಿಗೆ ತಿರುಗಿತ್ತು. ಬಳಿಕ ಮಹಾಲಕ್ಷ್ಮಿ ಮುಕ್ತಿ ರಂಜನ್ ರಾಯ್ಗೆ ಮದುವೆಯಾಗು ಎಂದು ಪೀಡಿಸುತ್ತಿದ್ದಳು.ಇದಕ್ಕೆ ಬೇಸತ್ತು ಮುಕ್ತಿ ರಂಜನ್ ರಾಯ್ ಆಕೆಯನ್ನು ಭೀಕರವಾಗಿ ಕೊಲೆ ಮಾಡಿದ್ದ.ಬಳಿಕ ಒಡಿಶಾಕೆ ತೆರಳಿ ಪೊಲೀಸರು ಎಲ್ಲಿ ನನ್ನನ್ನು ಅರೆಸ್ಟ್ ಮಾಡುತ್ತಾರೆ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ವಿಪಕ್ಷ ನಾಯಕರು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯ ಮಾಜಿ ಸ್ಪೀಕರ್ ಆಗಿರುವಂತಹ ಕೆಬಿ ಕೋಳಿವಾಡ ಅವರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಹೇಳಿಕೆ ನೀಡಿದ್ದಾರೆ.ಇದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ನಾನು ಏನು ತಪ್ಪು ಮಾಡಿಲ್ಲ.ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆಗೆ ಕೆ.ಬಿ ಕೋಳಿವಾಡ ಆಗ್ರಹದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕೆ ಬಿ ಕೋಳಿವಾಡ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಯಾಕೆಂದರೆ ನಾನು ಈ ಒಂದು ಕೇಸ್ ನಲ್ಲಿ ಏನು ತಪ್ಪೇ ಮಾಡಿಲ್ಲ ಎಂದು ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದರು. ಕೆಬಿ ಕೋಳಿವಾಡ ಹೇಳಿದ್ದೇನು? ಈ ಕುರಿತಾಗಿ ಕೆಬಿ ಕೋಳಿವಾಡ, ಸಿಎಂ ಸಿದ್ದರಾಮಯ್ಯ ಎಷ್ಟೇ ಕಳಂಕ ರಹಿತರಾದರೂ ಪಕ್ಷದ ದೃಷ್ಟಿಯಿಂದ ರಾಜೀನಾಮೆ ನೀಡಲಿ.…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಎಸ್ ಪಿ ಅವರನ್ನು ಅಕ್ರಮ ಬಂಧನದಲ್ಲಿ ಇಟ್ಟಿರಬೇಕು, ಇಲ್ಲವಾದರೆ ಕಿಡ್ನಾಪ್ ಮಾಡಿರಬಹುದು ಎಂದು ಆರೋಪಿಸಿ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ಕಾಣೆಯಾಗಿದ್ದಾರೆ ಎಂದು ಇದೀಗ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.ಮೈಸೂರಿನ ದೇವರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ? ಬೆಳಗ್ಗೆಯಿಂದಲೂ ಲೋಕಾಯುಕ್ತ ಎಸ್ ಪಿ ಉದೇಶ ಸಂಪರ್ಕಕ್ಕೆ ಸಿಗುತ್ತಿಲ್ಲ. ಎಸ್ ಪಿ ಉದೇಶ ಯಾವ ಕಾರಣಕ್ಕೆ ಹಾಗೂ ಎಲ್ಲಿಗೆ ಹೋಗಿದ್ದಾರೆ? ಎಂದು ಗೊತ್ತಿಲ್ಲ. ಲೋಕಾಯುಕ್ತ ಕಚೇರಿಯಲ್ಲಿ ಕೇಳಿದರು ನನಗೆ ಮಾಹಿತಿ ನೀಡುತ್ತಿಲ್ಲ. ದೂರವಾಣಿ ಕರೆ ಮಾಡಿದ್ದೇನೆ, ಮೆಸೇಜ್ ಮಾಡಿದರು ಸಹ ಎಸ್ ಪಿ ಉದೇಶ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಹಾಗಾಗಿ ಲೋಕಾಯುಕ್ತ ಎಸ್ಪಿ ಅವರನ್ನು ಅಕ್ರಮ ಬಂಧನದಲ್ಲಿ ಇಟ್ಟಿರಬೇಕು. ಇಲ್ಲದಿದ್ದರೆ ಅಪಹರಣ ಮಾಡಿರಬೇಕು ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ಮಾಡಿ ಎಂದು ಮೈಸೂರು ನಗರದ ದೇವರಾಜ ಪೊಲೀಸ್…

