Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಕುರಿ ಕಾಯುವ ಬೆಳೆ ಕುರಿಗಾಹಿಯ ಮೇಲೆ ಏಕಾಏಕಿ ಚಿರತೆಯೊಂದು ದಾಳಿ ಮಾಡಿದೆ. ಚಿರತೆಯ ದಾಳಿಯಿಂದ ಕುರಿಗಾಹಿ ನಿಂಗಪ್ಪ ಪೂಜಾರಿ ಸ್ಥಿತಿ ಗಂಭೀರವಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ರೇವಣ್ಣೂರು ಬಳಿ ಈ ಒಂದು ಘಟನೆ ನಡೆದಿದೆ. ಕುರಿಗಳನ್ನು ಮೇಯಿಸುತ್ತಿದ್ದ ನಿಂಗಪ್ಪನ ಮೇಲೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಗಾಯಾಳು ನಿಂಗಪ್ಪಗೆ ತಕ್ಷಣ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿಗೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಚಿರತೆ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಬೆಂಕಿಗೆ ಆಹುತಿ ಆಗಿರುವ ಘಟ್ನೆ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹೊಸ ಹೊಳಲು ಗ್ರಾಮದಲ್ಲಿ ನಡೆದಿದೆ. ಹೊಸಹೂಳಲು ಗ್ರಾಮದ ಮಹೇಶ್ ಎಂಬುವವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿ ಆಗಿದೆ. ಈ ಒಂದು ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ದುರಂತ ತಪ್ಪಿದೆ ಘಟನೆ ಕುರಿತು ಕೆಆರ್ ಪೇಟೆ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಾವು ಆಹಾರ ಇಲಾಖೆಯ ಅಧಿಕಾರಿಗಳು ಎಂದು ಹೇಳಿ ಕಿರಾಣಿ ಅಂಗಡಿ ಮೇಲೆ ನಕಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಅಂಗಡಿ ಮಾಲೀಕರು ತೀವ್ರ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ನಕಲಿ ಅಧಿಕಾರಿಗಳ ಮುಖವಾಡ ಕಳಚಿ ಬಿದ್ದಿದ್ದು, ಘಟನೆಯಲ್ಲಿ ಅಂಗಡಿ ಮಾಲೀಕರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊರ್ವ ಆರೋಪ ಪರಾರಿಯಾಗಿರುವ ಘಟನೆ ನಡೆದಿದೆ. ಹೌದು ದಾಳಿಯ ವೇಳೆ ನಕಲಿ ಅಧಿಕಾರಿಗಳ ಬೆವರಿಳಿಸಿದ ಕಿರಾಣಿ ಅಂಗಡಿಗಳ ಮಾಲೀಕರು, ಮೊದಲು ನಾವು ಆಹಾರ ಇಲಾಖೆ ಅಧಿಕಾರಿಗಳು ಅಂತ ಹೇಳಿ ನಕಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಮೀಡಿಯಾದವರೆಂದು ಪರಾರಿಗೆ ಯತ್ನಿಸಿದ್ದಾರೆ.ಈ ವೇಳೆ ಮಂಜುನಾಥ್ ನನ್ನು ಹಿಡಿದು ಅಂಗಡಿ ಮಾಲೀಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೋರ್ವ ನಕಲಿ ಫುಡ್ ಆಫೀಸರ್ ಲಕ್ಷ್ಮಣ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಹುಬ್ಬಳ್ಳಿ ಘಂಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ಮನೆಯಲ್ಲಿ ಬಿಜೆಪಿ ನಾಯಕಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯ ಜನರಲ್ ಸೆಕ್ರೆಟರಿ ಆಗಿದ್ದ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೆ ಸ್ಥಳೀಯ ಬಿಜೆಪಿ ನಾಯಕಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದರು. ಬೆಂಗಳೂರಿನ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದರು. ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ನಿನ್ನೆಯಷ್ಟೇ ಮಂಜುಳಾ ಅವರ ಅಧಿಕಾರವಧಿ ಅಂತ್ಯವಾಗಿತ್ತು. ಇಂದು ಮಧ್ಯಾಹ್ನ 2:30ಕ್ಕೆ ಮಂಜುಳಾ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಜುಳಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.