Read More

ಶಿವಮೊಗ್ಗ : ಮುಡಾ ಹಗರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಇಂದು ವಿಧಾನಸೌಧ ಮುಂಭಾಗದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.  ಸಿದ್ದರಾಮಯ್ಯ ರಾಜೀನಾಮೆ ಕುರಿತು ಕೇಂದ್ರ ಸಚಿವರಾದ ವಿ. ಸೋಮಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಶಾಸಕನಾಗಿ, ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ಕಾನೂನನ್ನು ಸಿಎಂ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಸಿದ್ದರಾಮಯ್ಯ ಒಬ್ಬ ಸೂಕ್ಷ್ಮ ರಾಜಕಾರಣಿ ಎಂದು ಅವರು ತಿಳಿಸಿದರು. ಅವರು ರಾಜೀನಾಮೆ ಕೊಟ್ಟೆ ಕೊಡ್ತಾರೆ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ತನಿಖೆ ಎದುರಿಸಲು ರಾಜೀನಾಮೆ ಕೊಡುತ್ತಾರೆ ಎಂಬುದು ನನ್ನ ಅಭಿಪ್ರಾಯ ಎಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿಕೆ ನೀಡಿದರು.

Read More

ಬೆಳಗಾವಿ : ದೇವಸ್ಥಾನದಲ್ಲಿ ಕಳ್ಳತನ ಮಾಡಿರುವುದನ್ನು ನೋಡಿದ ಮಹಿಳೆಯನ್ನೇ ಕಳ್ಳರು ಬಾವಿಗೆ ನೂಕಿ ಅಮಾನವೀಯವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೊಳಿ ಗ್ರಾಮದಲ್ಲಿ ನಡೆದಿದೆ. ಶಿಂದೊಳಿ ಗ್ರಾಮದ ಭಾರತಿ ಪೂಜಾರಿ (48)‌ ಮೃತ ಮಹಿಳೆ ಎಂದು ತಿಳಿದುಬಂದಿದೆ. ಬೆಳ್ಳಂಬೆಳಗ್ಗೆ ಶಿಂದೊಳಿ ಗ್ರಾಮದ ಮಸಣವ್ವ ದೇವಸ್ಥಾನಕ್ಕೆ ಕಳ್ಳರು ನುಗ್ಗಿದ್ದಾರೆ. ಇದನ್ನು ನೋಡಿದ ಮಹಿಳೆ ಗ್ರಾಮಸ್ಥರಿಗೆ ತಿಳಿಸಿ, ನಮ್ಮ ಕೃತ್ಯ ಬೆಳಕಿಗೆ ಬರುತ್ತದೆ ಎಂದು ಮಹಿಳೆಯನ್ನೇ ಹತ್ಯೆ ಮಾಡಿ ಬಳಿಕ ದೇಗುಲದಲ್ಲಿನ ಬೆಳ್ಳಿ ಆಭರಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ ತನ್ನ ಮನೆಯ ದನಕರುಗಳ ಸಗಣಿ ಎತ್ತಿ ತಿಪ್ಪೆಗೆ ಎಸೆಯಲು ಇವರು ಬಂದಿದ್ದರು. ಆಗ ಮನೆ ಪಕ್ಕದಲ್ಲಿದ್ದ ಮಸಣವ್ವ ದೇಗುಲದಲ್ಲಿನ ಆಭರಣಗಳನ್ನು ಕಳ್ಳರು ಕದಿಯಲು ಮುಂದಾಗಿದ್ದರು‌. ಸಗಣಿ ಎಸೆದು ಮನೆಗೆ ಬರುವಾಗ ದೇಗುಲದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಭಾರತಿ ನೋಡಿದ್ದಾರೆ. ಆಗ ಭಾರತಿಯನ್ನು ಹೊತ್ತೊಯ್ದು ದೇಗಲದ ಹಿಂದಿದ್ದ ಬಾವಿಗೆ ಕಳ್ಳರು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.ಘಟನೆ ಕುರಿತು ಮಾರಿಹಾಳ…

Read More