ಯಾದಗಿರಿ : ಯಾದಗಿರಿಯಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು, ಬೈಕ್ ಖರೀದಿಸಲು ಹಣ ನೀಡಿಲ್ಲವೆಂದು ಪಾಪಿ ಮಗನೊಬ್ಬ ತಂದೆಯನ್ನೇ ಹತ್ಯೆಗೈದಿರುವ ಕೊಲೆ ಮಾಡಿರುವ ಘಟನೆ ಸುರುಪರ ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ನಡೆದಿದೆ. ಹೌದು ಮಗ ಶೇಖರ್ ಎಂಬಾತ ತನ್ನ ತಂದೆ ಚೆನ್ನಾರೆಡ್ಡಿ ರಾಠೋಡ್ (50) ರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬೈಕ್ ಖರೀದಿಸಲು ಹಣ ನೀಡಿಲ್ಲವೆಂದು ಸಿಟ್ಟಿಗೆದ್ದ ಮಗ ಶೇಖರ್ ಚೆನ್ನಾರೆಡ್ಡಿಯನ್ನು ಕೊಲೆ ಮಾಡಿದ್ದಾನೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ, ನಡೆಸುತ್ತಿದ್ದು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ಡಿ ಆರ್ ಐ ಅಧಿಕಾರಿಗಳಿಂದ ನಟಿ ರಮ್ಯಾ ರಾವ್ ಬಂಧನ ಹಿನ್ನೆಲೆಯಲ್ಲಿ ಬಂಧನದ ಭೀತಿಯಿಂದ ಇದೀಗ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ಬಂಧನದ ಭೀತಿಯಿಂದಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ವೇಳೆ ಹೈ ಕೋರ್ಟ್ ಕಾನೂನು ಪ್ರಕ್ರಿಯೆ ಪಾಲಿಸದೆ ಬಂಧಿಸದಂತೆ ಆದೇಶ ಹೊರಡಿಸಿದೆ. ಹೈಕೋರ್ಟ್ ನಲ್ಲಿ ಜತಿನ್ ಹುಕ್ಕೇರಿ ಪರವಾಗಿ ಪ್ರಭುಲಿಂಗ್ ನಾವದಗಿ ಅವರು ವಾದ ಮಂಡಿಸಿದರು. ಪತ್ನಿಯ ಮೇಲಿನ ಆರೋಪಕ್ಕೂ ಜತಿನ್ ಗು ಯಾವುದೇ ರೀತಿಯಾದ ಸಂಬಂಧವಿಲ್ಲ. ಡಿ ಆರ್ ಐ ಅಧಿಕಾರಿಗಳು ಸಮನ್ಸ್ ನೀಡಿದಾಗ ಜತಿನ್ ಅವರಿಗೆ ತನಿಖೆಗೆ ಸಹಕರಿಸಿದ್ದಾರೆ. ಅಲ್ಲದೆ 2ನೇ ಬಾರಿಯೂ ಕರೆದೊಯ್ದು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸದೆ ಬಂಧಿಸುವ ಸಾಧ್ಯತೆ ಇದೆ ಎಂದು ವಾದ ಮಂಡಿಸಿದರು. ಕಾನೂನಿನ ಪ್ರಕ್ರಿಯೆ ಪಾಲಿಸದೆ ಬಣ್ಣಿಸದಂತೆ ಇದೆ ವೇಳೆ ಹೈಕೋರ್ಟ್ ಆದೇಶ ಹೊರಡಿಸಿತು ರನ್ಯಾರಾವ್ ಪತಿಗೆ ಹೈಕೋರ್ಟ್ ಈ ಮೂಲಕ ಬಿಗ್…
ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ 16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಕನ್ನಡ ಚಲನಚಿತ್ರರಂಗದ ಕಲಾವಿದರಿಗೆ ನಟ್ಟು ಬೋಲ್ಟ್ ಸರಿ ಮಾಡುವುದು ನನಗೆ ಗೊತ್ತಿದೆ ಎಂಬ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಇದೀಗ ಬಿಜೆಪಿ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯರ ಕುರ್ಚಿಯ ಮತ್ತು ಬೋಲ್ಟ್ ಲೂಸ್ ಮಾಡುವುದರಲ್ಲಿ ನಿರಾತಾರಾಗಿದ್ದಾರೆ ಎಂದು ವ್ಯಂಗ್ಯವಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡ ಬಿಜೆಪಿ, ನಟ್ಟು-ಬೋಲ್ಟು ಟೈಟ್ ಮಾಡುವುದರಲ್ಲಿ ನಿಸ್ಸೀಮರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಸಿಎಂ ಕುರ್ಚಿಯ ನಟ್ಟು ಬೋಲ್ಟುಗಳನ್ನು ಕಳಚುವುದರಲ್ಲಿ ಹೆಚ್ಚು ಆಸಕ್ತರಾಗಿದ್ದಾರೆ. ಅಕ್ಟೋಬರ್-ನವೆಂಬರ್ ಅಂತ್ಯಕ್ಕೆ ಹಾಲಿ ಸಿಎಂ ಸಿದ್ದರಾಮಯ್ಯ ಅವರ ಗದ್ದುಗೆಯ ಎಕ್ಸ್ಪ್ರೆರಿ ಡೇಟ್ ಮುಗಿಯಲಿದ್ದು, ಆ ಸ್ಥಾನಕ್ಕೆ ಹೊಂಚು ಹಾಕಿರುವ ಡಿಕೆಶಿ ಅವರು ಈಗಿನಿಂದಲೇ ಸಿದ್ದರಾಮಯ್ಯ ಅವರ ಕುರ್ಚಿಯ ನಟ್ಟು-ಬೋಲ್ಟುಗಳನ್ನು ಲೂಸ್ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಬರೆದುಕೊಂಡಿದೆ.
ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾರಾವ್ ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಆದರೆ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಈ ಒಂದು ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿದೆ. ನಿನ್ನೆ ಅಧಿಕಾರಿಗಳು ಮೂರು ದಿನಗಳ ಕಾಲ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ನಟಿ ರನ್ಯಾರಾವ್ ಅವರಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದರು. ಸದ್ಯ ರನ್ಯಾ ರಾವ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜಡ್ಜ್ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.
ವಿಜಯನಗರ : ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟಿ ರನ್ಯಾ ರಾವ್ 15 ದಿನಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಮಾಜಿ ಶಾಸಕ ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು ಇದಕ್ಕೆ ಸರ್ಕಾರವೇ ಕುಮ್ಮಕ್ಕು ನೀಡಿದ್ದು, ಶೀಘ್ರದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು. ವಿಜಯನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಭಾವಿ ಸಚಿವರ ಕುಮ್ಮಕ್ಕಿನಿಂದ ನಟಿ ರನ್ಯಾ ರಾವ್ ಪ್ರಕರಣದಲ್ಲಿ 25 ಕೋಟಿ ಸ್ಮಗ್ಲಿಂಗ್ ನಡೆದಿದೆ. ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಪವರ್ ಶೇರಿಂಗ್ ಅವರ ಹೆಸರಿನಲ್ಲಿ ಸಿಎಂ ಡಿಸಿಎಂ ಹೊಡೆದಾಡುಕೊಳ್ಳುತ್ತಿದ್ದಾರೆ. ನೂರಕ್ಕೆ ನೂರು ಈ ಸರ್ಕಾರ ಪೂರ್ಣಗೊಳಿಸಲ್ಲ. ರಾಜ್ಯ ಸರ್ಕಾರ ಪತನ ಆಗುತ್ತದೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿಕೆ ನೀಡಿದರು. ಫೆಬ್ರವರಿ 27ರಿಂದಲೇ ವೀರಶೈವ ಲಿಂಗಾಯತ ಸಭೆ ಆರಂಭಿಸಲಾಗಿದೆ. ಈಗಾಗಲೇ ಹಲವು…
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಸಾಗರ ತಾಲೂಕಿನ ಬಿ ಎಚ್ ರಸ್ತೆಯಲ್ಲಿರುವ ಕಾಂಪ್ಲೆಕ್ಸ್ ನಲ್ಲಿ ಆಕಸ್ಮಿಕ ಅಗ್ನಿ ದುರಂತದಿಂದ ಸಂಪೂರ್ಣವಾಗಿ ಕಾಂಪ್ಲೆಕ್ಸ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರದ ಬಿಹೆಚ್ ರಸ್ತೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಲಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕಾಂಪ್ಲೆಕ್ಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಉರ್ದು ಶಾಲೆಯ ಮುಂಭಾಗದ ಕಾಂಪ್ಲೆಕ್ಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ಕಾಂಪ್ಲೆಕ್ಸ್ ನಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.